Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದುರಸ್ತಿ ಇಲ್ಲದೆ ಪಾಳುಬಿದ್ದ ಇಂಡಿ ಕೆಇಬಿ...

ದುರಸ್ತಿ ಇಲ್ಲದೆ ಪಾಳುಬಿದ್ದ ಇಂಡಿ ಕೆಇಬಿ ತಾಂಡಾ ಶಾಲೆ

ಜಯಭೀಮ ಸೋ ಸಿಂಗೆಜಯಭೀಮ ಸೋ ಸಿಂಗೆ6 Jun 2026 9:00 AM IST
share
ದುರಸ್ತಿ ಇಲ್ಲದೆ ಪಾಳುಬಿದ್ದ ಇಂಡಿ ಕೆಇಬಿ ತಾಂಡಾ ಶಾಲೆ

ಇಂಡಿ: ನಗರದ ವಿಜಯಪುರ ರಸ್ತೆಯಲ್ಲಿರುವ ಸೇವಾಲಾಲ್ ವೃತ್ತದ ಸಮೀಪದ ಕೆಈಬಿ ತಾಂಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 105 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಕೂಲಿ ಕಾರ್ಮಿಕರ ಮಕ್ಕಳು, ಬಡತನ ಕುಟುಂಬಗಳಿಗೆ ಸೇರಿದ ಮಕ್ಕಳು, ತಾಂಡಾದ ನಿವಾಸಿಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅನುಗುಣವಾಗಿ ಏಳು ಕೊಠಡಿಗಳಿವೆ. ಅದರಲ್ಲಿ ಎರಡು ಕೊಠಗಳು ಶಿಥಿಲಗೊಂಡು ಸಂಪೂರ್ಣ ಹಾಳಾಗಿವೆ ದುರಸ್ತಿ ಇಲ್ಲದೆ ಪಾಳು ಬಿದ್ದಿವೆ. ಉಳಿದ ಐದು ಕೊಠಡಿಗಳಲ್ಲಿ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಶಿಕ್ಷಣ ತಲುಪುತ್ತಿಲ್ಲ ಎಂದು ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಶಾಲಾ ಕೊಠಡಿ ದುರಸ್ತಿ ಮಾಡಬೇಕು ಎಂದು ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವ ಪ್ರಯೋಜನವಾಗಿಲ್ಲ ಎಂದು ಪಾಲಕರು ತಮ್ಮ ನೋವು ತೋಡಿಕೊಂಡಿದ್ದಾರೆ.

ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ತಳಮಟ್ಟದಲ್ಲಿ ಒಳ್ಳೆಯ ಶಿಕ್ಷಣ ನೀಡಲಾಗುತ್ತಿಲ್ಲ ಎಂದರೆ ಮಕ್ಕಳ ಮುಂದಿನ ಭವಿಷ್ಯ ಏನಾಗುತ್ತಿದೆ ಎಂಬುದು ಜನಪ್ರತಿನಿಧಿಗಳು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಕೇವಲ ತಮ್ಮ ಮಕ್ಕಳ ಭವಿಷ್ಯ ನೋಡಿದರೆ ಮಾತ್ರ ಸಾಲದು. ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯ ಕೂಡಾ ಅಷ್ಟೆ ಮಹತ್ವದ್ದಾಗಿರುತ್ತದೆ ಎಂದು ಜನಪ್ರತಿನಿಧಿಗಳು, ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಪಾಲಕರೊಬ್ಬರು ಹೇಳಿದ್ದಾರೆ.

ಸರಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಹೋಗೋಣವೆಂದರೆ, ಅಲ್ಲಿನ ಶುಲ್ಕ ಭರಿಸಲು ಪಾಲಕರುಶಕ್ತರಲ್ಲ. ಆದರೆ, ಸರಕಾರಿ ಶಾಲೆಯ ಕೊಠಡಿ ಪಾಳು ಬಿದ್ದಿದೆ. ಶಾಸಕ ಯಶವಂತರಾಯಗೌಡ ಪಾಟೀಲ ಅವರು ಮುತುವರ್ಜಿ ವಹಿಸಿ ಅಧಿಕಾರಿಗಳಿಗೆ ಸೂಚಿಸಿ ಕೊಠಡಿಗಳನ್ನು ಪರಿಶೀಲಿಸಿ, ದುರಸ್ತಿ ಮಾಡಿಸಿ ಮಕ್ಕಳಿಗೆ ಕಲಿಯಲು ಅವಕಾಶ ಕಲ್ಪಿಸುವ ಕೆಲಸ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಶಾಸಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಮಳೆ ಬಂದರೆ ಶಾಲಾ ಆವರಣದಲ್ಲಿ ನೀರು ನಿಲ್ಲುತ್ತದೆ. ಅದನ್ನು ಕೂಡಲೆ ಆವರಣದಿಂದ ಆಚೆ ಹೋಗಲು ಅವಕಾಶ ಮಾಡಿಕೊಟ್ಟು, ಮಕ್ಕಳಿಗೆ ಶಾಲೆಗೆ ಪ್ರವೇಶಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಶಾಲಾ ಕೊಠಡಿಗಳು ಶಿಥಿಲಗೊಂಡಿದ್ದು, ದುರಸ್ತಿಗಾಗಿ ಮಾತ್ರವಲ್ಲದೆ, ಎರಡು ಕೋಣೆಗಳು ಹೊಸದಾಗಿ ನಿರ್ಮಾಣ ಮಾಡಲು ಶಾಸಕರ ಗಮನಕ್ಕೆ ತರಲಾಗಿದೆ. ಶಾಲಾ ಕೊಠಡಿಯ ಮೇಲ್ಛಾವಣಿಯ ಸ್ಟೀಲ್ ಯಾವಾಗ ಬೇಕಾದರೂ ಕುಸಿದು ಬೀಳುವ ಸಾಧ್ಯತೆ ಇದೆ. ಹಾಗಾಗಿ, ಈ ಎರಡು ಕೊಠಡಿಗಳು ಹೊಸದಾಗಿ ನಿರ್ಮಾಣ ಮಾಡಲು ಶಾಸಕರಿಗೆ ಒತ್ತಾಯಿಸಿದ್ದೇವೆ. ಹೊಸದಾಗಿ ನಿರ್ಮಾಣ ಮಾಡಲು ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ. ಸುಮಾರು ಎಂಟು ವರ್ಷಗಳು ಕಳೆದಿವೆ. ಇನ್ನೂ ಅದಕ್ಕೆ ಸಂಬಂಧಿಸಿದ ಯಾವ ಕಾರ್ಯವು ನಡೆಯುತ್ತಿಲ್ಲ.

-ಧರ್ಮು ರಾಠೋಡ, ಕೆಈಬಿ ತಾಂಡಾದ ಮುಖಂಡರು ಇಂಡಿ

ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಸದ್ಯ ಆರು ಜನ ಶಿಕ್ಷಕರಿದ್ದಾರೆ. ಒಂದೇ ಕೊಠಡಿಯಲ್ಲಿ ಜಂಟಿಯಾಗಿ ಎರಡು ತರಗತಿಗಳು ನಡೆಸಲಾಗುತ್ತಿದೆ. ಎರಡು ಕೊಠಡಿಗಳ ಅವಶ್ಯಕತೆ ಇದೆ. ಆದಷ್ಟು ಬೇಗನೆ ಕೊಠಡಿ ನಿರ್ಮಿಸಿ ಕೊಟ್ಟರೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಕಾರ್ಯ ಶೀಘ್ರದಲ್ಲೇ ಮಾಡಿದಂತಾಗುತ್ತದೆ.

-ಚಿದಾನಂದ ಬಡಿಗೇರ, ಮುಖ್ಯೋಪಾಧ್ಯಾಯರು, ಕೆಈಬಿ ತಾಂಡಾ ಶಾಲೆ

ಸಮಸ್ಯೆ ನನ್ನ ಗಮನಕ್ಕೂ ಬಂದಿದೆ. ಈ ಕುರಿತು ಸಭೆಯಲ್ಲಿ ನಾನು ಚರ್ಚೆ ಮಾಡಿದ್ದೇನೆ. ಸಂಬಂಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಶೀಘ್ರದಲ್ಲೇ ದುರಸ್ತಿ ಕಾರ್ಯ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಕಲಿಯಲು ಅನುಕೂಲ ಮಾಡಿ ಕೊಡಲಾಗುವುದು.

-ಎಸ್.ಆರ್.ನಡಗಡ್ಡಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಇಂಡಿ

share
ಜಯಭೀಮ ಸೋ ಸಿಂಗೆ
ಜಯಭೀಮ ಸೋ ಸಿಂಗೆ
Next Story
X