Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದೇವದುರ್ಗ: ಅಕ್ರಮ ಚಟುವಟಿಕೆಗಳಿಗೆ...

ದೇವದುರ್ಗ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಇಲ್ಲವೇ?

ಮಹಮ್ಮದ್ ಮುಸ್ತಫಾ ಕಾಟಮಳ್ಳಿಮಹಮ್ಮದ್ ಮುಸ್ತಫಾ ಕಾಟಮಳ್ಳಿ17 March 2026 8:30 AM IST
share
ದೇವದುರ್ಗ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಇಲ್ಲವೇ?
ಪೊಲೀಸರ ವಿರುದ್ಧ ಸಾರ್ವಜನಿಕರ ಆರೋಪ

ದೇವದುರ್ಗ: ರಾಯಚೂರಿನ ಅಕ್ರಮ ಮರಳು ದಂಧೆ ಗಲಾಟೆ ರಾಜ್ಯಮಟ್ಟದಲ್ಲಿ ಗಮನ ಸೆಳೆದ ಬೆನ್ನಲ್ಲೇ, ಕಡಿಮೆಯಾಗಿದ್ದ ಅಕ್ರಮ ಮರಳು ಸಾಗಾಟ ಇದೀಗ ಮತ್ತೆ ತೀವ್ರಗೊಂಡಿದೆ.

ದೇವದುರ್ಗ ತಾಲೂಕಿನಲ್ಲಿ ಕೆಲವು ರಾಜಕೀಯ ಸಂಪರ್ಕ ಇರುವ ಪುಢಾರಿಗಳು, ಹಾಗೂ ಪೊಲೀಸರಿಗೆ ಹಫ್ತಾ ನೀಡುವ ಟಿಪ್ಪರ್ ಮಾಲಕರಿಗೆ ಆರಾಮವಾಗಿ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಟ್ರ್ಯಾಕ್ಟರ್‌ಗಳಲ್ಲಿ ಮರಳುಗಾರಿಕೆ ಮಾಡಬೇಕಿದ್ದರೂ, ‘ಕೆಲವು ನಿರ್ದಿಷ್ಟ ಪೊಲೀಸ್ ಸಿಬ್ಬಂದಿ’ಗೆ ಮಾಮೂಲು ಕೊಡಬೇಕಿದೆ ಎಂದು ಇಲ್ಲಿನ ಟ್ರ್ಯಾಕ್ಟರ್ ಮಾಲಕರು ಮಾತನಾಡುತ್ತಿದ್ದಾರೆ. ಅಲ್ಲದೆ, ಪೊಲೀಸ್ ಸಿಬ್ಬಂದಿಗೆ ಮಾಮೂಲು ನೀಡಬೇಕಿರುವುದರಿಂದ 1500 ರೂ.ಗಳಿದ್ದ ಒಂದು ಟ್ರ್ಯಾಕ್ಟರ್ ಮರಳು ಬೆಲೆ ಇದೀಗ 5 ಸಾವಿರದವರೆಗೂ, ಕೆಲವು ಕಡೆಗಳಲ್ಲಿ 7 ಸಾವಿರದವರೆಗೂ ಹೆಚ್ಚಿಸಲಾಗಿದೆ ಎಂದು ಮನೆ ಕಟ್ಟಲು ಮರಳು ಖರೀದಿಸಿ ಮಾಡಿದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಮರಳು ಸಾಗಣೆಗೆ ಟೆಂಡರ್ ಪ್ರಕ್ರಿಯೆ ಮುಗಿದು ಏಳು ತಿಂಗಳು ಕಳೆದರೂ ಸಕ್ರಮ ಸಾಗಾಟಕ್ಕೆ ಅಧಿಕೃತ ಚಾಲನೆ ದೊರೆಯದ ಕಾರಣ, ಸಾರ್ವಜನಿಕರು ಅಕ್ರಮ ಮರಳು ಸಾಗಾಟಗಾರರನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ತಾಲೂಕಿನಲ್ಲಿ ಸೃಷ್ಟಿಯಾಗಿದೆ.

