Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಾದಕವಸ್ತುಗಳು ಬದುಕು ಕಸಿಯದಿರಲಿ

ಮಾದಕವಸ್ತುಗಳು ಬದುಕು ಕಸಿಯದಿರಲಿ

ಡಾ. ಮುರಲೀ ಮೋಹನ್ ಚೂಂತಾರುಡಾ. ಮುರಲೀ ಮೋಹನ್ ಚೂಂತಾರು26 Jun 2026 11:23 AM IST
share
ಮಾದಕವಸ್ತುಗಳು ಬದುಕು ಕಸಿಯದಿರಲಿ
ಇಂದು ಮಾದಕ ವ್ಯಸನ ವಿರೋಧಿ ದಿನ

ಜೂನ್ 26ರಂದು ವಿಶ್ವದಾದ್ಯಂತ ‘ಮಾದಕವಸ್ತು ವಿರೋಧಿ ದಿನ’ ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.

ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ ಒತ್ತಡದ, ಧಾವಂತದ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ, ಯುವ ಜನತೆ ವೇಗಕ್ಕೆ ತಾಳ ಹಾಕಲು ಕಷ್ಟವಾಗಿ ತಪ್ಪುದಾರಿ ಹಿಡಿಯುತ್ತಾರೆ ಎಂದರೂ ತಪ್ಪಲ್ಲ. ನಮ್ಮ ಇಂದಿನ ನಾಗರಿಕ ಜೀವನಶೈಲಿಯಲ್ಲಿ ಮೋಜು, ಮಸ್ತಿ ತಡ ರಾತ್ರಿಯ ಪಾರ್ಟಿ ಇತ್ಯಾದಿಗಳು ಮಾಮೂಲಿಯಾಗಿವೆ. ಈ ಹಂತದಲ್ಲಿ ಹದಿ ಹರೆಯದ ಯುವ ಜನತೆ ದಾರಿ ತಪ್ಪುವುದು ಸಾಮಾನ್ಯ. ಈ ದಿಸೆಯಲ್ಲಿ ತಂದೆ ತಾಯಂದಿರ ಆಸರೆ, ಮಾರ್ಗದರ್ಶನ ಅತೀ ಅಗತ್ಯ. ಹದಿ ಹರೆಯದಲ್ಲಿ ಮಕ್ಕಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯದಿದ್ದಲ್ಲಿ ಅನಾಹುತವಾಗುವ ಸಾಧ್ಯತೆಯಿದೆ.

ಅಫೀಮು, ಗಾಂಜಾ, ಕೋಕೇನ್, ಮಾರಿಜುವಾನಾ ಇವೆಲ್ಲಾ ಮಾದಕ ವಸ್ತುಗಳ ಸೇವನೆ ನಮ್ಮ ದೇಶಗಳಲ್ಲಿ ಶತಶತಮಾನಗಳಿಂದ ಇದೆ. ಒಮ್ಮೆ ಇದರ ಚಟಕ್ಕೆ ಬಿದ್ದಲ್ಲಿ ಮತ್ತೆ ಹೊರಬರುವುದು ಬಹಳ ಕಷ್ಟ. ಇದಕ್ಕೆ ಮುಖ್ಯ ಕಾರಣ, ಅದನ್ನು ನಿಲ್ಲಿಸಿದರೆ ಆತನಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ತುಂಬಾ ಹಿಂಸೆಯಾಗುತ್ತದೆ. ಹೀಗಾಗಿ ಹೇಗೋ ಆತನಿಗೆ ಅಂಟಿಕೊಂಡ ಚಟಗಳು ಅವನನ್ನು ಬಿಡದೆ ಆವರಿಸಿಕೊಂಡಿರುತ್ತದೆ.

ಮೇಲೆ ತಿಳಿಸಿದ ಎಲ್ಲಾ ವಸ್ತುಗಳ ಬಳಕೆಯಿಂದ ಮನಸ್ಸು ಉತ್ತೇಜಿತಗೊಳ್ಳುತ್ತದೆ ಮತ್ತು ಆಸ್ವಾದಗೊಳ್ಳುತ್ತದೆ. ಜೊತೆಗೆ ಒತ್ತಡದಿಂದ ಬಳಲಿದ ದೇಹ ಮತ್ತು ಮನಸ್ಸಿಗೆ ಭ್ರಮೆ ಮತ್ತು ಭ್ರಾಂತಿಗಳನ್ನು ಮೂಡಿಸುತ್ತದೆ. ಈ ಕಾರಣದಿಂದಲೇ ಅತೀವ ಒತ್ತಡ, ಹತಾಶೆ ಮತ್ತು ನಿರಾಶೆಯಿಂದ ಕೂಡಿದ ಯುವ ಜನರು, ಸ್ಪರ್ಧಾತ್ಮಕ ಜಗತ್ತಿನ ವೇಗಕ್ಕೆ ಹೊಂದಿಕೊಳ್ಳಲಾಗದೆ ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಾರೆ. ಮೊದಮೊದಲು ಒಂದು ಮಾದಕ ದ್ರವ್ಯದ ಬಳಕೆ, ಬಳಿಕ ಎರಡು ಮೂರು ವಸ್ತುಗಳನ್ನು ಬಳಸತೊಡಗುತ್ತಾರೆ.

