Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮುಂಗಾರು ಮುನ್ನವೇ ಬಿತ್ತನೆಗೆ ಸಜ್ಜಾದ...

ಮುಂಗಾರು ಮುನ್ನವೇ ಬಿತ್ತನೆಗೆ ಸಜ್ಜಾದ ರೈತರು

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು14 Jun 2026 1:58 PM IST
share
ಮುಂಗಾರು ಮುನ್ನವೇ ಬಿತ್ತನೆಗೆ ಸಜ್ಜಾದ ರೈತರು
ನಕಲಿ ಬೀಜ ಮಾರಾಟ ಮಾಡಿದ 10 ಕಂಪೆನಿಗಳ ಪರವಾನಿಗೆ ರದ್ದು

ರಾಯಚೂರು: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳ ಹಿಂದೆ ಸುರಿದ ಅಲ್ಪ ಪ್ರಮಾಣದಲ್ಲಿ ಮುಂಗಾರು ಮಳೆಯಾಗಿದ್ದರಿಂದ ರೈತರು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ ವಾರದ ಹಿಂದೆ ಸರಾಸರಿ 25.1 ಮಿ.ಮೀ. ಮಳೆಯಾಗಿದ್ದು, ವಾಡಿಕೆಯ 16 ಮಿ.ಮೀ. ಮಳೆಗಿಂತ ಹೆಚ್ಚು ದಾಖಲಾಗಿದೆ. ಆದಾಗ್ಯೂ, ಸಿಂಧನೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಹೀಗಾಗಿ ಎಲ್ಲೆಡೆ ಸಮರ್ಪಕ ತೇವಾಂಶ ಲಭ್ಯವಾಗಿಲ್ಲ ಎನ್ನುವುದು ಕೃಷಿ ಇಲಾಖೆಯ ಅಭಿಪ್ರಾಯವಾಗಿದೆ.

ಕೆಲ ರೈತರು ಮುಂಗಾರು ಪೂರ್ವದಲ್ಲಿಯೇ ಬಿತ್ತನೆ ಮಾಡಿದ್ದಾರೆ. ಮುಂಗಾರು ಮಳೆಯ ಆರಂಭಿಕ ಮೊಳಕೆಯ ನಂತರ ಮಳೆಯ ಕೊರತೆ ಉಂಟಾದರೆ ಬೆಳೆಗಳ ಬೆಳವಣಿಗೆ ಕುಂಠಿತವಾಗುವ ಅಪಾಯವಿದೆ. ವಿಶೇಷವಾಗಿ ರಾಯಚೂರು ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕಪ್ಪು ಮಣ್ಣು ಹೆಚ್ಚಿರುವುದರಿಂದ ಭೂಮಿ ಸಂಪೂರ್ಣ ತಂಪಾದ ನಂತರವೇ ಬಿತ್ತನೆ ಕೈಗೊಳ್ಳುವುದು ಅಗತ್ಯ ಎಂದು ತಜ್ಞರು ಸೂಚಿಸಿದ್ದಾರೆ.

ಇದೇ ವೇಳೆ ರೈತರು ಮುಂಗಾರು ಕೃಷಿಗೆ ಅಗತ್ಯವಿರುವ ರಸಗೊಬ್ಬರ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ರಸಗೊಬ್ಬರಗಳ ಅಕ್ರಮ ಸಂಗ್ರಹಣೆ ಹಾಗೂ ಕೃತಕ ಅಭಾವ ತಡೆಯುವ ಉದ್ದೇಶದಿಂದ ಸರಕಾರ ಫ್ರೂಟ್ಸ್ ನೋಂದಣಿ ಮತ್ತು ಎಫ್‌ಐಡಿ ಆಧಾರದಲ್ಲಿ ರೈತರಿಗೆ ರಸಗೊಬ್ಬರ ವಿತರಣೆ ವ್ಯವಸ್ಥೆ ಜಾರಿಗೊಳಿಸಿದೆ.

