Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹದಗೆಟ್ಟ ಬೆಲ್ದಾಳ್-ಚಿಂತಾಕಿ ರಸ್ತೆ:...

ಹದಗೆಟ್ಟ ಬೆಲ್ದಾಳ್-ಚಿಂತಾಕಿ ರಸ್ತೆ: ಅಪಾಯದ ಭೀತಿಯಲ್ಲೇ ಪ್ರಯಾಣ

ರಿಯಾಜಪಾಶಾ ಜಿ. ಕೊಳ್ಳೂರರಿಯಾಜಪಾಶಾ ಜಿ. ಕೊಳ್ಳೂರ21 May 2026 3:08 PM IST
share
ಹದಗೆಟ್ಟ ಬೆಲ್ದಾಳ್-ಚಿಂತಾಕಿ ರಸ್ತೆ: ಅಪಾಯದ ಭೀತಿಯಲ್ಲೇ ಪ್ರಯಾಣ

ಔರಾದ್: ಬೆಲ್ದಾಳ್ ಗ್ರಾಮದಿಂದ ಚಿಂತಾಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರ ದುಸ್ತರವಾಗಿದೆ. ರಸ್ತೆಯುದ್ದಕ್ಕೂ ತಗ್ಗು-ಗುಂಡಿಗಳು ಬಿದ್ದಿರುವುದರಿಂದ ಪ್ರಯಾಣಿಕರು ಜೀವ ಭಯದಲ್ಲೇ ಸಂಚರಿಸುವಂತಾಗಿದೆ.

ಔರಾದ್ ತಾಲೂಕಿನ ಬೆಲ್ದಾಳ್ ಗ್ರಾಮದಿಂದ ಚಿಂತಾಕಿ ಗ್ರಾಮಕ್ಕೆ ಸಾಗುವ ಸುಮಾರು ನಾಲ್ಕು ಕಿಲೋಮೀಟರ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ದಿನಕ್ಕೆ ಮೂರರಿಂದ ನಾಲ್ಕು ಬಾರಿ ಸಾರಿಗೆ ಇಲಾಖೆಯ ಬಸ್ಸುಗಳು ಸೇರಿದಂತೆ ನೂರಾರು ಖಾಸಗಿ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಆದರೆ ರಸ್ತೆ ದುಸ್ಥಿತಿಯಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ರಸ್ತೆಯುದ್ದಕ್ಕೂ ತಗ್ಗು-ಗುಂಡಿಗಳು ತುಂಬಿಕೊಂಡಿದೆ ಮಾತ್ರವಲ್ಲ, ರಸ್ತೆ ಬದಿಯಲ್ಲಿ ಜಾಲಿಗಿಡಗಳು ಬೆಳೆದಿರುವುದರಿಂದ ತಿರುವಿನಲ್ಲಿ ಎದುರುಬರುವ ವಾಹನಗಳು ಕಾಣಿಸದೇ ಅಪಘಾತದ ಭೀತಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ರಸ್ತೆ ಹದಗೆಟ್ಟ ಪರಿಣಾಮ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಿಕ್ಷಣ ಸಂಸ್ಥೆಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಕೇವಲ ನಾಲ್ಕು ಕಿಲೋಮೀಟರ್ ರಸ್ತೆ ಕ್ರಮಿಸಲು ಸುಮಾರು ಅರ್ಧ ಗಂಟೆ ಸಮಯ ವ್ಯಯವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ರಸ್ತೆಯಲ್ಲಿ ಬೈಕ್ ಸವಾರರ ಸಂಚಾರ ಮತ್ತಷ್ಟು ಅಪಾಯಕಾರಿಯಾಗಿದೆ. ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ಯಾವ ಕ್ಷಣದಲ್ಲಾದರೂ ಬೈಕ್ ನಿಯಂತ್ರಣ ತಪ್ಪುವ ಭೀತಿ ಎದುರಾಗಿದ್ದು, ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ.

ರಸ್ತೆ ದುಸ್ಥಿತಿಯಿಂದ ಅಪಘಾತ ಸಂಭವಿಸಿದರೆ ಅದರ ಹೊಣೆ ಯಾರು ಹೊರುತ್ತಾರೆ ಎಂದು ಪ್ರಶ್ನಿಸಿರುವ ಸಾರ್ವಜನಿಕರು, ಕೂಡಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಂಡು ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೋದ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದ ಕಾರಣ ರಸ್ತೆ ಹಾಳಾಗಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದಿದ್ದೇವೆ. ರಸ್ತೆ ಅಭಿವೃದ್ಧಿಗೆ ಸುಮಾರು 10 ಕೋಟಿ ರೂ. ವೆಚ್ಚವಾಗುತ್ತದೆ ಎಂದು ಅಂದಾಜು ಪತ್ರ ಸಲ್ಲಿಸಲಾಗಿದೆ. ಈ ವರ್ಷ ಮಂಜೂರಾತಿ ದೊರೆಯುವ ನಿರೀಕ್ಷೆಯಿದೆ.

-ಕಿರಣ್ ಅವಲಕೊಂಡೆ,

ಎಇಇ, ಲೋಕೋಪಯೋಗಿ ಇಲಾಖೆ

ಬೆಲ್ದಾಳ್ ಗ್ರಾಮದಿಂದ ಚಿಂತಾಕಿಗೆ ಪ್ರಯಾಣಿಸಲು ಬಹಳ ಕಷ್ಟವಾಗುತ್ತಿದೆ. ಚಿಂತಾಕಿ ಹೋಬಳಿ ಕೇಂದ್ರವಾಗಿದ್ದು, ಅನಾರೋಗ್ಯದ ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗಲು ಹಾಗೂ ಗ್ರಾಮ ಪಂಚಾಯಿತಿಗೆ ಕೆಲಸದ ನಿಮಿತ್ತ ತೆರಳಲು ತೊಂದರೆಯಾಗುತ್ತಿದೆ. ನಾಲ್ಕು ಕಿಲೋಮೀಟರ್ ದೂರಕ್ಕೆ ಬೇರೆ ಮಾರ್ಗವಾಗಿ ಎಂಟು ಕಿಲೋಮೀಟರ್ ಸುತ್ತಿ ಹೋಗಬೇಕಾಗಿದೆ. ಅಧಿಕಾರಿಗಳು ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು.

- ಮೋಗಲಪ್ಪಾ ಮೇತ್ರೆ,

ಬೆಲ್ದಾಳ್ ಗ್ರಾಮದ ನಿವಾಸಿ

ಗಡಿ ಭಾಗದಲ್ಲಿ ಸಮರ್ಪಕ ರಸ್ತೆ ಇಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸಿಗುತ್ತಿಲ್ಲ. ಶಾಲೆ-ಕಾಲೇಜುಗಳಿಗೆ ಹೋಗುವುದಕ್ಕೂ ತಡವಾಗುತ್ತಿದೆ. ಇದರಿಂದ ಕೆಲ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರಸ್ತೆ ಅಭಿವೃದ್ಧಿಗೆ ಮುಂದಾಗಬೇಕು.

- ಕಿರಣ್ ಅವಲಕೊಂಡೆ,

ಚಿಂತಾಕಿ ಗ್ರಾಮಸ್ಥ

share
ರಿಯಾಜಪಾಶಾ ಜಿ. ಕೊಳ್ಳೂರ
ರಿಯಾಜಪಾಶಾ ಜಿ. ಕೊಳ್ಳೂರ
Next Story
X