Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಜಯಪುರ ಜಾನುವಾರು ಮಾರುಕಟ್ಟೆಯಲ್ಲಿ...

ವಿಜಯಪುರ ಜಾನುವಾರು ಮಾರುಕಟ್ಟೆಯಲ್ಲಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ26 May 2026 8:59 AM IST
share
ವಿಜಯಪುರ ಜಾನುವಾರು ಮಾರುಕಟ್ಟೆಯಲ್ಲಿ ಸಂಭ್ರಮ
ಮೇಕೆ, ದನಗಳ ಖರೀದಿಗೆ ಮುಗಿಬಿದ್ದ ಜನ

ವಿಜಯಪುರ: ಮುಸ್ಲಿಂ ಸಮುದಾಯದ ಪವಿತ್ರ ಹಬ್ಬವಾದ ಬಕ್ರೀದ್‌ಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ರವಿವಾರದಂದು ಮಾರುಕಟ್ಟೆಗೆ ಗ್ರಾಹಕರು ಹಾಗೂ ವ್ಯಾಪಾರಸ್ಥರ ದಂಡೇ ಹರಿದುಬಂತು.

ನಗರದ ಎಪಿಎಂಸಿ ಮೇಕೆ, ಕುರಿ ಮತ್ತು ದನದ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಅತ್ಯಂತ ಜೋರಾಗಿ ನಡೆದಿದೆ. ಈ ಬಾರಿಯ ಮಾರುಕಟ್ಟೆಯ ಪ್ರಮುಖ ಆಕರ್ಷಣೆಯೆಂದರೆ ರಾಜಸ್ಥಾನ ಮೂಲದ ಶಿರೋಯಾ, ಬಿಟಲ್ ಹಾಗೂ ಜವಾರಿ ತಳಿಯ ಮೇಕೆ. ಈ ತಳಿಯ ಮೇಕೆಗೆ ಭಾರೀ ಬೇಡಿಕೆ ಕಂಡುಬಂದಿದ್ದು, ಬರೋಬ್ಬರಿ 1.20 ಲಕ್ಷಕ್ಕೆ ಮಾರಾಟವಾಗಿ ಎಲ್ಲರ ಗಮನ ಸೆಳೆದಿದೆ.

ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮೇಕೆಗಳು 35 ಸಾವಿರದಿಂದ 1.20 ಲಕ್ಷ ರೂ.ಗಳವರೆಗೆ ಮಾರಾಟವಾಗುತ್ತಿವೆ. ಅದರಲ್ಲೂ ಒಂದು ವರ್ಷದ ಉತ್ತಮ ಮೇಕೆಗಳಿಗೆ 40 ಸಾವಿರದಿಂದ 1 ಲಕ್ಷ ರೂ.ಗಳವರೆಗೆ ವ್ಯಾಪಾರಸ್ಥರು ಬೇಡಿಕೆ ಇಡುತ್ತಿದ್ದಾರೆ.

ಮಾರುಕಟ್ಟೆಗೆ ಕೇವಲ ಸ್ಥಳೀಯ ತಳಿಗಳು ಮಾತ್ರವಲ್ಲದೆ ಹೊರರಾಜ್ಯ ಹಾಗೂ ಹೊರಜಿಲ್ಲೆಗಳ ವಿಭಿನ್ನ ತಳಿಗಳು ಲಗ್ಗೆ ಇಟ್ಟಿವೆ. ಮಹಾರಾಷ್ಟ್ರದ ಉಸ್ಮಾನಾಬಾದಿ, ರಾಜಸ್ಥಾನದ ಶಿರೋಯಾ, ಜಮ್ನಾವಾರಿ, ಮಲಬಾರಿ, ಬಾರ್ಬರಿ ಹಾಗೂ ಸ್ಥಳೀಯ ಜವಾರಿ ತಳಿಗಳು ಮಾರುಕಟ್ಟೆಯಲ್ಲಿ ಕಂಡುಬಂದಿವೆ.

