Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರು ರಸ್ತೆಗಳ ಅವ್ಯವಸ್ಥೆ: ಜನರ...

ರಾಯಚೂರು ರಸ್ತೆಗಳ ಅವ್ಯವಸ್ಥೆ: ಜನರ ಜೀವಕ್ಕಿಲ್ಲ ಬೆಲೆ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು27 Jan 2026 12:35 PM IST
share
ರಾಯಚೂರು ರಸ್ತೆಗಳ ಅವ್ಯವಸ್ಥೆ: ಜನರ ಜೀವಕ್ಕಿಲ್ಲ ಬೆಲೆ
5 ವರ್ಷದಲ್ಲಿ 3,419 ರಸ್ತೆ ಅಪಘಾತ, 1,558 ಜನರ ಸಾವು

ರಾಯಚೂರು ಜಿಲ್ಲೆಯಲ್ಲಿ ಹದಗೆಟ್ಟ ರಸ್ತೆಗಳು, ಸಂಚಾರಿ ನಿಯಮಗಳ ಉಲ್ಲಂಘನೆ, ಸೂಚನಾ ಫಲಕಗಳ ಕೊರತೆ ಹಾಗೂ ಆಡಳಿತದ ನಿರ್ಲಕ್ಷ್ಯದಿಂದಾಗಿ ಜನರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 3,419 ರಸ್ತೆ ಅಪಘಾತಗಳು ಸಂಭವಿಸಿ, 1,558 ಮಂದಿ ಸಾವನ್ನಪ್ಪಿದ್ದು, 4,532 ಮಂದಿ ಗಾಯಗೊಂಡಿದ್ದಾರೆ ಎಂಬ ಆತಂಕಕಾರಿ ಅಂಶ ಸರಕಾರದ ಅಧಿಕೃತ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.

ಜಿಲ್ಲಾ ಕೇಂದ್ರದಿಂದ ಲಿಂಗಸುಗೂರು, ದೇವದುರ್ಗ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸ್ಥಿತಿ ದಯನೀಯವಾಗಿದೆ. ಡಾಂಬರ್ ಕಿತ್ತು ಹೋಗಿ, ತಗ್ಗು-ಗುಂಡಿಗಳೇ ಹೆಚ್ಚಾಗಿ, ವಾಹನ ಸವಾರರು ಪ್ರಾಣಭೀತಿಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಜ್ ವೃತ್ತದಿಂದ ಶಕ್ತಿನಗರಕ್ಕೆ ಹೋಗುವ ಹೈದರಾಬಾದ್ ರಸ್ತೆಯೂ ಇದೇ ಸ್ಥಿತಿಯಲ್ಲಿದ್ದು, ಇಕಟ್ಟಾದ ರಸ್ತೆ, ಗುಂಡಿಗಳು, ಒತ್ತುವರಿಯಾದ ಪಾದಚಾರಿ ಮಾರ್ಗಗಳು ಅಪಘಾತಗಳಿಗೆ ಕಾರಣವಾಗುತ್ತಿವೆ.

ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳ ಕೊರತೆ, ಇದ್ದ ಕಡೆ ಕಾರ್ಯನಿರ್ವಹಿಸದ ಕ್ಯಾಮೆರಾಗಳು, ಬೈಪಾಸ್ ರಸ್ತೆಯಲ್ಲಿ ನಿರಂತರ ಅಪಘಾತಗಳಾದರೂ ಸಮರ್ಪಕ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಲೋಕೋಪಯೋಗಿ ಇಲಾಖೆಯು ಅನೇಕ ಕಡೆ ಸೂಚನಾ ಫಲಕಗಳನ್ನು ಅಳವಡಿಸದೇ ಇರುವುದರಿಂದ ರಾತ್ರಿ ವೇಳೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅಪಘಾತಗಳ ಅಂಕಿಸಂಖ್ಯೆ: ಕಳೆದ ಐದು ವರ್ಷಗಳಲ್ಲಿ ನಡೆದಿರುವ ಅಪಘಾತಗಳ ಅಂಕಿ-ಅಂಶಗಳನ್ನು ಗಮನಿಸಿದರೆ, 2021ರಲ್ಲಿ ಜಿಲ್ಲೆಯಲ್ಲಿ ಒಟ್ಟು 705 ರಸ್ತೆ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 335 ಮಂದಿ ಮೃತಪಟ್ಟಿದ್ದಾರೆ. ಈ ಅಪಘಾತಗಳಲ್ಲಿ 976 ಮಂದಿ ಗಾಯಗೊಂಡಿದ್ದಾರೆ. 2022ರಲ್ಲಿ 658 ಅಪಘಾತಗಳು ದಾಖಲಾಗಿದ್ದು, 330 ಮಂದಿ ಸಾವನ್ನಪ್ಪಿದ್ದು, 863 ಮಂದಿ ಗಾಯಗೊಂಡಿದ್ದಾರೆ.

