Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಟ್ಟೂರು: ಸಕಾಲಕ್ಕೆ ಮಳೆಯಿಂದ...

ಕೊಟ್ಟೂರು: ಸಕಾಲಕ್ಕೆ ಮಳೆಯಿಂದ ಗರಿಗೆದರಿದ ಕೃಷಿ ಚಟುವಟಿಕೆಗಳು

ದಾದಾಪೀರ್ ಕೊಟ್ಟೂರುದಾದಾಪೀರ್ ಕೊಟ್ಟೂರು9 Jun 2026 3:11 PM IST
share
ಕೊಟ್ಟೂರು: ಸಕಾಲಕ್ಕೆ ಮಳೆಯಿಂದ ಗರಿಗೆದರಿದ ಕೃಷಿ ಚಟುವಟಿಕೆಗಳು

ತಾಲೂಕಿನಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ಸಮರ್ಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ರೈತರಲ್ಲಿ ಮಂದಹಾಸ ಮೂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ಅನುಕೂಲದಿಂದ ಕೃಷಿ ಚಟುವಟಿಕೆಗಳು ತಾಲೂಕಾದ್ಯಂತ ಚುರುಕುಗೊಂಡಿದೆ.

ತಾಲೂಕಿನಲ್ಲಿ ಒಟ್ಟು 38,523 ಹೆಕ್ಟೇರ್ ಕೃಷಿ ಭೂಮಿಯಿದ್ದು, ಇದರಲ್ಲಿ 32,800 ಹೆಕ್ಟೇರ್ ಪ್ರದೇಶದಲ್ಲಿ ಈ ವರ್ಷದ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ.

ಪ್ರಮುಖವಾಗಿ ಜೋಳ 570 ಹೆಕ್ಟೇರ್, ಮೆಕ್ಕೆಜೋಳ 28,298 ಹೆಕ್ಟೇರ್, ಸೂರ್ಯಕಾಂತಿ 550 ಹೆಕ್ಟೇರ್, ಶೇಂಗಾ 1,680 ಹೆಕ್ಟೇರ್, ರಾಗಿ 2,345 ಹೆಕ್ಟೇರ್, ನವಣೆ 122 ಹೆಕ್ಟೇರ್ ಹಾಗೂ ಹತ್ತಿ 30 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಶ್ಯಾಮಸುಂದರ್ ತಿಳಿಸಿದ್ದಾರೆ.

ಈ ವರ್ಷ ಜೋಳ ಬಿತ್ತನೆಗೆ ಅನುಕೂಲಕರ ಮಳೆಯಾಗಿರುವುದರಿಂದ ಬಹುತೇಕ ರೈತರು ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೆರೆಗಳು, ಹಳ್ಳಗಳು ಮತ್ತು ಗೋಕುಂಟೆಗಳು ನೀರಿನಿಂದ ತುಂಬುತ್ತಿದ್ದು, ಭೂಗರ್ಭ ಜಲಮಟ್ಟವೂ ಹೆಚ್ಚಳ ಕಂಡಿದೆ.

ರೈತರಿಗೆ ಅಗತ್ಯವಾದ ಬೀಜ ಮತ್ತು ರಸಗೊಬ್ಬರಗಳು ಕೃಷಿ ಕೇಂದ್ರಗಳಲ್ಲಿ ಲಭ್ಯವಿದ್ದು, ವಿತರಣೆ ಕಾರ್ಯವನ್ನು ಸುಗಮವಾಗಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಸಗೊಬ್ಬರ ಅಂಗಡಿಗಳ ಮಾಲಕರಿಗೂ ಕೃತಕ ಅಭಾವ ಸೃಷ್ಟಿಸದಂತೆ ಹಾಗೂ ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

ಈ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯ ಲಕ್ಷಣಗಳು ಕಂಡುಬರುತ್ತಿರುವುದರಿಂದ ಈ ವರ್ಷ ಉತ್ತಮ ಬೆಳೆ ಲಭಿಸುವ ನಿರೀಕ್ಷೆ ಇದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಈ ಭಾರೀ ಉತ್ತಮ ಮಳೆಯಾಗುವಲಕ್ಷಣ ಕಾಣುತ್ತಿರುವುದರಿಂದ ಈವರ್ಷ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದೇವೆ.

-ಪಿ.ಎಂ.ವೀರಭದ್ರಯ್ಯ

ಹಾರಕಾನಾಳು ಗ್ರಾಮದ ರೈತ ಹಾರಕಾನಾಳು ಗ್ರಾಮದ ರೈತ

share
ದಾದಾಪೀರ್ ಕೊಟ್ಟೂರು
ದಾದಾಪೀರ್ ಕೊಟ್ಟೂರು
Next Story
X