ಟೆಂಡರ್ ಪಡೆದವರಲ್ಲಿ ಕೆಲವು ‘ಅಧಿಕಾರಸ್ಥರು’ ಹಫ್ತಾ ಕೇಳುತ್ತಿರುವುದಾಗಿಯೂ, ಅಧಿಕೃತವಾಗಿ ಟೆಂಡರ್ ಪಡೆದ ಮೇಲೆ ‘ಹಪ್ತಾ’ ಏನಕ್ಕೆ ನೀಡಬೇಕೆಂದು ಟೆಂಡರ್ ಪಡೆದವರು ನಿರಾಕರಿಸಿದ್ದರಿಂದ ಟೆಂಡರ್ ಪಡೆದರೂ ಮರಳುಗಾರಿಕೆಗೆ ಅನುಮತಿ ದೊರೆತಿಲ್ಲ ಎಂಬ ಗಾಳಿಮಾತುಗಳು ನದಿ ಕಿನಾರೆಯಲ್ಲಿ ಕೇಳಿ ಬರುತ್ತಿದೆ.

ಈ ನಡುವೆ, ಕೆಲವು ಅಕ್ರಮ ಮರಳು ಸಾಗಾಟಗಾರರನ್ನು ಹಿಡಿಯಲು ಪೊಲೀಸರು ಮದ್ಯರಾತ್ರಿ ಬೆನ್ನತ್ತುವ ವೇಳೆ ಹೊಲಗಳಲ್ಲಿ ಬೆಳೆದ ಬೆಳೆಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ದೂರಿದ್ದಾರೆ.

ಅಕ್ರಮ ಮರಳುಗಾರಿಕೆಯಿಂದ ಇಲ್ಲಿನ ಬಡ ಜನತೆ ಕಂಗಾಲಾಗಿದ್ದು, ನಿಯಬದ್ಧವಾಗಿ ಮರಳುಗಾರಿಕೆ ನಡೆಸಿ, ಸಾಮಾನ್ಯ ಜನರಿಗೆ ಉಂಟಾಗುತ್ತಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ಸ್ಥಳೀಯರು ಬೇಡಿಕೆ ಇಟ್ಟಿದ್ದಾರೆ.

ಮುಖ್ಯಾಂಶಗಳು :

► ಮರಳು ಸಾಗಣೆಗೆ ಟೆಂಡರ್ ಪ್ರಕ್ರಿಯೆ ಮುಗಿದು 7 ತಿಂಗಳು ಕಳೆದರೂ ಅನುಮತಿ ಸಿಗದೆ ಅಕ್ರಮ ಸಾಗಾಟ ಹೆಚ್ಚಳ

► ಕೆಲ ಪೊಲೀಸ್ ಸಿಬ್ಬಂದಿ ಪಿಐ ಹೆಸರು ಹೇಳಿ ಕೊಂಡು ಮರಳು ಟ್ರ್ಯಾಕ್ಟರ್ ಮಾಲಕರಿಗೆ ಕಿರುಕುಳ ನೀಡುತ್ತಿರುವ ಆರೋಪ

► ಬಡ ಕುಟುಂಬಗಳಿಗೆ ಮನೆ ಕಟ್ಟಲು ಮರಳು ಸಿಗದೆ ಸಂಕಷ್ಟ

ಮರಳು ಕೊರತೆಯಿಂದ ಬಡವರಿಗೆ ತೊಂದರೆ :

ತಾಲೂಕಿನಲ್ಲಿ ಇರುವ ಖನಿಜ ಸಂಪತ್ತಾದ ಮರಳು ಸ್ಥಳೀಯರಿಗೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮನೆ ಕಟ್ಟಲು ಬಡ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಒಂದು ಟಿಪ್ಪರ್ ಮರಳಿಗೆ 50 ಸಾವಿರ ರೂ. ವರೆಗೆ ಕೇಳಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸ್ಥಳೀಯರಿಗೆ ಮರಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆ ಸದಸ್ಯ ರಾಮಣ್ಣ ನಾಯಕ್ ಒತ್ತಾಯಿಸಿದ್ದಾರೆ.

Tags

Devdurga
share
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
Next Story
X