Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನುಡಿ ಜಾತ್ರೆಗೆ ಮದುವಣಗಿತ್ತಿಯಂತೆ...

ನುಡಿ ಜಾತ್ರೆಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡ ಕನಕಗಿರಿ

ಕನಕಗಿರಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್7 Nov 2026 9:12 AM IST
share
ನುಡಿ ಜಾತ್ರೆಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡ ಕನಕಗಿರಿ

ಕನಕಗಿರಿ : ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕು ದ್ವಿತೀಯ ಕನ್ಮಡ ಸಾಹಿತ್ಯ ಸಮ್ಮೇಳನ ನ.7ರಂದು ನಡೆಯಲಿದ್ದು, ಪಟ್ಟಣವು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಪಟ್ಟಣದ ಎಲ್ಲಾ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದೆ. ವೃತ್ತಗಳು ಸೇರಿದಂತೆ ಎಲ್ಲೆಡೆ ಕನ್ನಡದ ಬಾವುಟ ಕಟ್ಟಲಾಗಿದೆ. ಸಮ್ಮೇಳನದ ಅಂಗವಾಗಿ ಮುಖ್ಯವೇದಿಕೆಗೆ ಅನುಭಾವಿ ಚಿದಾನಂದ ಅವಧೂತರ ಹಾಗೂ ಮಹಾಮಂಟಪಕ್ಕೆ ರಾಜಾ ಮಾತೆ ರಾಣಿ ಗೌರಮ್ಮ ಅವರ ಹೆಸರಿಡಲಾಗಿದೆ.

ಗುಜ್ಜಲ ವಂಶದ ರಾಜಾ ಉಡಚಪ್ಪ ನಾಯಕ, ಸ್ವಾತಂತ್ರ್ಯ ಹಾಗೂ ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯ ಹೋರಾಟಗಾರರಾದ ಜಯತೀರ್ಥ ರಾಜಪುರೋಹಿತರು, ನವಲಿ ತಾಂಡದ ಜೇಮ್ಮಾ ನಾಯಕ್, ವೆಂಕೋಬಾಚಾರ್ಯ ಜೋಷಿ, ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದಿ.ಮಹಾಂತಯ್ಯ ಹಿರೇಮಠ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಭಾಷಾಸಾಬ, ನಾರಾಯಣರೆಡ್ಡಿ ಶಿವನಗುಂಡಿ, ರಾಮಚಂದ್ರಪ್ಪ ತುಪ್ಪದ, ಸುಳೇಕಲ್ ನ ದಿ.ಸಾವಿತ್ರಮ್ಮ ಭುವನೇಶ್ವರಪ್ಪ ತಾತನವರ ಹೆಸರಿನಲ್ಲಿ ನಿರ್ಮಿಸಿದ ಒಟ್ಟು ಒಂಭತ್ತು ಮಹಾದ್ವಾರಗಳು ಆಕರ್ಷಿಸುತ್ತಿವೆ.

ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ನಿರ್ಮಾಣ ಮಾಡಿರುವ ವೇದಿಕೆಯ ಮುಂಭಾಗದಲ್ಲಿ ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಪರಿಷತ್‌ನ ಧ್ವಜಾರೋಹಣ ಹಾಗೂ ಕಸಾಪ ತಾಲೂಕು ಅಧ್ಯಕ್ಷ ಮೆಹಬೂಬ ಹುಸೇನ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ.

ಕಲ್ಮಠದ ಮುಂದೆ ಸಮ್ಮೇಳನದ ಸರ್ವಾಧ್ಯಕ್ಷ ವೆಂಕಟೇಶ ಕೆ.ಜನಾದ್ರಿ ಅವರ ಮೆರವಣಿಗೆ ನಡೆಯಲಿದ್ದು, ಪಪಂ ಅಧ್ಯಕ್ಷೆ ತನುಶ್ರೀ ಟಿಜೆ ರಾಮಚಂದ್ರ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10:30 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ನೆರವೇರಲಿದ್ದು ಕಲ್ಮಠದ ಚನ್ನಮಲ್ಲಸ್ವಾಮಿ, ಸುಳೇಕಲ್ ಬೃಹನ್ಮಠದ ಭುವನೇಶ್ವರಯ್ಯ ತಾತ ಸಾನಿಧ್ಯ ವಹಿಸಲಿದ್ದಾರೆ.

‘ಕನಕಗಿರಿ ಪರಂಪರೆ ಮತ್ತು ಪ್ರಗತಿ’ ಕವಿಗೋಷ್ಠಿ, ಸಮ್ಮೇಳನಾಧ್ಯಕ್ಷರ ಸಂವಾದ, ಬಹಿರಂಗ ಅಧಿವೇಶನ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ, ನೀಟ್ ಪರೀಕ್ಷೆ ಹಾಗೂ , ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಅಂಕ ಪಡೆದವರು ಹಾಗೂ ಪಿಯುಸಿಯಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಸಂಜೆ 7 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಅರಳಹಳ್ಳಿಯ ಗವಿಸಿದ್ದಯ್ಯ ತಾತ ಸಾನಿಧ್ಯ ವಹಿಸಲಿದ್ದಾರೆ. ಕೊಪ್ಪಳ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಸ್.ವಿ.ಡಾಣಿ ಸಮಾರೋಪ ಭಾಷಣ ಮಾಡಲಿದ್ದಾರೆ. ಅಂತರ್‌ರಾಷ್ಟ್ರೀಯ ಗಾಯಕ ಜೀವನಸಾಬ ಬಿನ್ನಾಳ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಉದರ್ ಸಜ್ಜಕ್, ಬದನೆಕಾಯಿ ಪಲ್ಲೆ :

