Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಂಟು ಶಾಸಕರಿದ್ದರೂ ರಾಯಚೂರಿಗಿಲ್ಲ ಸಚಿವ...

ಎಂಟು ಶಾಸಕರಿದ್ದರೂ ರಾಯಚೂರಿಗಿಲ್ಲ ಸಚಿವ ಸ್ಥಾನ

ಬಾವಸಲಿ ರಾಯಚೂರುಬಾವಸಲಿ ರಾಯಚೂರು4 Aug 2026 10:14 AM IST
share
ಎಂಟು ಶಾಸಕರಿದ್ದರೂ ರಾಯಚೂರಿಗಿಲ್ಲ ಸಚಿವ ಸ್ಥಾನ

ರಾಯಚೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೋಮವಾರ ಸಂಪುಟ ವಿಸ್ತರಣೆ ಆಗಿ ಸರಕಾರದಿಂದ ಸಚಿವರ ಪದಗ್ರಹಣ ಸಮಾರಂಭವೂ ನಡೆದಿದೆ. ಆದರೆ ಮೊದಲ ಹಾಗೂ ಎರಡನೇ ಬಾರಿಗೆ ಸಚಿವರಾದವರ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಯಾವೊಬ್ಬ ಶಾಸಕರು ಇಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಜಾತಿ ಲೆಕ್ಕಾಚಾರ, ಪ್ರಾದೇಶಿಕ ಸಮಾನತೆ, ಸಾಮಾಜಿಕ ನ್ಯಾಯ ನೀಡದೆ ಕಾಂಗ್ರೆಸ್ ಸರಕಾರ ಅನ್ಯಾಯ ಮಾಡಿದೆ ಎಂದು ಜನರಿಂದ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ ಸರಕಾರದ ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಎನ್. ಎಸ್. ಭೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಡಿ.ಕೆ ಶಿವಕುಮಾರ್‌ಸಂಪುಟದ ಮೊದಲ ಪಟ್ಟಿಯಲ್ಲಿ ಜಿಲ್ಲೆಗೆ ಮಂತ್ರಿ ಸ್ಥಾನ ಕೈತಪ್ಪಿದಾಗ ಎರಡನೇ ಪಟ್ಟಿಯಲ್ಲಾದರೂ ಹಂಪನಗೌಡ ಬಾದರ್ಲಿ, ಮಲ್ಲಿಕಾರ್ಜುನ ಖರ್ಗೆ ಆಪ್ತ ವಸಂತ ಕುಮಾರ ಅವರಿಗೆ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಈಗ ಯಾರೊಬ್ಬರಿಗೂ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಹೈಕಮಾಂಡ್ ಚೊಂಬು ನೀಡಿದೆ ಎಂದು ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಗಟ್ಟಿ ನೆಲವನ್ನೇ ನಿರ್ಲಕ್ಷಿಸಿದ ಕಾಂಗ್ರೆಸ್ ಹೈ ಕಮಾಂಡ್: ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದ ಪೈಕಿ ರಾಯಚೂರು ಗ್ರಾಮೀಣ, ಮಾನ್ವಿ, ಸಿಂಧನೂರು ಹಾಗೂ ಮಸ್ಕಿಯಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. 4 ಜನ ವಿಧಾನ ಪರಿಷತ್ ಸದಸ್ಯರಿದ್ದಾರೆ. ಇಷ್ಟಾಗಿಯೂ ಯಾವೊಬ್ಬ ಚುನಾಯಿತ ಶಾಸಕರಿಗೂ ಮಂತ್ರಿ ಸ್ಥಾನ ನೀಡಿಲ್ಲ. ಜಿಲ್ಲೆಯ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಎನ್ ಎಸ್ ಭೋಸರಾಜು, 5 ಬಾರಿ ಶಾಸಕರಾದ ಸಿಂಧನೂರಿನ ಹಂಪನಗೌಡ ಬಾದರ್ಲಿ, ಮೂರು ಬಾರಿ ಶಾಸಕ ಹಂಪಯ್ಯ ನಾಯಕ ಸಾಹುಕಾರ್ ಅಥವಾ ಎರಡು ಬಾರಿ ಶಾಸಕ ಬಸನಗೌಡ ದದ್ದಲ್, ಯುವಕರಿಗೆ ಆದ್ಯತೆ ನೀಡುವುದಾಗಿದ್ದರೆ ವಿಧಾನ ಪರಿಷತ್ ಸದಸ್ಯ ಬಸನಗೌಡ ತುರ್ವಿಹಾಳ, ವಸಂತ ಕುಮಾರರಿಗೆ ಸಚಿವ ಸ್ಥಾನ ಸಿಗಬಹುದು ಎಂದು ಲೆಕ್ಕಾಚಾರವಿತ್ತು. ಆದರೆ ಜಿಲ್ಲೆಯ ರಾಜಕೀಯ ಸಮೀಕರಣವನ್ನೇ ಹೈ ಕಮಾಂಡ್ ನಿರ್ಲಕ್ಷಿಸಿದೆ ಎಂದು ಜನರು ಆರೋಪಿಸಿದ್ದಾರೆ.

