Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹನೂರು ಪಟ್ಟಣ ಪಂಚಾಯತ್‌ನಲ್ಲಿ ಅಮಾನವೀಯ...

ಹನೂರು ಪಟ್ಟಣ ಪಂಚಾಯತ್‌ನಲ್ಲಿ ಅಮಾನವೀಯ ಘಟನೆ; ಪೌರಕಾರ್ಮಿಕರಿಂದಲೇ ಮಲ ಹೊರಿಸಿದ‌ ಅಧಿಕಾರಿಗಳು

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್16 April 2024 9:17 AM IST
share
ಹನೂರು ಪಟ್ಟಣ ಪಂಚಾಯತ್‌ನಲ್ಲಿ ಅಮಾನವೀಯ ಘಟನೆ; ಪೌರಕಾರ್ಮಿಕರಿಂದಲೇ ಮಲ ಹೊರಿಸಿದ‌ ಅಧಿಕಾರಿಗಳು

ಚಾಮರಾಜನಗರ, ಎ.15: ಮಲ ಹೊರುವ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಿ ಕ್ರಮಕ್ಕೆ ಮುಂದಾಗಬೇಕಾದ ಸ್ಥಳೀಯ ಸಂಸ್ಥೆ ಪಟ್ಟಣ ಪಂಚಾಯತ್ ಅಧಿಕಾರಿಗಳೇ ಪೌರಕಾರ್ಮಿಕರಿಂದ ಮಲ ಹೊರಿಸುವ ಮೂಲಕ ಅಮಾನವೀಯ ಕೃತ್ಯ ಎಸಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣ ಪಂಚಾಯತ್ ಕಚೇರಿ ಸಮೀಪದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದ ಬೃಹತ್ ಗುಂಡಿಯಲ್ಲಿ ತುಂಬಿದ ಮಲವನ್ನು ಗುರುವಾರ ಮುಂಜಾನೆ ಅವೈಜ್ಞಾನಿಕವಾಗಿ ಪಟ್ಟಣ ಪಂಚಾಯತ್ ಜೆಸಿಬಿ ಯಂತ್ರದಿಂದ ಪಟ್ಟಣದಲ್ಲಿನ ಕಸ ಸಾಗಿಸುವ ಟ್ರ್ಯಾಕ್ಟರ್‌ಗೆ

ತುಂಬಿ ಸಾಗಿಸಲಾಗುತ್ತಿತ್ತು. ಆಗ ಬಹುತೇಕ ಪಾಲು ಮಲ ಪಟ್ಟಣ ಪಂಚಾಯತ್‌ಗೆ ಸೇರಿದ ವಾಣಿಜ್ಯ ಸಂಕೀರ್ಣದ ಅಂಗಡಿ ಮಳಿಗೆಗಳ ಎದುರು ಹಾಗೂ ರಸ್ತೆಯುದ್ದಕ್ಕೂ ಚದುರಿ ಬಿದ್ದಿತ್ತು. ಇದರಿಂದಾಗಿ ಇಡೀ ಪರಿಸರದಲ್ಲಿ ಕೆಟ್ಟ ವಾಸನೆ ಹಬ್ಬಿದ್ದು, ಪ್ರಯಾಣಿಕರು,ಜನಸಾಮಾನ್ಯರು, ಸ್ಥಳೀಯ ಪರಿಸರದ ನಿವಾಸಿಗಳು ಮೂಗುಮುಚ್ಚಿಕೊಂಡೇ ಸಮಯ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆನಂತರ ಪಟ್ಟಣ ಪಂಚಾಯತ್ ಅಧಿಕಾರಿಗಳು, ಹನೂರು ಪಟ್ಟಣ ಪಂಚಾಯತ್‌ನ ಪೌರ ಕಾರ್ಮಿಕರಿಂದ ರಸ್ತೆಯುದ್ದಕ್ಕೂ ರಾಶಿ ರಾಶಿಯಾಗಿ ಬಿದ್ದಿದ್ದ ಮಲವನ್ನು ಪ್ಲಾಸ್ಟಿಕ್ ಬುಟ್ಟಿಗೆ ತುಂಬಿ ತಲೆ ಮೇಲೆ ಹೊತ್ತು ಪಟ್ಟಣದ ಕಸ ಸಾಗಿಸುವ ಟೆಂಪೋದಲ್ಲಿ ತುಂಬಿಸಿದ್ದಾರೆ.

