Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚಾಮರಾಜನಗರ ಜಿಲ್ಲೆಯಲ್ಲಿ ಆದಿವಾಸಿ...

ಚಾಮರಾಜನಗರ ಜಿಲ್ಲೆಯಲ್ಲಿ ಆದಿವಾಸಿ ಗೃಹಭಾಗ್ಯಕ್ಕೆ ದಾಖಲೆಗಳ ಸಂಗ್ರಹ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್9 Dec 2025 7:20 AM IST
share
ಚಾಮರಾಜನಗರ ಜಿಲ್ಲೆಯಲ್ಲಿ ಆದಿವಾಸಿ ಗೃಹಭಾಗ್ಯಕ್ಕೆ ದಾಖಲೆಗಳ ಸಂಗ್ರಹ
ಸರ್ವೇಯಲ್ಲಿ 2,995 ವಸತಿ ರಹಿತರ ಗುರುತು

ಚಾಮರಾಜನಗರ, ಡಿ.8: ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ವಾಸ ಮಾಡುತ್ತಿರುವ ಬುಡಕಟ್ಟು ಸಮುದಾಯದ ಸೂರಿಲ್ಲದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಇದೀಗ ದಾಖಲೆಗಳ ಸಂಗ್ರಹ ಆರಂಭವಾಗಿದೆ.

ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಎಂಬ ಹೆಸರಿನ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಅರಣ್ಯ ಮತ್ತು ಅರಣ್ಯಾಧಾರಿತ ಸಮುದಾಯಗಳಾದ ಸೋಲಿಗ, ಹಸಲರು, ಗೌಡಲು, ಸಿದ್ಧ್ದಿ, ಕುಡಿಯ, ಮಲೆ ಕುಡಿಯ, ಕಾಡು ಕುರುಬ, ಇರುಳಿಗ, ಬೆಟ್ಟ ಕುರುಬ, ಯರವ, ಪಣಿಯನ್ ಇತ್ಯಾದಿ ಸಮುದಾಯಗಳ 6,856 ವಸತಿರಹಿತ ಕುಟುಂಬಗಳಿಗೆ ಸೌಲಭ್ಯ ಒದಗಿಸಿಕೊಡಲು ಸೆಪ್ಟಂಬರ್‌ನಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಯೋಜನೆಗಾಗಿ 160 ಕೋಟಿ ರೂ.ಅನುದಾನವನ್ನು ಮೀಸಲು ಇಟ್ಟು, ಪ್ರತಿ ಮನೆಯನ್ನು 4.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು, ಇದೀಗ ಈ ಸೌಲಭ್ಯವನ್ನು ಜಾರಿಗೊಳಿಸುವ ಸಲುವಾಗಿ ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯ ಇಲಾಖೆಗೆ ಸೂಚನೆ ಬಂದಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ವಸತಿ ರಹಿತ ಆದಿವಾಸಿಗಳ ದಾಖಲೆಗಳ ಸಂಗ್ರಹ ಆರಂಭಗೊಂಡಿದೆ. ಭಾಗಶಃ ಅರಣ್ಯ ಪ್ರದೇಶದಿಂದ ಕೂಡಿರುವ ಮತ್ತು ಆದಿವಾಸಿಗಳ ವಾಸಸ್ಥಳ ಗಡಿಜಿಲ್ಲೆ ಚಾಮರಾಜನಗರ. ಇಲ್ಲಿ ಸೋಲಿಗ, ಕಾಡುಕುರುಬ, ಬೆಟ್ಟ ಕುರುಬ ಸಮುದಾಯ ನೆಲೆ ನಿಂತಿದೆ. ಜಿಲ್ಲಾಡಳಿತದಿಂದ ಇವರಲ್ಲಿ ವಸತಿ ರಹಿತರ ಸರ್ವೇ ಮಾಡಿ ಪಟ್ಟಿ

ಮಾಡಲಾಗಿದೆ. ಈಗ ಇವರ ದಾಖಲೆಗಳ ಸಂಗ್ರಹ ಮಾಡಲು ಮಾಹಿತಿಯನ್ನು ಪ್ರಚಾರ ಮಾಡಲಾಗುತ್ತಿದ್ದು, ವಸತಿ ರಹಿತರು ತಾಲೂಕುಗಳಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗಿದೆ.

