Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬ್ರ್ಯಾಂಡ್ ಬೆಂಗಳೂರನ್ನು ವಿಶ್ವ...

ಬ್ರ್ಯಾಂಡ್ ಬೆಂಗಳೂರನ್ನು ವಿಶ್ವ ದರ್ಜೆಗೇರಿಸಿದ ಕೇಂದ್ರದ ಶಿಕ್ಷಣ ಸಂಸ್ಥೆಗಳು

ಅನಿಲ್ಅನಿಲ್11 Aug 2025 7:03 AM IST
share
ಬ್ರ್ಯಾಂಡ್ ಬೆಂಗಳೂರನ್ನು ವಿಶ್ವ ದರ್ಜೆಗೇರಿಸಿದ ಕೇಂದ್ರದ ಶಿಕ್ಷಣ ಸಂಸ್ಥೆಗಳು

ಬೆಂಗಳೂರು, ಆ.10: ರಾಜಧಾನಿ ಬೆಂಗಳೂರು ಶಿಕ್ಷಣ ಕ್ಷೇತ್ರದಲ್ಲಿ ವಿಶ್ವದರ್ಜೆಯ ನಗರವಾಗಿ ಹೊರಹೊಮ್ಮಿದ್ದು, ರಾಜ್ಯ ಸರಕಾರದ ಕೇಂದ್ರ ಸರಕಾರದ ಹಾಗೂ ಖಾಸಗಿ ಸಂಸ್ಥೆಗಳು ನಗರದಲ್ಲಿ ನೂರಾರು ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಿವೆ. ಇಲ್ಲಿನ ಕಾಲೇಜುಗಳು, ಸಂಶೋಧನಾ ಕೇಂದ್ರಗಳು ಮತ್ತು ವಿಶ್ವವಿದ್ಯಾನಿಲಯಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆಯಲು ದೇಶ-ವಿದೇಶಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ.

ನಗರದಲ್ಲಿ ಸುಮಾರು 15 ಕೇಂದ್ರ ಸರಕಾರದ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಬ್ರಾಂಡ್ ಬೆಂಗಳೂರನ್ನು ವಿಶ್ವ ದರ್ಜೇಗೇರಿಸಿದೆ. ವಿಜ್ಞಾನ, ಮ್ಯಾನೇಜ್‌ಮೆಂಟ್, ಏರೋಸ್ಪೇಸ್, ನ್ಯಾಯಾಂಗ, ಇನ್‌ಫಾರ್ಮೆಷನ್ ಟೆಕ್ನಾಲಜಿ, ಫ್ಯಾಷನ್ ಟೆಕ್ನಾಲಾಜಿ ಮತ್ತು ಡಿಸೈನ್ ಕುರಿತಾಗಿ ಕೇಂದ್ರ ಸರಕಾರದ ಶಿಕ್ಷಣ ಸಂಸ್ಥೆಗಳು ಉನ್ನತ ಶಿಕ್ಷಣ ನೀಡುವಲ್ಲಿ ಕಾರ್ಯನಿರ್ವಹಿಸುತ್ತಿವೆ. ಹೊಸದಿಲ್ಲಿಯಲ್ಲಿ 9, ಕೋಲ್ಕತ್ತಾ 6, ಮುಂಬೈ 5, ಚೆನೈನಲ್ಲಿ 4 ಕೇಂದ್ರ ಸರಕಾರ ಒಡೆತನದ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ದೇಶದಲ್ಲಿರುವ ಮೆಟ್ರೋಪಾಲಿಟನ್ ನಗರಗಳ ಪೈಕಿ ಬೆಂಗಳೂರಿನಲ್ಲಿಯೇ ಹೆಚ್ಚಿನ ಸಂಖ್ಯೆಯ ಕೇಂದ್ರ ಸರಕಾರದ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್‌ಸಿ), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಪಿಸಿಕ್ಸ್, ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್, ನ್ಯಾಷನಲ್ ಸೆಂಟರ್ ಫಾರ್ ಬಯೋಲಜಿಕಲ್ ಸೈನ್ಸಸ್, ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಶಿಕ್ಷಣವನ್ನು ಮತ್ತು ಸಂಶೋಧನೆಯನ್ನು ನಡೆಸುತ್ತಿದ್ದು, ಈ ಸಂಸ್ಥೆಗಳಲ್ಲಿ ನಡೆಸುವ ಸಂಶೋಧನೆಗಳು ವಿಶ್ವ ಮನ್ನಣೆ ಗಳಿಸುತ್ತಿವೆ. ಹಾಗೆಯೇ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ-ಸೈನ್ಸ್ (ನಿಮ್ಹಾನ್ಸ್) ಸಂಸ್ಥೆ ಮಾನಸಿಕ ಆರೋಗ್ಯದ ಶಿಕ್ಷಣವನ್ನು ನೀಡುವುದರ ಜೊತೆಗೆ ಚಿಕಿತ್ಸೆಯನ್ನು ಒದಗಿಸುತ್ತಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿನ ರಾಜ್ಯಗಳ ಜನರು ಮೆದುಳು ಮತ್ತು ಮಾನಸಿಕ ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಿದ್ದಾರೆ. ಹಾಗೆಯೇ ಮಾನಸಿಕ ಆರೋಗ್ಯದ ಸಂಶೋಧನೆಯನ್ನು ಇಲ್ಲಿನ ನಡೆಸಲಾಗುತ್ತಿದೆ.ನಾಗರಭಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ಶಿಕ್ಷಣವನ್ನು ನೀಡುತ್ತಿದ್ದು, ನಮ್ಮ ರಾಜ್ಯದ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಬೇರೆ ರಾಜ್ಯದ ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್ ಟೆಕ್ನಾಲಜಿ, ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜ್, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನವೆಂಟ್, ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಆ್ಯಂಡ್ ಡಿಸೈನ್, ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಆ್ಯಂಡ್ ಕ್ಯಾಟರಿಂಗ್ ಟೆಕ್ನಾಲಜಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಫ್ಯಾಷನ್ ಟೆಕ್ನಾಲಜಿ ಶಿಕ್ಷಣ ಸಂಸ್ಥೆಗಳು ಮ್ಯಾನೇಜ್‌ಮೆಂಟ್, ಫ್ಯಾಷನ್ ಟೆಕ್ನಾಲಜಿ ಮತ್ತು ಡಿಸೈನ್ ಕುರಿತಾಗಿ ಶಿಕ್ಷಣವನ್ನು ನೀಡುತ್ತವೆ.

