Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಿಥಿಲಾವಸ್ಥೆಯಲ್ಲಿ ಹುಪಳಾ ಗ್ರಾಮದ...

ಶಿಥಿಲಾವಸ್ಥೆಯಲ್ಲಿ ಹುಪಳಾ ಗ್ರಾಮದ ಸರಕಾರಿ ಶಾಲೆ; ಪ್ರಾಣ ಭಯದಲ್ಲೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಚಿತ್ರಸೇನ ವ್ಹಿ ಫುಲೆಚಿತ್ರಸೇನ ವ್ಹಿ ಫುಲೆ20 July 2025 10:51 AM IST
share
ಶಿಥಿಲಾವಸ್ಥೆಯಲ್ಲಿ ಹುಪಳಾ ಗ್ರಾಮದ ಸರಕಾರಿ ಶಾಲೆ; ಪ್ರಾಣ ಭಯದಲ್ಲೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಬೀದರ್: ಭಾಲ್ಕಿ ತಾಲೂಕಿನ ಹುಪಳಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಾವಸ್ಥೆಯಲ್ಲಿದ್ದು, ವಿದ್ಯಾರ್ಥಿಗಳು ಪ್ರಾಣ ಭೀತಿಯಿಂದ ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಶಾಲೆಯಲ್ಲಿ 80 ವಿದ್ಯಾರ್ಥಿಗಳಿದ್ದಾರೆ. ಮರಾಠಿ ಮಾಧ್ಯಮಕ್ಕೆ ಇಬ್ಬರು ಹಾಗೂ ಕನ್ನಡ ಮಾಧ್ಯಮಕ್ಕೆ 4 ಮಂದಿ ಸಹಿತ ಒಟ್ಟು 6 ಮಂದಿ ಶಿಕ್ಷಕ, ಶಿಕ್ಷಕಿಯರಿದ್ದಾರೆ.

ಈ ಶಾಲೆಯಲ್ಲಿ ಸುಮಾರು 6 ರಿಂದ 7 ಕೋಣೆಗಳಿದ್ದು, ಎಲ್ಲ ಕೋಣೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಛಾವಣಿಯು ಅಲ್ಲಲ್ಲಿ ಕುಸಿದು ಒಳಗಡೆ ಇರುವ ಕೊಳೆತ ಕಬ್ಬಿಣದ ತುಂಡುಗಳು ಕಾಣುತ್ತಿವೆ. ಶಾಲೆಯ ಪಿಲ್ಲರ್‌ಗಳ ಪ್ಲಾಸ್ಟರ್ ಬಿದ್ದಿದ್ದು, ಶಾಲೆ ಇಂದೋ, ನಾಳೆಯೋ ಬೀಳಬಹುದಾದ ಆತಂಕ ಗ್ರಾಮಸ್ಥರಲ್ಲಿದೆ.

ಇಂತಹ ಸ್ಥಿತಿಯಲ್ಲಿರುವ ಕೋಣೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಆತಂಕದಲ್ಲಿಯೇ ಪಾಠ ಕೇಳುತ್ತಿದ್ದಾರೆ. ಹಾಗೆಯೇ ಶಿಕ್ಷಕ, ಶಿಕ್ಷಕಿಯರು ಕೂಡ ಪ್ರಾಣ ಭಯದಲ್ಲಿಯೇ ಪಾಠ ಮಾಡುತ್ತಿದ್ದಾರೆ.

ಪಾಳು ಬಿದ್ದ ಕೋಣೆಯೇ ಶೌಚಾಲಯ: ಇಲ್ಲಿ ಪಾಳು ಬಿದ್ದ ಚಿಕ್ಕ ಕೋಣೆಯೇ ಮಕ್ಕಳಿಗೆ ಶೌಚಾಲಯವಾಗಿದೆ. ಈ ಶೌಚಾಲಯದಲ್ಲಿ ಮಕ್ಕಳ ಎತ್ತರಕ್ಕೆ ಹುಲ್ಲು ಬೆಳೆದು ನಿಂತಿದೆ. ಅಲ್ಲೇ ಮಕ್ಕಳು ಶೌಚ ಮಾಡಬೇಕು. ಚಿಕ್ಕ ಮಕ್ಕಳು ಹೊರಗಡೆ ಬಯಲಿಗೆ ಹೋಗಿ ಶೌಚ ಮಾಡುತ್ತಾರೆ. ಕೆಲವು ವಿದ್ಯಾರ್ಥಿಗಳ ಮನೆ ಹತ್ತಿರ ಇರುವುದರಿಂದ ಅವರು ಶೌಚಕ್ಕಾಗಿ ಮನೆಗೆ ಹೋಗುತ್ತಾರೆ. ಇನ್ನೊಂದು ಚಿಕ್ಕ ಶೌಚಾಲಯವಿದ್ದು, ಅದನ್ನು ಶಿಕ್ಷಕ ಮತ್ತು ಶಿಕ್ಷಕಿಯರು ಉಪಯೋಗಿಸುತ್ತಿದ್ದಾರೆ.

