Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಲಬುರಗಿ : ಕಬ್ಬಿನ ಬೆಲೆ ವಿಚಾರದಲ್ಲಿ...

ಕಲಬುರಗಿ : ಕಬ್ಬಿನ ಬೆಲೆ ವಿಚಾರದಲ್ಲಿ ರೈತರಲ್ಲಿ ಗೊಂದಲ

► 3,450 ರೂ.ಗಳಿಗೆ ಕೆಲವರ ಒಪ್ಪಿಗೆ, 3,600 ರೂ.ಗಳಿಗೆ ಮತ್ತೊಂದು ಬಣದ ಪಟ್ಟು ! ► ನಾಲ್ಕು ಸುತ್ತಿನ ಸಭೆ ಬಳಿಕವೂ ಮೂಡದ ಒಮ್ಮತ; ಕಬ್ಬು ನುರಿಸಲು ಅನುಮತಿಗಾಗಿ ರೈತರ ಆಗ್ರಹ

ಸಾಜಿದ್‌ ಅಲಿಸಾಜಿದ್‌ ಅಲಿ15 Nov 2026 8:17 AM IST
share
ಕಲಬುರಗಿ : ಕಬ್ಬಿನ ಬೆಲೆ ವಿಚಾರದಲ್ಲಿ ರೈತರಲ್ಲಿ ಗೊಂದಲ

ಕಲಬುರಗಿ : ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಬೆಲೆ ನಿಗದಿ ರೂಪದಲ್ಲಿ ಪರಿಹಾರ ಸಿಕ್ಕಿತೇ ಎಂಬ ಪ್ರಶ್ನೆ ಎದುರಾಗಿದ್ದು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆದ 4ನೇ ಸುತ್ತಿನ ಸಭೆಯಲ್ಲಿ ಪ್ರತಿ ಟನ್‌ಗೆ 3,450 ರೂ. ದರ ನಿಗದಿಪಡಿಸಲು ಸಕ್ಕರೆ ಕಾರ್ಖಾನೆಗಳು ಒಪ್ಪಿಗೆ ಸೂಚಿಸಿದ್ದರೂ, ರೈತ ಸಂಘಟನೆಗಳ ಮತ್ತೊಂದು ಬಣ 3,600 ದರಕ್ಕೆ ಪಟ್ಟು ಹಿಡಿದಿರುವುದು ಕಬ್ಬು ಬೆಳೆಗಾರರಲ್ಲಿ ಗೊಂದಲ ಮೂಡಿಸಿದೆ.

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಹಾಗೂ ಕಬ್ಬು ನುರಿಸಲು ತಕ್ಷಣ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು, ರೈತ ಸಂಘಟನೆಗಳ ಮುಖಂಡರು ಹಾಗೂ ರೈತರೊಂದಿಗೆ ನಡೆದ ಸಭೆಯ ಬಳಿಕ ಪ್ರತಿ ಟನ್ ಕಬ್ಬಿಗೆ 3,450 ನೀಡಲು ಜಿಲ್ಲೆಯ ಐದೂ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಸಮ್ಮತಿಸಿವೆ ಎಂದು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಮಾರುತಿ ಬ್ಯಾಕೋಡ್ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 3,200 ರೂ. ಹಾಗೂ ಎರಡನೇ ಕಂತಿನಲ್ಲಿ 200 ರೂ. ಸೇರಿ ಒಟ್ಟು 3,400 ರೂ. ನೀಡುವ ಪ್ರಸ್ತಾವನೆ ಮುಂದಿಟ್ಟಿದ್ದ ಕಾರ್ಖಾನೆಗಳು, ಅನಂತರ 3,450ಕ್ಕೆ ಒಪ್ಪಿಗೆ ಸೂಚಿಸಿದ್ದವು. ಸಕ್ಕರೆ ಬೆಲೆ ಪ್ರತಿ ಕೆ.ಜಿ.ಗೆ 50 ರೂ. ದಾಟಿದರೆ ಲಾಭಾಂಶ ಹಂಚಿಕೆಯಡಿ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 150 ರೂ. ನೀಡುವ ಬಗ್ಗೆಯೂ ಪ್ರಸ್ತಾಪಿಸಲಾಗಿತ್ತು.

