Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಭಾನಾಪುರದಲ್ಲಿ ಗಾಂಧೀಜಿ ಸವಿನೆನಪು ;...

ಭಾನಾಪುರದಲ್ಲಿ ಗಾಂಧೀಜಿ ಸವಿನೆನಪು ; ಸ್ಮಾರಕ ನಿರ್ಮಾಣಕ್ಕೆ ಆಗ್ರಹ

92 ವರ್ಷಗಳ ಹಿಂದೆ ಭಾನಾಪುರಕ್ಕೆ ಭೇಟಿ ನೀಡಿದ್ದ ಮಹಾತ್ಮ ಗಾಂಧೀಜಿ

ಭೀಮಾಶಂಕರ ಪಾಣೇಗಾಂವಭೀಮಾಶಂಕರ ಪಾಣೇಗಾಂವ2 Oct 2026 9:58 AM IST
share
ಭಾನಾಪುರದಲ್ಲಿ ಗಾಂಧೀಜಿ ಸವಿನೆನಪು ; ಸ್ಮಾರಕ ನಿರ್ಮಾಣಕ್ಕೆ ಆಗ್ರಹ

ಕುಕನೂರು: ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನವನ್ನು ಗಾಂಧಿ ಜಯಂತಿಯಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ 92 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಭಾನಾಪುರ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ್ದ ಐತಿಹಾಸಿಕ ಘಟನೆಯ ನೆನಪು ಮತ್ತೆ ಮುನ್ನೆಲೆಗೆ ಬಂದಿದೆ. ಗಾಂಧೀಜಿ ಭೇಟಿ ನೀಡಿದ ಸ್ಥಳದಲ್ಲಿ ಸ್ಮಾರಕ ನಿರ್ಮಿಸಿ, ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂಬ ಆಗ್ರಹ ಸ್ಥಳೀಯರಿಂದ ಕೇಳಿಬಂದಿದೆ.

ಸ್ವಾತಂತ್ರ್ಯ ಚಳವಳಿಯ ಪ್ರಚಾರ ಹಾಗೂ ಹರಿಜನ ನಿಧಿ ಸಂಗ್ರಹಕ್ಕಾಗಿ ದೇಶದ ವಿವಿಧ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದ ಗಾಂಧೀಜಿ ಅವರು ಭಾನಾಪುರಕ್ಕೂ ಆಗಮಿಸಿದ್ದರು.

ಬಳ್ಳಾರಿ ಕಡೆಯಿಂದ ಗದಗಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಭಾನಾಪುರ ರೈಲು ನಿಲ್ದಾಣದಲ್ಲಿ ಸುಮಾರು 10 ನಿಮಿಷ ರೈಲು ನಿಲುಗಡೆಯಾಗಿತ್ತು ಎನ್ನಲಾಗಿದೆ. ಗಾಂಧೀಜಿಯವರ ಆಗಮನದ ಸುದ್ದಿ ತಿಳಿದು ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಜನರು ಉರಿಬಿಸಿಲಿನಲ್ಲಿಯೂ ರೈಲು ನಿಲ್ದಾಣಕ್ಕೆ ಸೇರಿದ್ದರು.

ಅಂದಿನ ಮುಖಂಡರು ಗಾಂಧೀಜಿಯವರ ಸ್ವಾಗತಕ್ಕಾಗಿ ಸಮಿತಿ ರಚಿಸಿ ನಿಧಿ ಸಂಗ್ರಹಿಸಿದ್ದರು. ತಮ್ಮನ್‌ಗೌಡ ಪಾಟೀಲರು ಸ್ವಾಗತಾಧ್ಯಕ್ಷರಾಗಿದ್ದು, ಎಚ್. ಕೊಟ್ರಪ್ಪ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶಿರೂರು ವೀರಭದ್ರಪ್ಪನವರು ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರು. ಸುಮಾರು 10 ಸಾವಿರ ಜನರು ಸೇರಿದ್ದ ಸಭೆಯಲ್ಲಿ ಗಾಂಧೀಜಿಯವರಿಗೆ ನಿಧಿ ಹಾಗೂ ಮಾನಪತ್ರ ಅರ್ಪಿಸಿ ಗೌರವಿಸಲಾಗಿತ್ತು ಎಂದು ಸ್ಥಳೀಯರು ಸ್ಮರಿಸುತ್ತಾರೆ.

