Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ...

ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಒಡಲಿನಲ್ಲಿ ಪ್ರಾಕೃತಿಕ ವಿಕೋಪದ ಆತಂಕ

ಭೂಗರ್ಭ ವಿಜ್ಞಾನಿಗಳಿಂದ ಅಧ್ಯಯನ; ಪ್ರವಾಸೋದ್ಯಮಕ್ಕೆ ಬೀಳಲಿದೆಯೇ ಅಂಕುಶ?

ಕೆ.ಎಲ್. ಶಿವುಕೆ.ಎಲ್. ಶಿವು12 Aug 2024 11:09 AM IST
share
ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಒಡಲಿನಲ್ಲಿ ಪ್ರಾಕೃತಿಕ ವಿಕೋಪದ ಆತಂಕ

ಚಿಕ್ಕಮಗಳೂರು: ಕಾಫಿನಾಡು ಎಂದಾಕ್ಷಣ ತಕ್ಷಣ ನೆನಪಿಗೆ ಬರುವುದು ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಹಚ್ಚ ಹಸಿರಿನ ಸುಂದರ ಗಿರಿಶ್ರೇಣಿ ಮುಳ್ಳಯ್ಯನಗಿರಿ. ಆಕಾಶವನ್ನು ಚುಂಬಿಸುತ್ತಿದೆಯೇನೋ ಎಂಬಂತೆ ಮುಗಿಲೆತ್ತರಕ್ಕೆ ಬೆಳೆದು ನಿಂತಿರುವ ಮುಳ್ಳಯ್ಯನಗಿರಿ ಪ್ರಾಕೃತಿಕ ಸೌಂದರ್ಯದ ಗಣಿಯಾಗಿದೆ.

1930ಮೀ. ಎತ್ತರದ ಮುಳ್ಳಯ್ಯನಗಿರಿ ರಾಜ್ಯದ ಅತ್ಯಂತ ಎತ್ತರದ ಗಿರಿಶಿಖರ ಎಂಬ ಖ್ಯಾತಿಗೆ ಪಾತ್ರವಾಗಿದ್ದು, ಗಿರಿಯ ಪ್ರಾಕೃತಿಕ ಸೌಂದರ್ಯಕ್ಕೆ ಮಾರು ಹೋಗದವರೇ ಇಲ್ಲ. ಈ ಕಾರಣದಿಂದಾಗಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂತಹ ಮನಮೋಹಕ ಪ್ರಾಕೃತಿಕ ಸೌಂದರ್ಯದ ಗಣಿಯಲ್ಲೀಗ ಪ್ರಕೃತಿ ವಿಕೋಪದ ಆತಂಕ ಮನೆ ಮಾಡಿದೆ.

ವಯನಾಡ್ ದುರಂತದ ಬಳಿಕ ಭವಿಷ್ಯದಲ್ಲಿ ಮುಳ್ಳಯ್ಯನಗಿರಿಯಲ್ಲೂ ಇಂತಹ ಅಪಾಯ ಎದುರಾಗುವ ಆತಂಕ ಎದುರಾಗಿದೆ. ಇದಕ್ಕೆ ಇತ್ತೀಚೆಗೆ ಕಾಫಿನಾಡಿನಲ್ಲಿ ಸುರಿದ ಭಾರೀ ಮಳೆ ಸಂದರ್ಭ ಮುಳ್ಳಯ್ಯನಗಿರಿ ಸಂಪರ್ಕ ರಸ್ತೆಯಲ್ಲಿರುವ ಕವಿಕಲ್‌ಗಂಡಿ ಎಂಬಲ್ಲಿ ಸಂಭವಿಸಿದ ಭೂಕುಸಿತ ಕಾರಣವಾಗಿದೆ. ಕಾಫಿನಾಡಿನಲ್ಲಿ ಇತ್ತೀಚಿನ ಕೆಲ ವರ್ಷಗಳಲ್ಲಿ ಸುರಿದ ಭಾರೀ ಮಳೆಗೆ ಮಲೆನಾಡು ಭಾಗದ ಕೆಲ ಗ್ರಾಮಗಳಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿ ಸಾರ್ವಜನಿಕರ ಆಸ್ತಿ, ಕೃಷಿ ಭೂಮಿ ಹಾಗೂ ನೂರಾರು ಮನೆಗಳು ನೆಲಸಮವಾದ ಘಟನೆ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಲೆನಾಡು ಭಾಗದಲ್ಲಿ ಭೂಕುಸಿತ ಸಂಭವಿಸುವಂತಹ ಕೆಲ ಅಪಾಯಕಾರಿ ಪ್ರದೇಶಗಳನ್ನು ಗುರುತಿಸಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂತಹ 88 ಅಪಾಯಕಾರಿ ಸ್ಥಳಗಳಿವೆ ಎಂದು ಸರಕಾರಕ್ಕೆ ತಜ್ಞರ ತಂಡ ವರದಿ ನೀಡಿದ್ದು, ಈ ವರದಿಯಲ್ಲಿ ಮುಳ್ಳಯ್ಯನಗಿರಿ ಶ್ರೇಣಿಯೂ ಸೇರಿರುವುದು ಆತಂಕಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ ವ್ಯಾಪ್ತಿಯಲ್ಲಿ ಸುಮಾರು 10 ಸ್ಥಳಗಳು ಅಪಾಯಕಾರಿ ಸ್ಥಳಗಳು ಎಂದು ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಭವಿಷ್ಯದಲ್ಲಿ ಭಾರೀ ಮಳೆಯಾದ ಸಂದರ್ಭದಲ್ಲಿ ಭೂ ಕುಸಿತ ಸಂಭವಿಸಿ ಅನಾಹುತಗಳು ನಡೆಯಬಹುದು ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಹಿರಿಯ ಅಧಿಕಾರಿ ಸೆಂಥಿಲ್ ಎಂಬ ಭೂ ವಿಜ್ಞಾನಿ ನೇತೃತ್ವದ ತಂಡ ಶನಿವಾರ ಮುಳ್ಳಯ್ಯನಗಿರಿಯಲ್ಲಿ ಇತ್ತೀಚೆಗೆ ಭೂ ಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದು, ರಾಜ್ಯದ ಅತೀ ಎತ್ತರದ ಗಿರಿಶ್ರೇಣಿಯಾಗಿರುವ ಮುಳ್ಳಯ್ಯನಗಿರಿ ಎಷ್ಟು ಸುರಕ್ಷಿತವಾಗಿದೆ ಎಂಬ ಬಗ್ಗೆ ಅಧ್ಯಯನ ನಡೆಸಿದ್ದಾರೆ.