2023ರಲ್ಲಿ ಅಪಘಾತಗಳ ಸಂಖ್ಯೆ 630ಕ್ಕೆ ಇಳಿದಿದ್ದರೂ, 279 ಮಂದಿ ಪ್ರಾಣ ಕಳೆದುಕೊಂಡಿದ್ದು, 855 ಮಂದಿ ಗಾಯಗೊಂಡಿದ್ದಾರೆ. 2024ರಲ್ಲಿ ಮತ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗಿದ್ದು, ಒಟ್ಟು 690 ಅಪಘಾತಗಳು ಸಂಭವಿಸಿ, 350 ಮಂದಿ ಮೃತಪಟ್ಟಿದ್ದಾರೆ. ಈ ವರ್ಷ 902 ಮಂದಿ ಗಾಯಗೊಂಡಿದ್ದಾರೆ ಎಂದು ಸರಕಾರದ ಅಧಿಕೃತ ಮಾಹಿತಿ ಹೇಳುತ್ತದೆ.

2025ರ ಅಕ್ಟೋಬರ್ ತಿಂಗಳವರೆಗಿನ ಅಂಕಿ-ಅಂಶಗಳ ಪ್ರಕಾರ, ಜಿಲ್ಲೆಯಲ್ಲಿ 736 ರಸ್ತೆ ಅಪಘಾತಗಳು ಸಂಭವಿಸಿದ್ದು, 264 ಮಂದಿ ಮೃತಪಟ್ಟಿದ್ದಾರೆ. ಈ ಅವಧಿಯಲ್ಲಿ 936 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಒಟ್ಟಾರೆ 2021ರಿಂದ 2025ರ ಅಕ್ಟೋಬರ್‌ವರೆಗೆ ಜಿಲ್ಲೆಯಲ್ಲಿ 3,419 ರಸ್ತೆ ಅಪಘಾತಗಳು ಸಂಭವಿಸಿದ್ದು, ಇದರಿಂದ 1,558 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ 4,532 ಮಂದಿ ಗಾಯಗೊಂಡಿದ್ದಾರೆ.

ಜಿಲ್ಲೆಯಾದ್ಯಂತ ಹಲವು ಕಡೆ ರಸ್ತೆಗಳಲ್ಲಿ ಹಾಕಿರುವ ಹಂಪ್‌ಗಳು ಕಾಣುವುದೇ ಇಲ್ಲ. ಇದರಿಂದಾಗಿ ಹೆಚ್ಚಾಗಿ ದ್ವಿಚಕ್ರ ವಾಹನಗಳು ಮೇಲೆ ಪುಟಿದು ಅಪಘಾತಕ್ಕೀಡಾಗುತ್ತವೆ. ಗ್ರಾಮೀಣ, ತಾಲೂಕು, ಜಿಲ್ಲಾ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿ ಅಪಘಾತ ರಹಿತ ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಅನೇಕ ಬಾರಿ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರೂ ಸಂಬಂದಿಸಿದ ಇಲಾಖೆಯ ಅಧಿಕಾರಿಗಳು ಗಂಭೀರವಾಗಿಲ್ಲ.

ರಾಯಚೂರು ಸಿಟಿಯಲ್ಲಿ ನಿರ್ವಹಣೆ: ಹಲವು ವರ್ಷಗಳ ನಂತರ ಮೊದಲ ಬಾರಿಗೆ ರಾಯಚೂರು ಮಹಾನಗರ ಪಾಲಿಕೆಯು ರಸ್ತೆ ನಿರ್ವಹಣಾ ಟೆಂಡರ್ ಕರೆದಿದ್ದು, ರಾಯಚೂರು ಸಿಟಿ ವ್ಯಾಪ್ತಿಯ ರಸ್ತೆಗಳಲ್ಲಿನ ತಗ್ಗು ಗುಂಡಿ ಮುಚ್ಚುವ ಕಾರ್ಯ ನಡೆದಿದೆ.

