Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಶ್ವ ವೇದಿಕೆಯಲ್ಲಿ ಗ್ರಾಮೀಣ ಪ್ರತಿಭೆ...

ವಿಶ್ವ ವೇದಿಕೆಯಲ್ಲಿ ಗ್ರಾಮೀಣ ಪ್ರತಿಭೆ ಧನುಷ್ ಎಂ.ಜಿ.ಗೆ ಐತಿಹಾಸಿಕ ಗೌರವ

ಮಾಳಿಂಗರಾಯ ಕೆಂಭಾವಿಮಾಳಿಂಗರಾಯ ಕೆಂಭಾವಿ7 Dec 2025 6:48 AM IST
share
ವಿಶ್ವ ವೇದಿಕೆಯಲ್ಲಿ ಗ್ರಾಮೀಣ ಪ್ರತಿಭೆ ಧನುಷ್ ಎಂ.ಜಿ.ಗೆ ಐತಿಹಾಸಿಕ ಗೌರವ
ಜಿಟಿಟಿಸಿಗೆ ಮೊದಲ ಬಾರಿಗೆ ವರ್ಲ್ಡ್ ಸ್ಕಿಲ್ಸ್ ಏಷ್ಯ ಪದಕ

ಬೆಂಗಳೂರು, ಡಿ.6: ತಾಂತ್ರಿಕ ಕೌಶಲ್ಯದ ಜಾಗತಿಕ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ ಧನುಷ್ ಒದಗಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯ ಗ್ರಾಮೀಣ ಯುವ ಪ್ರತಿಭೆ ಧನುಷ್ ಎಂ.ಜಿ ಅವರು ವರ್ಲ್ಡ್ ಸ್ಕಿಲ್ಸ್ ಏಷ್ಯ-2025 (ತೈಪೆ, ತೈವಾನ್ ದೇಶ) ಸ್ಪರ್ಧೆಯಲ್ಲಿ ‘ವಿದ್ಯುತ್ ಅನುಸ್ಥಾಪನೆ’ (ಇಲೆಕ್ಟ್ರಾನಿಕ್ ಇನ್‌ಸ್ಟಾಲೇಷನ್) ವಿಭಾಗದಲ್ಲಿ ‘ಮೆಡಾಲಿಯನ್ ಆಫ್ ಎಕ್ಸಲೆನ್ಸ್’ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಇದು ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಇತಿಹಾಸದಲ್ಲೇ ಮೊದಲ ‘ವರ್ಲ್ಡ್ ಸ್ಕಿಲ್ಸ್ ಏಷ್ಯ’ ಪದಕವಾಗಿದೆ. ಕರ್ನಾಟಕದ ಗ್ರಾಮೀಣ ಭಾಗದಿಂದ ಬಂದ ಯುವಜನರಿಗೆ ದೊಡ್ಡ ಸ್ಫೂರ್ತಿಯಾಗಿದೆ.

ಮಧುಗಿರಿಯ ಗೋವಿಂದರಾಜ್ ಹಾಗೂ ಜಯಲಕ್ಷ್ಮೀ ದಂಪತಿಯ ಪುತ್ರ ಧನುಷ್, ಮಧುಗಿರಿಯ ಎಸ್‌ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಪೂರೈಸಿ, ಗೌರಿಬಿದನೂರು ಜಿಟಿಟಿಸಿಯಲ್ಲಿ ಮೆಕಾಟ್ರಾನಿಕ್ಸ್ ಡಿಪ್ಲೊಮಾ ಪಡೆದರು. ಬಳಿಕ ಬೆಂಗಳೂರು ಜಿಟಿಟಿಸಿಯಲ್ಲಿ ಒಂದು ವರ್ಷದ ಇನ್-ಪ್ಲಾಂಟ್ ತರಬೇತಿ ಮತ್ತು ವಿಶೇಷ ಇಲೆಕ್ಟ್ರಾನಿಕ್ ಇನ್‌ಸ್ಟಾಲೇಷನ್ ತರಬೇತಿ ಪಡೆದರು.

2024ರಲ್ಲಿ ‘ಇಂಡಿಯಾ ಸ್ಕಿಲ್’ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಚಿನ್ನದ ಪದಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಪದಕ ಗಳಿಸಿದ್ದ ಧನುಷ್, ಭಾರತದ ಅಧಿಕೃತ ಪ್ರತಿನಿಧಿಯಾಗಿ ತೈಪೆಗೆ ಆಯ್ಕೆಯಾಗಿದ್ದರು. ಏಷ್ಯದ ದಿಗ್ಗಜ ದೇಶಗಳ ಕುಶಲಕರ್ಮಿಗಳೊಂದಿಗೆ ನಡೆದ ತೀವ್ರ ಸ್ಪರ್ಧೆಯಲ್ಲಿಯೂ ತಾಂತ್ರಿಕ ನಿಖರತೆ, ಸಮಯ ನಿರ್ವಹಣೆಯಿಂದ ಈ ಪದಕವನ್ನು ಪಡೆದಿದ್ದಾರೆ.

ಧನುಷ್ ಅವರ ಈ ಸಾಧನೆಗೆ ರಾಜ್ಯದ ಯುವಜನತೆ, ಜಿಟಿಟಿಸಿ ಕುಟುಂಬ, ಗ್ರಾಮದ ಜನತೆ ಹಾಗೂ ಶಿಕ್ಷಕ ವರ್ಗ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ. ಕೌಶಲ್ಯಕ್ಕೆ ಗಡಿ-ನಾಡಿಲ್ಲ ಎಂಬ ಸಂದೇಶವನ್ನು ಗ್ರಾಮೀಣ ಯುವ ಪ್ರತಿಭೆ ಧನುಷ್ ಎಂ.ಜಿ. ಈಗ ಪ್ರಪಂಚಕ್ಕೆ ತಲುಪಿಸಿದ್ದಾರೆ.

ಭಾರತವನ್ನು ಪ್ರತಿನಿಧಿಸಿ ವರ್ಲ್ಡ್ ಸ್ಕಿಲ್ಸ್ ಏಷ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. 18 ದೇಶಗಳೊಂದಿಗೆ ಸ್ಪರ್ಧಿಸುವುದು ನಿಜಕ್ಕೂ ಕಠಿಣ ಅನುಭವವಾಗಿತ್ತು.

ನನ್ನ ಪರಿಪೂರ್ಣತೆ ಮತ್ತು ಸಮಯಪ್ರಜ್ಞೆಯಿಂದ ನಾನು ಪದಕವನ್ನು ಗೆಲ್ಲಲು ಸಾಧ್ಯವಾಯಿತು. ಈ ಗೆಲುವನ್ನು ನನ್ನ ಎಲ್ಲ ತರಬೇತುದಾರರು, ಜಿಟಿಟಿಸಿ ಮತ್ತು ಕುಟುಂಬಕ್ಕೆ ಅರ್ಪಿಸುತ್ತೇನೆ.

-ಧನುಷ್ ಎಂ.ಜಿ., ಪದಕ ಪುರಸ್ಕೃತ

share
ಮಾಳಿಂಗರಾಯ ಕೆಂಭಾವಿ
ಮಾಳಿಂಗರಾಯ ಕೆಂಭಾವಿ
Next Story
X