ಪ್ರತೀ ಮಳೆಗಾಲದಲ್ಲಿ ಭಾರೀ ಮಳೆ ಸುರಿದ ಸಂದರ್ಭಗಳಲ್ಲಿ ಮುಳ್ಳಯ್ಯನಗಿರಿ ಶ್ರೇಣಿ ವ್ಯಾಪ್ತಿಯ ಅಲ್ಲಲ್ಲಿ ಭೂಕುಸಿತ ಸಾಮಾನ್ಯವಾಗಿದೆ. ಅದೃಷ್ಟವಶಾತ್ ಇದುವರೆಗೆ ಇಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಭಾರೀ ಅನಾಹುತಗಳು ಸಂಭವಿಸದಿದ್ದರೂ ಮುಳ್ಳಯ್ಯನಗಿರಿ ಸದ್ಯ ಭೂಕುಸಿತ ಸಂಭವಿಸುವಂತಹ ಸ್ಥಳಗಳ ಪಟ್ಟಿಗೆ ಸೇರಿರುವುದು ಗಿರಿ ಅಕ್ಕಪಕ್ಕದ ಗ್ರಾಮಗಳು ಹಾಗೂ ಗಿರಿಗೆ ಸಮೀಪದಲ್ಲೇ ಇರುವ ಕೈಮರ, ಅಲ್ಲಂಪುರ ಸೇರಿದಂತೆ ಚಿಕ್ಕಮಗಳೂರು ನಗರದ ಜನರಲ್ಲೂ ಆತಂಕ ಮೂಡಲು ಕಾರಣವಾಗಿದೆ.

ಗಿರಿಶ್ರೇಣಿಯಲ್ಲಿ ಪ್ರವಾಸೋದ್ಯಮ, ಮೂಲಸೌಕರ್ಯಗಳ ಹೆಸರಿನಲ್ಲಿ ಗಿರಿಗಳನ್ನು ಅಗೆದು ಬಗೆದು ಮಾಡಿರುವ ರಸ್ತೆಗಳು, ಗಿರಿಯ ಇಳಿಜಾರಿನ ನೆಲ ಕೊರೆದು ನಿರ್ಮಿಸಿರುವ ರೆಸಾರ್ಟ್, ಹೋಮ್ ಸ್ಟೇ ಹಾಗೂ ಕಾಡು ಕಡಿದು ನಿರ್ಮಿಸಿರುವ ಕಾಫಿ ತೋಟಗಳಿಂದಾಗಿ ಮುಳ್ಳಯ್ಯನಗಿರಿಯ ಒಡಲಿಗೆ ಪ್ರಾಕೃತಿಕ ವಿಕೋಪಗಳ ಆತಂಕ ಎದುರಾಗಿದೆ.

ನೆರೆಯ ಕೇರಳ ರಾಜ್ಯದ ವಯನಾಡ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಮುಳ್ಳಯ್ಯನಗಿರಿ ಭಾಗದಲ್ಲಿ ಇಂತಹ ವಿಕೋಪ ಸಂಭವಿಸುವುದನ್ನು ತಪ್ಪಿಸಲು ಕಾರ್ಯಪ್ರವೃತ್ತವಾಗಿದ್ದು, ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಒತ್ತಡ ಕಡಿಮೆ ಮಾಡುವುದು, ಪ್ರವಾಸೋದ್ಯಮದ ಹೆಸರಿನಲ್ಲಿ ಎಲ್ಲೆಂದರಲ್ಲಿ ಗಿರಿಯ ಒಡಲು ಬಗೆದು ಹೋಮ್ ಸ್ಟೇ, ರೆಸಾರ್ಟ್ ನಿರ್ಮಾಣಕ್ಕೂ ಕಡಿವಾಣ ಹಾಕಲೂ ಮುಂದಾಗಿದ್ದು, ಅಕ್ರಮ ರೆಸಾರ್ಟ್, ಹೋಮ್ ಸ್ಟೇಗಳ ತೆರವಿಗೂ ಸರಕಾರ ಮುಂದಾಗಿದೆ.