ಚುಟ್ಟವ್ವ ಹರಿಜನ ಕೈಯಿಂದ ನೀರು :

ಗಾಂಧೀಜಿ ಭಾನಾಪುರಕ್ಕೆ ಭೇಟಿ ನೀಡಿದ ಸಂದರ್ಭ ಅಸ್ಪೃಶ್ಯತೆ ನಿವಾರಣೆ ಹಾಗೂ ಸಾಮಾಜಿಕ ಸಮಾನತೆಯ ಸಂದೇಶಕ್ಕೂ ಸಾಕ್ಷಿಯಾಗಿತ್ತು ಎನ್ನಲಾಗುತ್ತದೆ.

“ಆ ದಿನ ನಿಮ್ಮನ್ನು ಮಹಾತ್ಮ ಎಂದು ಏಕೆ ಕರೆಯುತ್ತಾರೆ?” ಎಂದು ಪ್ರಶ್ನಿಸಿದಾಗ ಗಾಂಧೀಜಿ ಅವರು, “ಮಹಾತ್ಮ ಎಂದರೆ ಕಸಬರಿಗೆ” ಎಂದು ಉತ್ತರಿಸಿದ್ದರು. ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಸಾಮಾಜಿಕ ಸಮಾನತೆಯ ಸಂದೇಶ ಸಾರುವ ಉದ್ದೇಶದಿಂದ ಇದೇ ರೈಲು ನಿಲ್ದಾಣದಲ್ಲಿ ತಳಕಲ್ ಗ್ರಾಮದ ಚುಟ್ಟವ್ವ ಹರಿಜನ ಎಂಬ ಮಹಿಳೆಯ ಕೈಯಿಂದ ನೀರು ಕುಡಿದಿದ್ದರು ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.

ಅಸ್ಪೃಶ್ಯತೆ ನಿವಾರಣೆ, ಸಾಮಾಜಿಕ ಸಮಾನತೆ ಹಾಗೂ ಮಾನವೀಯತೆಯ ಪರ ಗಾಂಧೀಜಿ ನಡೆಸಿದ ಹೋರಾಟದ ಆಶಯಗಳನ್ನು ಕೇವಲ ಜಯಂತಿ ಆಚರಣೆಗೆ ಸೀಮಿತಗೊಳಿಸದೆ, ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಗಾಂಧೀಜಿ ಜತೆ ವೀರಭದ್ರಪ್ಪ :

ಗಾಂಧೀಜಿ ಭೇಟಿಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮೊದಲ ಶಾಸಕರಾಗಿದ್ದ ಶಿರೂರು ವೀರಭದ್ರಪ್ಪನವರ ಪಾತ್ರವೂ ಸ್ಮರಣೀಯವಾಗಿದೆ.

ಗಾಂಧೀಜಿಯವರ ಪರಿವಾರದವರು ಪ್ರಯಾಣಿಸುತ್ತಿದ್ದ ರೈಲು ಬೋಗಿಯಲ್ಲೇ ವೀರಭದ್ರಪ್ಪನವರು ಪ್ರಯಾಣಿಸಿ, ಭಾನಾಪುರದಿಂದ ಗದಗ್‌ವರೆಗೆ ನಡೆದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು ಎಂದು ಸ್ಥಳೀಯವಾಗಿ ಸ್ಮರಿಸಲಾಗುತ್ತದೆ.

ಗಾಂಧೀಜಿಯವರ ಸಾಮಾಜಿಕ ಸುಧಾರಣೆಯ ಆಶಯಗಳಿಂದ ಪ್ರೇರಣೆ ಪಡೆದ ವೀರಭದ್ರಪ್ಪನವರು ತಮ್ಮ ಊರಿನ ಸಮೀಪದ ರಾಜೂರಿನಲ್ಲಿ ಹರಿಜನ ಮಕ್ಕಳಿಗಾಗಿ ಶಾಲೆ ಆರಂಭಿಸಿದ್ದರು ಎನ್ನಲಾಗಿದೆ. ಸುಮಾರು 30 ವಿದ್ಯಾರ್ಥಿಗಳು ಅಲ್ಲಿ ಶಿಕ್ಷಣ ಪಡೆಯಲು ಸೇರಿಕೊಂಡಿದ್ದರು.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು, ಸಾಮಾಜಿಕ ಸುಧಾರಣೆಯ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಇಂತಹ ಸ್ಥಳೀಯ ಹೋರಾಟಗಾರರ ಕೊಡುಗೆಯನ್ನೂ ದಾಖಲಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ.

