Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಳ್ಳ ಹಿಡಿಯಿತೇ ಐಎಎಸ್, ಕೆಎಎಸ್ ಉಚಿತ...

ಹಳ್ಳ ಹಿಡಿಯಿತೇ ಐಎಎಸ್, ಕೆಎಎಸ್ ಉಚಿತ ತರಬೇತಿ?

ತರಬೇತಿ ಪೂರ್ಣಗೊಳಿಸದ ಶೇ.63.2 ಅಭ್ಯರ್ಥಿಗಳು: ಐಎಎಸ್ ಪ್ರಿಲಿಮ್ಸ್‌ನಲ್ಲಿ ಶೇ.0.8ಕ್ಕಿಂತಲೂ ಕಡಿಮೆ ಯಶಸ್ಸು!

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ19 Sept 2026 2:20 PM IST
share
ಹಳ್ಳ ಹಿಡಿಯಿತೇ ಐಎಎಸ್, ಕೆಎಎಸ್ ಉಚಿತ ತರಬೇತಿ?

ಕೆಕೆಆರ್‌ಡಿಬಿ ಹಗರಣ: ಭಾಗ-6

ಕಲಬುರಗಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ (ಏಏಊಖಂಅS) ವತಿಯಿಂದ 2021-22ನೇ ಸಾಲಿನಲ್ಲಿ ಆಯೋಜಿಸಿದ್ದ ಐಎಎಸ್/ಕೆಎಎಸ್ ಉಚಿತ ತರಬೇತಿ ಕಾರ್ಯಕ್ರಮ ನಿರೀಕ್ಷಿತ ಫಲಿತಾಂಶ ನೀಡಿಲ್ಲ ಎಂಬ ಅಂಶ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಅಧ್ಯಯನ ವರದಿಯಲ್ಲಿ ಬಹಿರಂಗವಾಗಿದೆ.

ಕಾರ್ಯಕ್ರಮಕ್ಕಾಗಿ ಒಟ್ಟು 6.18 ಕೋಟಿ ರೂ. ಅನುದಾನ ವೆಚ್ಚವಾಗಿದ್ದರೂ, ತರಬೇತಿ ಪಡೆದ 494 ಅಭ್ಯರ್ಥಿಗಳ ಪೈಕಿ 312 ಮಂದಿ, ಅಂದರೆ ಶೇ.63.2 ರಷ್ಟು ಅಭ್ಯರ್ಥಿಗಳು, ಆರು ತಿಂಗಳ ಸಂಪೂರ್ಣ ತರಬೇತಿ ಪೂರ್ಣಗೊಳಿಸಿಲ್ಲ ಎಂದು ವರದಿ ತಿಳಿಸಿದೆ. ಕೆಲವರು ತರಬೇತಿಯನ್ನು ಮಧ್ಯದಲ್ಲೇ ತೊರೆದರೆ, ಇನ್ನು ಕೆಲವರು ಭಾಗಶಃ ತರಗತಿಗಳಿಗೆ ಮಾತ್ರ ಹಾಜರಾಗಿದ್ದಾರೆ.

ನಾಲ್ಕು ತರಬೇತಿ ಸಂಸ್ಥೆಗಳ ಪೈಕಿ ಯೂನಿವರ್ಸಲ್ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪೂರ್ಣಗೊಳಿಸದವರ ಪ್ರಮಾಣ ಹೆಚ್ಚಿದೆ. ಇಲ್ಲಿ ಒಟ್ಟು 162 ಅಭ್ಯರ್ಥಿಗಳು ತರಬೇತಿ ಪಡೆದಿದ್ದು, ಅವರಲ್ಲಿ 119 ಮಂದಿ, ಅಂದರೆ ಶೇ.73.5ರಷ್ಟು ಅಭ್ಯರ್ಥಿಗಳು, ಆರು ತಿಂಗಳ ತರಬೇತಿ ಪೂರ್ಣಗೊಳಿಸಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಿಗದಿತ ಆರು ತಿಂಗಳ ಅವಧಿ ಪೂರ್ಣಗೊಳ್ಳುವ ಮೊದಲೇ ಕೆಲವು ತರಬೇತಿ ಕೇಂದ್ರಗಳು ತರಗತಿಗಳನ್ನು ಸ್ಥಗಿತಗೊಳಿಸಿರುವುದೂ ಅಭ್ಯರ್ಥಿಗಳ ಅಪೂರ್ಣ ಹಾಜರಾತಿಗೆ ಕಾರಣವಾಗಿದೆ ಎಂದು ಮೌಲ್ಯಮಾಪನ ವರದಿ ಹೇಳಿದೆ.

