Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್‌ನಲ್ಲಿ...

ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್‌ನಲ್ಲಿ ಅಕ್ರಮ

ಜಿ.ಮಹಾಂತೇಶ್,ಜಿ.ಮಹಾಂತೇಶ್,6 Jun 2026 9:50 AM IST
share
ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್‌ನಲ್ಲಿ ಅಕ್ರಮ
7 ಅಧಿಕಾರಿಗಳ ವಿರುದ್ಧ ಇನ್ನೂ ಸಲ್ಲಿಕೆಯಾಗದ ದೋಷಾರೋಪ ಪಟ್ಟಿ

ಬೆಂಗಳೂರು : ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ ರೀತಿಯ ಹಣಕಾಸು ದುರುಪಯೋಗ, ಲೋಪದೋಷ, ನಿಷ್ಫಲ ವೆಚ್ಚಕ್ಕೆ ಕಾರಣರಾದ ಐಎಎಸ್ ಅಧಿಕಾರಿಯಾಗಿದ್ದ ಜಿ.ಸಿ.ಪ್ರಕಾಶ್ ಸಹಿತ ಒಟ್ಟು 7 ಮಂದಿ ಅಧಿಕಾರಿಗಳ ವಿರುದ್ಧ ಈವರೆಗೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿಲ್ಲ.

ಎಂಎಸ್‌ಐಎಲ್‌ನಲ್ಲಿನ ವಿವಿಧ ಅಕ್ರಮಗಳ ಕುರಿತು ಕುರಿತು ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಉದ್ಯಮಗಳ ಸಮಿತಿಯು ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ತನಿಖೆ ಕೈಗೊಳ್ಳಲು ನಿವೃತ್ತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಜೆ.ಎಸ್.ಸೋಮಶೇಖರ್ ಅವರು 2026ರ ಜನವರಿ 31ರಂದೇ ವರದಿ ಸಲ್ಲಿಸಿದ್ದರು. ಈ ವರದಿ ಸಲ್ಲಿಕೆಯಾಗಿ 4 ತಿಂಗಳಾದರೂ ಯಾವೊಬ್ಬ ಅಧಿಕಾರಿಯ ವಿರುದ್ಧವೂ ಶಿಸ್ತು ಕ್ರಮ ಜರುಗಿಸಿಲ್ಲ. ಈ ತನಿಖಾ ವರದಿ ಕುರಿತು ಇಲಾಖೆಯ ಅಧಿಕಾರಿಗಳು ಕೈಗಾರಿಕಾ ಸಚಿವರಾಗಿದ್ದ ಎಂ.ಬಿ.ಪಾಟೀಲ್ ಅವರ ಬಳಿಯೂ ಚರ್ಚಿಸಿದ್ದರು. ಆದರೂ ಈ ಬಗ್ಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಗೊತ್ತಾಗಿದೆ.

ಇದೇ ತನಿಖಾ ವರದಿ ಆಧರಿಸಿ ಆಪಾದಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ ವರದಿಯನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು 2026ರ ಎಪ್ರಿಲ್ 15ರಂದೇ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯು ಎಂಎಸ್‌ಐಎಲ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ. ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯು ಬರೆದಿರುವ ಪತ್ರದ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಪತ್ರದಲ್ಲೇನಿದೆ?: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್‌ನ 2019-20ನೇ ಸಾಲಿನ ಮಹಾಲೇಖಪಾಲರ ವರದಿ (ಕಂಡಿಕೆ 2.3 ಮತ್ತು 2.4) 2020-21ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಉದ್ಯಮಗಳ ಸಮಿತಿಯ 137ನೇ ವರದಿಯಲ್ಲಿ ಶಿಫಾರಸು ಮಾಡಿರುವಂತೆ ಲೋಪದೋಷಗಳಿಗೆ ಕಾರಣರಾದ ಅಧಿಕಾರಿ, ಸಿಬ್ಬಂದಿಯನ್ನು ಗುರುತಿಸಬೇಕು. ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸಮಿತಿಯು ಶಿಫಾರಸು ಮಾಡಿತ್ತು.

ಹಾಗೆಯೇ ಆಪಾದಿತ ಅಧಿಕಾರಿಗಳ ವಿರುದ್ಧದ ಪ್ರಾಥಮಿಕ ತನಿಖಾ ವರದಿಯನ್ನು ನೀಡಲು ಈ ಸಂಬಂಧ 2025ರ ಜು.30ರಂದು ಸರಕಾರವು ಆದೇಶಿಸಿತ್ತು. ಈ ಪ್ರಕರಣದಲ್ಲಿ ಸಮಗ್ರ ಮತ್ತು ನ್ಯಾಯ ಸಮ್ಮತವಾದ ತನಿಖೆ, ವಿಚಾರಣೆ ನಡೆಸಲು ನಿವೃತ್ತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಎಸ್ ಸೋಮಶೇಖರ ಮತ್ತು ಎಂಎಸ್‌ಐಎಲ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಚ್.ಎಂ.ಶ್ರೀನಿವಾಸ ಅವರನ್ನು ವಿಚಾರಣೆ ತನಿಖಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿತ್ತು. ಸೋಮಶೇಖರ ಅವರ ನೇತೃತ್ವದ ತನಿಖಾ ತಂಡವು 2026ರ ಜನವರಿ 31ರಂದು ತನಿಖಾ ವರದಿ ನೀಡಿತ್ತು.

ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಉದ್ಯಮಗಳ ಸಮಿತಿಯ 137ನೇ ವರದಿಯಲ್ಲಿ ಶಿಫಾರಸು ಮಾಡಿದಂತೆ ಒಟ್ಟು 7 ಮಂದಿ ಅಧಿಕಾರಿಗಳು ಭಾಗಿಯಾಗಿರುವುದನ್ನು ತನಿಖಾ ತಂಡವು ದೃಢಪಡಿಸಿದೆ.