ಚಿತ್ರದಲ್ಲೂ ಉಳಿದ ಗಾಂಧೀಜಿ ಭೇಟಿ :

ಗಾಂಧೀಜಿ ಭಾನಾಪುರಕ್ಕೆ ಬಂದ ಸಂದರ್ಭದಲ್ಲಿ ಸ್ಥಳೀಯ ಕಲಾವಿದ ಕಲ್ಲಪ್ಪ ಪತ್ತಾರ್ ಅವರು ಮಹಾತ್ಮರ ಚಿತ್ರವನ್ನು ಬಿಡಿಸಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ.

ಗಾಂಧೀಜಿಯವರ ಭೇಟಿಯ ಸವಿನೆನಪಾಗಿ ಉಳಿದಿರುವ ಈ ಚಿತ್ರವು ಭಾನಾಪುರದ ಐತಿಹಾಸಿಕ ಮಹತ್ವವನ್ನು ಸಾರುವ ಪ್ರಮುಖ ಕುರುಹಾಗಿದೆ. ಬಳಿಕ ಅವರ ಪುತ್ರರೂ ಈ ನೆನಪನ್ನು ಮುಂದುವರಿಸಿದ್ದು, ಚಿತ್ರವನ್ನು ಭಾನಾಪುರ ರೈಲು ನಿಲ್ದಾಣದಲ್ಲಿ ಪ್ರದರ್ಶಿಸಲಾಗಿದೆ.

ಗಾಂಧೀಜಿ ಭೇಟಿಯ ನೆನಪನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ಸ್ವಾತಂತ್ರ್ಯ ಹೋರಾಟಗಾರ ಶಿವಮೂರ್ತಿ ಸ್ವಾಮಿ ಅಳವಂಡಿ ಅವರ ನೇತೃತ್ವದಲ್ಲಿ ಸ್ಮಾರಕ ನಿರ್ಮಿಸುವ ಪ್ರಯತ್ನವೂ ನಡೆದಿತ್ತು. ಆದರೆ ಗಾಂಧೀಜಿ ಭೇಟಿ ನೀಡಿದ ಸ್ಥಳದ ಐತಿಹಾಸಿಕ ಮಹತ್ವಕ್ಕೆ ತಕ್ಕಂತೆ ಇನ್ನಷ್ಟು ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ ಎಂಬುದು ಸ್ಥಳೀಯರ ಆಗ್ರಹ.

ಸ್ಮಾರಕ ನಿರ್ಮಾಣಕ್ಕೆ ಆಗ್ರಹ :

“ಭಾನಾಪುರಕ್ಕೆ ಮಹಾತ್ಮ ಗಾಂಧೀಜಿ ಬಂದಿರುವುದು ನಮ್ಮ ಗ್ರಾಮದ ಹೆಮ್ಮೆಯ ಇತಿಹಾಸ. ಅವರ ಭಾಷಣ ಕೇಳಲು ಅಂದು ಸಾವಿರಾರು ಜನರು ಸೇರಿದ್ದರು ಎಂದು ನಮ್ಮ ಹಿರಿಯರು ಹೇಳುತ್ತಾರೆ.

ಇಂತಹ ಐತಿಹಾಸಿಕ ಸ್ಥಳದಲ್ಲಿ ಸೂಕ್ತ ಸ್ಮಾರಕ ನಿರ್ಮಿಸಬೇಕು. ಗಾಂಧೀಜಿಯವರ ಭೇಟಿ ಮಾತ್ರವಲ್ಲದೆ, ಅವರೊಂದಿಗೆ ಸಂಪರ್ಕ ಹೊಂದಿದ್ದ ಶಿರೂರು ವೀರಭದ್ರಪ್ಪನವರಂತಹ ಗಾಂಧೀವಾದಿ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನೂ ಸ್ಮರಿಸಬೇಕು.

ಜಿಲ್ಲಾಡಳಿತ ಈ ಸ್ಥಳದ ಐತಿಹಾಸಿಕ ಮಹತ್ವ ಗುರುತಿಸಿ ಅಭಿವೃದ್ಧಿಪಡಿಸಿ, ಯುವಪೀಳಿಗೆಗೆ ಗಾಂಧೀಜಿ ಪ್ರತಿಪಾದಿಸಿದ ಅಹಿಂಸೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಪರಿಚಯಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಭಾನಾಪುರದ ಸ್ಥಳೀಯ ಯುವಕ ಬಸವರಾಜ ಮೇಟಿ ಒತ್ತಾಯಿಸಿದರು.

Tags

BhanapuraGandhiji
share
ಭೀಮಾಶಂಕರ ಪಾಣೇಗಾಂವ
ಭೀಮಾಶಂಕರ ಪಾಣೇಗಾಂವ
Next Story
X