Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಾವು ಬೆಳೆಗಾರರ ಕಂಗೆಡಿಸಿದ ಮಳೆ ವಿಳಂಬ

ಮಾವು ಬೆಳೆಗಾರರ ಕಂಗೆಡಿಸಿದ ಮಳೆ ವಿಳಂಬ

ತಾಪಮಾನ ಹೆಚ್ಚಳದಿಂದ ಉದುರುತ್ತಿರುವ ಹೂವು

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್13 May 2024 11:43 AM IST
share
ಮಾವು ಬೆಳೆಗಾರರ ಕಂಗೆಡಿಸಿದ ಮಳೆ ವಿಳಂಬ

ಮೈಸೂರು: ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಉಂಟಾಗಿರುವ ಅತಿವೃಷ್ಟಿಯಿಂದ ಬೆಳೆಗಳು ಹಾನಿಯಾಗಿ ರೈತರಿಗೆ ಸಿಗಬೇಕಾದ ಫಸಲು ಕೈಗೆಟುಕಿಲ್ಲ, ಈ ಬಾರಿ ಮಳೆಯಿಲ್ಲದೇ ಮಾವು ಬೆಳೆಗಾರರು ಕಂಗೆಟ್ಟಿದ್ದು, ನಿರೀಕ್ಷೆಯ ಫಸಲು ಕೈಗೆ ಸಿಗಲ್ಲ ಎನ್ನುತ್ತಿದ್ದಾರೆ.

ಈ ಬಾರಿ ಮಾವು ಉತ್ತಮ ರೀತಿಯಲ್ಲಿ ಹೂವು ಬಿಟ್ಟಿದ್ದರೂ ಬಿಸಿಲ ಬೇಗೆಗೆ ಹೂವುಗಳು ಉದುರಿ ಹೋಗುತ್ತಿದೆ. ಇದರಿಂದಾಗಿ ಈ ಬಾರಿಯೂ ರೈತರು ಕಷ್ಟಕ್ಕೀಡಾಗಿದ್ದಾರೆ.

ಸದ್ಯ ಮಾವಿನ ತೋಟಗಳಿಗೆ ನೀರಿನ ಕೊರತೆ ಕಾಡುತ್ತಿದ್ದು, ನೀರಾವರಿ ಸೌಲಭ್ಯವುಳ್ಳ ಕೆಲ ರೈತರು ಕೃಷಿ ಪಂಪ್ ಸೆಟ್‌ಗಳ ಮೂಲಕ ವಾರಕ್ಕೊಮ್ಮೆ ಮರಗಳಿಗೆ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಮಾವಿಗೆ ಕೀಟಬಾಧೆ ಕಾಣಿಸಿಕೊಂಡಿಲ್ಲ. ಬೇಸಿಗೆ ತೀವ್ರವಾಗಿರುವುದರಿಂದ ಮಾವಿನ ತೋಟಗಳಲ್ಲಿ ಜೇನು ನೊಣಗಳ ಹಾರಾಟ ಕಡಿಮೆಯಾಗಿದೆ. ಇದರಿಂದ ಹೂವುಗಳ ನಡುವೆ ಪರಾಗಸ್ಪರ್ಶ ಪ್ರಕ್ರಿಯೆಯೂ ಕಡಿಮೆಯಾಗಿದ್ದು, ಉತ್ಪಾದನೆ ಮೇಲೆಯೂ ಪರಿಣಾಮ ಬೀರತೊಡಗಿದೆ.