ಬಂಟೂರು ಕುರಿ (ಟಗರು),ಯಲಗ ತಳಿ, ಬೋಯರ್, ಬೀಟಲ್ ಹಾಗೂ ಜವಾರಿ ಟಗರುಗಳು. ಇವುಗಳು 20 ಸಾವಿರ ದಿಂದ 40 ಸಾವಿರದವರೆಗೆ ಮಾರಾಟವಾಗುತ್ತಿವೆ. ಜವಾರಿ ಮೇಕೆ ತಳಿಗಳು 25 ಸಾವಿರದಿಂದ 40 ಸಾವಿರ ದರದಲ್ಲಿ ಮಾರಾಟವಾಗುತ್ತಿವೆ.

ಅಂತರ್‌ರಾಜ್ಯ ವ್ಯಾಪಾರಸ್ಥರ ಆಗಮನ?

ವಿಜಯಪುರದ ಈ ಮಾರುಕಟೆಗೆ ಕೇವಲ ಸ್ಥಳೀಯರಷ್ಟೇ ಅಲ್ಲದೆ, ರಾಯಬಾಗ, ಅಥಣಿ, ಚಿಕ್ಕೋಡಿ, ಜಮಖಂಡಿ, ಮುಧೋಳ, ಮಂಡ್ಯ, ಮದ್ದೂರು ಹಾಗೇ ಸೋಲಾಪುರ, ಪುಣೆ,ಮುಂಬೈ, ಕೊಲ್ಲಾಪುರ, ಹೈದರಾಬಾದ್, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ವಿವಿಧ ಮೂಲೆಗಳಿಂದಲೂ ವ್ಯಾಪಾರಸ್ಥರು ಆಗಮಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಾರುಕಟ್ಟೆಯಲ್ಲಿ ದಾಖಲೆ ಮಟ್ಟದ ಭಾರಿ ವಹಿವಾಟು ನಡೆದಿದ್ದು, ಮೇಕೆ-ಕುರಿಗಳನ್ನು ಸಾಕಿ ತಂದಿದ್ದ ರೈತರ ಹಾಗೂ ವ್ಯಾಪಾರಸ್ಥರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಕಳೆದ ಕೆಲವು ತಿಂಗಳುಗಳಿಂದ ತೀವ್ರ ಬಿಸಿಲು, ನೀರಿನ ಅಭಾವ ಮತ್ತು ಮೇವಿನ ಕೊರತೆಯಿಂದ ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ಜಾನು ವಾರು ಸಾಕಣೆದಾರರು ಹಾಗೂ ರೈತರಿಗೆ ಈ ಹಬ್ಬದ ಸೀಸನ್ ದೊಡ್ಡ ಆಸರೆಯಾಗಿದೆ. ಕಷ್ಟಪಟ್ಟು ಸಾಕಿದ ಜೀವಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತಿರುವುದರಿಂದ ರೈತರ ಕೈಯಲ್ಲಿ ಹಣ ಹರಿದಾಡುವಂತಾಗಿದ್ದು, ಗ್ರಾಮೀಣ ಆರ್ಥಿಕತೆಗೆ ಚೇತರಿಕೆ ನೀಡಿದೆ. ಮಹಾರಾಷ್ಟ್ರದ ಗಡಿ ಭಾಗದ ವ್ಯಾಪಾರಿಗಳು ಸಹ ಇಲ್ಲಿಗೆ ಲಾರಿಗಳಲ್ಲಿ ಜಾನುವಾರುಗಳನ್ನು ತಂದು ವ್ಯಾಪಾರ ನಡೆಸುತ್ತಿದ್ದಾರೆ.

