Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸೊಳ್ಳೆ ಕಾಟಕ್ಕೆ ದೇವದುರ್ಗ ಜನರ ಪರದಾಟ

ಸೊಳ್ಳೆ ಕಾಟಕ್ಕೆ ದೇವದುರ್ಗ ಜನರ ಪರದಾಟ

ಸ್ವಚ್ಛತೆ ಕೊರತೆ, ಚರಂಡಿಯಲ್ಲಿ ನಿಂತ ಕೊಳಚೆ ನೀರು; ಫಾಗಿಂಗ್‌ಗೆ ಸಾರ್ವಜನಿಕರ ಆಗ್ರಹ

ಮಹಮ್ಮದ್ ಮುಸ್ತಫಾ ಕಾಟಮಳ್ಳಿಮಹಮ್ಮದ್ ಮುಸ್ತಫಾ ಕಾಟಮಳ್ಳಿ24 Oct 2026 11:31 AM IST
share
ಸೊಳ್ಳೆ ಕಾಟಕ್ಕೆ ದೇವದುರ್ಗ ಜನರ ಪರದಾಟ

ದೇವದುರ್ಗ: ಪಟ್ಟಣದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಸಂಜೆ ಆಗುತ್ತಿದ್ದಂತೆ ಜನರು ಸೊಳ್ಳೆ ಕಾಟದಿಂದ ಪರದಾಡುವಂತಾಗಿದೆ. ಸೊಳ್ಳೆ ನಿಯಂತ್ರಣಕ್ಕೆ ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.

ಪಟ್ಟಣದ ಹಲವು ವಾರ್ಡ್‌ಗಳಲ್ಲಿ ಚರಂಡಿಗಳಲ್ಲಿ ಕೊಳಚೆ ನೀರು ನಿಂತಿದ್ದು, ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ. ಕಸ ವಿಲೇವಾರಿ ಹಾಗೂ ತ್ಯಾಜ್ಯ ನಿರ್ವಹಣೆಯಲ್ಲಿನ ಲೋಪದಿಂದಲೂ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ. ಜ್ವರ, ತಲೆನೋವು, ವಾಂತಿ, ಬೇದಿ, ಮೈ-ಕೈ ನೋವು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಂದ ಜನರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪಟ್ಟಣದ ಹಲವು ವಾರ್ಡ್‌ಗಳಲ್ಲಿ ಸಮರ್ಪಕ ಸ್ವಚ್ಛತೆ ನಡೆಯುತ್ತಿಲ್ಲ. ಚರಂಡಿಗಳಲ್ಲಿ ನಿಂತಿರುವ ಕೊಳಚೆ ನೀರನ್ನು ತೆರವುಗೊಳಿಸದಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದೆ. ಕಸ ಹಾಗೂ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದಿರುವುದೂ ಸಮಸ್ಯೆಗೆ ಕಾರಣವಾಗಿದೆ.

ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆಯೂ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ. ಪ್ರತಿ ಶನಿವಾರ ನಡೆಯುವ ಸಂತೆಯಲ್ಲಿ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್ ಬಳಕೆಯಾಗುತ್ತಿದ್ದು, ಸಂತೆ ಮುಗಿದ ಬಳಿಕ ಸ್ಥಳದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ರಾಶಿ ಕಂಡುಬರುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯ ಕೆರೆ, ಚರಂಡಿ ಸೇರಿದಂತೆ ವಿವಿಧೆಡೆ ಸೇರುತ್ತಿರುವುದರಿಂದ ಸ್ವಚ್ಛತೆ ಕಾಪಾಡುವುದು ಸವಾಲಾಗಿದೆ.

ಸೊಳ್ಳೆ ನಿಯಂತ್ರಣಕ್ಕಾಗಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ಕೈಗೊಂಡು, ಫಾಗಿಂಗ್ ಹಾಗೂ ಕೀಟನಾಶಕ ಸಿಂಪಡಣೆ ನಡೆಸಬೇಕು. ಸಾರ್ವಜನಿಕರಲ್ಲೂ ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಮೂಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮನೆಯಲ್ಲಿ ಸೊಳ್ಳೆ ಬತ್ತಿ, ಪರದೆ ಹಾಗೂ ಫ್ಯಾನ್ ಬಳಸುತ್ತಿದ್ದರೂ ಸೊಳ್ಳೆಗಳ ಕಾಟ ಕಡಿಮೆಯಾಗುತ್ತಿಲ್ಲ. ಫಾಗಿಂಗ್ ಹಾಗೂ ಕೀಟನಾಶಕ ಸಿಂಪಡಣೆ ನಡೆಯದಿರುವುದರಿಂದ ಮಕ್ಕಳು ಮತ್ತು ಹಿರಿಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು.

-ಸುರೇಶ ಬಾಗೂರು, ಪಟ್ಟಣ ನಿವಾಸಿ

ಸೊಳ್ಳೆಗಳ ಕಾಟದಿಂದ ಮಕ್ಕಳು, ಹಿರಿಯರು ಸಂಜೆ ವೇಳೆ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಹಲವು ಬಾರಿ ದೂರು ನೀಡಿದರೂ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಗಳು ಕೂಡಲೇ ಗಮನ ಹರಿಸಬೇಕು.

-ವಿನೋದ ಪೊ. ಪಾಟೀಲ್,

ಯುವ ಮುಖಂಡ, ದೇವದುರ್ಗ

Tags

devadurga
share
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
Next Story
X