Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ:...

ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ: ಕುಕನೂರಿನಲ್ಲಿ 8 ಬಸ್‌ಗಳ ಸಂಚಾರ ವಿಳಂಬ

ವಿದ್ಯಾರ್ಥಿಗಳು, ಉದ್ಯೋಗಿಗಳು, ಪ್ರಯಾಣಿಕರ ಪರದಾಟ !

ಭೀಮಾಶಂಕರ ಪಾಣೇಗಾಂವಭೀಮಾಶಂಕರ ಪಾಣೇಗಾಂವ7 Oct 2026 10:16 PM IST
share
ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ: ಕುಕನೂರಿನಲ್ಲಿ 8 ಬಸ್‌ಗಳ ಸಂಚಾರ ವಿಳಂಬ

ಕುಕನೂರು: ಡಿಪೋದಲ್ಲಿ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಕುಕನೂರು ಬಸ್ ಡಿಪೋದಿಂದ ವಿವಿಧ ಮಾರ್ಗಗಳಿಗೆ ತೆರಳಬೇಕಿದ್ದ ಎಂಟು ಬಸ್‌ಗಳ ಸಂಚಾರ ಬುಧವಾರ ಬೆಳಿಗ್ಗೆ ತಡವಾಯಿತು. ನಿಗದಿತ ಸಮಯಕ್ಕೆ ಬಸ್‌ಗಳು ಹೊರಡದ ಕಾರಣ ಬೆಳಗಿನ ಜಾವವೇ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರು ಪರದಾಡುವಂತಾಯಿತು.

ಕುಕನೂರು ಡಿಪೋದಲ್ಲಿ ಒಟ್ಟು 38 ಬಸ್‌ಗಳಿದ್ದು, ಅವುಗಳ ಪೈಕಿ ಎಂಟು ಬಸ್‌ಗಳು ಬೆಳಿಗ್ಗೆ ನಿಗದಿತ ವೇಳೆಗೆ ಕಾರ್ಯಾಚರಣೆ ಆರಂಭಿಸಲಿಲ್ಲ. ಸುಮಾರು ಎರಡೂವರೆ ಗಂಟೆ ವಿಳಂಬದ ಬಳಿಕ ಬೆಳಿಗ್ಗೆ 10 ಗಂಟೆಯ ನಂತರ ಈ ಬಸ್‌ಗಳು ಸಂಚಾರ ಆರಂಭಿಸಿದವು ಎನ್ನಲಾಗಿದೆ.

ಡಿಪೋದಿಂದ ದಾವಣಗೆರೆ, ಬಳ್ಳಾರಿ, ಬೆಂಗಳೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರಮುಖ ನಗರಗಳಿಗೆ ಹಾಗೂ ಕುಕನೂರು, ಯಲಬುರ್ಗಾ ತಾಲ್ಲೂಕಿನ ವಿವಿಧ ಗ್ರಾಮೀಣ ಮಾರ್ಗಗಳಿಗೆ ಬಸ್‌ಗಳು ಸಂಚರಿಸುತ್ತವೆ. ಬೆಳಗಿನ ವೇಳೆಯಲ್ಲಿಯೇ ಹಲವು ಮಾರ್ಗಗಳ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿದ್ದರಿಂದ ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರ ಮೇಲೂ ಇದರ ಪರಿಣಾಮ ಬೀರಿತು.

ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಹಾಗೂ ವಿವಿಧ ಉದ್ಯೋಗಗಳಿಗೆ ತೆರಳುವವರು, ವ್ಯಾಪಾರ-ವಹಿವಾಟು ಸೇರಿದಂತೆ ದಿನನಿತ್ಯದ ಕೆಲಸಗಳಿಗಾಗಿ ಪ್ರಯಾಣಿಸುವ ಸಾರ್ವಜನಿಕರು ಬಸ್‌ಗಳಿಗಾಗಿ ದೀರ್ಘಕಾಲ ಕಾಯಬೇಕಾಯಿತು. ಕೆಲವರು ಪರ್ಯಾಯ ಸಾರಿಗೆ ವ್ಯವಸ್ಥೆ ಅವಲಂಬಿಸಬೇಕಾದ ಪರಿಸ್ಥಿತಿಯೂ ನಿರ್ಮಾಣವಾಯಿತು.

