Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಒಂದೂವರೆ ತಿಂಗಳ ಸಿಸಿ ರಸೆ ಹದಗೆಟ್ಟು...

ಒಂದೂವರೆ ತಿಂಗಳ ಸಿಸಿ ರಸೆ ಹದಗೆಟ್ಟು ಧೂಳಿನ ಕಾಟ

ಕಳಪೆ ಕಾಮಗಾರಿ ಆರೋಪ; ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹ

ಮಹಮ್ಮದ್ ಗೌಸ್, ವಿಜಯನಗರಮಹಮ್ಮದ್ ಗೌಸ್, ವಿಜಯನಗರ25 Oct 2026 3:14 PM IST
share
ಒಂದೂವರೆ ತಿಂಗಳ ಸಿಸಿ ರಸೆ ಹದಗೆಟ್ಟು ಧೂಳಿನ ಕಾಟ

ವಿಜಯನಗರ : ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ಕನಸು ಕಂಡಿರುವ ಶಾಸಕರ ಆಶಯಕ್ಕೆ ಕಳಪೆ ಕಾಮಗಾರಿಗಳ ಆರೋಪಗಳು ಅಡ್ಡಿಯಾಗುತ್ತಿವೆಯೇ? ನಗರದ ಎಂಜೆ ನಗರ ಕಾಲನಿಯ ೫ನೇ ಕ್ರಾಸ್‌ನಲ್ಲಿ ನಿರ್ಮಿಸಿರುವ ಸಿಸಿ ರಸ್ತೆ ಕೆಲವೇ ತಿಂಗಳಲ್ಲಿ ಹದಗೆಟ್ಟಿರುವುದು ಸ್ಥಳೀಯ ನಿವಾಸಿ

ಗಳ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನಿವಾಸಿಗಳು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಿಡಿಕಾರಿದ್ದು, ಕೂಡಲೇ ಗುಣಮಟ್ಟದ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದಾರೆ.

ಕಾಲನಿಯ ೫ನೇ ಕ್ರಾಸ್‌ನಲ್ಲಿ ಹಲವು ವರ್ಷಗಳಿಂದ ಸಿಸಿ ರಸ್ತೆ ನಿರ್ಮಿಸಬೇಕೆಂಬ ಬೇಡಿಕೆಯಿತ್ತು. ಅದರಂತೆ ರಸ್ತೆ ಕಾಮಗಾರಿ ನಡೆದರೂ, ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆ ಹದಗೆಟ್ಟಿದೆ ಎಂಬುದು ನಿವಾಸಿಗಳ ಗಂಭೀರ ಆರೋಪವಾಗಿದೆ. ರಸ್ತೆ ನಿರ್ಮಾಣವಾದ ಒಂದೂವರೆ ತಿಂಗಳನಲ್ಲೇ ಸಂಪೂರ್ಣವಾಗಿ ಹಾಳಾಗಿದ್ದು, ಮೂರು ತಿಂಗಳು ಕಳೆಯುವಷ್ಟರಲ್ಲಿ ಕಳಪೆ ಕಾಮಗಾರಿಯ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆಯಲ್ಲೆಲ್ಲ ಜಲ್ಲಿ, ಧೂಳಿನದ್ದೇ ಕಿರಿಕಿರಿ!

ರಸ್ತೆಯಲ್ಲಿ ಸಿಮೆಂಟ್ ಮತ್ತು ಮರಳಿನ ಪ್ರಮಾಣಕ್ಕಿಂತ ಜಲ್ಲಿಕಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ರಸ್ತೆ ಮೇಲ್ಮೈಯಿಂದ ಧೂಳು ಏಳುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ನಿರ್ಮಾಣದಲ್ಲಿ ಗುಣಮಟ್ಟದ ಸಿಮೆಂಟ್ ಬಳಸಲಾಗಿದೆಯೇ ಎಂಬ ಅನುಮಾನವನ್ನೂ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.

ರಸ್ತೆಯ ಧೂಳಿನಿಂದ ಮಕ್ಕಳು ಹೊರಗೆ ಬಂದು ಆಟವಾಡಲು ಸಾಧ್ಯವಾಗುತ್ತಿಲ್ಲ. ಹಿರಿಯ ನಾಗರಿಕರು ಬೆಳಗಿನ ವಾಕಿಂಗ್ ಹಾಗೂ ದೈನಂದಿನ ಓಡಾಟಕ್ಕೂ ತೊಂದರೆ ಅನುಭವಿಸುತ್ತಿದ್ದಾರೆ. ಧೂಳಿನ ಸಮಸ್ಯೆಯಿಂದ ಆರೋಗ್ಯದ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ. ರಸ್ತೆ ನಿರ್ಮಾಣವಾಗುವ ಮೊದಲು ಇದ್ದ ಪರಿಸ್ಥಿತಿಗಿಂತ ಈಗಿನ ಸ್ಥಿತಿ ಮತ್ತಷ್ಟು ಸಂಕಷ್ಟ ತಂದಿದೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹ

ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣವಾಗುವ ರಸ್ತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಆದರೆ, ನಿರ್ಮಾಣಗೊಂಡ ಕೆಲವೇ ದಿನಗಳಲ್ಲಿ ರಸ್ತೆ ಹದಗೆಟ್ಟಿರುವುದು ಕಾಮಗಾರಿ ಮೇಲ್ವಿಚಾರಣೆ ಹಾಗೂ ಗುಣಮಟ್ಟದ ಪರಿಶೀಲನೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾಮಗಾರಿ ಗುಣಮಟ್ಟವನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಕಳಪೆ ಕಾಮಗಾರಿ ಸಾಬೀತಾದಲ್ಲಿ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸುವುದರ ಜತೆಗೆ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಆದರೆ, ರಸ್ತೆ ನಿರ್ಮಾಣವಾದ ಬಳಿಕ ಧೂಳು ಮತ್ತು ಹದಗೆಟ್ಟ ರಸ್ತೆಯಿಂದಾಗಿ ಜನರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ. ಸಂಬಂಧಪಟ್ಟ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಿ, ಲೋಪಗಳಿದ್ದರೆ ಸರಿಪಡಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಬೇಕು ಎಂಬುದು ನಿವಾಸಿಗಳ ಒಕ್ಕೊರಲಿನ ಆಗ್ರಹವಾಗಿದೆ.

ಒಟ್ಟಿನಲ್ಲಿ, ಅಭಿವೃದ್ಧಿ ಹೆಸರಿನಲ್ಲಿ ನಿರ್ಮಾಣವಾಗುವ ಕಾಮಗಾರಿಗಳು ಜನರಿಗೆ ಅನುಕೂಲ ಕಲ್ಪಿಸಬೇಕೇ ಹೊರತು, ಹೊಸ ಸಮಸ್ಯೆಗಳಿಗೆ ಕಾರಣವಾಗಬಾರದು.

ಎಂಜೆ ನಗರದ ೫ನೇ ಕ್ರಾಸ್‌ನಲ್ಲಿ ನಿರ್ಮಿಸಿರುವ ಸಿಸಿ ರಸ್ತೆ ಕೆಲವೇ ದಿನಗಳಲ್ಲಿ ಹದಗೆಟ್ಟಿರುವುದು ಕಳಪೆ ಕಾಮಗಾರಿಯ ಬಗ್ಗೆ ಅನುಮಾನ ಮೂಡಿಸಿದೆ. ಸಾರ್ವಜನಿಕರ ಹಣದಲ್ಲಿ ನಡೆಯುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದು ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ಸಾಬೀತಾದರೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ರಸ್ತೆ ಒದಗಿಸಬೇಕು.

<ತಳವಾರ ನಾಗರಾಜ್, ರೈತ ಮುಖಂಡ

ಒಂದೂವರೆ ತಿಂಗಳಿನಲ್ಲೇ ನಿರ್ಮಾಣವಾದ ರಸ್ತೆ ಹದಗೆಟ್ಟಿದ್ದು, ಧೂಳಿನಿಂದಾಗಿ ಹೊರಗೆ ಓಡಾಡುವುದೇ ಕಷ್ಟವಾಗಿದೆ. ಹಿರಿಯ ನಾಗರಿಕರು ಮೂಗು ಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ಇದೆ. ಮಕ್ಕಳು ಹೊರಗೆ ಆಟವಾಡಲು ಸಾಧ್ಯವಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಪರಿಶೀಲಿಸಿ, ಧೂಳಿನ ಸಮಸ್ಯೆ ನಿವಾರಣೆಯಾಗುವಂತೆ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಬೇಕು.

<ನಂಜಪ್ಪ

ನಿವೃತ್ತ ಅಬಕಾರಿ ಇಲಾಖೆ

ಡಿವೈಎಸ್ಪಿ ಹಾಗೂ ಸ್ಥಳೀಯ ನಿವಾಸಿ

ರಸ್ತೆಯ ಬಗ್ಗೆ ಸಾರ್ವಜನಿಕರು ನೀಡಿರುವ ದೂರನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ಗುತ್ತಿಗೆದಾರರೊಂದಿಗೆ ಮಾತನಾಡಿದ್ದು, ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರ ಓಡಾಟದಿಂದ ರಸ್ತೆ ಹಾಳಾಗಿದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ. ಆದರೂ, ರಸ್ತೆಯನ್ನು ಮತ್ತೊಮ್ಮೆ ಸರಿಪಡಿಸುವುದಾಗಿ ಅವರು ಹೇಳಿದ್ದಾರೆ.

<ರವಿ ನಾಯ್ಕ್

ಎಇಇ, ಲೋಕೋಪಯೋಗಿ ಇಲಾಖೆ

ಹೊಸಪೇಟೆ

share
ಮಹಮ್ಮದ್ ಗೌಸ್, ವಿಜಯನಗರ
ಮಹಮ್ಮದ್ ಗೌಸ್, ವಿಜಯನಗರ
Next Story
X