Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆಹಾರದ ಗುಣಮಟ್ಟ ಕುಸಿತ: ತಗ್ಗಿದ...

ಆಹಾರದ ಗುಣಮಟ್ಟ ಕುಸಿತ: ತಗ್ಗಿದ ಕುಕನೂರಿನ ಇಂದಿರಾ ಕ್ಯಾಂಟೀನ್ ಜನಪ್ರಿಯತೆ

ಭೀಮಾಶಂಕರ ಪಾಣೇಗಾಂವಭೀಮಾಶಂಕರ ಪಾಣೇಗಾಂವ10 March 2026 3:05 PM IST
share
ಆಹಾರದ ಗುಣಮಟ್ಟ ಕುಸಿತ: ತಗ್ಗಿದ ಕುಕನೂರಿನ ಇಂದಿರಾ ಕ್ಯಾಂಟೀನ್ ಜನಪ್ರಿಯತೆ

ಕುಕನೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ (ವಾರ್ಡ್ ನಂ.18) ಕಾರ್ಯನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಹೊಸ ಮೆನು ಜಾರಿಯಾಗದೇ ಇರುವುದರಿಂದ ಹಾಗೂ ಆಹಾರದ ಗುಣಮಟ್ಟ-ರುಚಿ ಕುಸಿತದ ಆರೋಪಗಳ ಹಿನ್ನೆಲೆಯಲ್ಲಿ ಜನಸಂದಣಿ ಗಣನೀಯವಾಗಿ ಕಡಿಮೆಯಾಗಿದೆ. ಆರಂಭದ ದಿನಗಳಲ್ಲಿ ಉತ್ತಮ ಸ್ಪಂದನೆ ಪಡೆದಿದ್ದ ಈ ಕೇಂದ್ರದಲ್ಲಿ ಈಗ ಕಡಿಮೆ ಜನ ಬರುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಡಜನತೆ, ಕೂಲಿ-ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಒದಗಿಸುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿ ಇಂದಿರಾ ಕ್ಯಾಂಟೀನ್ ಆರಂಭದಲ್ಲಿ ಮೆಚ್ಚುಗೆ ಪಡೆದಿತ್ತು. ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರ ಪ್ರಯತ್ನದಿಂದ ಮೇ 27,2025ರಂದು ಸ್ಥಾಪಿತವಾದ ಈ ಕೇಂದ್ರವು ಹಸಿದ ಹೊಟ್ಟೆಗೆ ಆಶ್ರಯವಾಗಿತ್ತು.

ಆದರೆ ನಿರ್ವಹಣಾ ಲೋಪದಿಂದ ಯೋಜನೆಯ ಉದ್ದೇಶ ನಿಧಾನವಾಗಿ ಹಿನ್ನಡೆಯಾಗುತ್ತಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ವಾರದ ಏಳು ದಿನ ವಿಭಿನ್ನ ಉಪಾಹಾರ ಮತ್ತು ಊಟ ನೀಡುವಂತೆ ಹೊಸ ಮೆನು ಸಿದ್ಧಪಡಿಸಿ ಚಾರ್ಟ್ ಅಳವಡಿಸಲಾಗಿತ್ತು. ಬೆಳಗ್ಗೆ ಇಡ್ಲಿ-ಉಪ್ಮಾ, ಮಧ್ಯಾಹ್ನ ಮತ್ತು ರಾತ್ರಿ ಮುದ್ದೆ ಅಥವಾ ಚಪಾತಿ ಸೇರಿದಂತೆ ವಿವಿಧ ಪದಾರ್ಥಗಳನ್ನು ನೀಡುವುದಾಗಿ ಪ್ರಕಟಿಸಲಾಗಿತ್ತು. ಆದರೆ ಪ್ರಾಯೋಗಿಕವಾಗಿ ಹಳೆಯ ಪದ್ಧತಿಯೇ ಮುಂದುವರಿದಿದ್ದು, ‘‘ಚಾರ್ಟ್‌ನಲ್ಲಿ ಹೊಸ ಮೆನು ಇದ್ದರೂ ಅಡುಗೆಮನೆಯಲ್ಲಿ ಅದು ಜಾರಿಯಾಗುತ್ತಿಲ್ಲ’’ ಎಂಬುದು ಸ್ಥಳೀಯರ ಆರೋಪ.