ಜಿಲ್ಲೆಯಲ್ಲಿ ಮಾವಿನ ಕೊಯ್ಲು ಆರಂಭವಾಗಲು ಇನ್ನೂ ಕನಿಷ್ಠ ಒಂದು ತಿಂಗಳು ಬೇಕು. ಆದರೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಮಾವು ನಿಧಾನವಾಗಿ ಇಲ್ಲಿನ ಮಾರುಕಟ್ಟೆಗೆ ಕಾಲಿಡುತ್ತಿದೆ. ಹೀಗಾಗಿ ಮಾವಿನ ಬೆಲೆಯೂ ದುಬಾರಿ ಇದೆ. ಕಾರ್ಬೈಡ್ ಬಳಸಿ ಮಾಗಿಸಿದ ಹಣ್ಣು ಮಾರುಕಟ್ಟೆಗೆ ಬಂದಿದ್ದು, ಅಂತಹ ಹಣ್ಣನ್ನು ಖರೀದಿ ಮಾಡದಿರುವುದೇ ಒಳಿತು. ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಸಿಗಲು ಇನ್ನೂ ಕೆಲವು ವಾರಗಳು ಬೇಕಾಗಬಹುದು.

ಬೇಸಿಗೆ ತೀವ್ರವಾಗಿರುವುದರಿಂದ ಮಾವಿನ ತೋಟಗಳಲ್ಲಿ ಹೂಗಳ ಉದುರುವಿಕೆ ಆಗುತ್ತಿದೆ. ಇದರಿಂದ ಇಳುವರಿಯಲ್ಲಿ ಕುಂಠಿತವಾಗಲಿದೆ. ಈ ಬಗ್ಗೆ ಸರಕಾರ ರೈತರಿಗೆ ನೆರವಾಗಬೇಕು. ಈಗ ಮಾರುಕಟ್ಟೆಗೆ ಬಂದಿರುವ ಹಣ್ಣುಗಳು ಕಾರ್ಬೈಡ್ ಬಳಸಿ ಮಾಗಿಸಿದವಾಗಿವೆ. ಅಂತಹ ಹಣ್ಣಗಳು ಆರೋಗ್ಯಕ್ಕೆ ಉತ್ತಮವಲ್ಲ.

-ಸೋಮಣ್ಣ, ಮಾವು ಬೆಳೆಗಾರ

ಶೇ.25 ಇಳುವರಿ ಕಡಿಮೆ ಸಾಧ್ಯತೆ

ಜಿಲ್ಲೆಯ ಎಚ್.ಡಿ.ಕೋಟೆ-749, ಹುಣಸೂರು-518, ಕೆ.ಆರ್.ನಗರ-42, ಮೈಸೂರು ಗ್ರಾಮಾಂತರ 1286, ನಂಜನಗೂಡು-302, ಪಿರಿಯಾಪಟ್ಟಣ-13, ಸಾಲಿಗ್ರಾಮ-27, ಸರಗೂರು-27, ತಿ.ನರಸೀಪುರ 102 ಸೇರಿ ಒಟ್ಟು 3,066 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಉತ್ತಮ ಬೆಳೆಯಾದರೆ ಪ್ರತೀ ಹೆಕ್ಟೇರ್‌ಗೆ ಕನಿಷ್ಠ 7ರಿಂದ 10 ಟನ್ ಮಾವಿನ ಕಾಯಿ ಫಸಲು ಸಿಗುತ್ತಿತ್ತು. ಜೊತೆಗೆ ವಾರ್ಷಿಕ 7ರಿಂದ 8 ಸಾವಿರ ಟನ್‌ನಷ್ಟು ಮಾವು ಉತ್ಪಾದನೆಯಾಗುತ್ತಿತ್ತು. ಆದರೆ ಈ ಬಾರಿ ತೀವ್ರ ತಾಪಮಾನ ಮತ್ತು ಮಳೆ ಇಲ್ಲದಿರುವ ಕಾರಣ ಇಳುವರಿ ಕಡಿಮೆ ಯಾಗಿದೆ. ಈ ಬಾರಿ 4ರಿಂದ 5 ಸಾವಿರ ಟನ್ ಉತ್ಪಾದನೆಯಾಗುವುದೇ ದುಸ್ತರವಾಗಿದ್ದು, ಶೇ.25ರಷ್ಟು ಇಳುವರಿ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X