ಈ ಅಮಾನವೀಯ ದೃಶ್ಯವನ್ನು ಬಸ್ ನಿಲ್ದಾಣದಲ್ಲಿದ್ದ ಖಾಸಗಿ ವ್ಯಕ್ತಿಗಳು ಸೆರೆಹಿಡಿದು ವೀಡಿಯೊವನ್ನು ಮಾಧ್ಯಮಗಳಿಗೆ ನೀಡಿದ್ದಾರೆ. ಅಲ್ಲದೆ ಘಟನೆಯ ದೃಶ್ಯಾವಳಿಗಳು ಪ.ಪಂ. ಕಟ್ಟಡದ ಮುಖ್ಯ ದ್ವಾರದಲ್ಲೇ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲೂ ಸೆರೆಯಾಗಿದೆ.

ಹನೂರು ಪಟ್ಟಣ ಪಂಚಾಯತ್‌ನಲ್ಲಿ ಮಲ ಸಾಗಿಸಲೆಂದೇ ಸೈಕಿಂಗ್ ಯಂತ್ರವಿದೆಯಾದರೂ ಅದನ್ನು ಬಳಸದೆ ಪಂಚಾಯತ್ ಅಧಿಕಾರಿಗಳು ಜೆಸಿಬಿ ಹಾಗೂ ಕಸ ಸಾಗಣೆ ಟ್ರ್ಯಾಕ್ಟರ್ ಮತ್ತು ಟೆಂಪೋವನ್ನು ಬಳಸಿಕೊಳ್ಳುವುದರ ಜತೆಗೆ ಪೌರಕಾರ್ಮಿಕರನ್ನು ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದೂ ಸಾಲದೆಂಬಂತೆ ಸಾರ್ವಜನಿಕ ಶೌಚಾಲಯದ ಶೌಚ ಗುಂಡಿಯಿಂದ ಹೊರೆತೆಗೆಯಲಾದ ಮಲವನ್ನು ತೆರೆದ ವಾಹನಗಳಲ್ಲಿ ತುಂಬಿಕೊಂಡು, ಸಾಗಿಸಲಾಗಿತ್ತು. ಈ ಸಂದರ್ಭ ಬಹುಪಾಲು ಮಲವನ್ನು ಸಾರ್ವಜನಿಕ ಪ್ರದೇಶದ ಹಾದಿಯುದ್ದಕ್ಕೂ ಎಲ್ಲೆಂದರಲ್ಲಿ ಚೆಲ್ಲಿಕೊಂಡು ಹೋಗುವುದರ ಜತೆಗೆ ಬಯಲು ಪ್ರದೇಶದಲ್ಲೇ ಸುರಿಯಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡದೆ ಅನೈರ್ಮಲ್ಯಕ್ಕೆ ಮೂಲ ಕಾರಣ ರಾಗುವ ಮೂಲಕ ಸಾಂಕ್ರಾಮಿಕ ರೋಗ ರುಜಿನಗಳಿಗೆ ನಾಂದಿ ಹಾಡಿದ ಹನೂರು ಪ. ಪಂ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಕಿಯವರು ನಾಗರಿಕರ ಜೀವದ ಜತೆ ಚೆಲ್ಲಾಟ ಆಡಿದ್ದಾರೆ ಎಂದು ಸ್ಥಳೀಯರ ಆರೋಪವಾಗಿದೆ.

ಕಾರ್ಮಿಕರ ದಿನಾಚರಣೆಯಂದು ಪೌರಕಾರ್ಮಿಕರನ್ನು ಸನ್ಮಾನಿಸುವಂತಹ ಬೂಟಾಟಿಕೆ ತೋರುವ ಪಂಚಾಯತ್ ಅಧಿಕಾರಿಗಳು ವಾಸ್ತವದಲ್ಲಿ ಅವರಿಂದಲೇ ಮಲ ಹೊರಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಈ ಅಮಾನುಷ ಕೃತ್ಯವೆಸಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಮುಂದೆಂದೂ ಮಲ ಹೊರುವ ಪದ್ಧತಿ ಮರುಕಳಿಸದಂತೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಪ್ರಬುದ್ಧ ನಾಗರಿಕರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X