ಫಲಿಸದ ಬಾದರ್ಲಿ ಪ್ರಯತ್ನ

ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠರಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಜಿಲ್ಲೆಯಲ್ಲಿ ಪಕ್ಷವನ್ನು ಬಲವಾಗಿ ಕಟ್ಟಿದ ಹಿರಿಯ ನಾಯಕರಾದ ಮತ್ತು ದಲಿತ ಮುಖಂಡ ಎ. ವಸಂತ ಕುಮಾರ ಮತ್ತು ಪ್ರಭಾವಿ ಲಿಂಗಾಯತ ಸಮಾಜದ ಹಂಪನಗೌಡ ಬಾದರ್ಲಿ ತೀವ್ರ ಪ್ರಯತ್ನ ನಡೆಸಿದ್ದರು. ಕೊನೆ ಕ್ಷಣದವರೆಗೂ ಅವರ ಹೆಸರು ಚಾಲ್ತಿಯಲ್ಲಿತ್ತು. ಸಚಿವ ಸಂಪುಟದಿಂದ ಏಕಾಏಕಿ ಅವರನ್ನು ಕೈ ಬಿಡಲಾಗಿದ್ದು, ಅವರ ಅಭಿಮಾನಿಗಳಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ತಂದಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಹಿರಿಯ ಉಪಾಧ್ಯಕ್ಷ ತಲಕಾಯ ಮಾರೆಪ್ಪಬೇಸರ ವ್ಯಕ್ತಪಡಿಭವಿಷ್ಯದಲ್ಲಿ ಬರುವ ಚುನಾವಣೆಗಳಲ್ಲಿ ಇದರ ಪರಿಣಾಮ ಆಗುವುದು ಖಚಿತ, ಪಕ್ಷದ ಹೈಕಮಾಂಡ್ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ಸಚಿವ ಸ್ಥಾನ ಕೈತಪ್ಪಲು ಒಗ್ಗಟ್ಟಿನ ಕೊರತೆ

ಜಿಲ್ಲೆಯಲ್ಲಿ 4 ಜನ ಚುನಾಯಿತ ಶಾಸಕರು, 4 ಜನ ವಿಧಾನ ಪರಿಷತ್ ಸದಸ್ಯರಿದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ ಎನ್ನುವುದು ಪಕ್ಷದ ಕಾರ್ಯಕರ್ತರಲ್ಲೂ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಕೊರತೆ, ಬಣ ಬಡಿದಾಟ, ರಾಜಕೀಯ ಮೇಲಾಟದಿಂದ ಸಚಿವ ಸ್ಥಾನ ಕೈತಪ್ಪಿದೆಯಾ ಎಂಬ ಅನುಮಾನ ಮೂಡುತ್ತಿದೆ. ಕಳೆದ ಬಾರಿ ಎನ್.ಎಸ್. ಭೋಸರಾಜು ಅವರಿಗೆ ಸಚಿವ ಸ್ಥಾನ ನೀಡಿದಾಗ ಹಂಪನಗೌಡ ಬಾದರ್ಲಿ, ಬಸನಗೌಡ ನೇತೃತ್ವದಲ್ಲಿ ಹೈಕಮಾಂಡ್ ಹಾಗೂ ರಾಜ್ಯ ನಾಯಕರಿಗೆ ಪತ್ರ ಬರೆದು ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಚುನಾಯಿತ ಶಾಸಕರನ್ನೇ ಪರಿಗಣಿಸಬೇಕು ಎಂದು ಪತ್ರ ಬರೆದಿದ್ದರು, ಮತ್ತೊಂದು ಕಡೆ ಹೈಕಮಾಂಡ್‌ಗೆ ಜಿಲ್ಲೆಗೆ ಯಾರಾದರೊಬ್ಬರಿಗೆ ಸಚಿವ ಸ್ಥಾನ ನೀಡಿ ಎಂದು ಒಗ್ಗಟ್ಟು ಪ್ರದರ್ಶಿಸಿಲ್ಲ ಎಂದು ಪಕ್ಷದೊಳಗೆ ಗುಸುಗುಸು ಚರ್ಚೆ ಕೇಳಿ ಬರುತ್ತಿದೆ.