ಆದರೆ, ಈ ಒಪ್ಪಂದಕ್ಕೆ ಎಲ್ಲ ರೈತ ಮುಖಂಡರ ಸಮ್ಮತಿ ದೊರೆತಿಲ್ಲ. ಬೆಳಗಾವಿ ಮಾದರಿಯಲ್ಲಿ ಲಾಭಾಂಶ ಹಂಚಿಕೆ ಮಾಡಬೇಕು ಅಥವಾ ಕಬ್ಬಿಗೆ 3,600 ರೂ. ದರ ನಿಗದಿಪಡಿಸಬೇಕು ಎಂಬ ಬೇಡಿಕೆ ಮುಂದಿಟ್ಟಿರುವ ರೈತ ಮುಖಂಡರು ತಮ್ಮ ಹೋರಾಟ ಮುಂದುವರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರಾದ ಚನ್ನಪ್ಪ ಪೂಜಾರಿ ಮತ್ತು ಶಶಿಕಾಂತ ಗುರೂಜಿ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಚೌಡಾಪುರ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ರೈತರು ಟ್ರಾಕ್ಟರ್, ಕ್ರೂಸರ್ ಹಾಗೂ ಬೈಕ್‌ಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಧರಣಿ ಮುಂದುವರಿಸಿದರು. ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ತಮ್ಮ ಬೇಡಿಕೆ ಆಲಿಸಬೇಕು ಎಂದು ಪಟ್ಟು ಹಿಡಿದರು.

ಒಂದೆಡೆ 3,450 ದರಕ್ಕೆ ಒಪ್ಪಿಗೆ ಸೂಚಿಸಿದ ರೈತ ಮುಖಂಡರು, ಮತ್ತೊಂದೆಡೆ 3,600 ರೂ.ಗಳಿಗಿಂತ ಕಡಿಮೆ ದರಕ್ಕೆ ಒಪ್ಪುವುದಿಲ್ಲ ಎನ್ನುವವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿರುವುದು ಕಬ್ಬು ಬೆಳೆಗಾರರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಜಿಲ್ಲಾಡಳಿತದ ಸಭೆಯಲ್ಲಿ ದರ ನಿಗದಿಯಾಗಿದೆ ಎಂಬ ಮಾಹಿತಿ ಹೊರಬಿದ್ದಿದ್ದರೂ, ಪ್ರತಿಭಟನೆ ಮುಂದುವರಿದಿರುವುದು ರೈತರಲ್ಲಿ ಒಮ್ಮತ ಮೂಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಕಬ್ಬು ಕಟಾವು ಆರಂಭಿಸಲು ಹಾಗೂ ಕಾರ್ಖಾನೆಗಳಲ್ಲಿ ನುರಿಸುವ ಪ್ರಕ್ರಿಯೆಗೆ ಅನುಮತಿ ನೀಡುವ ವಿಚಾರವೂ ಇನ್ನೂ ರೈತರ ಪ್ರಮುಖ ಬೇಡಿಕೆಯಾಗಿದೆ. ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಒಮ್ಮತದ ತೀರ್ಮಾನಕ್ಕೆ ಬರುವ ಅಗತ್ಯವಿದೆ.

ಒಟ್ಟಾರೆ, ಕಬ್ಬಿನ ದರ 3,450 ರೂ.ಗಳಿಗೆ ನಿಗದಿಯಾಗಿದೆ ಎಂಬ ಆಡಳಿತಾತ್ಮಕ ಘೋಷಣೆ ಮತ್ತು 3,600 ರೂ.ಗಳಿಗೆ ಪಟ್ಟು ಹಿಡಿದಿರುವ ರೈತರ ಹೋರಾಟದ ನಡುವೆ ನಿಜವಾದ ಒಪ್ಪಂದ ಯಾವುದು ಎಂಬ ಗೊಂದಲ ಮುಂದುವರಿದಿದೆ. ಈ ಭಿನ್ನಾಭಿಪ್ರಾಯಕ್ಕೆ ಜಿಲ್ಲಾಡಳಿತ ಯಾವ ರೀತಿ ತೆರೆ ಎಳೆಯಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

Tags

sugarcanefarmersKalaburagi
share
ಸಾಜಿದ್‌ ಅಲಿ
ಸಾಜಿದ್‌ ಅಲಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

Next Story
X