ಈ ವರ್ಷ ಬಕ್ರೀದ್ ಹಬ್ಬದ ನಿಮಿತ್ತ ಹೋತದ (ಗಂಡು ಮೇಕೆ) ವ್ಯಾಪಾರ ತುಂಬಾ ಚೆನ್ನಾಗಿದೆ. ನಾವು ರಾಯಭಾಗ ಸೇರಿದಂತೆ ಬೇರೆ ಬೇರೆ ಪ್ರದೇಶಗಳಿಂದ ಹೋತಗಳನ್ನು ತಂದು ಮಾರಾಟ ಮಾಡುತ್ತಿದ್ದೇವೆ. ಒಂದು ಹೋತಕ್ಕೆ 5 ಸಾವಿರದಿಂದ 9 ಸಾವಿರದವರೆಗೆ ಲಾಭ ಅಥವಾ ಉಳಿತಾಯವಾಗುತ್ತಿದೆ.

-ಮೈಬುಬ್ ಕಲಾದಗಿ ಕುರಿ-ಮೇಕೆ ವ್ಯಾಪಾರಸ್ಥರು, ತಿಗಣಿಬಿದರಿ

ನಾನು 80 ಸಾವಿರ ರೂ. ನೀಡಿ ಹೋತವನ್ನು ಖರೀದಿಸಿದ್ದೇನೆ. ಇದೇ ವಾರದಲ್ಲಿ ಬಕ್ರೀದ್ ಹಬ್ಬ ಇರುವುದರಿಂದ ರವಿವಾರದ ಮಾರುಕಟ್ಟೆಗೆ ಖರೀದಿಸಲು ಜನರ ಹಿಂಡೇ ಬಂದಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬೆಲೆಗಳು ಸ್ವಲ್ಪ ಹೆಚ್ಚಾಗಿವೆ.

-ಅಬ್ಬಾಸ್ ಬಿ. ಖರೀದಿದಾರ ವಿಜಯಪುರ ನಿವಾಸಿ

ದೊಡ್ಡ ಜಾನುವಾರು ಮಾರುಕಟ್ಟೆ

ಜಂಟಿಯಾಗಿ (ಹಲವಾರು ಜನರು ಸೇರಿ) ಕುರ್ಬಾನಿ ನೀಡಲು ದೊಡ್ಡ ಜಾನುವಾರುಗಳನ್ನು ಖರೀದಿಸುವ ಸಂಪ್ರದಾಯ ಇರುವುದರಿಂದ ದನಗಳ ಮಾರುಕಟ್ಟೆಯಲ್ಲಿ ಭಾರೀ ಜನದಟ್ಟಣೆ ಕಂಡುಬರುತ್ತಿದೆ. ಕೃಷ್ಣಾತೀರ ಹಾಗೂ ಸ್ಥಳೀಯ ಕಿಲಾರಿ ತಳಿಯ ದಷ್ಟಪುಷ್ಟ ಹೋರಿಗಳಿಗೆ ಈ ಬಾರಿ ಭಾರೀ ಬೇಡಿಕೆ ಬಂದಿದೆ. ಇವುಗಳ ಬಿಳಿ ಬಣ್ಣ, ಗಾಂಭೀರ್ಯದ ನಡಿಗೆ ಹಾಗೂ ಬಲಿಷ್ಠ ದೇಹ ಗ್ರಾಹಕರನ್ನು ಸೆಳೆಯುತ್ತಿದೆ. ಮಾರುಕಟ್ಟೆಯಲ್ಲಿ ಸಾಮಾನ್ಯ ದನಗಳ ಬೆಲೆ 25,000 ರಿಂದ 60,000 ರೂ.ವರೆಗಿದೆ.

ಮೂಲಸೌಕರ್ಯದ ಕೊರತೆ :

ಹಬ್ಬದ ನಿಮಿತ್ತ ತಾತ್ಕಾಲಿಕವಾಗಿ ತೆರೆಯಲಾದ ಪ್ರಮುಖ ಮಾರುಕಟ್ಟೆಗಳಲ್ಲಿ ತೀವ್ರ ಜನದಟ್ಟಣೆ ಇದೆ. ಆದರೆ, ಜಾನುವಾರುಗಳಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಸೂಕ್ತ ನೈರ್ಮಲ್ಯದ ಕೊರತೆಯಿದೆ ಎಂದು ರೈತರು ಮತ್ತು ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Tags

Vijayapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X