Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೆಪಿಎಸ್ (Karnataka public...

ಕೆಪಿಎಸ್ (Karnataka public school)ಯೋಜನೆಯಿಂದ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ..!!

ವಿಲ್ಫ್ರೆಡ್ ಡಿಸೋಜವಿಲ್ಫ್ರೆಡ್ ಡಿಸೋಜ27 Oct 2025 1:02 PM IST
share
ಕೆಪಿಎಸ್ (Karnataka public school)ಯೋಜನೆಯಿಂದ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ..!!

ಈಗ ಕೆಪಿಎಸ್ ಶಾಲೆಗಳಾಗಿ ಉನ್ನತೀಕರಣಗೊಳ್ಳುತ್ತಿರುವ ರಾಜ್ಯದ 700 ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳು ಎಂದು ಹೇಳಲಾಗುತ್ತಿದೆ. ಈ ಶಾಲೆಗಳ ಆಸುಪಾಸಿನಲ್ಲಿ 1-5 ಕಿ. ಮೀ. ವ್ಯಾಪ್ತಿಯಲ್ಲಿರುವ 50ಕ್ಕೂ ಕಡಿಮೆ ವಿದ್ಯಾರ್ಥಿ ದಾಖಲಾತಿ ಹೊಂದಿರುವ ಶಾಲೆಗಳನ್ನು ಕೆಪಿಎಸ್ ಶಾಲೆಯೊಂದಿಗೆ ವಿಲೀನಗೊಳಿಸುವ ಯೋಚನೆಯನ್ನು ಸರಕಾರ ಮಾಡಿದೆ. ಇಲಾಖೆಯ ಅಂಕಿ ಅಂಶಗಳ ಪ್ರಕಾರ 25,683 ಶಾಲೆಗಳು 50 ಮತ್ತು ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿವೆ! ಅವೆಲ್ಲವೂ ಹಂತ ಹಂತವಾಗಿ ಮುಚ್ಚಲ್ಪಡುತ್ತವೆ!! ಹೀಗೆ ಮುಚ್ಚಲ್ಪಡುವ ಈ ಶಾಲೆಗಳು ಹೊಂದಿರುವ ಸಾವಿರಾರು ಕೋಟಿ ರೂ. ಮೌಲ್ಯದ ಜಮೀನು, ಕಟ್ಟಡಗಳು ಮತ್ತು ಇತರ ಭೌತಿಕ ಸೌಲಭ್ಯಗಳನ್ನು ರಕ್ಷಿಸಲು, ಸದ್ಬಳಕೆ ಮಾಡಲು ಸರಕಾರ ಯೋಜನೆ ಮಾಡಿದೆಯೇ..!?

ಕರ್ನಾಟಕ ಸರಕಾರ ಅನುಷ್ಠಾನ ಮಾಡಲು ಹೊರಟಿರುವ ಕೆಪಿಎಸ್ ಯೋಜನೆಯು ರಾಜ್ಯದ ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆಯ ಗುಣಾತ್ಮಕ ಸುಧಾರಣೆಯ ಉದ್ದೇಶವನ್ನು ಹೊಂದಿದೆ ಎನ್ನುವ ನಿರೀಕ್ಷೆ ಇದೆ. ಖಾಸಗಿ ಶಿಕ್ಷಣ ವ್ಯಾಪಾರಿಗಳ ದಬ್ಬಾಳಿಕೆಯಿಂದ ಸೊರಗುತ್ತಿರುವ ಸರಕಾರಿ ಶಾಲೆಗಳಿಗೆ ಈ ಯೋಜನೆ ಶಕ್ತಿಯನ್ನು ತುಂಬಲಿದೆ. ಸಿದ್ದರಾಮಯ್ಯ ನೇತೃತ್ವದ ಮೊದಲ ಅವಧಿಯಲ್ಲಿ ಸರಕಾರದಲ್ಲಿ 2018 ರಲ್ಲಿ ಚಾಲನೆ ನೀಡಲಾದ ಕೆಪಿಎಸ್ ಪರಿಕಲ್ಪನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಬೆಂಬಲ ನೀಡಿರಲಿಲ್ಲ. ಹೀಗಾಗಿ ಯೋಜನೆ ವಿಸ್ತಾರ ಗೊಂಡಿರಲಿಲ್ಲ. ಬೊಮ್ಮಾಯಿ ಸರಕಾರ ಮಾಡೆಲ್ ಸ್ಕೂಲ್ ಹೆಸರಿನ ಇನ್ನೊಂದು ಯೋಜನೆಯನ್ನು ಆರಂಭಿಸುವ ಪ್ರಯತ್ನ ಮಾಡಿತಾದರೂ ಆ ಯೋಜನೆಗೆ ಇಲಾಖೆಯ ಕಡತದಿಂದ ಮೋಕ್ಷ ಸಿಗಲೇ ಇಲ್ಲ.