ಹೊಸ ಮೆನು ಜಾರಿಯಾಗದಿರುವುದು, ಆಹಾರದ ಗುಣಮಟ್ಟ-ರುಚಿ ಕುಸಿತ, ಸ್ವಚ್ಛತೆಯ ಕೊರತೆ, ಆರ್‌ಒ ಘಟಕದ ದುರಸ್ತಿ ವಿಳಂಬ, ಸಿಸಿ ಕ್ಯಾಮೆರಾ ಕಾರ್ಯನಿರತವಿಲ್ಲದಿರುವುದು ಹಾಗೂ ಟೋಕನ್ ವಿತರಣಾ ವ್ಯವಸ್ಥೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವು ಸಮಸ್ಯೆಗಳು ಮುಂದುವರಿದಿವೆ. ತರಕಾರಿ ಮತ್ತು ದಿನಸಿ ಸಾಮಗ್ರಿಗಳ ಕೊರತೆ, ಹೆಗ್ಗಣಗಳ ಕಾಟ ಹಾಗೂ ನೀರಿನ ಸೋರಿಕೆ ಸಮಸ್ಯೆಗಳು ಆಹಾರ ನೈರ್ಮಲ್ಯ ಬಗ್ಗೆ ಆತಂಕ ಹೆಚ್ಚಿಸಿವೆ ಎಂದು ಸ್ಥಳೀಯರು ದೂರಿದ್ದಾರೆ.

ಯೋಜನೆಯ ಮೂಲ ಉದ್ದೇಶ ಸಾರ್ಥಕವಾಗಬೇಕಾದರೆ ತಕ್ಷಣವೇ ಹೊಸ ಮೆನು ಅನುಷ್ಠಾನ, ಆಹಾರದ ಗುಣಮಟ್ಟ ಸುಧಾರಣೆ ಹಾಗೂ ಕಟ್ಟುನಿಟ್ಟಿನ ಮೇಲ್ವಿಚಾರಣೆ ಅಗತ್ಯವೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಮಸ್ಯೆಗಳ ಬಗ್ಗೆ ಗಮನಕ್ಕೆ ಬಂದಿದೆ. ಈ ಕುರಿತು ಸಂಬಂಧಿಸಿದ ಗುತ್ತಿಗೆದಾರರೊಂದಿಗೆ ಮಾತನಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ.ಗುಣಮಟ್ಟ ಮತ್ತು ಸ್ವಚ್ಛತೆಯಲ್ಲಿ ಯಾವುದೇ ತಾತ್ಸಾರ ನಡೆಯದಂತೆ ನೋಡಿಕೊಳ್ಳಲಾಗುವುದು.

-ನಾಗೇಶ, ಮುಖ್ಯಾಧಿಕಾರಿ, ಪ.ಪಂ

ಆರಂಭದಲ್ಲಿ ಊಟದ ಗುಣಮಟ್ಟ ಚೆನ್ನಾಗಿತ್ತು. ಪ್ರತಿದಿನವೂ ಜನಸಂದಣಿ ಇರುತ್ತಿತ್ತು. ಈಗ ಮೆನು ಸರಿಯಾಗಿ ಜಾರಿಯಾಗುತ್ತಿಲ್ಲ, ರುಚಿಯೂ ಕಳೆದುಕೊಳ್ಳುತ್ತಿದೆ.

-ಶಿವಪ್ಪ ಗೋರ್ಲೆಕೊಪ್ಪ, ರೈತ

ಕಡಿಮೆ ದರದಲ್ಲಿ ಸಿಗುವುದರಿಂದ ಇಲ್ಲಿ ಬರುತ್ತಿದ್ದೆವು. ಆದರೆ ಗುಣಮಟ್ಟ ಕುಸಿದಿದೆ. ಹೊಸ ಮೆನು ಜಾರಿಯಾದರೆ ಉತ್ತಮ.

-ಲಕ್ಷ್ಮಿ, ವಿದ್ಯಾರ್ಥಿನಿ

ಕೆಲ ದಿನಗಳಲ್ಲಿ ಊಟ ಸಮರ್ಪಕವಾಗಿಲ್ಲ. ಸ್ವಚ್ಛತೆ ಮೇಲೂ ಹೆಚ್ಚಿನ ಗಮನ ಕೊಡಬೇಕು.

-ಹನುಮಂತಪ್ಪ , ಕೂಲಿ ಕಾರ್ಮಿಕ

share
ಭೀಮಾಶಂಕರ ಪಾಣೇಗಾಂವ
ಭೀಮಾಶಂಕರ ಪಾಣೇಗಾಂವ
Next Story
X