Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ...

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು

ವಾರ್ತಾಭಾರತಿವಾರ್ತಾಭಾರತಿ27 Jun 2023 12:15 AM IST
share
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು

ಮಾನ್ಯರೇ,

ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಭಾರೀ ನಿರೀಕ್ಷೆಯೊಂದಿಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ರತೀ ದಿನವೂ ಅಪಘಾತಗಳು ಸಂಭವಿಸುತ್ತಿವೆ. ಕಳೆದ ಒಂಭತ್ತು ತಿಂಗಳಿಂದ ಈ ಹೆದ್ದಾರಿಯಲ್ಲಿ 670 ಅಪಘಾತಗಳು, 160 ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಅದರಲ್ಲೂ ಹೆಚ್ಚಿನ ಅಪಘಾತಗಳು ಚನ್ನಪಟ್ಟಣ-ರಾಮನಗರದ ನಡುವಿನ ಬೈಪಾಸ್ ರಸ್ತೆಯಲ್ಲಿ ಸಂಭವಿಸುತ್ತಿವೆ ಎಂದು ಹೇಳಲಾಗಿದೆ.

ಅಪಘಾತಗಳಿಗೆ ಮುಖ್ಯ ಕಾರಣಗಳೆಂದರೆ, ಎಲ್ಲೆಲ್ಲಿ ಎಷ್ಟೆಷ್ಟು ವೇಗದಲ್ಲಿ ಚಲಿಸಬೇಕೆಂಬ ವೇಗದ ಮಿತಿಯ ಫಲಕಗಳನ್ನು ಅಳವಡಿಸದೇ ಇರುವುದು, ಬೈಪಾಸ್ ರಸ್ತೆ ಬದಿಯಲ್ಲಿ ಸೂಚನಾ ಫಲಕಗಳು ಇಲ್ಲದೇ ಇರುವುದು, ಒಂದು ವೇಳೆ ಅಪಘಾತವಾಗಿ ಬದುಕುಳಿಯುವ ಸಾಧ್ಯತೆ ಇದ್ದರೂ ರಸ್ತೆಯಲ್ಲಿ ಎಲ್ಲೂ ತುರ್ತು ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆ ಇಲ್ಲದೇ ಇರುವುದು, ವಾಹನ ಚಾಲಕರು ಆಗಾಗ ಟ್ರಾಕ್‌ಗಳನ್ನು ಬದಲಿಸುವುದು ಆಗಿದೆ.

ಅಚ್ಚರಿಯ ಸಂಗತಿ ಎಂದರೆ ಬೆಂಗಳೂರು- ಮೈಸೂರು ನಡುವಿನ ಹಳೆಯ ಹೆದ್ದಾರಿಯ ರಸ್ತೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಸರಾಸರಿ ವರ್ಷಕ್ಕೆ 200 ರಿಂದ 250 ಸಣ್ಣಪುಟ್ಟ ಅಪಘಾತಗಳು ಹಾಗೂ 50 ರಿಂದ 60 ಸಾವುಗಳು ಮಾತ್ರ ಸಂಭವಿಸುತ್ತಿದ್ದವು ಎಂದು ವರದಿಯಾಗಿದೆ.

ರಸ್ತೆ ಅಭಿವೃದ್ಧಿಯಾದಂತೆ ಅಪಘಾತಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿರುವುದು ಆತಂಕಕ್ಕೀಡು ಮಾಡುತ್ತಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಪಘಾತ ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕಿದೆ. ಜೊತೆಗೆ ರಸ್ತೆಯ ಅಲ್ಲಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಹಾಗೂ ಅಗತ್ಯ ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X