Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಗಾಂಜಾ...

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಗಾಂಜಾ ಮಾರಾಟ ಜಾಲ

ಶರತ್ ಪುರದಾಳ್ಶರತ್ ಪುರದಾಳ್4 Dec 2025 2:49 PM IST
share
ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಗಾಂಜಾ ಮಾರಾಟ ಜಾಲ

ಶಿವಮೊಗ್ಗ : ಜಿಲ್ಲೆಯಲ್ಲಿ ಗಾಂಜಾ ಮಾರಾಟ, ಡ್ರಗ್ಸ್ ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ. ಯುವ ಜನತೆ ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂಬುದಕ್ಕೆ ಇತ್ತೀಚಿನ ಕೆಲವು ಘಟನೆಗಳೇ ಸಾಕ್ಷಿಯಾಗಿವೆ. ಇತ್ತೀಚೆಗೆ ಜಿಪಂನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಚನ್ನಬಸಪ್ಪನವರು ಘಟನೆಯೊಂದನ್ನು ಪ್ರಸ್ತಾಪಿಸಿ, ಯುವ ಜನತೆ ಗಾಂಜಾ ವ್ಯಸನಕ್ಕೆ ಹೇಗೆ ಒಳಗಾಗಿದ್ದಾರೆ ಎಂಬುದನ್ನು ವಿವರವಾಗಿ ತಿಳಿಸಿದ್ದರು.ಗಾಂಜಾ ವಿಚಾರದಲ್ಲಿ ದೂರು ನೀಡಲು ತೆರಳಿದವರ ಮೇಲೆಯೇ ಹಲ್ಲೆ ನಡೆಯುತ್ತದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದ್ದರು.

ನಗರದ ಮಾರ್ನಮಿ ಬೈಲಿನಲ್ಲಿ ಹರೀಶ್ ಎಂಬ ಯುವಕನ ಮೇಲೆ ನಡೆದ ಘಟನೆಗೆ ಗಾಂಜಾ ನಶೆಯ ನಂಟು ಇದೆ ಎಂಬುದು ಪೊಲೀಸ್ ಇಲಾಖೆಯ ತನಿಖೆ ವೇಳೆ ಬಯಲಾಗಿತ್ತು.ಹಾಗೂ ಸಾಕಷ್ಟು ಭದ್ರತೆ ಹೊಂದಿರುವ ಸೋಗಾನೆ ಕೇಂದ್ರ ಕಾರಾಗೃಹದ ಕ್ಯಾಂಟಿನ್‌ಗೆ ತಂದಿದ್ದ ಬಾಳೆಗೊನೆಗಳಲ್ಲಿ ಗಾಂಜಾ ಪತ್ತೆಯಾಗಿತ್ತು. ನ.19ರಂದು ಮಧ್ಯಾಹ್ನ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಆಟೊ ಒಂದರಲ್ಲಿ ಐದು ಬಾಳೆಗೊನೆಯನ್ನು ತರಲಾಗಿತ್ತು. ಜೈಲು ಭದ್ರತೆ ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ತಪಾಸಣೆ ನಡೆಸಿ,ಬಾಳೆದಿಂಡಿನಲ್ಲಿ 123 ಗ್ರಾಂ ಗಾಂಜಾ ಪತ್ತೆ ಹಚ್ಚಿದ್ದರು. ಇಷ್ಟೇ ಅಲ್ಲದೆ ಇದೇ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕನೊಬ್ಬ ತನ್ನ ಒಳ ಉಡುಪಿನಲ್ಲಿ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಹೋಗಿ ಸಿಕ್ಕಿಬಿದ್ದಿದ್ದ. ಈತನ ವಿರುದ್ಧ ಪ್ರಕರಣ ದಾಖಲಾಗಿದೆ.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಂಪುರಕ್ಕೆ ಹೋಗುವ ರಿಂಗ್ ರೋಡ್ ರಸ್ತೆಯಲ್ಲಿ ಸ್ಕಾರ್ಪಿಯೋ ವಾಹನದಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡಲು ಹೋಗಿ ಸಿಕ್ಕಿಬಿದ್ದಿದ್ದರು. ಇವರಿಂದ ಬರೋಬ್ಬರಿ 1 ಕೆಜಿ 420 ಗ್ರಾಂ ಗಾಂಜಾ ಹಾಗೂ 24 ಗ್ರಾಂ ಡ್ರಗ್ಸ್ ವಶಕ್ಕೆ ಪಡೆದುಕೊಳ್ಳಲಾಯಿತು. ಈ ಕೆಲವು ಪ್ರಕರಣಗಳನ್ನು ಗಮನಿಸಿದರೆ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಜಾಲ ಅವ್ಯಾಹತವಾಗಿ ನಡೆಯುತ್ತಿದೆ ಎಂಬುದಕ್ಕೆ ಉದಾಹರಣೆಯಾಗಿದೆ. ನಗರದ ಪ್ರತಿಷ್ಟಿತ ಇಂಜಿನಿಯರ್ ಕಾಲೇಜು, ಮೆಡಿಕಲ್ ಕಾಲೇಜುಗಳು ಸೇರಿದಂತೆ ಹಲವಾರು ಕಡೆಗಳಿಗೆ ಅಕ್ರಮವಾಗಿ ಗಾಂಜಾ ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ಜಾಲವನ್ನು ಪೊಲೀಸರು ಭೇದಿಸಬೇಕು. ನಗರದ ಗಲ್ಲಿ ಗಲ್ಲಿಗಳಲ್ಲಿ ಮಾರಾಟವಾಗುತ್ತಿರುವ ಗಾಂಜಾ ವ್ಯವಹಾರಕ್ಕೆ ಕಡಿವಾಣ ಹಾಕಬೇಕು. ಪೊಲೀಸರು ಕೇವಲ ಪ್ರಕರಣ ದಾಖಲಿಸಿ ಕೈ ತೊಳೆದುಕೊಂಡರೆ ಸಲ್ಲದು, ಗಾಂಜಾ ಮಾರಾಟಗಾರರು,ಬೆಳೆಗಾರರು ಹಾಗೂ ಸೇವಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಮಾದಕ ವಸ್ತು, ಗಾಂಜಾ ಮಾರಾಟ, ಸಾಗಾಟ, ಸೇವನೆ, ಬೆಳೆಯುವುದು, ಸಂಗ್ರಹ ಶಿಕ್ಷಾರ್ಹ ಅಪರಾಧವಾಗಿದ್ದು,ಇದರ ನಿಯಂತ್ರಣಕ್ಕೆ ಶಿವಮೊಗ್ಗ ಜಿಲ್ಲಾದ್ಯಂತ ವಿಶೇಷ ಕ್ರಮ ಕೈಗೊಂಡಿದ್ದೇವೆ. ನಗರ ವ್ಯಾಪ್ತಿಯಲ್ಲಿ ಡಿಎಆರ್ ಹಾಗೂ ಕ್ಯೂಆರ್‌ಟಿ ತಂಡದೊಂದಿಗೆ ಸಂಜೆ 6 ರಿಂದ 10ರ ವರೆಗೆ ವಿಶೇಷ ಗಸ್ತು ಕಾರ್ಯಾಚರಣೆ ನಡೆಸಿ, ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದವರನ್ನು ಠಾಣೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸೇವನೆ ದೃಢಪಟ್ಟವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ರೀತಿಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.

-ಮಿಥುನ್ ಕುಮಾರ್ ಜಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

share
ಶರತ್ ಪುರದಾಳ್
ಶರತ್ ಪುರದಾಳ್
Next Story
X