Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೂಲಭೂತ ಸೌಕರ್ಯ ವಂಚಿತ ಹೊಸೂರು ಗ್ರಾಮ

ಮೂಲಭೂತ ಸೌಕರ್ಯ ವಂಚಿತ ಹೊಸೂರು ಗ್ರಾಮ

ರಸ್ತೆ, ಸಾರಿಗೆ, ನೆಟ್‌ವರ್ಕ್ ಸಮಸ್ಯೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಯೋಗೀಶ್ ಕುಂಭಾಸಿಯೋಗೀಶ್ ಕುಂಭಾಸಿ20 Nov 2026 12:12 PM IST
share
ಮೂಲಭೂತ ಸೌಕರ್ಯ ವಂಚಿತ ಹೊಸೂರು ಗ್ರಾಮ

ಕುಂದಾಪುರ : ಬೈಂದೂರು ವಿಧಾನಸಭೆ ಕ್ಷೇತ್ರದ ಇಡೂರು- ಕುಂಜ್ಞಾಡಿ ಗ್ರಾಪಂ ವ್ಯಾಪ್ತಿಯ ಹೊಸೂರು ಗ್ರಾಮ ಎಲ್ಲ ರೀತಿಯ ಮೂಲ ಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಹಲವು ವರ್ಷಗಳಿಂದ ರಸ್ತೆ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ಕಂಗಾಲಾಗಿದ್ದಾರೆ.

ಹೊಸೂರು ಗ್ರಾಮದಲ್ಲಿ 800 ಮನೆಗಳಿದ್ದು, ಸುಮಾರು 3,500 ಜನಸಂಖ್ಯೆಯಿದೆ. ಈ ಭಾಗದ ಜನರು ಹಾಗೂ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಶಾಲಾ-ಕಾಲೇಜಿಗಳಿಗೆ ತೆರಳುವ ವಿದ್ಯಾರ್ಥಿಗಳು ಬಸ್‌ಗಾಗಿ 3-4 ಕಿ.ಮೀ. ನಡೆದು ಜನ್ನಲ್, ಹೊಸೂರು ಹೈಸ್ಕೂಲ್ ಅಥವಾ ಇಡೂರಿಗೆ ತಲುಪಬೇಕು. ಡಿಜಿಟಲ್ ಯುಗದಲ್ಲೂ ನೆಟ್‌ವರ್ಕ್ ಸಮಸ್ಯೆ ಕಾಡುವ ಇಲ್ಲಿ ಬಿಎಸ್ಸೆನ್ನೆಲ್ ಟವರ್ ಇದ್ದರೂ ನೆಟ್‌ವರ್ಕ್ ಮಾತ್ರ ಮರೀಚಿಕೆಯಾಗಿದೆ.

ಹೊಸೂರು ಗ್ರಾಮದ ನಾಗರಿಕರ ಪರವಾಗಿ ರತ್ನಾಕರ ಶೆಟ್ಟಿ ಹೊಸೂರು ಸಲ್ಲಿಸಿದ ಮನವಿಗೆ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸೆ.8ರಂದು ಉಡುಪಿ ಜಿಲ್ಲಾಧಿಕಾರಿಗಳಿಗೆ ಹಾಗೂ ಮಂಗಳೂರು ವಿಭಾಗದ ಕೆಎಸ್ಸಾರ್ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದು, ಹೊಸೂರು-ಮೇಲ್ ಹೊಸೂರು-ಜನ್ನಲ್ ಮಾರ್ಗವಾಗಿ ತಕ್ಷಣ ಸರಕಾರಿ ಬಸ್ ಸೇವೆ ಕಲ್ಪಿಸಲು ಸೂಚಿಸಿದ್ದರು.

ಇದರ ಬೆನ್ನಲ್ಲೇ ಸಂಸದ ಬಿ.ವೈ.ರಾಘವೇಂದ್ರ ಕೂಡ ಸೆ.23ರಂದು ಡಿಸಿ, ಸಿಇಒಗೆ ಪತ್ರ ಬರೆದು, ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ತಿಳಿಸಿದ್ದರು. ಜನಪ್ರತಿನಿಧಿಗಳು ಪತ್ರ ಬರೆದು ತಿಂಗಳುಗಳೇ ಕಳೆದರೂ ಅಧಿಕಾರಿಗಳು ಕನಿಷ್ಠ ಸ್ಥಳ ಪರಿಶೀಲನೆಯನ್ನೂ ನಡೆಸಿಲ್ಲ.

