Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬರಡು ಭೂಮಿಯಾಗಿದ್ದ ಕರಾಡದೊಡ್ಡಿಯಲ್ಲೀಗ...

ಬರಡು ಭೂಮಿಯಾಗಿದ್ದ ಕರಾಡದೊಡ್ಡಿಯಲ್ಲೀಗ ಹಸಿರ ವೈಭವ

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್24 Nov 2025 11:49 AM IST
share
ಬರಡು ಭೂಮಿಯಾಗಿದ್ದ ಕರಾಡದೊಡ್ಡಿಯಲ್ಲೀಗ ಹಸಿರ ವೈಭವ

ವಿಜಯಪುರ: ಎತ್ತ ನೋಡಿದರೂ ಹಚ್ಚ ಹಸುರು ಸಸ್ಯ ಶ್ಯಾಮಲೆ. ಹಕ್ಕಿಗಳ ಚಿಲಿಪಿಲಿ ಇಂಚರ. ಈ ವೈಭವಕ್ಕೆ ಮೆರುಗು ನೀಡುವ ಭೂತನಾಳ ಕೆರೆ. ಕೆಲವೇ ವರ್ಷಗಳ ಹಿಂದೆ ಬರಡು ಭೂಮಿಯಾಗಿದ್ದ ಕರಾಡದೊಡ್ಡಿಯಲ್ಲೀಗ ದೊಡ್ಡ ಅರಣ್ಯವೇ ತಲೆ ಎತ್ತಿ ನಿಂತಿದೆ. 2017ರವರೆಗೂ ಕರಾಡ ದೊಡ್ಡಿ ಬರಡು ಪ್ರದೇಶವಾಗಿತ್ತು.

ನಗರದಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಕರಾಡದೊಡ್ಡಿ 540 ಎಕರೆ ಭೂಮಿಯಲ್ಲಿ ಹರಡಿಕೊಂಡಿದೆ, ಇದು ವಿಜಯಪುರ ನಗರಕ್ಕೆ ಹತ್ತಿರವಿರುವ ಕಂದಾಯ ಇಲಾಖೆಗೆ ಸೇರಿದ ಅತಿದೊಡ್ಡ ಭೂಪ್ರದೇಶವಾಗಿದೆ. ಇಲ್ಲಿ ಅರಣ್ಯವನ್ನು ರೂಪಿಸುವ ದೊಡ್ಡ ಸಂಕಲ್ಪ ಮಾಡಿದ್ದು ಸಚಿವ ಡಾ.ಎಂ.ಬಿ.ಪಾಟೀಲ್ ಅವರು.

ಕೆರೆಯೂ ಹತ್ತಿರವಿದೆ, ನೀರಿನ ಕೊರತೆಯಾಗುವುದಿಲ್ಲ ಎಂಬ ಕಾರಣಕ್ಕೆ ಈ ಪ್ರದೇಶವನ್ನು ಅವರು ಆಯ್ಕೆ ಮಾಡಿಕೊಂಡರು. ಅರಣ್ಯ ಇಲಾಖೆಗೆ ಸಸಿ ನೆಡುವ ಕಾಮಗಾರಿ ಕೈಗೊಳ್ಳಲು ಜಮೀನು ಹಸ್ತಾಂತರಿಸುವಂತೆ ಜಿಲ್ಲಾಡಳಿತವನ್ನು ಮನವೊಲಿಸಿದರು.

ರಾಷ್ಟ್ರೀಯ ಸರಾಸರಿ 33 ಪ್ರತಿಶತಕ್ಕೆ ಹೋಲಿಸಿದರೆ ಕೇವಲ 0.17 ಪ್ರತಿಶತದಷ್ಟಿರುವ ವಿಜಯಪುರ ಜಿಲ್ಲೆಯ ಅರಣ್ಯ ಪ್ರದೇಶವನ್ನು ಹೆಚ್ಚಿಸುವುದು ಪ್ರಾಥಮಿಕವಾಗಿ ಅಭಿಯಾನವನ್ನು ಪ್ರಾರಂಭಿಸುವ ಉದ್ದೇಶದೊಂದಿಗೆ ಕೈಗೊಂಡ ಈ ಯೋಜನೆ ಇಂದು ಅನುಷ್ಠಾನವಾಗಿ ಅರಣ್ಯ ಪ್ರದೇಶವಾಗಿ ಮಾರ್ಪಟ್ಟಿದೆ.