ಈ ಬೆಳವಣಿಗೆಗಳ ನಡುವೆಯೂ ರಾಜ್ಯದಲ್ಲಿ 2018 ರಿಂದ ಆರಂಭಗೊಂಡಿದ್ದ 308 ಕೆಪಿಎಸ್ ಶಾಲೆಗಳ ಪ್ರಗತಿಯು ಅತ್ಯಂತ ಪ್ರೋತ್ಸಾಹದಾಯಕವಾಗಿದೆ. ಈ ಶಾಲೆಗಳಲ್ಲಿ 2.8 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಹತ್ತನೇ ತರಗತಿಯ ಫಲಿತಾಂಶ ಸುಮಾರು ಶೇ. 80 ರಷ್ಟು ದಾಖಲಾಗಿದ್ದು, ಇದು ಉತ್ತಮ ಸಾಧನೆಯಾಗಿದೆ.

ಯೋಜನೆಯನ್ನು ವಿಸ್ತರಿಸುವ ನಿರ್ಧಾರ

ಪ್ರಸ್ತುತ ಎರಡನೇ ಬಾರಿಗೆ ಅಧಿಕಾರಕ್ಕೇರಿರುವ ಸಿದ್ದರಾಮಯ್ಯ ಸರಕಾರ 2025-2026 ನೇ ಸಾಲಿನ ಆಯವ್ಯಯ ಮಂಡನೆಯ ಸಂದರ್ಭದಲ್ಲಿ ಕೆ ಪಿ ಎಸ್ ಯೋಜನೆಯನ್ನು ವ್ಯಾಪಕವಾಗಿ ವಿಸ್ತರಿಸಿ ಅನುಷ್ಠಾನಗೊಳಿಸುವ ಘೋಷಣೆ ಮಾಡಿತ್ತು. ಈ ಯೋಜನೆಗಾಗಿ ಏಶ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB) ನಿಂದ ಸಾಲ ಪಡೆಯುವ ನಿರ್ಧಾರ ಮಾಡಲಾಗಿತ್ತು. ಬಜೆಟ್ ಮಂಡನೆಯಾಗಿ 6 ತಿಂಗಳ ನಂತರ ಇದೀಗ ಸರಕಾರದ ನಿರ್ಧಾರ ಅನುಷ್ಠಾನಗೊಳ್ಳುವ ಭರವಸೆ ಕಂಡುಬಂದಿದೆ. ಈ ಕುರಿತು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 15.10.2025ರಂದು ವಿವರವಾದ ಆದೇಶವನ್ನು ಹೊರಡಿಸಿದೆ.(ಆದೇಶ ಸಂಖ್ಯೆ: ಇಪಿ 64 ಎಂಪಿಇ 2024. ಬೆಂಗಳೂರು, ದಿನಾಂಕ:15.19.2025) ಈ ಆದೇಶದ ಪ್ರಕಾರ 2026-26 ಮತ್ತು 2026-27 ನೇ ಸಾಲಿನಲ್ಲಿ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿರುವ ರಾಜ್ಯದ 500 ಸರಕಾರಿ ಶಾಲೆಗಳು ಮತ್ತು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ 200 ಸರಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲು ಸರಕಾರ ಅನುಮೋದನೆ ನೀಡಿದೆ.