ಇದರಿಂದ ನಿಜವಾದ ರೈತರಿಗೆ ಅವರ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಗೊಬ್ಬರ ಲಭ್ಯವಾಗಲಿದೆ. ಕೃಷಿ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಪ್ರಸ್ತುತ ಬೇಡಿಕೆಗೆ ಅನುಗುಣವಾದ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ರೈತರಿಗೆ ಯಾವುದೇ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಯೂರಿಯಾ, ರಸಗೊಬ್ಬರ ಅಕ್ರಮ ಮಾರಾಟ:

ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ಅಕ್ರಮ ಮಾರಾಟ, ನಕಲಿ ಕೀಟನಾಶಕ ಹಾವಳಿ ಮತ್ತು ಅನಧಿಕೃತ ಬೀಜ ಮಾರಾಟ ಪ್ರಕರಣ ಬೆಳಕಿಗೆ ಬಂದಿವೆ. ನಿಯಮ ಉಲ್ಲಂಘಿಸಿದ 10 ರಸಗೊಬ್ಬರ ಮಾರಾಟ ಮಳಿಗೆ ಪರವಾನಗಿ ರದ್ದು ಪಡಿಸಿದೆ.

ಮುಂಗಾರು ಪೂರ್ವದಲ್ಲಿ ಯಾವುದೇ ಬೀಜ, ಕ್ರಿಮಿನಾಶಕ ಮಾರಾಟ ಮಾಡಬಾರದು ಎಂದು ಕೃಷಿ ಇಲಾಖೆಯ ನಿಯವಿದ್ದರೂ ಬೀಜ, ಕ್ರಿಮಿನಾಶಕ ಮಾರಾಟ ಮಾಡಿ ಕಾನೂನು ಉಲ್ಲಂಘನೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ಬಾರಿ ಶೇ.35ರಷ್ಟು ಯೂರಿಯಾ ಕೊರತೆ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು ಯೂರಿಯಾ ಖರೀದಿಸಿ ಸಂಗ್ರಹಿಸುತ್ತಿರುವುದು ಕಂಡು ಬಂದಿದೆ.

216 ಡೀಲರ್‌ಗಳಿಗೆ ಎಚ್ಚರಿಕೆ ನೋಟಿಸ್: ಜಿಲ್ಲೆಯಲ್ಲಿ ಪರವಾನಗಿ ಪಡೆದ 662 ರಸಗೊಬ್ಬರ ಡೀಲರ್ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಮಾರಾಟ ಮಾಡುವ 246 ಡೀಲರ್‌ಗಳನ್ನು ಗುರುತಿಸಿದ ಕೃಷಿ ಇಲಾಖೆ ಮುಂಗಾರು ಬಿತ್ತನೆಗೂ ಮುನ್ನ ಯೂರಿಯಾ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದೆ.

ಎಪ್ರಿಲ್ 1ರಿಂದ ಮೇ 25ರವರೆಗೆ ರಾಯಚೂರು ತಾಲೂಕಿನ 20, ಮಾನ್ವಿ 64, ದೇವದುರ್ಗ ಮತ್ತು ಲಿಂಗಸುಗೂರು ತಲಾ 27 ಹಾಗೂ ಸಿಂಧನೂರು ತಾಲೂಕಿನ 78 ಸೇರಿ ಒಟ್ಟು 216 ಡೀಲರ್‌ಗಳಿಗೆ ಕೃಷಿ ಇಲಾಖೆ ನೋಟಿಸ್ ಜಾರಿ ಮಾಡಿದ್ದರೂ ಕೆಲವು ಡೀಲರ್‌ಗಳು ಇಲಾಖೆ ಆದೇಶ ಧಿಕ್ಕರಿಸಿ ಮಾರಾಟ ಮಾಡುವುದು ತಪಾಸಣೆ ವೇಳೆ ಕಂಡು ಬಂದಿದೆ.