ಆದರೆ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ಫೀಲ್ಡ್‌ನಲ್ಲಿ ಇರದೇ ಕಚೇರಿಯಲ್ಲೇ ಕುಳಿತು ಕೆಲಸ ಮಾಡುತ್ತಾರೆ. ವಾಸ್ತವ ಪರಿಸ್ಥಿತಿ ಗಮನಿಸದೆ ಗಾಢನಿದ್ರೆಗೆ ಜಾರಿದ್ದಾರೆ ಕೆಲವೆಡೆ ಕಾಟಾಚಾರಕ್ಕೆ ತೇಪೆ ಹಾಕಿದ್ದಾರೆ ಕೆಲವೇ ದಿನಗಳಲ್ಲಿ ರಸ್ತೆಗಳು ಪುನಃ ಹಾಳಾಗುತ್ತಿವೆ.

ಇದಲ್ಲದೇ ಸಾರಿಗೆ ಇಲಾಖೆಯ ಅನೇಕ ಬಸ್ ಗಳು ಗುಜರಿಗೆ ಹಾಕುವ ಸ್ಥಿತಿಗೆ ಬಂದಿದ್ದು ಲಿಂಗಸುಗೂರು, ರಾಯಚೂರು ತಾಲೂಕಿನ ಹಲವೆಡೆ ಹಳೆಯ ಬಸ್‌ಗಳನ್ನೇ ಓಡಿಸಲಾಗುತ್ತಿದೆ. ಬಸ್‌ಗಳು ಅಗಾಗ ಸ್ಟೇರಿಂಗ್ ಕಟ್ ಆಗಿ ರಸ್ತೆಯಿಂದ ಕೆಳಗೆ ಜಾರಿದ, ಅನಾಹುತಗಳಾದ ಘಟನೆಗಳು ನಡೆದಿವೆ.

ಜನರ ಒತ್ತಾಯ: ರಸ್ತೆಗಳ ಅಗಲೀಕರಣ, ಗುಂಡಿ ಮುಚ್ಚುವ ಶಾಶ್ವತ ಕಾಮಗಾರಿ, ಸೂಚನಾ ಫಲಕಗಳ ಅಳವಡಿಕೆ, ಶಾಲಾ ವಾಹನಗಳ ಕಟ್ಟುನಿಟ್ಟಿನ ಪರಿಶೀಲನೆ ಮತ್ತು ಬೈಪಾಸ್ ರಸ್ತೆಯ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಫೆಬ್ರವರಿ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಚಾಯತ್ ರಾಜ್ ಇಂಜಿನಿಯರಿಂಗ್, ಆರ್‌ಟಿಒ ಹಾಗೂ ಸ್ಥಳೀಯ ಆಡಳಿತದೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲಾಗುತ್ತಿದೆ.

-ವೆಂಕಟೇಶ ಗಲಗ್, ಕಾರ್ಯನಿರ್ವಾಹಕ ಎಂಜಿನಿಯರ್, ರಾಯಚೂರು

ಶಾಲಾ ವಾಹನಗಳ ಸುರಕ್ಷತೆಗೆ ಮಂಕು

ಜಿಲ್ಲೆಯಲ್ಲಿ 175 ಶಾಲಾ ವಾಹನಗಳಿಗೆ ಫಿಟ್ನೆಸ್ ಪ್ರಮಾಣ ಪತ್ರವೇ ಇಲ್ಲ ಎಂಬುದು ಮತ್ತೊಂದು ಆತಂಕಕಾರಿ ವಿಷಯ. 444 ವಾಹನಗಳಿಗೆ ಮಾತ್ರ ಫಿಟ್ನೆಸ್ ಇದ್ದು, ಉಳಿದ ವಾಹನಗಳ ವಿರುದ್ಧ ಆರ್‌ಟಿಒ ನೊಟೀಸ್ ಜಾರಿ ಮಾಡಲಾಗಿದೆ. 2024ರ ಸೆಪ್ಟೆಂಬರ್ 5ರಂದು ಮಾನ್ವಿ ತಾಲೂಕಿನ ಕಪಗಲ್ ಬಳಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿತ್ತು.

