Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 3 ವರ್ಷ ಕಳೆದರೂ ಉಪಯೋಗಕ್ಕೆ ಬಾರದ ಸರಕಾರಿ...

3 ವರ್ಷ ಕಳೆದರೂ ಉಪಯೋಗಕ್ಕೆ ಬಾರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ

ಮಹಮ್ಮದ್ ಮುಸ್ತಫಾ ಕಾಟಮಳ್ಳಿಮಹಮ್ಮದ್ ಮುಸ್ತಫಾ ಕಾಟಮಳ್ಳಿ8 July 2026 2:57 PM IST
share
3 ವರ್ಷ ಕಳೆದರೂ ಉಪಯೋಗಕ್ಕೆ ಬಾರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ
ದೇವದುರ್ಗ: ಕಾಮಗಾರಿ ಪೂರ್ಣವಾದರೂ ಹಸ್ತಾಂತರಕ್ಕೆ ಮೀನಾಮೇಷ

ದೇವದುರ್ಗ: ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ಪಕ್ಕದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆಂದು ಕಟ್ಟಿರುವ ಕಟ್ಟಡ 3ವರ್ಷ ಕಳೆದರೂ ಉಪಯೋಗಕ್ಕೆ ಬಾರದಾಗಿದೆ.

ಕಟ್ಟಡದ ಕಾಮಗಾರಿ ಮುಗಿದರೂ ಸರಕಾರದ ಗುತ್ತಿಗೆ ಸಂಸ್ಥೆಯಾದ ಲ್ಯಾಂಡ್ ಅರ್ಮಿ ಸಂಬಂಧ ಪಟ್ಟ ಇಲಾಖೆಗೆ ಹಸ್ತಾಂತರಿಸಿಲ್ಲ. ಇದಕ್ಕೆ ಕಳಪೆ ಕಾಮಗಾರಿಯೇ ಪ್ರಮುಖ ಕಾರಣವಾಗಿರಬಹುದು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕಟ್ಟಡ ಇನ್ನೂ ಉದ್ಘಾಟನೆಯಾಗಿಲ್ಲ, ಆಗಲೇ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ನೆಲಹಾಸು ಕಿತ್ತು ಬಂದಿರುವುದು, ಪ್ಲಂಬಿಂಗ್ ಕಿತ್ತು ಹೋಗಿದ್ದು, ಕಬ್ಬಿಣ ತುಕ್ಕು ಹಿಡಿಯುತ್ತಿದೆ, ನೀರಿನ ಟ್ಯಾಂಕ್ ಕಿತ್ತು ಕೆಳಗೆ ಬಿದ್ದಿದ್ದು, ಮಳೆ ನೀರು ಸೋರುತ್ತಿದೆ. ಇದು ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಂತಿದೆ.

ದೇವದುರ್ಗದ ಮಾಜಿ ಶಾಸಕ ಕೆ.ಶಿವನಗೌಡ ನಾಯಕ ಅವರ ಅವಧಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಕಟ್ಟಡದ ಇಂದಿನ ಸ್ಥಿತಿ ಕಂಡು ಸಾರ್ವಜನಿಕರು ಭ್ರಷ್ಟಾಚಾರ ಮತ್ತು ಸರಕಾರದ ಹಣದ ದುರುಪಯೋಗದ ಆರೋಪ ಮಾಡುತ್ತಿದ್ದಾರೆ.