ಸಾಹಿತ್ಯ ಪರಿಷತ್‌ನ ವತಿಯಿಂದ ಕನಕಾಚಲಪತಿ ದೇವಸ್ಥಾನ ಪಕ್ಕದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಉದರ್ ಸಜ್ಜಕ್,ಬದನೆಕಾಯಿ ಪಲ್ಲೆ, ರೊಟ್ಟಿ, ಹೆಸರು ಕಾಳು, ಚಿತ್ರಾನ್ನ, ಅನ್ನ -ಸಾಂಬಾರು, ಮಜ್ಜಿಗೆ, ಪುಡಿ, ಚಟ್ನಿ ವ್ಯವಸ್ಥೆ ಮಾಡಲಾಗಿದೆ ಎಂದು ಕೋಶಾಧ್ಯಕ್ಷ ರವಿ ಬಲಿಜ, ಗೌರವ ಕಾರ್ಯದರ್ಶಿ ಕನಕರೆಡ್ಡಿ ಕೆರಿ, ತಿಪ್ಪಣ್ಣ ಮಡಿವಾಳ ಮಾಹಿತಿ ನೀಡಿದ್ದಾರೆ.

ಸಮ್ಮೇಳನದಲ್ಲಿ ಭರತ ನಾಟ್ಯ, ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ, ಜನಪದ ಗೀತೆ, ಸುಗ್ಗಿ ಹಾಡು, ಸಂಗೀತ, ತಬಲಾ ವಾದನ ಮಿಮಿಕ್ರಿ ಸೇರಿದಂತೆ ವಿವಿಧ ಜಾನಪದ ಕಾರ್ಯಕ್ರಮದ ಜತೆಗೆ ಗದಗ ಜಿಲ್ಲೆಯ ಕೊತಬಾಳದ ಅರುಣೋದಯ ಕಲಾ ತಂಡದವರಿಂದ ಜನಪದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ನ.7ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶುಕ್ರವಾರ ಬೈಕ್ ಜಾಗೃತಿ ಜಾಥಾ ನಡೆಯಿತು. ಜಾಗೃತಿ ಜಾಥಾಕ್ಕೆ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಹುಸೇನ್ ದಾಸ್ ಚಾಲನೆ ನೀಡಿದರು.

ಕಸಾಪ ತಾಲೂಕು ಅಧ್ಯಕ್ಷ ಮೆಹಬೂಬ ಹುಸೇನ ಮಾತನಾಡಿದರು. ಕಸಾಪ ಕಚೇರಿಯಿಂದ ಆರಂಭವಾದ ಜಾಥಾ ಪಟ್ಟಣದ ಎಪಿಎಂಸಿ, ವಾಲ್ಮೀಕಿ ವೃತ್ತ, ನವಲಿ ರಸ್ತೆ, ಇಂದಿರಾನಗರ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಸೊಸೈಟಿ, ಕಲ್ಮಠ ರಸ್ತೆ ಮೂಲಕ ಸಾಗಿತು.

ಕನ್ನಡ ಬಾವುಟ ಹಿಡಿದು, ಕನ್ನಡ ಪರ ಘೋಷಣೆಗಳನ್ನು ಕೂಗುತ್ತಾ ಸಾಗಿದ ಸಾಹಿತ್ಯಾಸಕ್ತರು ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವಂತೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವಂತೆ ಜಾಗೃತಿ ಮೂಡಿಸಿದರು. ಪ್ರಮುಖರಾದ ಲಿಂಗಪ್ಪ ಪೂಜಾರ್, ರವಿ ಪಾತ್ರದ್, ತಿಪ್ಪಣ್ಣ ಮಡಿವಾಳ, ಮುಹಮ್ಮದ್ ಶರೀಫ್, ಶಿವಕುಮಾರ್ ಸಜ್ಜನ್, ಚಂದ್ರು ಚೋಳಿನ್, ದೇಶಿಕ್ ಆಚಾರ್, ಗಂಗಾಧರ ಗಂಗಾಮತ, ಅಜ್ಮೀರ್ ಎಲಿಗಾರ್, ಮಹಾಂತೇಶ ಕೊಡ್ಲಿ, ವಿನೋದ ಮರಾಠಿ, ಕಂಠಿ ಮಡಿವಾಳ, ವಿಶ್ವನಾಥ ಕೋರಿಶೆಟ್ಟರ್, ಪರಸಪ್ಪ ಹೊರಪೇಟೆ, ಕನಕಪ್ಪ ದಂಡೀನ್, ಪ್ರವೀಣ್ ಕೋರಿಶೆಟ್ರು ಉಪಸ್ಥಿತರಿದ್ದರು.

Tags

'Nudi Jathre'Kanakagiri
share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್
Next Story
X