ಹೆಲ್ಮೆಟ್ ಜಾಗೃತಿ, ಆದರೆ ರಸ್ತೆ ಸುಧಾರಣೆ ಇಲ್ಲ

ಜಿಲ್ಲಾ ಪೊಲೀಸ್ ಇಲಾಖೆ ಹೆಲ್ಮೆಟ್ ಕಡ್ಡಾಯಗೊಳಿಸಿ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದರೂ, ಗುಣಮಟ್ಟದ ರಸ್ತೆಗಳಿಲ್ಲದೆ ಅಪಘಾತಗಳು ಮುಂದುವರಿದಿವೆ. ಮಹಾನಗರ ಪಾಲಿಕೆಯಿಂದ ರಸ್ತೆ ಗುಂಡಿ ಮುಚ್ಚುವ ಕೆಲಸ ಆರಂಭವಾದರೂ, ಕೆಲವೆಡೆ ಕಾಟಾಚಾರಕ್ಕೆ ತೇಪೆ ಹಾಕಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ರಸ್ತೆಗಳು ಪುನಃ ಹಾಳಾಗುತ್ತಿವೆ.

ಬೈಪಾಸ್ ರಸ್ತೆ ‘ಮರಣಪಥ’

ಅಂತಾರಾಜ್ಯ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಶಕ್ತಿನಗರ ಬಳಿಯ ಬೈಪಾಸ್ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಗಂಜ್ ವೃತ್ತದಿಂದ ಶಕ್ತಿನಗರದವರೆಗೆ ಕಳೆದ ಎರಡು ವರ್ಷಗಳಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಮಾರ್ಗದಲ್ಲಿ ಆರ್‌ಟಿಪಿಎಸ್, ವೈಟಿಪಿಎಸ್, ರಿಮ್ಸ್, ಆಸ್ಪತ್ರೆಗಳು, ಗಿರಣಿಗಳು ಹಾಗೂ ಕೈಗಾರಿಕೆಗಳಿರುವುದರಿಂದ ಪ್ರತಿದಿನ ನೂರಾರು ಭಾರಿ ವಾಹನಗಳು ಸಂಚರಿಸುತ್ತಿವೆ. ಆದರೆ ಹಲವು ವರ್ಷಗಳಿಂದ ರಸ್ತೆ ಅಗಲೀಕರಣವಾಗಿಲ್ಲ.

ಬೈಪಾಸ್ ರಸ್ತೆಯಲ್ಲಿ ಟಿಪ್ಪರ್‌ಗಳು ಟರ್ಪಾಲು ಹಾಕದೇ ಸಾಗಿಸುತ್ತಿದ್ದು, ಇದು ಅಪಘಾತ ಸಂಭವಿಸಲು ಪ್ರಮುಖ ಕಾರಣವಾಗಿದೆ. ಶೀಘ್ರವೇ ರಸ್ತೆ ಅಗಲೀಕರಣ ಮಾಡಬೇಕು. ಇಲ್ಲದಿದ್ದರೆ ಸಾರ್ವಜನಿಕರು ಬಂದ್ ಮಾಡಿ ಹೋರಾಟ ನಡೆಸಲಿದ್ದಾರೆ.

-ಎಚ್.ಎಂ.ಬಾಬು, ಸಾಮಾಜಿಕ ಕಾರ್ಯಕರ್ತ

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಗುಣಮಟ್ಟದ ಕೊರತೆಯಿಂದ ಜನರ ಜೀವ ಅಪಾಯಕ್ಕೆ ಒಳಗಾಗುತ್ತಿದೆ. ಹೆಲ್ಮೆಟ್ ಕಡ್ಡಾಯವಾಗಿದ್ದರೂ, ಪಾಲನೆಯಾಗುತ್ತಿಲ್ಲ. ಸರಕಾರದ ಧ್ವಂದ್ವ ನೀತಿ ಬದಲಾವಣೆ ಅಗತ್ಯವಾಗಿದೆ.

-ಅಜೀಝ್ ಜಾಗೀರದಾರ್

ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಮುಖಂಡ

Tags

RaichurroadsPeople
share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X