Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. Kuknoor | ಅಕ್ರಮ ಮದ್ಯ ಮಾರಾಟ ತಡೆದ...

Kuknoor | ಅಕ್ರಮ ಮದ್ಯ ಮಾರಾಟ ತಡೆದ ಗಟ್ಟಿಗಿತ್ತಿಯರು

ಭೀಮಾಶಂಕರ ಪಾಣೇಗಾಂವಭೀಮಾಶಂಕರ ಪಾಣೇಗಾಂವ8 Sept 2026 10:25 AM IST
share
Kuknoor | ಅಕ್ರಮ ಮದ್ಯ ಮಾರಾಟ ತಡೆದ ಗಟ್ಟಿಗಿತ್ತಿಯರು

ಕುಕನೂರು: ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಶುಕ್ರವಾರ 40 ಕ್ಕಿಂತಲೂ ಹೆಚ್ಚು ಮಹಿಳೆಯರು ಅಕ್ರಮ ಮದ್ಯ ಮಾರಾಟದ ಕುರಿತು ಗ್ರಾಪಂ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಅಂದಾಜು 8ರಿಂದ 10 ಸಾವಿರ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎನ್ನಲಾದ ಮನೆಗಳು ಹಾಗೂ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ, ಸುಮಾರು ಮೂರು ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಮಹಿಳೆಯರು 112ಕ್ಕೆ ಕರೆ ಮಾಡಿ ದೂರು ನೀಡಿದ ಬಳಿಕ, ತುರ್ತಾಗಿ ಸ್ಪಂದಿಸಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮಕ್ಕೆ ಕೈಗೊಂಡರು. ಗ್ರಾಪಂ ವತಿಯಿಂದ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ ಮೌಖಿಕವಾಗಿ ತಿಳಿವಳಿಕೆ ನೀಡಿದ್ದರೂ ಕೃತ್ಯ ಮುಂದುವರಿದಿತ್ತು ಎಂದು ತಿಳಿದುಬಂದಿದೆ. ಕುಡಿತದ ಚಟದಿಂದ ಕುಟುಂಬಗಳಲ್ಲಿ ಅಶಾಂತಿ ಹಾಗೂ ಆರ್ಥಿಕ ಸಂಕಷ್ಟ ಉಂಟಾಗುತ್ತಿದ್ದು, ಯುವಕರು ಮತ್ತು ಅಪ್ರಾಪ್ತರು ವ್ಯಸನಕ್ಕೆ ಒಳಗಾಗುವ ಅಪಾಯವಿದೆ ಎಂದು ಮಹಿಳೆಯರು ಆತಂಕ ವ್ಯಕ್ತಪಡಿಸಿದರು.

ಕಾರ್ಯಾಚರಣೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಲು ನಿರಂತರ ನಿಗಾ ಹಾಗೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಇನ್ನಷ್ಟು ಎಚ್ಚೆತ್ತುಕೊಂಡು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಕ್ರಮ ಮದ್ಯ ಮಾರಾಟ ಹಾಗೂ ಮಟ್ಕಾ ಅಡ್ಡೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನೆ ಮನೆಗೆ ತೆರಳಿ ಸಹಿ ಸಂಗ್ರಹಿಸಿ ಗಾಮ ಪಂಚಾಯತ್‌ಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಅಧಿಕಾರಿಗಳು ಕ್ರಮ ಕೈಗೊಂಡಿರುವುದು ಸಂತಸ ತಂದಿದೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತೆ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು.

-ನಿಂಗಪ್ಪ ಜಿ.ಎಸ್ ಬೆಣಕಲ್,ಹೋರಾಟಗಾರ

ಮಹಿಳೆಯರು ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಅಕ್ರಮ ಮದ್ಯಮಾರಾಟದ ಬಗ್ಗೆ ದೂರು ನೀಡಿದ್ದರು. ಬೆಣಕಲ್ ಗ್ರಾಮದಲ್ಲಿ ಸಂಬಂಧಪಟ್ಟ ಅಂಗಡಿಗಳು ಹಾಗೂ ಮನೆಗಳಿಗೆ ತೆರಳಿ ಮೌಖಿಕವಾಗಿ ತಿಳಿವಳಿಕೆ ನೀಡಿದ್ದರೂ ಮಾರಾಟ ಮುಂದುವರಿದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಪಂ ಸಿಬ್ಬಂದಿ, ಮಹಿಳೆಯರು ಹಾಗೂ ಪೊಲೀಸರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಮದ್ಯ ವಶಪಡಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಗಳೊಂದಿಗೆಗ್ರಾಮದಲ್ಲಿ ಸಭೆ ನಡೆಸಿ, ಇಂತಹ ಚಟುವಟಿಕೆಗಳು ನಡೆಯದಂತೆ ಮನವರಿಕೆಮಾಡಲಾಗುವುದು.

-ಚನ್ನಬಸಪ್ಪ ಸಣ್ಣಕರದ್, ಪಿಡಿಒ, ಗ್ರಾಪಂ ಬೆಣಕಲ್

ಅಕ್ರಮ ಮದ್ಯ ಮಾರಾಟದಿಂದ ಕುಟುಂಬಗಳ ನೆಮ್ಮದಿ ಹಾಳಾಗುತ್ತಿದೆ. ಇದನ್ನು ತಡೆಯಲು ಮಹಿಳೆಯರೆಲ್ಲರೂ ಒಟ್ಟಾಗಿ ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮುನ್ನಡೆಯಬೇಕು. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಸಂಪೂರ್ಣ ನಿಲ್ಲಬೇಕು.

-ಭೀಮಕ್ಕ ಹಂಚಿನಾಳ, ಮಹಿಳೆ

Tags

illegal liquor saleKuknoor
share
ಭೀಮಾಶಂಕರ ಪಾಣೇಗಾಂವ
ಭೀಮಾಶಂಕರ ಪಾಣೇಗಾಂವ
Next Story
X