20 ಡೀಲರ್‌ಗಳಿಗೆ ಶೋಕಾಸ್ ನೋಟಿಸ್: ನಿಯಮ ಉಲ್ಲಂಘಿಸಿ ಯೂರಿಯಾ ಮಾರಾಟ ಮಾಡಿದ ರಾಯಚೂರು ತಾಲೂಕಿನ 10, ಮಾನ್ವಿ 5, ಲಿಂಗಸುಗೂರು 3 ಹಾಗೂ ಸಿಂಧನೂರಿನ 2 ಡೀಲರ್ ಸೇರಿ ಒಟ್ಟು 20 ಡೀಲರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇಲಾಖೆಯ ಕಠಿಣ ಕ್ರಮದ ನಡುವೆಯೂ ಅಕ್ರಮ ಮಾರಾಟ ಮುಂದುವರೆದಿರುವುದು ಮೇಲ್ವಿಚಾರಣಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಲ್ಲದೆ, ನೋಟಿಸ್ ನೀಡಿದ್ದರೂ ಯೂರಿಯಾ ಮಾರಾಟ ಮಾಡಿದ ರಾಯಚೂರಿನ 2, ಮಾನ್ವಿ 5 ಮತ್ತು ದೇವದುರ್ಗ 3 ಸೇರಿ 10 ಡೀಲರ್ ಗಳ ಪರವಾನಗಿಯನ್ನು ಕೃಷಿ ಇಲಾಖೆ ರದ್ದುಗೊಳಿಸಿದೆ.

ಪರವಾನಗಿ ಪಡೆಯದೆ ಬಿಟಿ ಹತ್ತಿ ಬೀಜ ಮಾರಾಟಮಾಡಿದ ಆರೋಪದಡಿ ಮಾನ್ವಿಯ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆ ಜಾಗೃತ ದಳ ಅಧಿಕಾರಿಗಳು ದಾಳಿ ನಡೆಸಿದ್ದು ಅಂದಾಜು 10.69 ಲಕ್ಷ ರೂ. ಮೌಲ್ಯದ 11,070 ಬಿಟಿ ಹತ್ತಿ ಬಿತ್ತನೆ ಬೀಜ ಪ್ಯಾಕೆಟ್‌ಗಳನ್ನು ಜಪ್ತಿ ಮಾಡಿದ್ದಾರೆ.

ರಾಯಚೂರು ತಾಲೂಕಿನ ಬಹುತೇಕ ಗ್ರಾಮಗಳು ನೆರೆ ರಾಜ್ಯಗಳಿಗೆ ಸಂಪರ್ಕಿಸುವುದರಿಂದ ಇಲ್ಲಿನ ರಸಗೊಬ್ಬರ ಬೇರೆ ರಾಜ್ಯಗಳಿಗೆ ಹೋಗುತ್ತದೆ. ಇದರಿಂದ ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಹೆಚ್ಚುತ್ತದೆ. ಆದ್ದರಿಂದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಸರಿಯಾಗಿ ತಪಾಸಣೆ ನಡೆಸಬೇಕೆಂದು.

-ಬಸನಗೌಡ ದದ್ದಲ್

ರಾಯಚೂರು ಗ್ರಾಮೀಣ ಶಾಸಕ

ಜಿಲ್ಲೆಯಲ್ಲಿ 5.72 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ:
2026ರ ಮುಂಗಾರು ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ಒಟ್ಟು 5.72 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ನಿಗದಿಪಡಿಸಲಾಗಿದೆ. ಹತ್ತಿ (3.14 ಲಕ್ಷ ಹೆಕ್ಟೇರ್), ತೊಗರಿ (1.95 ಲಕ್ಷ ಹೆಕ್ಟೇರ್), ಭತ್ತ (1.93 ಲಕ್ಷ ಹೆಕ್ಟೇರ್), ಇತರೆ ಬೆಳೆಗಳು; ಸೂರ್ಯಕಾಂತಿ, ಶೇಂಗಾ, ಹೆಸರು, ಸಜ್ಜೆ, ಎಳ್ಳು ಸೇರಿದಂತೆ ವಿವಿಧ ಬೆಳೆಗಳು. ಇವುಗಳಲ್ಲಿ ಖುಷ್ಕಿ ಪ್ರದೇಶ 2.62 ಲಕ್ಷ ಹೆಕ್ಟೇರ್ ಹಾಗೂ ನೀರಾವರಿ ಪ್ರದೇಶ 5.72 ಲಕ್ಷ ಹೆಕ್ಟೇರ್ ಒಳಗೊಂಡಿದೆ.

Tags

Farmersmonsoon
share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X