Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ...

ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ದರ್ಶನಕ್ಕೆ ‘ಕೇಬಲ್ ಕಾರ್’

ಕೆ.ಎಲ್.ಶಿವುಕೆ.ಎಲ್.ಶಿವು9 March 2026 8:46 AM IST
share
ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ದರ್ಶನಕ್ಕೆ ‘ಕೇಬಲ್ ಕಾರ್’
ಪ್ರವಾಸೋದ್ಯಮದ ಅಭಿವೃದ್ಧಿಗೆ ರಾಜ್ಯ ಸರಕಾರದ ಘೋಷಣೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರ ಸ್ವರ್ಗವಾಗಿದೆ. ಇಲ್ಲಿನ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಬಾಬಾ ಬುಡಾನ್‌ಗಿರಿ ಇರುವ ಚಂದ್ರದ್ರೋಣ ಗಿರಿಶ್ರೇಣಿಯನ್ನು ಕರ್ನಾಟಕದ ‘ಮಿನಿ ಸ್ವಿಟ್ಝರ್‌ಲ್ಯಾಂಡ್’ ಎಂದೂ ಕರೆಯಲಾಗುತ್ತಿದೆ.

ರಾಜ್ಯದ ಅತೀ ಎತ್ತರ ಗಿರಿಶ್ರೇಣಿ ಎಂಬ ಕೀರ್ತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಯ ಖ್ಯಾತಿಗೆ ಸದ್ಯ ಮತ್ತೊಂದು ಮುಕುಟ ಸೇರ್ಪಡೆಯಾಗುತ್ತಿದೆ. ರಾಜ್ಯ ಸರಕಾರ ಮಾ.6ರಂದು ಮಂಡಿಸಿದ ಬಜೆಟ್‌ನಲ್ಲಿ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ಸೊಬಗು ಕಣ್ತುಂಬಿಕೊಳ್ಳಲು ರೋಪ್ ವೇ ಕೇಬಲ್ ಕಾರ್‌ನ ಸೌಲಭ್ಯ ಕಲ್ಪಿಸುವುದಾಗಿ ಘೋಷಣೆ ಮಾಡಿದೆ. ಪ್ರವಾಸೋದ್ಯಮ ಇಲಾಖೆ ಮೂಲಕ ಚಿಕ್ಕಮಗಳೂರು ನಗರ ಸಮೀಪದ ಕೈಮರ ಗ್ರಾಮದ ಚೆಕ್‌ಪೋಸ್ಟ್ ನಿಂದ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ಮಾರ್ಗವಾಗಿ ರೋಪ್ ವೇ ಅಳವಡಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಕೋಟ್ಯಂತರ ರೂ. ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ.

ಗಿರಿ ವ್ಯಾಪ್ತಿಯ ರಸ್ತೆಯಲ್ಲಿ ವಾಹನಗಳ ದಟ್ಟಣೆ, ಟ್ರಾಫಿಕ್ ಜಾಮ್ ತಪ್ಪಿಸಲು ಜಿಲ್ಲಾಡಳಿತ ಪ್ರತಿದಿನ ನಿರ್ದಿಷ್ಟ ಸಂಖ್ಯೆಯ ಪ್ರವಾಸಿಗರ ವಾಹನಗಳಿಗೆ ಮಾತ್ರ ಮುುಳ್ಳಯ್ಯನಗಿರಿಗೆ ತೆರಳಲು ಅವಕಾಶ ನೀಡಿದೆ. ಇದರಿಂದಾಗಿ ಸೀತಾಳಯ್ಯನಗಿರಿ, ಬಾಬಾ ಬುಡಾನ್‌ಗಿರಿ, ಮುಳ್ಳಯ್ಯನಗಿರಿ ನೋಡಲು ಪ್ರತಿದಿನ ಬರುವ ಸಾವಿರಾರು ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ.