ಭೋಸರಾಜುಗೆ ಸ್ಥಾನ ಕೊಡದಂತೆ ‘ಸಾಮೂಹಿಕ ರಾಜೀನಾಮೆ’ ಬೆದರಿಕೆ?

ಸಿಂಧನೂರು, ಆ. 3: ಭೋಸರಾಜು ಅವರಿಗೆ ಸಚಿವ ಸ್ಥಾನ ಕೊಟ್ಟರೆ ಸಾಮೂಹಿಕ ರಾಜೀನಾಮೆ ಕೊಡುತ್ತೇವೆ ಎಂದು ಹಂಪನಗೌಡ ಬಾದರ್ಲಿ ಬಣದ ಶಾಸಕರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಭೇಟಿ ನೀಡಿರುವ ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್ ಹಾಗೂ ವಿಧಾನಪರಿಷತ್ ಶಾಸಕರಾದ ಎ.ವಸಂತಕುಮಾರ ಹಾಗೂ ಶರಣೇಗೌಡ ಬಯ್ಯಾಪುರ ಅವರು ಸಿಎಂ ಡಿ.ಕೆ.ಶಿವಕುಮಾರ ಅವರ ಮುಂದೆ ತಮ್ಮ ಆಗ್ರಹವಿಟ್ಟಿದ್ದಾರೆ ಎನ್ನಲಾಗಿದ್ದು, ಹಿರಿತನ, ಜಾತಿ ಲೆಕ್ಕಚಾರದ ಪರಿಗಣನೆ ತೆಗೆದು ಕೊಂಡರೆ ತಮ್ಮ ಬಣದಲ್ಲಿ ಒಬ್ಬರಿಗೆ ಅವಕಾಶ ನೀಡಲು ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಶಾಸಕರ ಆಪ್ತ ವಲಯದ ಮೂಲಗಳು ತಿಳಿಸಿವೆ.

ಕೊನೆ ಕ್ಷಣದಲ್ಲಿ ಭೋಸರಾಜುಗೆ ಕೈ ತಪ್ಪಿದ ಸಚಿವ ಸ್ಥಾನ?

ಮೊದಲಿನ ಪಟ್ಟಿಯಲ್ಲಿ ವಿಧಾನ ಪರಿಷತ್ ಶಾಸಕ ಭೋಸರಾಜು ಹೆಸರು ಇರಲಿಲ್ಲ. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಭೋಸರಾಜು ಹೆಸರು ಮುನ್ನಲೆಗೆ ಬಂದಿತ್ತು. ತಮ್ಮ ಬಣಕ್ಕೆ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಹಂಪನಗೌಡ ಬಾದರ್ಲಿ ಬಣದ ಶಾಸಕರು, ನೇರವಾಗಿ ಸಿಎಂ ಡಿ.ಕೆ.ಶಿವಕುಮಾರ್ ಅವರ ಮನೆಗೆ ತೆರಳಿ ಈ ಬಗ್ಗೆ ಚರ್ಚಿಸಿದ್ದು, ಈ ಹಿನ್ನೆಲೆಯಲ್ಲಿ ಭೋಸರಾಜು ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲ ಎನ್ನುವ ಮಾಹಿತಿ ತಿಳಿದುಬಂದಿದೆ.


Tags

MLAsRaichurministerial berth.
share
ಬಾವಸಲಿ ರಾಯಚೂರು
ಬಾವಸಲಿ ರಾಯಚೂರು
Next Story
X