ಜಿಲ್ಲಾಡಳಿತ ಈಗಾಗಲೇ ಮುಳ್ಳಯ್ಯನಗಿರಿಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಘೋಷಿಸಿ ಗಿರಿಯ ಒಡಲಿಗೆ ತ್ಯಾಜ್ಯ ಸೇರುವುದಕ್ಕೆ ಕಡಿವಾಣ ಹಾಕಿದೆ. ಮುಳ್ಳಯ್ಯನಗಿರಿ ಮತ್ತೊಂದು ವಯನಾಡ್ ಆಗುವುದಕ್ಕೂ ಮುನ್ನ ಸರಕಾರ, ಜಿಲ್ಲಾಡಳಿತ ತಡವಾಗಿಯಾದರೂ ಎಚ್ಚೆತ್ತುಕೊಂಡಿರುವುದು ಉತ್ತಮ ಬೆಳೆವಣಿಗೆಯಾದರೂ ಇದನ್ನು ಕಟ್ಟುನಿಟ್ಟಿನಿಂದ ಅನುಷ್ಠಾನ ಮಾಡದಿದ್ದಲ್ಲಿ ರಾಜ್ಯದ ಅತ್ಯಂತ ಎತ್ತರದ ಸುಂದರ ಗಿರಿಶ್ರೇಣಿ ಎಂದೇ ಪ್ರಸಿದ್ಧಿ ಪಡೆದಿರುವ ಮುಳ್ಳಯ್ಯನಗಿರಿಯ ನೈಸರ್ಗಿಕ ಸ್ವರೂಪ ವಿರೂಪಗೊಳ್ಳುವುದನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂಬುದು ಪರಿಸರ ಪ್ರಿಯರ ವಾದವಾಗಿದ್ದು, ರಾಜ್ಯದ ಕೀರ್ತಿಗೆ ಕಳಶಪ್ರಾಯದಂತಿರುವ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ಮಾನವನ ಹಸ್ತಕ್ಷೇಪವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಇಲ್ಲಿ ನೈಸರ್ಗಿಕ ವಿಕೋಪಗಳು ಜರುಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು, ಪ್ರವಾಸಿಗರು ನಿಸರ್ಗ ಸೌಂದರ್ಯವನ್ನು ಸವಿಯಲು ಪರಿಸರಕ್ಕೆ ಪೂರಕವಾದ ಯೋಜನೆಗಳನ್ನು ಜಾರಿ ಮಾಡಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

88 ಅಪಾಯಕಾರಿ ಸ್ಥಳಗಳ ಗುರುತು

ಮುಳ್ಳಯ್ಯನಗಿರಿಯಂತೆಯೇ ಕಾಫಿನಾಡಿನಲ್ಲಿ ಭೂಕುಸಿತ ಸಂಭವಿಸಬಹುದಾದ ೮೮ ಅಪಾಯಕಾರಿ ಸ್ಥಳಗಳನ್ನು ಸರಕಾರ ಗುರುತು ಮಾಡಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸೇರಿದಂತೆ ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ ತಾಲೂಕುಗಳ ವ್ಯಾಪ್ತಿಯಲ್ಲೂ ಭೂಕುಸಿತ ಸಂಭವಿಸಬಹುದಾದ ಸ್ಥಳಗಳಿದ್ದು, ಈ ಸ್ಥಳಗಳಿಗೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ತಜ್ಞರ ತಂಡ ಭೇಟಿ ನೀಡಿ ಅಧ್ಯಯನ ನಡೆಸುತ್ತಿದೆ. ಅಧ್ಯಯನದ ಬಳಿಕ ಈ ಸ್ಥಳಗಳು ಎಷ್ಟು ಸುರಕ್ಷಿತ ಎಂಬ ಬಗ್ಗೆ ಮಾಹಿತಿ ಹೊರ ಬೀಳಲಿದ್ದು, ಭೂಕುಸಿತ ಸಂಭವಿಸಬಹುದಾದ ಮಲೆನಾಡು ಹಾಗೂ ಕರಾವಳಿ ಭಾಗದ ಪ್ರದೇಶಗಳಲ್ಲಿ ರಾಜ್ಯ ಸರಕಾರ 300ಕೋ. ರೂ. ವೆಚ್ಚದಲ್ಲಿ ಭೂಕುಸಿತ ತಡೆಯಲು ಅಗತ್ಯವಾಗಿರುವ ಕ್ರಮಕೈಗೊಳ್ಳಲಿದೆ.

share
ಕೆ.ಎಲ್. ಶಿವು
ಕೆ.ಎಲ್. ಶಿವು
Next Story
X