ಕೆಪಿಎಸ್ ಪರಿಕಲ್ಪನೆ

ಕರ್ನಾಟಕದಲ್ಲಿ ಪ್ರಸ್ತುತ 19,603 ಪ್ರಾಥಮಿಕ, 21,676 ಹಿರಿಯ ಪ್ರಾಥಮಿಕ, 4,895 ಪ್ರೌಢ ಶಾಲೆಗಳು ಮತ್ತು 1,319 ಪಿ ಯು ಕಾಲೇಜುಗಳು ಇವೆ. ಈ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರತೀ ವರ್ಷ ಕುಸಿಯುತ್ತಲೇ ಇದೆ. 2015-16 ರಲ್ಲಿ ಇದ್ದ 47.1 ಲಕ್ಷ ವಿದ್ಯಾರ್ಥಿಗಳ ದಾಖಲಾತಿಯು 2025-26 ರಲ್ಲಿ 38.2 ಲಕ್ಷಕ್ಕೆ ಕುಸಿದಿದೆ.ಇದೇ ಅವಧಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ 36.3 ಲಕ್ಷಗಳಿಂದ 47 ಲಕ್ಷಗಳಿಗೆ ಏರಿಕೆಯಾಗಿದೆ. ಇದಕ್ಕೆ ಪೂರಕವಾಗಿ 2025-26 ನೇ ಸಾಲಿನಲ್ಲಿ 50 ಮತ್ತು ಅದಕ್ಕಿಂತಲೂ ಕಡಿಮೆ ವಿದ್ಯಾರ್ಥಿಗಳು ಇರುವ ಸರಕಾರಿ ಶಾಲೆಗಳ ಸಂಖ್ಯೆ 25,683ಕ್ಕೆ ಏರಿಕೆ ಆಗಿರುವುದು ಆತಂಕದ ವಿಚಾರವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಈಗಾಗಲೇ ಆರಂಭಿಸಲಾಗಿರುವ ಕೆಪಿಎಸ್ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಗಣನೀಯವಾಗಿ ಚೇತರಿಸಿಕೊಂಡಿದೆ. ಜೊತೆಗೆ ಕಲಿಕೆಯ ಗುಣಮಟ್ಟ ಕೂಡ ಹೆಚ್ಚಿರುವುದು 10ನೇ ತರಗತಿಯ ಫಲಿತಾಂಶದಿಂದ ಸಾಬೀತಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳಲ್ಲಿ ಉನ್ನತ ಗುಣಮಟ್ಟದ, ಭವಿಷ್ಯ ಕೇಂದ್ರಿತ ಶಿಕ್ಷಣವನ್ನು ನೀಡಲು ಸಾಧ್ಯವಾಗುವಂತೆ ಸಂಯುಕ್ತ ಶಾಲಾ ಶಿಕ್ಷಣದ ಮಾದರಿಯನ್ನು ಕಾರ್ಯಗತಗೊಳಿಸಲು ಸರಕಾರ ನಿರ್ಧರಿಸಿದೆ.

► ಪ್ರಸ್ತಾವಿತ ಯೋಜನೆಯಲ್ಲಿ 2025-26 ಮತ್ತು 2026-27 ನೇ ಸಾಲಿನಲ್ಲಿ ಒಟ್ಟು 700 ಸರಕಾರಿ ಶಾಲೆಗಳನ್ನು ಮಾದರಿ ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲಾಗುತ್ತದೆ.

► ಈ ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ ಮೊದಲ್ಗೊಂಡು ಪಿ ಯು ವರೆಗಿನ ಶಿಕ್ಷಣವನ್ನು ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.

► ಈ ಶಾಲೆಗಳಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ಅಗತ್ಯ ಇರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು 2 ರಿಂದ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ.

► ಎಲ್ ಕೆ ಜಿ ಯಿಂದಲೇ ದ್ವಿಭಾಷಾ ಮಾಧ್ಯಮದಲ್ಲಿ ತರಗತಿಗಳ ಸೌಲಭ್ಯ ಇರುತ್ತದೆ.

► ಭವಿಷ್ಯದ ವೃತ್ತಿಪರ ತರಬೇತಿಗಳನ್ನು 6 ನೇ ತರಗತಿಯಿಂದಲೇ ಆರಂಭಿಸಲಾಗುತ್ತದೆ.

► ಪ್ರೌಢಶಾಲೆಯ ವಿದ್ಯಾರ್ಥಿಗಳ ಕಲಿಕೆಯ ಸುಧಾರಣೆಯ ಜೊತೆಗೆ 10ನೇ ತರಗತಿ ಮತ್ತು 12 ನೇ ತರಗತಿಯ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇವೆಲ್ಲವೂ ಒಳ್ಳೆಯ ವಿಚಾರಗಳೇ ಆಗಿವೆ. ಆದರೆ ಇದೆಲ್ಲವೂ ಪರಿಣಾಮಕಾರಿಯಾಗಿ ಕಾರ್ಯಗತ ಆಗಲು ರಾಜಕೀಯ ಇಚ್ಛಾಶಕ್ತಿ ಮತ್ತು ಆಡಳಿತಾತ್ಮಕ ದಕ್ಷತೆಯ ಅಗತ್ಯ ಇದೆ. ಇಲ್ಲದೇ ಹೋದಲ್ಲಿ ಕೆಪಿಎಸ್ ಯೋಜನೆಯ ಆಶಯ ಈಡೇರಲು ಸಾಧ್ಯವಿಲ್ಲ.

