Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯಲುವಹಳ್ಳಿ ಸರಕಾರಿ ಶಾಲೆಯ ಆವರಣದಲ್ಲಿ...

ಯಲುವಹಳ್ಳಿ ಸರಕಾರಿ ಶಾಲೆಯ ಆವರಣದಲ್ಲಿ ಮರೀಚಿಕೆಯಾದ ಸ್ವಚ್ಛತೆ

ಗಂಗನಹಳ್ಳಿ ಎಂ.ಮುನಿನಾರಾಯಣಗಂಗನಹಳ್ಳಿ ಎಂ.ಮುನಿನಾರಾಯಣ1 Jun 2026 3:00 PM IST
share
ಯಲುವಹಳ್ಳಿ ಸರಕಾರಿ ಶಾಲೆಯ ಆವರಣದಲ್ಲಿ ಮರೀಚಿಕೆಯಾದ ಸ್ವಚ್ಛತೆ

ದೇವನಹಳ್ಳಿ : ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ಮಾತ್ರವೇ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಧ್ಯವೆಂದು ಹೇಳುವ ಜನಪ್ರತಿನಿಧಿಗಳು, ಮಕ್ಕಳಿಗೆ ಶಿಕ್ಷಣ ಕೊಡುವ ಶಿಕ್ಷಣ ಸಂಸ್ಥೆಗಳಲ್ಲಿ ಯಾವ ರೀತಿಯ ವಾತಾವರಣ ನಿರ್ಮಾಣ ಮಾಡಬೇಕೆಂಬುದನ್ನು ಮರೆತಿರುವುದರಿಂದ ಯಲುವಹಳ್ಳಿ ಗ್ರಾಮದ ಶಾಲೆಯ ಆವರಣದ ಸುತ್ತಮುತ್ತ ಅಸ್ವಚ್ಛತೆಯಿಂದ ಕೂಡಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

ತಾಲೂಕಿನ ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಲುವಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಗ್ರಾಮದಲ್ಲಿ, 120ಕ್ಕೂ ಹೆಚ್ಚು ಮನೆಗಳಿವೆ. 800ಕ್ಕೂ ಹೆಚ್ಚು ಮಂದಿ ಜನಸಂಖ್ಯೆ ಇದ್ದಾರೆ. ಆದರೆ, ಇಲ್ಲಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಶಾಲೆಯ ಆವರಣದಲ್ಲಿ ಗಿಡಗಂಟಿಗಳು ಬೆಳೆದಿವೆ. ಹುಲ್ಲು ಬೆಳೆದಿದೆ. ಅದನ್ನು ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯತ್‌ನವರಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಶಾಲೆಯ ಆವರಣದಲ್ಲೆ, ಕಾಂಪೌಂಡ್ ಗೋಡೆಗೆ ಕೊಳವೆಬಾವಿಯ ಪ್ಯಾನಲ್ ಬೋರ್ಡ್ ಅಳವಡಿಸಿದ್ದಾರೆ. ಇದು, ಶಾಲೆಯ ಮಕ್ಕಳ ಕೈಗೆಟಕುವಂತಿದೆ. ಅದನ್ನು ತೆರಗೊಳಿಸಿ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿದ್ದೇವೆ. ಇಬ್ಬರು ಪಿಡಿಒಗಳು ಬಂದು ನೋಡಿಕೊಂಡು ಹೋಗಿದ್ದಾರೆ. ಇಬ್ಬರೂ ಇದನ್ನು ಸ್ಥಳಾಂತರ ಮಾಡಿಸಲಿಲ್ಲ. ಈಗಲೂ ಹಾಗೆ ಇದೆ. ಮಕ್ಕಳು ಆಟವಾಡುವಾಗ ಆಕಸ್ಮಾತ್ತಾಗಿ ಹೋಗಿ ಮುಟ್ಟಿದ್ದರೆ ಹೊಣೆ ಯಾರು? ಇಲ್ಲಿ ದಟ್ಟವಾಗಿ ಬೆಳೆದಿರುವ ಹುಲ್ಲಿನಲ್ಲಿ ಹಾವುಗಳು ಸೇರಿಕೊಂಡರೆ, ಮಕ್ಕಳಿಗೆ ರಕ್ಷಣೆ ಯಾರು? ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಶೌಚಾಲಯದಲ್ಲಿನ ಬೇಸಿನ್‌ಗಳು ಒಡೆದು ಹೋಗಿವೆ. ಶೌಚಗುಂಡಿಯನ್ನು ನಿರ್ಮಾಣ ಮಾಡಿ ಮೂರು ವರ್ಷಗಳಾಗಿದೆ. ಅದರ ಮೇಲೆ ಮುಚ್ಚಳ ಅಳವಡಿಕೆ ಮಾಡಿಲ್ಲ ಸ್ಥಳೀಯರು ದೂರಿದ್ದಾರೆ.

