Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಟ್ಟಡ ಕೆಡವಿ ವರ್ಷ ಕಳೆದರೂ ಶಾಲೆ...

ಕಟ್ಟಡ ಕೆಡವಿ ವರ್ಷ ಕಳೆದರೂ ಶಾಲೆ ನಿರ್ಮಾಣವಾಗಿಲ್ಲ

ರಾಚಪ್ಪ ಗೌಡಗಾಂವ್, ಹುಪಳಾ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ; ಏಳು ತರಗತಿಗಳಿಗೆ ಒಂದೇ ಕೊಠಡಿ

ಚಿತ್ರಶೇನ ಫುಲೆಚಿತ್ರಶೇನ ಫುಲೆ5 Nov 2026 1:54 PM IST
share
ಕಟ್ಟಡ ಕೆಡವಿ ವರ್ಷ ಕಳೆದರೂ ಶಾಲೆ ನಿರ್ಮಾಣವಾಗಿಲ್ಲ

ಬೀದರ್: ಶಿಥಿಲಗೊಂಡಿದ್ದ ಸರಕಾರಿ ಶಾಲಾ ಕಟ್ಟಡಗಳನ್ನು ಕೆಡವಿ ಒಂದು ವರ್ಷಕ್ಕೂ ಹೆಚ್ಚು ಕಾಲ ಕಳೆದರೂ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಇದರಿಂದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಮತ್ತು ಹುಪಳಾ ಗ್ರಾಮದ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ಶಾಲೆಯ ಶಿಥಿಲಾವಸ್ಥೆ ಕುರಿತು 2025ರ ಜೂನ್ 22ರಂದು ‘ಬೀಳುವ ಹಂತದಲ್ಲಿ ಸರಕಾರಿ ಶಾಲೆ: ಆತಂಕದಲ್ಲಿ ವಿದ್ಯಾರ್ಥಿಗಳು’ ಎಂಬ ಶೀರ್ಷಿಕೆಯಡಿ ’ವಾರ್ತಾ ಭಾರತಿ’ಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ವರದಿಯಿಂದ ಎಚ್ಚೆತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ. ಹಳ್ಳದ್ ಅವರು ಜೂನ್ 25ರಂದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಿಥಿಲಗೊಂಡಿದ್ದ ಶಾಲಾ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು. ಆದರೆ, ಇದುವರೆಗೆ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿಲ್ಲ.

ಅದೇ ರೀತಿ ಹುಪಳಾ ಗ್ರಾಮದ ಸರಕಾರಿ ಶಾಲೆಯ ದುಸ್ಥಿತಿ ಕುರಿತು 2025ರ ಜುಲೈ 30ರಂದು ‘ಶಿಥಿಲಾವಸ್ಥೆಯಲ್ಲಿ ಹುಪಳಾ ಗ್ರಾಮದ ಸರಕಾರಿ ಶಾಲೆ: ಪ್ರಾಣಭಯದಲ್ಲೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು’ ಎಂಬ ಶೀರ್ಷಿಕೆಯಡಿ ‘ವಾರ್ತಾ ಭಾರತಿ’ ವಿಶೇಷ ವರದಿ ಪ್ರಕಟಿಸಿತ್ತು. ಇದಾದ ಬಳಿಕ ಅಕ್ಟೋಬರ್ 26ರಂದು ಶಿಥಿಲಗೊಂಡಿದ್ದ ಶಾಲಾ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು. ಆದರೆ, ಇಲ್ಲಿಯೂ ಹೊಸ ಕಟ್ಟಡ ನಿರ್ಮಾಣಕ್ಕೆ ಈವರೆಗೆ ಚಾಲನೆ ದೊರೆತಿಲ್ಲ.

ಒಂದೇ ಕೊಠಡಿಯಲ್ಲಿ ಏಳು ತರಗತಿಗಳ ಪಾಠ

ಹುಪಳಾ ಗ್ರಾಮದ ಸರಕಾರಿ ಶಾಲೆಯಲ್ಲಿ ಕನ್ನಡ ಮತ್ತು ಮರಾಠಿ ಮಾಧ್ಯಮಗಳಿದ್ದು, ಒಟ್ಟು 45 ವಿದ್ಯಾರ್ಥಿಗಳಿದ್ದಾರೆ. ಎರಡು ಮಾಧ್ಯಮಗಳಿಗೆ ತಲಾ ಒಂದರಂತೆ ಕೇವಲ ಎರಡು ತರಗತಿ ಕೊಠಡಿಗಳಿವೆ. ಕನ್ನಡ ಮಾಧ್ಯಮದಲ್ಲಿ 1ರಿಂದ 7ನೇ ತರಗತಿವರೆಗೆ 30 ವಿದ್ಯಾರ್ಥಿಗಳಿದ್ದು, ಮೂವರು ಶಿಕ್ಷಕರಿದ್ದಾರೆ. ಏಳು ತರಗತಿಗಳ ವಿದ್ಯಾರ್ಥಿಗಳಿಗೆ ಒಂದೇ ಕೊಠಡಿಯಲ್ಲಿ ಪಾಠ ಮಾಡಬೇಕಾದ ಅನಿವಾರ್ಯತೆ ಇದೆ. ಮರಾಠಿ ಮಾಧ್ಯಮದಲ್ಲಿ 15 ವಿದ್ಯಾರ್ಥಿಗಳಿದ್ದು, ಇಬ್ಬರು ಶಿಕ್ಷಕರಿದ್ದಾರೆ. ಅವರಿಗೂ ಒಂದೇ ಕೊಠಡಿಯಲ್ಲಿ ಪಾಠ ಮಾಡಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುವುದರ ಜತೆಗೆ ಶಿಕ್ಷಕರಿಗೂ ತರಗತಿ ನಿರ್ವಹಣೆ ಸವಾಲಾಗಿದೆ.