ಕೇಂದ್ರ ಸರಕಾರ ಒಡೆತನದ ಈ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು ಅನ್ಯ ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ. ಹೀಗಾಗಿ ಇಲ್ಲಿ ಶಿಕ್ಷಣವನ್ನು ಪಡೆಯಲು ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಮಾಹಿತಿ ಕೊರತೆ ಮತ್ತು ಸ್ಪರ್ಧಾತ್ಮಕ ಮನೋಭಾವದ ಕೊರತೆಯಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಈ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಕಷ್ಟವಾಗುತ್ತಿದೆ. ಅಧಿಕಾರಿಗಳ ಮಕ್ಕಳು, ಶ್ರೀಮಂತರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಓದುತ್ತಿದ್ದು, ಹಳ್ಳಿಗಾಡಿನ ಬಡವರ ಮಕ್ಕಳು ಈ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವುದು ಕಷ್ಟವಾಗಿದೆ. ಬಹುತೇಕ ಶಿಕ್ಷಣ ಸಂಸ್ಥೆಗಳು ಪ್ರವೇಶ ಪರೀಕ್ಷೆಯನ್ನು ನಡೆಸುತ್ತಿದ್ದು, ಮೆರಿಟ್ ಆಧಾರದಲ್ಲಿಯೇ ಪ್ರವೇಶಾತಿಯನ್ನು ನೀಡುತ್ತಿವೆ.

ಬೆಂಗಳೂರಿನಲ್ಲಿರುವ ಕೇಂದ್ರ ಸರಕಾರದ ಶಿಕ್ಷಣ ಸಂಸ್ಥೆಗಳು :

►ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್‌ಸಿ)

►ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಪಿಸಿಕ್ಸ್

►ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್

►ನ್ಯಾಷನಲ್ ಸೆಂಟರ್ ಫಾರ್ ಬಯೋಲಜಿಕಲ್ ಸೈನ್ಸಸ್

►ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್

►ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ-ಸೈನ್ಸ್(ನಿಮಾನ್ಸ್)

►ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ(ಎನ್‌ಎಲ್‌ಎಸ್‌ಐಯು)

►ಇಂಡಿಯನ್ ಇನ್‌ಸ್ಟಿಟ್ಯೂಟ್ ಆಪ್ ಇನ್‌ಫಾರ್ಮೆಷನ್ ಟೆಕ್ನಾಲಜಿ

►ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜ್

►ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನವೆಂಟ್

►ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಆ್ಯಂಡ್ ಡಿಸೈನ್

►ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಆ್ಯಂಡ್ ಕ್ಯಾಟರಿಂಗ್ ಟೆಕ್ನಾಲಜಿ

►ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್

►ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್

►ಇಂಡಿಯನ್ ಇನ್‌ಸ್ಟಿಟ್ಯೂಟ್ ಫ್ಯಾಷನ್ ಟೆಕ್ನಾಲಜಿ



share
ಅನಿಲ್
ಅನಿಲ್
Next Story
X