ಸಾರ್ವಜನಿಕ ಸಾರಿಗೆಯ ಪ್ರಮುಖ ಸಂಪರ್ಕ ಕೇಂದ್ರವಾಗಿರುವ ಕುಕನೂರು ಡಿಪೋದಲ್ಲೇ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಬಸ್‌ಗಳ ಕಾರ್ಯಾಚರಣೆಗೆ ಅಗತ್ಯವಿರುವ ಡೀಸೆಲ್ ಅನ್ನು ಮುಂಚಿತವಾಗಿಯೇ ಸಮರ್ಪಕ ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಪೂರೈಕೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾದಾಗ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಪ್ರತಿದಿನ ನಿಗದಿತ ಸಮಯಕ್ಕೆ ಬಸ್‌ಗಳನ್ನೇ ಅವಲಂಬಿಸಿರುವ ಸಾವಿರಾರು ಪ್ರಯಾಣಿಕರಿಗೆ ಇಂತಹ ವ್ಯತ್ಯಯ ನೇರವಾಗಿ ಪರಿಣಾಮ ಬೀರುತ್ತದೆ. ಹೀಗಾಗಿ ಡೀಸೆಲ್ ಪೂರೈಕೆಯ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಿ, ಯಾವುದೇ ಕಾರಣಕ್ಕೂ ಬಸ್‌ಗಳ ನಿಗದಿತ ವೇಳಾಪಟ್ಟಿಗೆ ಧಕ್ಕೆಯಾಗದಂತೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಿಂದ ನಿನ್ನೆ ಡೀಸೆಲ್ ಟ್ಯಾಂಕರ್ ಬರಬೇಕಿತ್ತು. ದಾರಿಮಧ್ಯೆ ಉಂಟಾದ ಸಮಸ್ಯೆಯಿಂದ ಟ್ಯಾಂಕರ್ ಬರುವಲ್ಲಿ ವಿಳಂಬವಾಗಿದೆ. ಟ್ಯಾಂಕರ್ ಬಂದ ಬಳಿಕ ಡೀಸೆಲ್ ಅನ್‌ಲೋಡ್ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕಿದ್ದರಿಂದ ಬಸ್‌ಗಳ ಸಂಚಾರ ಆರಂಭಿಸಲು ತಡವಾಗಿದೆ.

-ವೆಂಕಟಾಚಲಪತಿ, ಡಿಪೋ ವ್ಯವಸ್ಥಾಪಕ, ಕುಕನೂರು

ಬೆಳಿಗ್ಗೆ 8.30ಕ್ಕೆ ಕುಕನೂರು ಬಸ್ ನಿಲ್ದಾಣಕ್ಕೆ ಬಂದರೂ 10 ಗಂಟೆಯಾದರೂ ಬೀದರ್ ಮಾರ್ಗದ ಬಸ್ ಬರಲಿಲ್ಲ. ಕಲಬುರಗಿಗೆ ಹೋಗಬೇಕಿದ್ದ ನಮಗೆ ಬಸ್ ವಿಳಂಬದಿಂದ ಕೆಲಸಕ್ಕೂ ತಡವಾಗುವಂತಾಯಿತು. ಇಂತಹ ಸಮಸ್ಯೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸದಂತೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು.

-ಕವಿತಾ, ಶರಣು, ಪ್ರಯಾಣಿಕರು

Tags

KukanoorBusdiesel
share
ಭೀಮಾಶಂಕರ ಪಾಣೇಗಾಂವ
ಭೀಮಾಶಂಕರ ಪಾಣೇಗಾಂವ
Next Story
X