ಈ ಭೂಮಿಯನ್ನು ಹಸಿರಾಗಿಸುವ ಕಾರ್ಯ ಸುಲಭವಿರಲಿಲ್ಲ. ಸವಾಲುಗಳು ಪ್ರತೀ ಹಂತದಲ್ಲೂ ಎದುರಾದವು. ಭೂಮಿ ತುಂಬಾ ಗಟ್ಟಿಯಾದ ಪರಿಣಾಮ ಸಸಿ ನೆಡಲು ಹೊಂಡಗಳನ್ನು ತೆಗೆಯಲು ಅರಣ್ಯ ಇಲಾಖೆ ಬ್ರೇಕರ್‌ಗಳು ಮತ್ತು ಬುಲ್ಡೋ ಝರ್‌ಗಳನ್ನು ಬಳಸಿ ಹೊಂಡಗಳನ್ನು ಸೃಷ್ಟಿಸಿತು. ಅಧಿಕಾರಿಗಳು ಎಲ್ಲ ಯಂತ್ರೋಪಕರಣಗಳನ್ನು ಬಳಸಿ ಹೊಂಡಗಳನ್ನು ಸೃಷ್ಟಿಸಿ 70ಕ್ಕೂ ಹೆಚ್ಚು ವೈವಿಧ್ಯಮಯ ಸಸ್ಯಗಳನ್ನು ಬೆಳೆಸಿ 67,000 ಕ್ಕೂ

ಹೆಚ್ಚು ಸಸಿಗಳನ್ನು ನೆಡಲಾಯಿತು. ಇದಕ್ಕೆ ಅನೇಕ ಅರಣ್ಯ ಇಲಾಖೆಯ ಅಧಿಕಾರಿಗಳ ದೊಡ್ಡ ಶ್ರಮವೂ ಇದೆ ಎಂದು ಈ ಅಭಿಯಾನದಲ್ಲಿ ಮುಂಚೂಣಿಯ ಪಾತ್ರ ವಹಿಸಿದ ಡಾ.ಮುರುಗೇಶ ಪಟ್ಟಣಶೆಟ್ಟಿ ಹೇಳುತ್ತಾರೆ.

ಆರಂಭದಲ್ಲಿ, ಹನಿ ನೀರಾವರಿ ಸೌಲಭ್ಯಗಳ ಮೂಲಕ ನೀರು ಸರಬರಾಜು ಮಾಡಲು ನಿರ್ಧರಿಸಲಾಯಿತು, ಆದರೆ ಸೂಕ್ಷ್ಮ ನೀರಾವರಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸದ ಕಾರಣ, ಅವರು ಬೇಸಿಗೆಯಲ್ಲಿ ನೀರಿನ ಟ್ಯಾಂಕರ್‌ಗಳನ್ನು ನಿಯೋಜಿಸಬೇಕಾಯಿತು. ಅರಣ್ಯಾಧಿಕಾರಿ ಬರಗಾಲದಲ್ಲಿ ಸಸ್ಯಗಳನ್ನು ಉಳಿಸಲು ಪ್ರತಿದಿನ ಎಂಟು ಟ್ಯಾಂಕರ್‌ಗಳನ್ನು ಎರಡು ತಿಂಗಳ ಕಾಲ ನೀರು ಪೂರೈಸಲು ಬಳಸಿದ್ದೇವೆ. ಸಸಿ ನೆಡುವುದು ಒಂದು ಸವಾಲಾಗಿತ್ತು, ಅವು ಬದುಕುಳಿಯುವುದನ್ನು ಖಚಿತಪಡಿಸಿಕೊಳ್ಳುವುದು ಇನ್ನೊಂದು ಸವಾಲಾಗಿತ್ತು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಎದುರಿಸಿದ ಸವಾಲುಗಳನ್ನು ಸಹ ಪಟ್ಟಣಶೆಟ್ಟಿ ಎಳೆ ಎಳೆಯಾಗಿ ಬಿಡಿಸಿಟ್ಟರು.

ಭವಿಷ್ಯದ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಪಟ್ಟಣಶೆಟ್ಟಿ, ಸಚಿವ ಎಂ.ಬಿ.ಪಾಟೀಲ್ ಅರಣ್ಯ ಪ್ರದೇಶಗಳಲ್ಲಿ ವಾಕಿಂಗ್ ಟ್ರ್ಯಾಕ್, ಗಾರ್ಡನ್, ಅಕ್ವೇರಿಯಂ, ಫುಡ್ ಕೋರ್ಟ್ ಮುಂತಾದ ಮನರಂಜನಾ ಸೌಲಭ್ಯಗಳನ್ನು ಕಲ್ಪಿಸಲು ಕಾರ್ಯಯೋಜನೆ ರೂಪಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮೂರು ವರ್ಷಗಳಿಂದ ಪ್ರತಿದಿನ ಬೆಳಗ್ಗೆ ಕರದಡೊಡ್ಡಿ ಅರಣ್ಯದಲ್ಲಿ ವಾಕಿಂಗ್ ಮಾಡುತ್ತಿದ್ದಾರೆ. ವಿಜಯಪುರಕ್ಕೆ ಇಂತಹ ಹೆಚ್ಚಿನ ತೋಟಗಳು ಬೇಕು. ಅರಣ್ಯ ಮತ್ತು ಹಸಿರಿನ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು.

-ಮಹಾಂತೇಶ ಬಿಜ್ಜರಗಿ, ಉದ್ಯಮಿ.

share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X