ಇದಲ್ಲದೆ, ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆಯೂ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ಶೌಚಕ್ಕಾಗಿ ಬಯಲಿಗೆ ಅಥವಾ ಮನೆಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಇದ್ದು, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಬಿಸಿಯೂಟ ತಯಾರಿಕೆಗೂ ತೊಂದರೆಯಾಗುತ್ತಿದೆ.

ಶಿಥಿಲಾವಸ್ಥೆಯಲ್ಲೇ ಉಳಿದ ಐದು ಕೊಠಡಿಗಳು

ರಾಚಪ್ಪ ಗೌಡಗಾಂವ್ ಗ್ರಾಮದ ಸರಕಾರಿ ಶಾಲೆಯಲ್ಲಿ ಒಟ್ಟು 30 ವಿದ್ಯಾರ್ಥಿಗಳಿದ್ದು, ಇಬ್ಬರು ಶಿಕ್ಷಕರಿದ್ದಾರೆ. ಶಾಲೆಯಲ್ಲಿರುವ ಐದು ಕೊಠಡಿಗಳೂ ಶಿಥಿಲಾವಸ್ಥೆಯಲ್ಲಿವೆ. ಈ ಕೊಠಡಿಗಳಲ್ಲಿಯೇ ಅಂಗನವಾಡಿ, ಬಿಸಿಯೂಟ ಹಾಗೂ ಶಾಲಾ ಕಚೇರಿಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಬೇಕಾಗಿದೆ. 1ರಿಂದ 4ನೇ ತರಗತಿವರೆಗೆ ಒಂದು ಕೊಠಡಿ ಹಾಗೂ 5ರಿಂದ 7ನೇ ತರಗತಿ ವರೆಗೆ ಮತ್ತೊಂದು ಕೊಠಡಿಯನ್ನು ಬಳಸಲಾಗುತ್ತಿದೆ.

ಈ ಶಾಲೆಯಲ್ಲಿಯೂ ಶೌಚಾಲಯದ ಸಮಸ್ಯೆ ಇದೆ. ಜತೆಗೆ ಶಾಲೆಗೆ ಆವರಣಗೋಡೆ ಇಲ್ಲದ ಕಾರಣ ಆವರಣವು ಕುಡುಕರ ಮದ್ಯಪಾನದ ತಾಣವಾಗಿ ಮಾರ್ಪಟ್ಟಿದೆ. ಶಾಲೆ ಮುಗಿದ ಬಳಿಕ ಸಂಜೆ ವೇಳೆ ಕೆಲವರು ಶಾಲಾ ಆವರಣದಲ್ಲಿಯೇ ಮದ್ಯ ಸೇವಿಸುತ್ತಾರೆ ಎನ್ನಲಾಗಿದೆ. ಒಂದು ಕೊಠಡಿಗೆ ಬೀಗ ಹಾಕಿದ್ದರೂ ಅದನ್ನು ಮುರಿದು ಒಳಗೆ ಮದ್ಯ ಸೇವನೆ ಮಾಡಲಾಗುತ್ತಿದೆ. ಪ್ರತಿದಿನ ಮದ್ಯದ ಬಾಟಲಿಗಳು ಶಾಲಾ ಆವರಣದಲ್ಲಿ ಕಂಡುಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಎರಡೂ ಗ್ರಾಮಗಳ ಶಾಲೆಗಳಲ್ಲಿ ಹೊಸ ಕಟ್ಟಡ ನಿರ್ಮಾಣದ ಜತೆಗೆ ಶೌಚಾಲಯ, ಕುಡಿಯುವ ನೀರು ಹಾಗೂ ಆವರಣಗೋಡೆಯ ವ್ಯವಸ್ಥೆ ಕಲ್ಪಿಸಬೇಕಿದೆ. ರಾಚಪ್ಪ ಗೌಡಗಾಂವ್ ಶಾಲೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದೂ ಅಗತ್ಯವಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಉತ್ತಮ ಕಲಿಕಾ ವಾತಾವರಣಕ್ಕೆ ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕಿದೆ.

share
ಚಿತ್ರಶೇನ ಫುಲೆ
ಚಿತ್ರಶೇನ ಫುಲೆ
Next Story
X