ಐಎಎಸ್ ಪ್ರಿಲಿಮ್ಸ್‌ನಲ್ಲಿ ಶೇ.0.8ಕ್ಕಿಂತಲೂ ಕಡಿಮೆ ಯಶಸ್ಸು:

ತರಬೇತಿ ಪಡೆದ ಅಭ್ಯರ್ಥಿಗಳ ಪೈಕಿ ಐಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ (ಪ್ರಿಲಿಮ್ಸ್) ಯಶಸ್ವಿಯಾದವರ ಪ್ರಮಾಣ ಶೇ.0.8ಕ್ಕಿಂತಲೂ ಕಡಿಮೆ ಎಂದು ಅಧ್ಯಯನ ವರದಿ ತಿಳಿಸಿದೆ. ಬಹುತೇಕ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿಯೇ ಇಲ್ಲ ಎಂಬ ಅಂಶವೂ ಅಧ್ಯಯನದಲ್ಲಿ ದಾಖಲಾಗಿದೆ. ಇದರಿಂದ ಉಚಿತ ತರಬೇತಿ ಕಾರ್ಯಕ್ರಮದ ಉದ್ದೇಶ, ಅನುಷ್ಠಾನ ಹಾಗೂ ಫಲಿತಾಂಶಗಳ ನಡುವಿನ ಅಂತರದ ಕುರಿತು ಪ್ರಶ್ನೆಗಳು ಎದುರಾಗಿವೆ.

ಕೋಚಿಂಗ್ ಸಂಸ್ಥೆಗಳಿಗೆ 5.35 ಕೋಟಿ ರೂ.; ವಿದ್ಯಾರ್ಥಿವೇತನಕ್ಕೆ 83.20 ಲಕ್ಷ ರೂ ಕಾರ್ಯಕ್ರಮದಡಿ ನಾಲ್ಕು ಕೋಚಿಂಗ್ ಸಂಸ್ಥೆಗಳಿಗೆ ಮೂರು ಕಂತುಗಳಲ್ಲಿ ಒಟ್ಟು 5,35,20,000 ರೂ. ಪಾವತಿಸಲಾಗಿದೆ. ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ವಸತಿ ಹಾಗೂ ಜೀವನ ನಿರ್ವಹಣಾ ವೆಚ್ಚಕ್ಕಾಗಿ 83,20,000 ರೂ. ವಿದ್ಯಾರ್ಥಿವೇತನವಾಗಿ ಹಂಚಿಕೆ ಮಾಡಲಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳ ಸರಾಸರಿ ವಯಸ್ಸು 24 ವರ್ಷವಾಗಿದ್ದು, ಶೇ.56 ಮಂದಿ ಪದವೀಧರರು, ಶೇ.43 ಮಂದಿ ಸ್ನಾತಕೋತ್ತರ ಪದವೀಧರರು ಹಾಗೂ ಶೇ.1 ಮಂದಿ ಪಿಎಚ್ಡಿ ಪದವೀಧರರು ಎಂದು ವರದಿ ತಿಳಿಸಿದೆ.

ಆನ್‌ಲೈನ್ ತರಬೇತಿ

ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಕೇವಲ ಒಂದು ತಿಂಗಳು, ಅಂದರೆ ಏಪ್ರಿಲ್‌ನಲ್ಲಿ ಮಾತ್ರ ಆಫ್‌ಲೈನ್ ತರಗತಿಗಳನ್ನು ನಡೆಸಲು ಸಾಧ್ಯವಾಗಿತ್ತು. ಉಳಿದ ಐದು ತಿಂಗಳ ತರಬೇತಿಯನ್ನು ಆನ್‌ಲೈನ್ ಮೂಲಕ ನಡೆಸಲಾಗಿದೆ. ಆನ್‌ಲೈನ್ ತರಗತಿಗಳ ವೇಳೆ ನೆಟ್ವರ್ಕ್ ಸಮಸ್ಯೆ, ಸ್ಮಾರ್ಟ್‌ಫೋನ್ ಕೊರತೆ ಹಾಗೂ ಡೇಟಾ ಸಮಸ್ಯೆಗಳು ಪ್ರಮುಖ ಅಡ್ಡಿಗಳಾಗಿದ್ದವು ಎಂದು ಅಧ್ಯಯನ ವರದಿ ದಾಖಲಿಸಿದೆ.