ಸೂಕ್ತ ಮೇಲ್ವಿಚಾರಣೆ

ರಾಜ್ಯ ಸರಕಾರ ತುಂಬಾ ಮಹತ್ವ ಕೊಟ್ಟಿರುವ ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಯೋಜನೆಯ ಸುಸ್ಥಿರತೆಯನ್ನು ಕಾಪಾಡುವುದು ಕೂಡ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಎರಡು ಸಮಿತಿಗಳನ್ನು ರಚಿಸಲು ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಸೂಚಿಸಿದೆ. ಸರಕಾರದ ಮಾರ್ಗಸೂಚಿಯ ಪ್ರಕಾರ ಪ್ರತಿಯೊಂದು ಕೆಪಿಎಸ್ ಶಾಲೆಗೆ ಒಂದು ಆಡಳಿತ ಮಂಡಳಿ ಮತ್ತು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರಚಿಸಬೇಕಿದೆ. ಆಡಳಿತ ಮಂಡಳಿಗೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷರಾಗಿರುತ್ತಾರೆ. ಆಯಾ ವಿಧಾನ ಸಭಾ ಕ್ಷೇತ್ರದ ಶಾಸಕರು ಎಸ್‌ಡಿಎಂಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕೆಪಿಎಸ್ ಶಾಲೆಯ ಶಿಕ್ಷಕರಿಗೆ 10 ವರ್ಷಗಳ ಸ್ಥಿರ ಸೇವಾ ಅವಧಿಯನ್ನು ಖಾತರಿ ಪಡಿಸಲು ಕಾಯ್ದೆಗೆ ತಿದ್ದುಪಡಿ ತರಲು ಪ್ರಸ್ತಾವ ಸಲ್ಲಿಸಲು ಮತ್ತು ಶಿಕ್ಷರಿಗೆ ಅಗತ್ಯವಾದ ವಿಶೇಷ ಕೌಶಲ ತರಬೇತಿಗಳನ್ನು ನೀಡಲು ಸರಕಾರ ಅನುಮತಿ ನೀಡಿದೆ. ಕಲಿಕಾ ಗುಣಮಟ್ಟ ಮತ್ತು ಸುಸ್ಥಿರತೆಯ ದೃಷ್ಟಿಯಿಂದ ಇದು ಒಳ್ಳೆಯ ತೀರ್ಮಾನವಾಗಿದೆ.

ಕೊನೆಯ ಮಾತು

ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಕುರಿತು ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಗಳು ಮತ್ತು ಸರಕಾರದ ನಿರ್ಧಾರ ಮೇಲ್ನೋಟಕ್ಕೆ ಬಹಳ ಸುಂದರವಾಗಿ ಕಾಣುತ್ತಿವೆ. ಸರಕಾರಿ ಶಾಲೆಗಳ ಕುರಿತು ಜನರಲ್ಲಿ ಸೃಷ್ಟಿ ಆಗಿರುವ ಅಪನಂಬಿಕೆಯನ್ನು ಹೋಗಲಾಡಿಸುವ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲಿನ ವ್ಯಾಮೋಹವನ್ನು ಕಡಿಮೆ ಮಾಡುವ ಸವಾಲು ಕೆಪಿಎಸ್ ಯೋಜನೆಯ ಮೇಲೆ ಇದೆ. ಅದಕ್ಕಿಂತ ಮುಖ್ಯವಾಗಿ, ಎಲ್ಲಾ ಜನ ಸಮುದಾಯದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಯಾವುದೇ ರೀತಿಯ ತಾರತಮ್ಯ ಇಲ್ಲದೆ ಎಟಕುವಂತೆ ಮಾಡುವುದು ಸರಕಾರದ ಹೊಣೆಗಾರಿಕೆಯಾಗಿದೆ. ಅಧಿಕಾರಿಗಳು, ಸಚಿವರು, ಸರಕಾರದ ಬದಲಾವಣೆ ಈ ಯೋಜನೆಯ ಗತಿಯನ್ನು ವಿಚಲಿತಗೊಳಿಸದಂತೆ ಅನುಷ್ಠಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವ ಅಗತ್ಯ ಇದೆ.

ಕೆಪಿಎಸ್ ಯೋಜನೆ ಮುಂದಿನ ದಿನಗಳಲ್ಲಿ ರಾಜ್ಯದ ಶೈಕ್ಷಣಿಕ ಕ್ರಾಂತಿಗೆ ಕಾರಣವಾಗಲಿ. ಶಿಕ್ಷಣ ವ್ಯಾಪಾರದ ಅಂಗಡಿಗಳು ಮುಚ್ಚಿಹೋಗಲಿ.

share
ವಿಲ್ಫ್ರೆಡ್ ಡಿಸೋಜ
ವಿಲ್ಫ್ರೆಡ್ ಡಿಸೋಜ
Next Story
X