Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಾಗಿಲಿಲ್ಲದ ಬಸ್ಸಿಗೆ ವಿದ್ಯಾರ್ಥಿಗಳೇ...

ಬಾಗಿಲಿಲ್ಲದ ಬಸ್ಸಿಗೆ ವಿದ್ಯಾರ್ಥಿಗಳೇ ‘ಬಾಗಿಲು’!

ಮಸ್ಕಿ-ಹಟ್ಟಿ ಮಾರ್ಗದಲ್ಲಿ ಜೀವದ ಹಂಗು ತೊರೆದು ಪ್ರಯಾಣ

ಎಸ್.ನಝೀರ್ ಮಸ್ಕಿಎಸ್.ನಝೀರ್ ಮಸ್ಕಿ27 Oct 2026 3:09 PM IST
share
ಬಾಗಿಲಿಲ್ಲದ ಬಸ್ಸಿಗೆ ವಿದ್ಯಾರ್ಥಿಗಳೇ ‘ಬಾಗಿಲು’!

ಮಸ್ಕಿ : ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿ ಸಮರ್ಪಕ ಬಾಗಿಲು ಹಾಗೂ ಸುರಕ್ಷತಾ ವ್ಯವಸ್ಥೆ ಇಲ್ಲದೆ ಮಸ್ಕಿ-ಹಟ್ಟಿ ಮಾರ್ಗದಲ್ಲಿ ಪ್ರಯಾಣಿಕರು, ಅದರಲ್ಲೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಅಪಾಯದ ನಡುವೆ ಸಂಚರಿಸುವಂತಾಗಿದೆ. ಬಸ್ಸಿನ ಬಾಗಿಲು ಇರಬೇಕಾದ ಜಾಗದಲ್ಲಿ ವಿದ್ಯಾರ್ಥಿಗಳೇ ನಿಂತು, ಮೆಟ್ಟಿಲು ಹಾಗೂ ಬಾಗಿಲಿಗೆ ಜೋತುಬಿದ್ದು ಪ್ರಯಾಣಿಸುತ್ತಿರುವ ದೃಶ್ಯಗಳು ಆತಂಕಕ್ಕೆ ಕಾರಣವಾಗಿವೆ.

ಮಸ್ಕಿಯಿಂದ ಹಟ್ಟಿಗೆ ಸಂಚರಿಸುವ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕಿಕ್ಕಿರಿದು ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ಸಿನೊಳಗೆ ಸ್ಥಳಾವಕಾಶ ಇಲ್ಲದ ಕಾರಣ ಕೆಲವರು ಬಾಗಿಲಿನ ಮೆಟ್ಟಿಲು ಹಾಗೂ ಹೊರಭಾಗದಲ್ಲಿ ನಿಂತುಕೊಂಡೇ ಪ್ರಯಾಣಿಸುವಂತಾಗಿದೆ.

ಶಾಲಾ-ಕಾಲೇಜಿಗೆ ತೆರಳಿದ ಮಕ್ಕಳು ಸಂಜೆ ಸುರಕ್ಷಿತವಾಗಿ ಮನೆಗೆ ಮರಳಲಿ ಎಂದು ಪಾಲಕರು ಕಾಯುತ್ತಿರುವಾಗ, ವಿದ್ಯಾರ್ಥಿಗಳು ಅಪಾಯಕಾರಿ ರೀತಿಯಲ್ಲಿ ಬಸ್ಸುಗಳಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಆತಂಕ ಮೂಡಿಸಿವೆ. ಬಸ್ಸು ತನ್ನ ಊರು ತಲುಪಿದರೂ ಬಾಗಿಲಿಗೆ ಜೋತುಬಿದ್ದಿರುವ ಪ್ರಯಾಣಿಕರು ಸುರಕ್ಷಿತವಾಗಿ ತಲುಪುತ್ತಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.