ಸದ್ಯ ರಾಜ್ಯ ಸರಕಾರ ಪ್ರವಾಸೋದ್ಯಮ ಇಲಾಖೆ ಮೂಲಕ ಜಾರಿಗೆ ತರಲು ಉದ್ದೇಶಿಸಿರುವ ರೋಪ್ ವೇ ಕೇಬಲ್ ಕಾರ್ ವ್ಯವಸ್ಥೆಯಿಂದಾಗಿ ಇಲ್ಲಿನ ಗಿರಿಶ್ರೇಣಿ ವ್ಯಾಪ್ತಿಯಲ್ಲಿ ವಾಹನಗಳ ದಟ್ಟಣೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ. ಕೇಬಲ್ ಕಾರ್ ಸೌಲಭ್ಯ ಕಲ್ಪಿಸಿದಲ್ಲಿ ಮುಳ್ಳಯ್ಯನಗಿರಿ ನೋಡಲು ಪ್ರವಾಸಿಗರು ತಮ್ಮ ವಾಹನಗಳನ್ನು ಕೈಮರ ಚೆಕ್‌ಪೋಸ್ಟ್ ಬಳಿ ಪಾರ್ಕ್ ಮಾಡಿ ಅಲ್ಲಿಂದ ಕೇಬಲ್ ಕಾರ್ ಮೂಲಕ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿಗೆ ರೋಪ್ ವೇ ಸಹಾಯದಿಂದ ಕೇಬಲ್ ಕಾರ್‌ಗಳ ಮೂಲಕ ಹೋಗಿ ಬರಲು ಸಾಧ್ಯವಾಗಲಿದೆ. ಕೇಬಲ್ ಕಾರ್‌ಗಳು ಆಕಾಶ ಮಾರ್ಗದ ಮೂಲಕ ಸಂಚರಿಸುವುದರಿಂದ ಗಿರಿಗಳ ವಿಹಂಗಮ ನೋಟವನ್ನು ಎತ್ತರದಲ್ಲಿ ಸಂಚರಿಸುವ ಕೇಬಲ್ ಕಾರ್‌ಗಳಲ್ಲಿ ಕುಳಿತುಕೊಂಡು ಅಪೂರ್ವ ಪ್ರಾಕೃತಿಕ ಸೌಂದರ್ಯದ ಸೊಬಗು ಸವಿಯಲು ಸಾಧ್ಯವಾಗಲಿದೆ. ಈ ಸೌಲಭ್ಯದಿಂದ ಸರಕಾರಕ್ಕೂ ಭಾರೀ ಆದಾಯ ತರಲಿದ್ದು, ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಕಾಣಲು ಸಾಧ್ಯವಾಗಲಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾ ಬುಡಾನ್‌ಗಿರಿ ಜಿಲ್ಲೆಯ ಹೆಸರಾಂತ ಪ್ರವಾಸಿತಾಣಗಳು. ಇಲ್ಲಿನ ಪ್ರಾಕೃತಿಕ ಸೌಂದರ್ಯ ನೋಡಲು ಲಕ್ಷಾಂತರ ಮಂದಿ ಪ್ರವಾಸಿಗರು ಪ್ರತೀ ವಾರ ಬರುತ್ತಿದ್ದಾರೆ. ಕಿರಿದಾದ ರಸ್ತೆಯಿಂದಾಗಿ ಎಲ್ಲ ಪ್ರವಾಸಿಗರು ವಾಹನಗಳಲ್ಲಿ ಹೋಗಿ ಬರಲು ತೊಂದರೆಯಾಗುತ್ತಿರುವುದು ನಿಜ. ಆದರೆ ಕೇಬಲ್ ಕಾರ್ ಯೋಜನೆಯನ್ನು ಇಲ್ಲಿ ಅಳವಡಿಸಿದರೆ ಪ್ರವಾಸಿಗರಿಗೆ ಭಾರೀ ಅನುಕೂಲವಾಗುತ್ತದೆ. ಅಲ್ಲದೆ ಈ ಪ್ರದೇಶದಲ್ಲಿ ವಾಹನಗಳ ದಟ್ಟಣೆ, ಟ್ರಾಫಿಕ್ ಜಾಮ್‌ನಂತಹ ಸಮಸ್ಯೆಗಳಿಗೆ ಕಡಿವಾಣ ಬೀಳಲಿದೆ. ಕೇಬಲ್ ಕಾರ್ ಯೋಜನೆಯಿಂದಾಗಿ ಪ್ರವಾಸಿಗರನ್ನು ಮತ್ತಷ್ಟು ಹೆಚ್ಚು ಸೆಳೆಯಲು ಸಾಧ್ಯ. ಅಲ್ಲದೆ ಈ ಭಾಗದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಇದರಿಂದ ಮತ್ತಷ್ಟು ಗರಿಗೆದರಲಿದೆ.

ಮಧುಸೂದನ್, ಪ್ರವಾಸಿಗ

ಇಲ್ಲಿಗೆ ಬರುವ ಪ್ರವಾಸಿಗರಿಗೆ ಅನುಕೂಲ ಮಾಡುವ ಹೆಸರಿನಲ್ಲಿ ಪರಿಸರ ಹಾಳು ಮಾಡುವ ಕೇಬಲ್ ಕಾರ್ ರೋಪ್ ವೇ ಯೋಜನೆ ಜಾರಿಗೆ ತರುತ್ತಿರುವುದು ಖಂಡನೀಯ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಮಾಡಬಾರದು. ಈ ಸಂಬಂಧ ಹೋರಾಟ ಮತ್ತು ಕಾನೂನು ಹೋರಾಟ ಮಾಡಲಾಗುತ್ತದೆ.

ಜಿ.ವೀರೇಶ್, ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತ

ಪರಿಸರದ ಮೇಲೆ ಪ್ರತಿಕೂಲ ಪರಿಣಾಮ

ಕೇಬಲ್ ಕಾರ್ ಯೋಜನೆಯಿಂದಾಗಿ ಮುಳ್ಳಯ್ಯನಗಿರಿಯ ಸೂಕ್ಷ್ಮ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಇದು ರಾಜ್ಯದ ಅತೀ ಎತ್ತರದ ಪ್ರದೇಶವಾಗಿದ್ದು, ಶೋಲಾ ಕಾಡು, ಹುಲ್ಲುಗಾವಲು ಸೇರಿದಂತೆ ಹುಲಿ ಆವಾಸಸ್ಥಾನ ಇಲ್ಲಿದೆ. ಈ ಯೋಜನೆಯಿಂದ ಇಲ್ಲಿನ ವನ್ಯಜೀವಿ ಮತ್ತು ಕಾಡಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಮುಳ್ಳಯ್ಯನಗಿರಿಯಲ್ಲಿ ಹುಟ್ಟುವ ಯಗಚಿ, ವೇದ ನದಿ ಸೇರಿದಂತೆ ಹಲವು ನೀರಿನ ಉಗಮ ಸ್ಥಾನಕ್ಕೆ ದಕ್ಕೆ ಉಂಟಾಗುತ್ತದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Tags

Cable carSeethalaiyannagiriMullaiyannagiri
share
ಕೆ.ಎಲ್.ಶಿವು
ಕೆ.ಎಲ್.ಶಿವು
Next Story
X