ಶಾಲೆಯ ಕಾಂಪೌಂಡ್‌ನಲ್ಲಿ ಟ್ರಾನ್ಸ್‌ಫಾರ್ಮರ್ ಇದೆ. ಅದಕ್ಕೆ ಬಳ್ಳಿಗಳು ಹಬ್ಬಿಕೊಂಡಿವೆ. ಒಂದು ವೇಳೆ ಬಳ್ಳಿಗಳ ಮುಖಾಂತರ ವಿದ್ಯುತ್ ಹರಿದರೆ ನೋಡುವವರು ಯಾರು? ಶಾಲೆಗೆ ಮಕ್ಕಳನ್ನು ಕಳುಹಿಸುವುದಕ್ಕೂ ಭಯವಾಗುತ್ತದೆ. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಜವಾಬ್ದಾರಿ ಬೇಡವೇ? ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಆವರಣವನ್ನು ಸ್ವಚ್ಛಗೊಳಿಸಬೇಕು. ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಬೇಕು. ಇಲ್ಲಿನ ಕಾಂಪೌಂಡ್ ಗೋಡೆಗೆ ಅಳವಡಿಸಿರುವ ಪ್ಯಾನಲ್ ಬೋರ್ಡ್ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಚರಂಡಿಗಳು ಸ್ವಚ್ಛತೆಯಿಲ್ಲ: ಯಲುವಹಳ್ಳಿ ಗ್ರಾಮದ ಚರಂಡಿಗಳಲ್ಲಿ ಸ್ವಚ್ಛತೆಯಿಲ್ಲ. ಕೊಳಚೆ ನೀರೆಲ್ಲಾ ನಿಂತಲ್ಲೆ ನಿಂತಿದ್ದು, ದುರ್ವಾಸನೆ ಬೀರುತ್ತಿವೆ. ಇದರಿಂದ ಮನೆಗಳಲ್ಲಿ ವಾಸ ಮಾಡುವುದು ಕಷ್ಟವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಏನೂ ಪ್ರಯೋಜನವಾಗುತ್ತಿಲ್ಲ. ಜಿಲ್ಲಾ ಪಂಚಾಯತ್ ಅಧಿಕಾರಿಗಳಾದರೂ ನವ್ಮೂರಿನ ಕಡೆಗೆ ಗಮನಹರಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಶಾಲೆಯ ಆವರಣಕ್ಕೆ ಬರುವ ಕೆಲವರು ಯುವಕರು, ಇಲ್ಲಿನ ಕೊಳವೆಬಾವಿಯಿಂದ ನೀರು ಬಿಟ್ಟುಕೊಂಡು ಇಲ್ಲೆ ಸ್ನಾನ ಮಾಡುತ್ತಾರೆ. ಪ್ಯಾನಲ್ ಬೋರ್ಡ್ ತೆಗೆಯುವಂತೆ ಇಬ್ಬರು ಪಿಡಿಒ ಗಳನ್ನು ಕರೆದುಕೊಂಡು ಬಂದು ತೋರಿಸಿದ್ದೇವೆ. ಪ್ರಯೋಜನವಾಗಿಲ್ಲ. ಇಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಿಕೊಡಬೇಕಿದೆ.

-ಮಂಜುನಾಥ್, ಶಾಲೆಯ ಶಿಕ್ಷಕ

ಯಲುವಹಳ್ಳಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಅಧಿಕಾರಿಗಳು ಯಾರೂ ಗಮನಹರಿಸುತ್ತಿಲ್ಲ. ಕನಿಷ್ಠ ಚರಂಡಿಗಳನ್ನು ಸ್ವಚ್ಛಗೊಳಿಸಿ, ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ, ಮಕ್ಕಳಿಗೆ ಅನುಕೂಲ ಮಾಡಿಕೊಡಿ.

-ಆದಿನಾರಾಯಣಾಚಾರಿ, ಯಲುವಹಳ್ಳಿ ಗ್ರಾಮಸ್ಥ

share
ಗಂಗನಹಳ್ಳಿ ಎಂ.ಮುನಿನಾರಾಯಣ
ಗಂಗನಹಳ್ಳಿ ಎಂ.ಮುನಿನಾರಾಯಣ
Next Story
X