‘ಕೆಲವು ದಿನಗಳ ಹಿಂದೆ ಶೌಚಾಲಯದ ಕೋಣೆಗೆ ಹಾವು ಬಂದಿತ್ತು. ನಮಗೆ ಬೇರೆ ಬೇರೆ ಶೌಚಾಲಯದ ವ್ಯವಸ್ಥೆ ಇಲ್ಲದೆ ಇದನ್ನು ಅನಿವಾರ್ಯವಾಗಿ ಬಳಸುತ್ತಿದ್ದೇವೆ. ನಮಗಂತೂ ತುಂಬಾ ತೊಂದರೆಯಾಗುತ್ತಿದೆ’ ಎಂದು ವಿದ್ಯಾರ್ಥಿನಿಯರು ನೋವು ತೋಡಿಕೊಂಡಿದ್ದಾರೆ.

‘ಈ ಶಾಲೆಗೆ ಸ್ವಂತ ನೀರಿನ ವ್ಯವಸ್ಥೆ ಇಲ್ಲ. ಹಾಗಾಗಿ ಊರಲ್ಲಿದ್ದ ನೀರಿನ ಟ್ಯಾಂಕ್‌ಗೆ ಒಂದು ಚಿಕ್ಕ ಪೈಪ್ ಹಾಕಿ ಈ ಶಾಲೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಶಾಲೆಗೆ ಕುಡಿಯುವ ನೀರು ಸಾಗಿಸುವ ಪೈಪ್ ಚರಂಡಿಯಲ್ಲಿ ಎಸೆಯಲಾಗಿದೆ.

ಆ ಪೈಪ್ ಅಲ್ಲಲ್ಲಿ ಒಡೆದಿದೆ. ಇದರಿಂದಾಗಿ ಚರಂಡಿಯಲ್ಲಿನ ಕೊಳೆತ ನೀರು ಆ ಪೈಪ್ ಮೂಲಕ ಶಾಲೆಗೆ ಸಾಗುತ್ತವೆ. ಈ ನೀರನ್ನೇ ಶಾಲೆಯ ಮಕ್ಕಳು ಕುಡಿಯುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಶಾಲೆಗೆ ಕಲುಷಿತ ನೀರು ಬರುತ್ತಿದ್ದು, ಮಕ್ಕಳು ಅದನ್ನೇ ಕುಡಿಯುತ್ತಿದ್ದಾರೆ. ಶಾಲೆಯ ಗೋಡೆಗಳು ಯಾವಾಗ ಬೀಳುತ್ತದೆ ಗೊತ್ತಿಲ್ಲ. ಶಾಲೆ ಬಿದ್ದು ಮಕ್ಕಳಿಗೆ ಏನಾದರೂ ಅನಾಹುತವಾದರೆ ಯಾರು ಹೊಣೆ?.

-ಜ್ಯೋತಿ, ವಿದ್ಯಾರ್ಥಿಯ ಪೋಷಕಿ

ಶಾಲೆಯ ಕೋಣೆಗಳನ್ನು ನೆಲಸಮಗೊಳಿಸಲು ಪಿಡಬ್ಲ್ಯೂಡಿ ಅವರಿಗೆ ಸೂಚಿಸಲಾಗಿದೆ. ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕೊಠಡಿಯಲ್ಲಿ ಮಕ್ಕಳಿಗೆ ಪಾಠ ಮಾಡಬಾರದು ಎಂದು ಶಿಕ್ಷಕರಿಗೆ ತಿಳಿಸಲಾಗಿದೆ. ಹುಪಳಾ ಗ್ರಾಮದ ಶಾಲೆಯ ಬಗ್ಗೆ ಬಿಆರ್‌ಸಿ ಅವರನ್ನು ಕಳುಹಿಸಿ ವರದಿ ತರಿಸಿಕೊಳ್ಳುತ್ತೇನೆ.

-ಸಿ.ಜಿ.ಹಳ್ಳದ್, ಶಿಕ್ಷಣಾಧಿಕಾರಿ ಭಾಲ್ಕಿ ಕ್ಷೇತ್ರ

ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ, ಮುಖ್ಯಗುರು ಹಾಗೂ ಶಿಕ್ಷಕರೆಲ್ಲರೂ ಬರುತ್ತಾರೆ. ಆದರೆ ಬೀಳುವ ಪರಿಸ್ಥಿತಿಯಲ್ಲಿರುವ ಇಂತಹ ಶಾಲೆಯಲ್ಲಿ ಯಾರೂ ಪ್ರವೇಶ ಪಡೆಯುವುದಿಲ್ಲ. ಶಾಲೆ ಬಿದ್ದರೆ ದೊಡ್ಡ ಅನಾಹುತವಾಗಲಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಹೊಸ ಶಾಲಾ ಕಟ್ಟಡ ಕಟ್ಟಬೇಕು.

-ಅಮರ್, ಹುಪಳಾ ಗ್ರಾಪಂ ಸದಸ್ಯ

share
ಚಿತ್ರಸೇನ ವ್ಹಿ ಫುಲೆ
ಚಿತ್ರಸೇನ ವ್ಹಿ ಫುಲೆ
Next Story
X