ಇದೇ ವೇಳೆ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ ನೀಡಿದ ಹಾಜರಾತಿ ವಿವರಗಳು ಹಾಗೂ ಅಭ್ಯರ್ಥಿಗಳು ಸ್ವತಃ ನೀಡಿದ ಹಾಜರಾತಿ ಮಾಹಿತಿಯ ನಡುವೆ ವ್ಯತ್ಯಾಸ ಕಂಡುಬಂದಿರುವುದನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ತರಬೇತಿ ಗುಣಮಟ್ಟ ಹೆಚ್ಚಿಸಲು ಅಭ್ಯರ್ಥಿಗಳ ಸಲಹೆ

ಐಎಎಸ್ ಪೂರ್ವಭಾವಿ ಪರೀಕ್ಷೆಯ ಮಟ್ಟಕ್ಕೆ ಅನುಗುಣವಾಗಿ ತರಬೇತಿಯ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಶೇ.50ಕ್ಕೂ ಹೆಚ್ಚು ಅಭ್ಯರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮೌಲ್ಯಮಾಪನ ಪ್ರಾಧಿಕಾರವು ಹಲವು ಶಿಫಾರಸುಗಳನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಆಫ್ ಲೈನ್ ತರಬೇತಿಗೆ ಆದ್ಯತೆ ನೀಡುವುದು, ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ರೂ. 2,000 ವಿದ್ಯಾರ್ಥಿವೇತನವನ್ನು ಹೆಚ್ಚಿಸಿ ಸಮಯಕ್ಕೆ ಸರಿಯಾಗಿ ವಿತರಿಸುವುದು, ಶೈಕ್ಷಣಿಕ ವರ್ಷದುದ್ದಕ್ಕೂ ನಿರಂತರ ತರಬೇತಿ ಆಯೋಜಿಸುವುದು ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕಟ್ಟುನಿಟ್ಟುಗೊಳಿಸುವಂತೆ ಸಲಹೆ ನೀಡಲಾಗಿದೆ.

ಇದರ ಜತೆಗೆ ವಸತಿ ಸಹಿತ ಕೇಂದ್ರೀಕೃತ ತರಬೇತಿ, ತರಬೇತಿ ನಂತರದ ಮಾರ್ಗದರ್ಶನ ಹಾಗೂ ಉದ್ಯೋಗಿಕ ಬೆಂಬಲ ಒದಗಿಸುವ ಮೂಲಕ ಕಾರ್ಯಕ್ರಮದ ಪರಿಣಾಮಕಾರಿತ್ವ ಹೆಚ್ಚಿಸಬೇಕು ಎಂದು ಪ್ರಾಧಿಕಾರ ಶಿಫಾರಸು ಮಾಡಿದೆ.

ತನಿಖಾ ವರದಿ ಬಹಿರಂಗ ಯಾವಾಗ?

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸರಕಾರ ಮತ್ತೊಮ್ಮೆ ತನಿಖೆ ನಡೆಸಲು ಸುಧೀರ್ ಕುಮಾರ್ ಅವರನ್ನು ನೇಮಿಸಿತ್ತು.ಅವರು ತನಿಖಾ ವರದಿಯನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ವರದಿ ಇನ್ನೂ ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಅವರನ್ನು ಪ್ರಶ್ನಿಸಿದಾಗ, ತನಿಖಾ ವರದಿ ಮುಖ್ಯಮಂತ್ರಿ ಅವರ ಬಳಿ ಇದ್ದು, ಅದರ ಕುರಿತು ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಆದರೆ, ಇಬ್ಬರು ಸಚಿವರ ಆಪ್ತ ಸಹಾಯಕರು ಈ ಹಿಂದೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದಲ್ಲಿ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರು ಎಂಬ ಹಿನ್ನೆಲೆಯಲ್ಲಿ ತನಿಖಾ ವರದಿ ಬಹಿರಂಗಪಡಿಸಲು ಸಚಿವರು ಮುತುವರ್ಜಿ ವಹಿಸುತ್ತಿಲ್ಲ ಎಂದು ಕೆಲವು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

Tags

IASKAStrainingKKRDB
share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X