ಎಂಎಸ್‌ಐಎಲ್‌ನ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಜಿ.ಸಿ. ಪ್ರಕಾಶ್, ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಬ್ರಮಣ್ಯಂ, ಗಣೇಶ್, ಪ್ರಧಾನ ವ್ಯವಸ್ಥಾಪಕ ರಮಾಕಾಂತ ಹೆಬ್ಬಳ್ಳಿ, ಉಪ ಪ್ರಧಾನ ವ್ಯವಸ್ಥಾಪಕ ಕೆ.ರವಿಕುಮಾರ್, ಮುಖ್ಯ ಹಣಕಾಸು ಅಧಿಕಾರಿ ಎ.ಎಂ.ಚಂದ್ರಪ್ಪ, ಉಪ ಪ್ರಧಾನ ವ್ಯವಸ್ಥಾಪಕ (ಹಣಕಾಸು) ಸಿ.ಚಂದ್ರಶೇಖರ್ ಅವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖಾ ಸಮಿತಿಯು ತನ್ನ ವರದಿಯಲ್ಲಿ ವಿವರಿಸಿತ್ತು.

ಈ ವ್ಯವಹಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳಿಗೆ ಸಂಸ್ಥೆಯ ನಡತೆ, ಶಿಸ್ತು ನಿಯಮಗಳ ಅನ್ವಯ ಕ್ರಮ ಕೈಗೊಂಡು ದಂಡನೆ ವಿಧಿಸಬೇಕಾಗಿದೆ. ಈ ಪಟ್ಟಿಯಲ್ಲಿ ಜಿ ಸಿ ಪ್ರಕಾಶ್ ಅವರು ಭಾರತೀಯ ಆಡಳಿತ ಸೇವೆಗೆ ಸೇರಿದ ಅಧಿಕಾರಿಯಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಬೇಕಾಗಿದೆ. ಈ ಅಧಿಕಾರಿಯವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ತನಿಖಾ ವರದಿ ಆಧರಿಸಿ ಆರೋಪಪಟ್ಟಿ (ಅನುಬಂಧ 1ರಿಂದ 4) ಸರಕಾರಕ್ಕೆ ಕಳಿಸಬೇಕು. ಇನ್ನುಳಿದ 6 ಅಧಿಕಾರಿಗಳ ವಿರುದ್ಧ ಎಂಎಸ್‌ಐಎಲ್ ಕ್ರಮ ಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯು ಪತ್ರದಲ್ಲಿ ನಿರ್ದೇಶಿಸಿರುವುದು ತಿಳಿದು ಬಂದಿದೆ.

ಈ ಮಧ್ಯೆ ಎಂಎಸ್‌ಐಎಲ್ 2026ರ ಎಪ್ರಿಲ್ 23ರಂದು ಸರಕಾರಕ್ಕೆ ಪತ್ರ ಬರೆದಿತ್ತು. ಸೌಂದರ್ಯ ಸಾಬೂನಿನ ಪ್ರಕರಣವು ನ್ಯಾಯಾಲಯದಲ್ಲಿ (CCH-88 LXXXVII ADDL.CITY CIVIL AND SESSIONS JUDGE) ದಾಖಲಾಗಿದೆ. ನ್ಯಾಯಾಲಯವು ಅಂತಿಮ ತೀರ್ಪು ನೀಡಿದ ನಂತರ ತೀರ್ಪಿನಲ್ಲಿ ಸೂಚಿಸಿರುವಂತೆ ಲೋಪದೋಷಗಳಿಗೆ ಕಾರಣರಾದ ಎಂಎಸ್‌ಐಎಲ್‌ನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದರು.

ಆದರೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಎಂಎಸ್‌ಐಎಲ್‌ನ ಈ ವಾದವನ್ನು ಒಪ್ಪಿರಲಿಲ್ಲ. ಬದಲಿಗೆ ಎಂಎಸ್‌ಐಎಲ್ ಸಂಸ್ಥೆಯು ಸರಬರಾಜುದಾರರಿಂದ ಹಣ ವಸೂಲಾತಿಗಾಗಿ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ. ಅಲ್ಲದೇ ಸಂಸ್ಥೆಯ ಅಧಿಕಾರಿಗಳು ಲೋಪದೋಷ ಎಸಗಿರುವುದರಿಂದ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ದಂಡನೆ ವಿಧಿಸುವುದು ಎರಡೂ ಪ್ರತ್ಯೇಕವಾದ ವಿಷಯಗಳಾಗಿವೆ. ಮತ್ತು ಒಂದೊಕ್ಕೊಂದು ಸಂಬಂಧಪಡುವುದಿಲ್ಲ ಎಂದು ಹೇಳಿತ್ತು.

ಹೀಗಾಗಿ 2026ರ ಎ.15ರಂದು ಬರೆದಿದ್ದ ಪತ್ರದ ಪ್ರಕಾರ ಎಂಎಸ್‌ಐಎಲ್‌ನ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಈ ಬಗ್ಗೆ ಕೈಗೊಂಡ ವರದಿಯನ್ನು ಜರೂರಾಗಿ ಸರಕಾರಕ್ಕೆ ಸಲ್ಲಿಸಬೇಕು ಎಂದು 2026ರ ಮೇ 5ರಂದು ಎಂಎಸ್‌ಐಎಲ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದಿದ್ದ ಪತ್ರದಲ್ಲಿ ಸೂಚಿಸಿರುವುದು ತಿಳಿದು ಬಂದಿದೆ.

Tags

mysore
share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X