ಇದು ಒಂದೇ ಕಟ್ಟಡದ ಸಮಸ್ಯೆಯಲ್ಲ. ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ ಅವಧಿಯಲ್ಲಿ ಲ್ಯಾಂಡ್ ಆರ್ಮಿ ನಿರ್ಮಿಸಿದ ಅನೇಕ ಕಟ್ಟಡಗಳ ಸ್ಥಿತಿಯೂ ಇದೇ ರೀತಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದಿಂದ ದೇವದುರ್ಗದಲ್ಲಿ ಸರಕಾರಿ ಕಟ್ಟಡಗಳ ಗುಣಮಟ್ಟ ಕುಸಿದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ದೇವದುರ್ಗದಲ್ಲಿ ಖಾಸಗಿ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ಮೃತಪಟ್ಟ ಘಟನೆ ಜನರಲ್ಲಿ ಆತಂಕ ಮೂಡಿಸಿದೆ. ಕಳಪೆ ಕಟ್ಟಡ ನಿರ್ಮಾಣಗಳು ಸಾರ್ವಜನಿಕರ ಸುರಕ್ಷತೆಗೆ ಅಪಾಯಕಾರಿಯಾಗಿದ್ದು, ಸರಕಾರ ಮುಂದಿನ ದಿನಗಳಲ್ಲಿ ಗುಣಮಟ್ಟದ ಕಟ್ಟಡಗಳ ನಿರ್ಮಾಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸರಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಟೆಂಡರ್ ನೀಡುತ್ತದೆ. ಆದರೆ ಗುತ್ತಿಗೆದಾರರ ಕಳಪೆ ಕಾಮಗಾರಿಯನ್ನು ನಿಯಂತ್ರಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ. ಟೆಂಡರ್ ನೀಡಿದ ಬಳಿಕ ಮೇಲ್ವಿಚಾರಣೆ ಇಲ್ಲದಂತಾಗಿರುವುದರಿಂದಲೇ ಇಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ತಾಲೂಕಿನಲ್ಲಿ ಹಲವು ಶಾಲಾ, ಕಾಲೇಜು, ಶೌಚಾಲಯ ಹಾಗೂ ವಸತಿ ನಿಲಯಗಳ ಕಾಮಗಾರಿಗಳು ಅತ್ಯಂತ ಕಳಪೆ ಗುಣಮಟ್ಟದಲ್ಲಿವೆ ಎಂಬುದು ಎಲ್ಲರ ಗಮನಕ್ಕೂ ಬಂದಿದೆ. ಆದರೂ ಇದನ್ನು ಪ್ರಶ್ನಿಸಲು ಯಾರು ಮುಂದಾಗುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಇತ್ತೀಚೆಗೆ ಇಲ್ಲಿಗೆ ಬಂದಿದ್ದೇನೆ. ಕಟ್ಟಡ ಕಾಮಗಾರಿ ಆಗಿದೆ ಎಂಬುದು ಗಮನದಲ್ಲಿದೆ. ಸದ್ಯ ಹಳೆಯ ಕಟ್ಟಡದಲ್ಲೇ ಕಾಲೇಜು ಮುಂದುವರಿದಿದೆ. ನಮ್ಮ ಇಲಾಖೆಯಿಂದ ಕಟ್ಟಡ ಹಸ್ತಾಂತರ ಮಾಡಿಕೊಳ್ಳಲು ಮೇಲಾಧಿಕಾರಿಗಳಿಂದ ಯಾವುದೇ ರೀತಿಯ ಅನುಮತಿ ಬಂದಿಲ್ಲ.

-ಹಯ್ಯಾಲಪ್ಪ, ಪ್ರಾಂಶುಪಾಲರು

ಸರಕಾರಿ ಪ್ರಥಮ ದರ್ಜೆ ಕಾಲೇಜು, ದೇವದುರ್ಗ

ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷ ಕಳೆದಿದೆ. ಎಲೆಕ್ಟ್ರಿಕಲ್ ಕೆಲಸ ಮಾತ್ರ ಬಾಕಿ ಇದೆ. ಕಟ್ಟಡ ಹಸ್ತಾಂತರ ಮಾಡಿಕೊಳ್ಳಲು ಹೇಳಿದ್ದೇವೆ. ಆದರೆ ಇಲಾಖೆ ನಾಲ್ಕು ಎಕರೆ ಜಾಗದಲ್ಲಿ ಕಟ್ಟಡ ಇರಬೇಕು ಎಂದು ಹೇಳುತ್ತಿದೆ. ಈಗ ನಿರ್ಮಿಸಿರುವ ಕಟ್ಟಡ ಒಂದು ಎಕರೆ ಜಾಗದಲ್ಲಿರುವುದರಿಂದ ಹಸ್ತಾಂತರ ಮಾಡಿಕೊಳ್ಳುತ್ತಿಲ್ಲ.

-ಹನುಮಯ್ಯ

ಲ್ಯಾಂಡ್ ಆರ್ಮಿ ಅಧಿಕಾರಿ, ದೇವದುರ್ಗ

share
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
Next Story
X