Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕನಕಗಿರಿಯಲ್ಲಿ ಹೆಚ್ಚಿದ ಅಕ್ರಮ ಮದ್ಯ...

ಕನಕಗಿರಿಯಲ್ಲಿ ಹೆಚ್ಚಿದ ಅಕ್ರಮ ಮದ್ಯ ಮಾರಾಟ; ಹಳ್ಳಿಹಳ್ಳಿಯಲ್ಲೂ ಮಿನಿ ಬಾರ್!

200ಕ್ಕೂ ಹೆಚ್ಚು ಅನಧಿಕೃತ ಮದ್ಯದ ಅಂಗಡಿಗಳ ಆರೋಪ; ಅಬಕಾರಿ ಇಲಾಖೆ ಮೌನ

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್3 Nov 2026 12:09 PM IST
share
ಕನಕಗಿರಿಯಲ್ಲಿ ಹೆಚ್ಚಿದ ಅಕ್ರಮ ಮದ್ಯ ಮಾರಾಟ; ಹಳ್ಳಿಹಳ್ಳಿಯಲ್ಲೂ ಮಿನಿ ಬಾರ್!

ಕನಕಗಿರಿ: ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ 200ಕ್ಕೂ ಹೆಚ್ಚು ಅನಧಿಕೃತ ಮದ್ಯ ಮಾರಾಟದ ಅಂಗಡಿಗಳು ರಾಜಾರೋಷವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ನಿರ್ಲಕ್ಷ್ಯದಿಂದ ಅಕ್ರಮ ಮದ್ಯದ ದಂಧೆ ವ್ಯಾಪಕವಾಗಿ ನಡೆಯುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹಳ್ಳಿಹಳ್ಳಿಯಲ್ಲೂ ಮಿನಿ ಬಾರ್

ತಾಲೂಕಿನಲ್ಲಿ ಪರವಾನಗಿ ಪಡೆದ ಮದ್ಯದ ಅಂಗಡಿಗಳು ಬೆರಳೆಣಿಕೆಯಷ್ಟಿದ್ದರೂ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳು, ಪಾನ್ ಅಂಗಡಿಗಳು ಮತ್ತು ದಿನಸಿ ಅಂಗಡಿಗಳಲ್ಲೇ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಬೆಳಗ್ಗೆಯಿಂದ ತಡರಾತ್ರಿವರೆಗೂ ಇಂತಹ ಅಂಗಡಿಗಳ ಮುಂದೆ ಜನ

ಜಂಗುಳಿ ಕಂಡುಬರುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಡಿಮೆ ಬೆಲೆಗೆ ಸಿಗುವ ಕಳಪೆ ಮದ್ಯ ಸೇವನೆಯಿಂದ ಯುವಕರು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮದ್ಯ ಸೇವಿಸಿ ವಾಹನ ಚಲಾಯಿಸುವುದರಿಂದ ಅಪಘಾತಗಳೂ ಹೆಚ್ಚುತ್ತಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಸಂಜೆ ವೇಳೆ ಸಂಚರಿಸಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಇಷ್ಟೊಂದು ಪ್ರಮಾಣದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳು ಮಾಸಿಕ ಹಣ ಪಡೆದು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ದೂರೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಅಬಕಾರಿ ನಿರೀಕ್ಷಕರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಈ ಹಿಂದೆ ಕನಕಗಿರಿ ಭಾಗದ ಡಾಬಾ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಮತ್ತೆ ಯಾರಾದರೂ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ತಾಲೂಕು ಅಧಿಕಾರಿಗಳಿಗೆ ಸೂಚಿಸುತ್ತೇನೆ.

<ಪ್ರಶಾಂತ್

ಅಬಕಾರಿ ಉಪ ಆಯುಕ್ತರು, ಕೊಪ್ಪಳ

ಜಿಲ್ಲಾಧಿಕಾರಿಗಳು ಹಾಗೂ ಅಬಕಾರಿ ಉಪ ಆಯುಕ್ತರು ಕೂಡಲೇ ದಾಳಿ ನಡೆಸಿ ಅನಧಿಕೃತ ಮದ್ಯದ ಅಂಗಡಿಗಳನ್ನು ಮುಚ್ಚಿಸಬೇಕು. ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

< ಪಾಮಣ್ಣ ಅರಳಿಗನೂರು

ರಾಜ್ಯ ಸಮಿತಿ ಸದಸ್ಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಮಾರ್ಗ)

share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್
Next Story
X