Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. Kuknoor | ಗ್ಯಾಸ್ ದರ ಏರಿಕೆ ನಡುವೆ...

Kuknoor | ಗ್ಯಾಸ್ ದರ ಏರಿಕೆ ನಡುವೆ ಒಟಿಪಿ ಕಿರಿಕಿರಿ

ಬುಕಿಂಗ್‌ನಿಂದ ಡೆಲಿವರಿವರೆಗೆ ಹಲವು ಹಂತ; ಕಾದು ಸುಸ್ತಾಗುವ ಗ್ರಾಹಕರು

ಭೀಮಾಶಂಕರ ಪಾಣೇಗಾಂವಭೀಮಾಶಂಕರ ಪಾಣೇಗಾಂವ9 Oct 2026 9:52 AM IST
share
Kuknoor | ಗ್ಯಾಸ್ ದರ ಏರಿಕೆ ನಡುವೆ ಒಟಿಪಿ ಕಿರಿಕಿರಿ

ಕುಕನೂರು: ಗ್ಯಾಸ್ ಸಿಲಿಂಡರ್ ದರ ಏರಿಕೆಯಿಂದ ತತ್ತರಿಸಿರುವ ಸಾರ್ವಜನಿಕರಿಗೆ ಸಿಲಿಂಡರ್ ಪಡೆಯುವಾಗ ಎದುರಾಗುತ್ತಿರುವ ಒಟಿಪಿ ಪ್ರಕ್ರಿಯೆ ಮತ್ತಷ್ಟು ಕಿರಿಕಿರಿ ಉಂಟುಮಾಡುತ್ತಿದೆ.

ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಭಾರತ ಗ್ಯಾಸ್ ಸಿಲಿಂಡರ್ ವಿತರಿಸುವ ಹೊಸಮನಿ ಭಾರತ ಗ್ಯಾಸ್ ಗ್ರಾಮೀಣ ವಿತರಕರಲ್ಲಿ ಬುಕಿಂಗ್, ಕನ್ಫರ್ಮೇಶನ್ ಹಾಗೂ ಡೆಲಿವರಿ ಹಂತದಲ್ಲಿ ಒಟಿಪಿ ನೀಡಬೇಕಾಗುತ್ತಿದೆ. ಇದರಿಂದ ಗ್ರಾಹಕರು ಏಜೆನ್ಸಿ ಕೇಂದ್ರದಲ್ಲಿ 10ರಿಂದ 20 ನಿಮಿಷ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮನೆಗೆ ಸಿಲಿಂಡರ್ ತಲುಪುವುದು ತಡವಾಗುತ್ತಿರುವುದರಿಂದ ಹಲವರು ನೇರವಾಗಿ ಏಜೆನ್ಸಿಗೆ ತೆರಳಿ ಸಿಲಿಂಡರ್ ಪಡೆಯುತ್ತಿದ್ದಾರೆ. ಅಲ್ಲಿಯೂ ವಿತರಕರ ಮೊಬೈಲ್‌ಗೆ ಒಟಿಪಿ ಬರುವವರೆಗೆ ಕಾಯಬೇಕಾಗಿದೆ. ಮೊಬೈಲ್ ಮನೆಯಲ್ಲಿ ಬಿಟ್ಟು ಬಂದಿದ್ದರೆ ಅಥವಾ ಒಟಿಪಿ ಲಭ್ಯವಾಗದಿದ್ದರೆ ಸಿಲಿಂಡರ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಹಕರು ದೂರಿದ್ದಾರೆ.

ಈ ಪ್ರಕ್ರಿಯೆಯಿಂದ ಅಕ್ಷರಸ್ಥರು, ಅನಕ್ಷರಸ್ಥರು ಸೇರಿದಂತೆ ಎಲ್ಲ ವರ್ಗದ ಗ್ರಾಹಕರಿಗೂ ತೊಂದರೆಯಾಗುತ್ತಿದೆ. ಸಿಲಿಂಡರ್ ದರ ಏರಿಕೆಯ ಹೊರೆ ಒಂದೆಡೆಯಾದರೆ, ವಿತರಣೆಗೆ ಸಂಬಂಧಿಸಿದ ಒಟಿಪಿ ಪ್ರಕ್ರಿಯೆ ಮತ್ತೊಂದೆಡೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿತರಕರನ್ನು ಪ್ರಶ್ನಿಸಿದಾಗ, ಬುಕಿಂಗ್ ಖಚಿತಪಡಿಸಲು ಕನ್ಫರ್ಮೇಶನ್ ಒಟಿಪಿ ಅಗತ್ಯವಿದೆ. ಡೆಲಿವರಿ ಸಂದರ್ಭದಲ್ಲಿ ಮತ್ತೊಂದು ಒಟಿಪಿ ನೀಡಬೇಕು. ಗ್ರಾಹಕರು ಮತ್ತೆ ಏಜೆನ್ಸಿಗೆ ತೆರಳಬೇಕಾಗದಂತೆ ಹಾಗೂ ವಿತರಣೆಯಲ್ಲಿ ಗೊಂದಲ ಉಂಟಾಗದಂತೆ ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಒಟಿಪಿ ಪ್ರಕ್ರಿಯೆಯನ್ನು ಸರಳಗೊಳಿಸಿ, ಗ್ರಾಹಕರು ಅನಗತ್ಯವಾಗಿ ಕಾಯುವ ಪರಿಸ್ಥಿತಿ ತಪ್ಪಿಸಬೇಕು. ನಿಗದಿತ ದರದಲ್ಲಿ ಸಿಲಿಂಡರ್ ವಿತರಿಸಿ, ಸಾರ್ವಜನಿಕರಿಗೆ ಸುಲಭವಾಗುವ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಹಕರು ಒತ್ತಾಯಿಸಿದ್ದಾರೆ.

ಸಿಲಿಂಡರ್ ದರ ಏರಿಕೆಯ ಹೊರೆ ಒಂದೆಡೆಯಾದರೆ, ಮನೆಯಲ್ಲಿ ಸಿಲಿಂಡರ್ ಖಾಲಿಯಾದಾಗ ಬುಕ್ ಮಾಡಿ ಪಡೆಯುವುದು ಮತ್ತೊಂದು ಸಮಸ್ಯೆಯಾಗಿದೆ. ಮನೆಗೆ ತಲುಪುವುದು ತಡವಾಗುವುದರಿಂದ ನಾವೇ ಏಜೆನ್ಸಿಗೆ ಹೋಗಿ ತಂದುಕೊಳ್ಳುತ್ತೇವೆ. ಅಲ್ಲಿಯೂ ವಿತರಕರ ಮೊಬೈಲ್ಗೆ ಒಟಿಪಿ ಬರುವವರೆಗೆ ಕಾಯಬೇಕು. ಒಟಿಪಿ ಹೇಳಿದರೆ ಮಾತ್ರ ಸಿಲಿಂಡರ್ ಕೊಡುತ್ತಾರೆ. ಇದರಿಂದ ಸಮಯವೂ ವ್ಯರ್ಥವಾಗುತ್ತಿದೆ. ಈ ವ್ಯವಸ್ಥೆ ಸರಳವಾಗಬೇಕು.

-ಯಮನೂರಪ್ಪ, ಗವಿಸಿದ್ದಮ್ಮ, ಗ್ರಾಹಕರು, ಕುಕನೂರು

Tags

OTPKuknoor
share
ಭೀಮಾಶಂಕರ ಪಾಣೇಗಾಂವ
ಭೀಮಾಶಂಕರ ಪಾಣೇಗಾಂವ
Next Story
X