ಮಸ್ಕಿ-ಹಟ್ಟಿ ಮಾರ್ಗದಲ್ಲಿ ಬಸ್ಸುಗಳಲ್ಲಿ ಕೊರತೆಯೇ, ಹೆಚ್ಚುವರಿ ಟ್ರಿಪ್‌ಗಳ ಅಗತ್ಯವೇ ಅಥವಾ ಸಾರಿಗೆ ವ್ಯವಸ್ಥೆಯಲ್ಲಿನ ಬೇರೆ ಸಮಸ್ಯೆಯೇ ಇದಕ್ಕೆ ಕಾರಣ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಪ್ರಯಾಣಿಕರ ಸುರಕ್ಷತೆ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

‘ದುರಂತ ಸಂಭವಿಸಿದ ಬಳಿಕ ಎಚ್ಚೆತ್ತುಕೊಳ್ಳುವ ಬದಲು ಮುನ್ನೆಚ್ಚರಿಕೆ ವಹಿಸಬೇಕು’

ಸಮರ್ಪಕ ಸಂಖ್ಯೆಯಲ್ಲಿ ಬಸ್ಸುಗಳನ್ನು ಒದಗಿಸುವುದು, ಅಗತ್ಯವಿರುವ ಮಾರ್ಗಗಳಲ್ಲಿ ಹೆಚ್ಚುವರಿ ಟ್ರಿಪ್‌ಗಳನ್ನು ಕಲ್ಪಿಸುವುದು ಹಾಗೂ ಬಸ್‌ಗಳ ಬಾಗಿಲು ಸೇರಿದಂತೆ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸಿ ದುರಸ್ತಿ ಮಾಡುವುದು ಅಗತ್ಯವಾಗಿದೆ. ದುರಂತ ಸಂಭವಿಸಿದ ನಂತರ ‘ಹೀಗಾಗಬಾರದಿತ್ತು’ ಎಂದು ಮಿಡಿಯುವ ಬದಲು, ದುರಂತಕ್ಕೂ ಮುನ್ನವೇ ಸಾರಿಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿರುವ ಹಳೆಯ ಹಾಗೂ ಡಕೋಟಾ ಬಸ್ಗಳನ್ನು ತೆರವುಗೊಳಿಸಿ, ಅವುಗಳ ಬದಲಿಗೆ ಹೊಸ ಬಸ್‌ಗಳನ್ನು ಓಡಿಸಬೇಕು. ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್‌ಗಳ ವ್ಯವಸ್ಥೆಯನ್ನು ಸರಕಾರ ಹಾಗೂ ಸಾರಿಗೆ ಇಲಾಖೆ ಮಾಡಬೇಕು. ನಿರ್ಲಕ್ಷ್ಯ ಮುಂದುವರಿದರೆ ಜಿಲ್ಲಾದ್ಯಂತ ಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡು ಹೋರಾಟ ನಡೆಸಬೇಕಾಗುತ್ತದೆ.

-ಯಮನೂರಪ್ಪ ಭೇರ್ಗಿ

ತಾಲೂಕು ಅಧ್ಯಕ್ಷ, ದಲಿತ ಸಾಹಿತ್ಯ ಪರಿಷತ್ ಮಸ್ಕಿ

ರಾಯಚೂರು ಜಿಲ್ಲೆಯಾದ್ಯಂತ ಹಲವು ಕಡೆ ಬಸ್‌ಗಳು ಕೆಟ್ಟು ನಿಂತಿರುವುದು ಕಂಡುಬರುತ್ತಿದೆ. ಕೂಡಲೇ ಸಾರಿಗೆ ಸಚಿವರು ರಾಯಚೂರು ಜಿಲ್ಲೆಯ ಎಲ್ಲ ಡಿಪೋಗಳಿಗೆ ಹೊಸ ಬಸ್‌ಗಳನ್ನು ಒದಗಿಸಬೇಕು.

-ಮಲ್ಲಪ್ಪ ಎಸ್. ಗೋನಾಳ

ಜಿಲ್ಲಾ ಅಧ್ಯಕ್ಷ, ದಸಂಸ ಸಂಯೋಜಕ ಬಣ

share
ಎಸ್.ನಝೀರ್ ಮಸ್ಕಿ
ಎಸ್.ನಝೀರ್ ಮಸ್ಕಿ
Next Story
X