ಕಾಲಕ್ರಮೇಣ ಮಾದಕ ವಸ್ತುಗಳ ಬಳಕೆ ಜಾಸ್ತಿಯಾದಂತೆ, ಶರೀರದ ಒಂದೊಂದು ಅಂಗಗಳನ್ನು ಆಪೋಶನ ತೆಗೆದುಕೊಳ್ಳುತ್ತದೆ. ಕೆಲಸ ಮಾಡಲು ಅಶಕ್ತರಾಗಿ, ಗಳಿಕೆ ಇಲ್ಲದಂತಾಗಿ, ಮನೆಮಠ, ಕುಟುಂಬ ಕಳೆದುಕೊಂಡು ಬೀದಿ ಪಾಲಾಗುತ್ತಾರೆ. ಚಟಕ್ಕೆ ದಾಸರಾಗಿ, ಮಾದಕ ದ್ರವ್ಯ ಸಿಗದಾದಾಗ ಹಣದ ಅವಶ್ಯಕತೆಗಾಗಿ ಕೊಲೆ, ಸುಳಿಗೆ, ಕಳ್ಳತನ ಮಾಡಲೂ ಹೇಸದ ಮನೋಸ್ಥಿತಿಗೆ ಬಂದು ತಲುಪುತ್ತಾರೆ. ಒಟ್ಟಿನಲ್ಲಿ ಮಾದಕ ದ್ರವ್ಯಗಳ ದಾಸನಾದವನನ್ನು ಚಟ ಬಿಡಿಸಿ ಸಮಾಜದ ಮುಖ್ಯವಾಹಿನಿಗೆ ತರುವುದು ಭಗೀರಥ ಪ್ರಯತ್ನವೆಂದರೂ ಸುಳ್ಳಲ್ಲ.

ಮಾದಕ ವಸ್ತು ಚಟಕ್ಕೆ ಬೀಳದಂತೆ ತಡೆಗಟ್ಟುವುದು ಹೇಗೆ?

* ಹದಿಹರೆಯದಲ್ಲಿ ಬೆಳೆಯುವ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು.

* ಹದಿಹರೆಯದ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು. ಅನಗತ್ಯವಾಗಿ ಅವರಿಗೆ ಬೈದು, ಹೊಡೆದು, ಬುದ್ಧಿ ಹೇಳುವುದನ್ನು ಬಿಟ್ಟು, ಆಪ್ತಮಿತ್ರರಂತೆ ಅವರ ಕಷ್ಟ ಸುಖಗಳನ್ನು ವಿಚಾರಿಸುತ್ತಾ ಅವರಿಗೆ ಸೂಕ್ತ ಸಾಂತ್ವನ ಕೊಡಬೇಕು.

* ಮಕ್ಕಳ ಮೇಲೆ ಅತಿಯಾದ ನಿರೀಕ್ಷೆ ಗಳನ್ನು ಹೇರಿ, ಒತ್ತಡದ ಸನ್ನಿವೇಶಗಳನ್ನು ಮಾಡಿಕೊಡಬಾರದು. ತಮ್ಮ ಮಕ್ಕಳ ಸಾಮರ್ಥ್ಯ ಮತ್ತು ಮಿತಿಗಳ ಅರಿವು ಹೆತ್ತವರಿಗೆ ಇರಬೇಕು. ಅವರ ಸಾಮರ್ಥ್ಯ ಮತ್ತು ಬುದ್ಧಿಶಕ್ತಿಗೆ ಮೀರಿದ ಗುರಿಗಳನ್ನು ಸಾಧಿಸುವಂತೆ ಇವರಿಗೆ ಒತ್ತಡ ತಂದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು. ತಾವು ಸಾಧಿಸಲಾಗದ ಗುರಿಗಳನ್ನು ತಮ್ಮ ಮಕ್ಕಳಾದರೂ ಸಾಧಿಸಲಿ ಎಂಬ ಹುಂಬತನಕ್ಕೆ ಪ್ರಯತ್ನಿಸಲೇ ಬಾರದು.

* ಮಕ್ಕಳನ್ನು ಅತಿಯಾಗಿ ಮುದ್ದುಮಾಡಿ, ಕೈತುಂಬಾ ಹಣ ನೀಡಿ, ಕೇಳಿದ್ದೆಲ್ಲಾ ನೀಡಿದ್ದಲ್ಲಿ ದಾರಿ ತಪ್ಪುವ ಎಲ್ಲಾ ಸಾಧ್ಯತೆ ಇರುತ್ತದೆ. ಅಂತರ್ಜಾಲದ ದುರ್ಬಳಕೆಯಿಂದ ಹದಿಹರೆಯದ ಮಕ್ಕಳು ಬಹುಬೇಗ ದಾರಿ ತಪ್ಪುವ ಸಾಧ್ಯತೆ ಇರುತ್ತದೆ. ಈ ದಿಸೆಯಲ್ಲಿ ಹೆತ್ತವರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ.

ಹೆತ್ತವರು ಮಕ್ಕಳನ್ನು ಜವಾಬ್ದಾರಿಯುತ ವಾಗಿ ಬೆಳೆಸಿದ್ದಲ್ಲಿ ಅವರು ಮುಂದೆ ದಾರಿ ತಪ್ಪದೆ, ದುಶ್ಚಟಗಳಿಗೆ ಬಲಿ ಬೀಳದೆ ಸಮಾಜದ ಸತ್ಪ್ರಜೆ ಆಗಬಹುದು. ಅದರಲ್ಲೇ ಸಮಾಜದ ಹಿತ ಅಡಗಿದೆ.

Tags

drugslife
share
ಡಾ. ಮುರಲೀ ಮೋಹನ್ ಚೂಂತಾರು
ಡಾ. ಮುರಲೀ ಮೋಹನ್ ಚೂಂತಾರು
Next Story
X