ವಸತಿರಹಿತ ಆದಿವಾಸಿಗಳು ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಯೋಜನೆಯನ್ನು ಬಳಕೆ ಮಾಡಿಕೊಳ್ಳಲು ಮುಂದಾಗಬೇಕಾಗಿದೆ. ಫಲಾನುಭವಿಗಳು ನೀಡುವ ದಾಖಲೆಗಳಲ್ಲಿ ಈ ಹಿಂದೆ ಬೇರೆ ಯೋಜನೆಯಡಿ ವಸತಿ ಸೌಲಭ್ಯ ಪಡೆಯದೆ ಇರುವುದು ಬಹುಮುಖ್ಯವಾಗಿರುತ್ತದೆ. ಉಳಿದ ಸರಳ ದಾಖಲೆಗಳನ್ನು ಸಲ್ಲಿಸಲು ಹಲವರು ಅನಕ್ಷರಸ್ಥ ರಾಗಿರುವ ಆದಿವಾಸಿಗಳಿಗೆ ಸ್ವಲ್ಪ ತ್ರಾಸವಾಗಬಹುದು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸಮುದಾಯದ ಸಂಘಟನೆಗಳ ಸಹಕಾರವನ್ನು ಪಡೆದುಕೊಳ್ಳಲೇಬೇಕಿದೆ. ಜನನ-ಮರಣ ಪ್ರಮಾಣಪತ್ರ, ಆಧಾರ್ ಕಾರ್ಡ್ ಇಲ್ಲದವರಿಗೆ ಸಕಾಲದಲ್ಲಿ ದಾಖಲೆಗಳನ್ನು ಮಾಡಿಸಿಕೊಡಬೇಕಿದೆ.

ಮುರಿದ ಜೋಪಡಿ ಪಾಳು ಬಿದ್ದಂತಿರುವ, ಗೋಡೆ ಬಿರುಕು ಬಿಟ್ಟಿರುವ, ಕಿಟಕಿ, ಬಾಗಿಲುಗಳು ಮುರಿದು ಹೋಗಿರುವ ಮನೆ, ಗುಡಿಸಲುಗಳು, ಜೋಪಡಿಗಳಲ್ಲಿ ಜಿಲ್ಲೆಯ ಆದಿ ವಾಸಿಗಳು ಜೀವನ ನಡೆಸುತ್ತಿದ್ದಾರೆ. ಚಿಕ್ಕ ಮನೆಯಲ್ಲಿ ಹಲವು ಜನರು ವಾಸ ಮಾಡಲಾಗದೆ ಪಕ್ಕದಲ್ಲಿ ಜೋಪಡಿ, ಶೀಟ್‌ಗಳನ್ನು ಕಟ್ಟಿಕೊಂಡಿದ್ದಾರೆ. ಮಳೆ ಬಂದರೆ ಸೋರುವ ಮನೆಗಳು ಅದಿವಾಸಿಗಳ ಶೋಚನಿಯ ಬದುಕಿಗೆ ಹಿಡಿದ ಕನ್ನಡಿಯಾಗಿದೆ.

ಅರಣ್ಯವಾಸಿಗಳ ಸಮಗ್ರ ಸಮೀಕ್ಷೆ :

ಚಾಮರಾಜನಗರ ಜಿಲ್ಲಾಡಳಿತದಿಂದ ಮನೆ ಇಲ್ಲದ ಆದಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದಕ್ಕಾಗಿ ಈ ಹಿಂದೆ ಸಮೀಕ್ಷೆ ನಡೆಸಲಾಗಿತ್ತು. ಅದರ ಪ್ರಕಾರ, ಚಾಮರಾಜನಗರ ತಾಲೂಕಿನಲ್ಲಿ 810 (ನಿವೇಶನ ಲಭ್ಯವಿದ್ದು, ಮನೆ ಇಲ್ಲದ ಕುಟುಂಬಗಳು-810), ಕೊಳ್ಳೇಗಾಲ ತಾಲೂಕಿನಲ್ಲಿ 1,049 (ನಿವೇಶನ ಲಭ್ಯವಿದ್ದು, ಮನೆ ಇಲ್ಲದ ಕುಟುಂಬ-1,049. ನಿವೇಶನ ಮತ್ತು ಮನೆ ಇಲ್ಲದ ಕುಟುಂಬ ಗಳು-199), ಗುಂಡ್ಲುಪೇಟೆ ತಾಲೂಕಿನಲ್ಲಿ 314 (ನಿವೇಶನ ಲಭ್ಯವಿದ್ದು, ಮನೆ ಇಲ್ಲದ ಕುಟುಂಬ-279, ನಿವೇಶನ ಮತ್ತು ಮನೆ ಇಲ್ಲದ ಕುಟುಂಬಗಳು-35), ಯಳಂದೂರು ತಾಲೂಕಿನಲ್ಲಿ 623 (ನಿವೇಶನ ಲಭ್ಯವಿದ್ದು, ಮನೆ ಇಲ್ಲದ ಕುಟುಂಬಗಳು-623) ಕುಟುಂಬಗಳು ಸೇರಿ ಒಟ್ಟಾರೆ 2,995 ಕುಟುಂಬಗಳಿಗೆ ವಸತಿ ಸೌಲಭ್ಯದ ಅಗತ್ಯವಿರುವುದು ಸರ್ವೇಯಲ್ಲಿ ದಾಖಲಾಗಿದೆ.