ರಸ್ತೆಗಳ ಕಾಂಕ್ರಿಟೀಕರಣಕ್ಕೆ ಆಗ್ರಹ: ಗ್ರಾಮದ ಪ್ರಮುಖ ರಸ್ತೆಗಳಾದ ಕಾನ್ಬೇರು ಶ್ರೀಮಹಿಷಿಮರ್ಧಿನಿ ದೇವಸ್ಥಾನದಿಂದ ಜನ್ನಲ್‌ವರೆಗಿನ ಸುಮಾರು 4 ಕಿ.ಮೀ. ರಸ್ತೆ ಮತ್ತು ಹಡವಲಗದ್ದೆ ಹಕ್ಲಿನಿಂದ ಪುಸ್ಕೇರಿವರೆಗಿನ 2 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದೆ. ಮುಖ್ಯವಾಗಿ ಈ ರಸ್ತೆಗಳ ಮಧ್ಯಭಾಗದಲ್ಲಿ ಬರುವ ಹಕ್ಲುಮನೆ ಪರಿಸರದ ಸುಮಾರು 500 ಮೀಟರ್ ಉದ್ದದ ಕಡಿದಾದ ಇಳಿಜಾರು ರಸ್ತೆ ಮಳೆಗಾಲದಲ್ಲಿ ಸಂಚಾರಕ್ಕೆ ಅತ್ಯಂತ ಅಪಾಯಕಾರಿಯಾಗಿದ್ದು, ಈ ರಸ್ತೆಯನ್ನು ತುರ್ತು ಆದ್ಯತೆಯ ಮೇರೆಗೆ ಕಾಂಕ್ರಿಟೀಕರಣ ಮಾಡ ಬೇಕೆಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಸಹಿತ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಸ್ಪಂದನ ಸಿಕ್ಕಿಲ್ಲ. ಸಂಸದ, ಶಾಸಕರು ಸಮಸ್ಯೆ ಬಗ್ಗೆ ಜಿಲ್ಲಾಡಳಿತಕ್ಕೆ ಪತ್ರ ಬರೆದರೂ ಆಡಳಿತ ಮಾತ್ರ ಕ್ಯಾರೇ ಎಂದಿಲ್ಲ. ತಕ್ಷಣ ಜಿಲ್ಲಾಡಳಿತ, ಜಿಪಂ ಮತ್ತು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸ್ಥಳ ಪರಿಶೀ ಲನೆ ನಡೆಸಿ ಅಗತ್ಯ ಕಾಮಗಾರಿ ಮತ್ತು ಬಸ್ ಸೇವೆ ಆರಂಭಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ.

-ರತ್ನಾಕರ ಶೆಟ್ಟಿ, ಹೊಸೂರು ಗ್ರಾಮಸ್ಥ

ಪ್ರಮುಖ ಬೇಡಿಕೆಗಳು

ಹೊಸೂರು- ಮೇಲ್‌ಹೊಸೂರು-ಜನ್ನಲ್ ಮಾರ್ಗವಾಗಿ ಸರಕಾರಿ ಬಸ್ ಸೇವೆ ಆರಂಭಿಸ ಬೇಕು. ನೀರಿನ ತೀವ್ರ ಅಭಾವ ತಪ್ಪಿಸಲು ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸ ಬೇಕು. ತುರ್ತು ಸಂಪರ್ಕ ಹಾಗೂ ಶಿಕ್ಷಣಕ್ಕೆ ಅಡ್ಡಿ ಯಾಗಿರುವ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಬೇಕು. ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಸೇವೆ, ಶಾಲಾ ಮೂಲಸೌಕರ್ಯ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಬೀದಿ ದೀಪಗಳನ್ನು ಅಳವಡಿಸಬೇಕು ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ.

Tags

Hosuru VillageBasic Infrastructure
share
ಯೋಗೀಶ್ ಕುಂಭಾಸಿ
ಯೋಗೀಶ್ ಕುಂಭಾಸಿ
Next Story
X