ಈ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಿ ವಸತಿ ಸೌಲಭ್ಯ ನೀಡಬೇಕೆಂದು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಬೇರೆ ಜಿಲ್ಲೆಗಳಲ್ಲೂ ಇರುವ ಅಂದರೆ, ರಾಜ್ಯದಲ್ಲಿ ಒಟ್ಟಾರೆಯಾಗಿ ಇರುವ 6,856 ವಸತಿ ರಹಿತರಿಗೆ ಸೌಲಭ್ಯ ನೀಡುವ ಸಲುವಾಗಿ ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಡೆಸಿರುವ ಸರ್ವೇಯಲ್ಲಿ ಪತ್ತೆಯಾಗಿರುವ 2,995 ವಸತಿ ರಹಿತರ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ.

ಮುಖ್ಯಮಂತ್ರಿ ವಸತಿ ಸೌಲಭ್ಯ ಯೋಜನೆ ದಿಕ್ಸೂಚಿ :

ಚಾಮರಾಜನಗರ ಜಿಲ್ಲೆಯಲ್ಲಿ ಮನೆ ಇಲ್ಲದ ಆದಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಪ್ರಾಯೋಗಿಕವಾಗಿ ನಿರ್ಮಾಣ ಮಾಡಿದ್ದ ಸಿದ್ದು ನಿವಾಸ ರಾಜ್ಯಕ್ಕೆ ಮಾದರಿಯಾಗಿದ್ದು, ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಗೂ ದಿಕ್ಸೂಚಿಯಾಗಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಕಾಳಜಿ ವಹಿಸಿ ಮಲೆ ಮಹದೇಶ್ವರ ಬೆಟ್ಟದ ಆಣೆಹೊಳ ಗ್ರಾಮದ ಸೋಲಿಗ ಮಂಜುನಾಥ್‌ಗೆ ಸಿದ್ದು ನಿವಾಸ ಹೆಸರಿನಲ್ಲಿ ಒಂದು ಮನೆ ನಿರ್ಮಾಣ ಮಾಡಿಕೊಡಲಾಗಿತ್ತು. ಇದೇ ಮಾದರಿಯಲ್ಲಿ ಉಳಿದ ವಸತಿ ರಹಿತರಿಗೂ ಮನೆ ಕಟ್ಟಿಕೊಡುವ ಯೋಜನೆ ಇದಾಗಿತ್ತು. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಸಿದ್ದು ನಿವಾಸವನ್ನು ಉದ್ಘಾಟನೆ ಮಾಡ ಬೇಕಿತ್ತು. ಆದರೆ ಕಾರಣಾಂತರಗಳಿಂದ ಉದ್ಘಾಟನೆ ಯಾಗಲಿಲ್ಲ. ಆದರೂ ಸೂರು ಬೇಕೆಂದು ಆಶಾಬಾವ ದಿಂದ ಕಾಯುತ್ತಿದ್ದ ಫಲಾನುಭವಿಗೆ ಮನೆಯನ್ನು ಹಸ್ತಾಂತರ ಮಾಡಲಾಯಿತು.

ಆದಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ರಾಜ್ಯ ಸರಕಾರದ ಗಮನ ಸೆಳೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹಾಡಿ, ಪೋಡುಗಳಲ್ಲಿ ಹಳೆಯ ಕಾಲದ ಸಣ್ಣ ಸಣ್ಣ ಮನೆಗಳಲ್ಲಿ ವಾಸ ಮಾಡುತ್ತಿರುವವರಿಗೆ ಹೊಸ ಮನೆ ಕಟ್ಟಿಸಿಕೊಡಬೇಕು. ಈ ನಿಟ್ಟಿನಲ್ಲಿ ಈ ಯೋಜನೆಯಿಂದ ಮನೆ ಇಲ್ಲದವರಿಗೆ ಸೂರು ದೊರೆಯುತ್ತಿರುವುದು ಒಳ್ಳೆಯ ವಿಚಾರ.

-ಜಡೆಸ್ವಾಮಿ, ಜಿಲ್ಲಾ ಅರಣ್ಯ ಹಕ್ಕು ಸಮಿತಿ ಸದಸ್ಯ, ಚಾಮರಾಜನಗರ

ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ವಸತಿ ರಹಿತರಿಗೆ ಸೌಲಭ್ಯ ಒದಗಿಸಲು ಅಗತ್ಯ ದಾಖಲೆಗಳನ್ನು ಸಂಗ್ರಹಿಸಲು ಕೇಂದ್ರ ಕಚೇರಿಯಿಂದ ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ದಾಖಲೆಗಳ ಸಂಗ್ರಹ ಶುರುವಾಗಿದೆ. ವಸತಿ ರಹಿತರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಯಾ ತಾಲೂಕು ಕಚೇರಿಗಳಿಗೆ ದಾಖಲೆಗಳನ್ನು ತಲುಪಿಸಿದರೆ ಅನುಕೂಲವಾಗಲಿದೆ.

-ಎಚ್.ಎಸ್. ಬಿಂದ್ಯಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಚಾಮರಾಜನಗರ

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X