Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೂಲಸೌಕರ್ಯ ಕೊರತೆ; ಚರಂಡಿ ನೀರಿನಿಂದ...

ಮೂಲಸೌಕರ್ಯ ಕೊರತೆ; ಚರಂಡಿ ನೀರಿನಿಂದ ಗಬ್ಬೆದ್ದ ರಸ್ತೆಗಳು

ಅಗರಖೇಡ: ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆಗೆ ನಿರ್ಲಕ್ಷ್ಯ ಆರೋಪ

ಜಯಭೀಮ ಸೋ ಸಿಂಗೆಜಯಭೀಮ ಸೋ ಸಿಂಗೆ28 Nov 2026 2:47 PM IST
share
ಮೂಲಸೌಕರ್ಯ ಕೊರತೆ; ಚರಂಡಿ ನೀರಿನಿಂದ ಗಬ್ಬೆದ್ದ ರಸ್ತೆಗಳು

ಇಂಡಿ: ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ, ಗ್ರೇಡ್-1 ಗ್ರಾಪಂ ವ್ಯಾಪ್ತಿಯ ಅಗರಖೇಡ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹಾಗೂ ನಿರ್ವಹಣೆಯ ನಿರ್ಲಕ್ಷ್ಯದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗಳ ಮೇಲೆ ಚರಂಡಿ ನೀರು ಹರಿದು ಗಬ್ಬೆದ್ದು ನಾರುತ್ತಿದ್ದರೆ, ಬೀದಿ ದೀಪಗಳು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯೂ ಸಮರ್ಪಕವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ತಾಪಂ ಹಾಗೂ ಜಿಪಂ ವ್ಯಾಪ್ತಿಯ ಪ್ರಮುಖ ಗ್ರಾಮವಾಗಿರುವ ಅಗರಖೇಡದಲ್ಲಿ ಆರು ವಾರ್ಡ್‌ಗಳು ಹಾಗೂ 18 ಸದಸ್ಯರಿರುವ ಗ್ರಾಪಂ ಇದ್ದರೂ, ಸ್ವಚ್ಛ ರಸ್ತೆಗಳು, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರು ಮತ್ತು ಬೀದಿ ದೀಪಗಳಂತಹ ಮೂಲಸೌಕರ್ಯಗಳ ನಿರ್ವಹಣೆಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೆ ಗ್ರಾಪಂ ಸದಸ್ಯರು ತಮ್ಮ ವಾರ್ಡ್‌ಗಳ ಸಮಸ್ಯೆಗಳನ್ನು ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳುತ್ತಿದ್ದರು. ಆದರೆ, ಈಗ ವಾರ್ಡ್‌ಗಳಲ್ಲಿ ಸಮಸ್ಯೆಗಳಿದ್ದರೂ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಗ್ರಾಮದ ಸಿದ್ದಾರೂಢ ಮಠದಿಂದ ಛತ್ರಪತಿ ಶಿವಾಜಿ ಮಹಾರಾಜ ವೃತ್ತದ ಮೂಲಕ ದೇವಿ ಗುಡಿಯವರೆಗಿನ ರಸ್ತೆಯಲ್ಲಿ ಚರಂಡಿ ನೀರು ಹರಿದು ದುರ್ವಾಸನೆ ಬೀರುತ್ತಿದೆ. ರಸ್ತೆಯಲ್ಲಿ ಸಂಚರಿಸುವ ಜನರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚರಂಡಿ ನೀರು ರಸ್ತೆಯ ಮೇಲೆ ಹರಿಯುವುದನ್ನು ತಡೆಯಲು ಕೆಲ ಪ್ರಯತ್ನಗಳು ನಡೆದಿದ್ದರೂ ಸಮಸ್ಯೆ ನಿವಾರಣೆಯಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಬೀದಿ ದೀಪ, ಕುಡಿಯುವ ನೀರಿನ ಘಟಕವೂ ನಿರ್ವಹಣೆ ಇಲ್ಲದೆ ಸ್ಥಗಿತ: ವಾರ್ಡ್ ಸಂಖ್ಯೆ 6ರಲ್ಲಿ ಅಳವಡಿಸಿರುವ ಆರು ಬೀದಿ ದೀಪಗಳ ಪೈಕಿ ನಾಲ್ಕು ದೀಪಗಳು ಕೆಟ್ಟು ನಿಂತಿದ್ದು, ಎರಡು ಮಾತ್ರ ಬೆಳಕು ನೀಡುತ್ತಿವೆ. ಹಲವು ವರ್ಷಗಳಿಂದ ದೀಪಗಳ ದುರಸ್ತಿಗೆ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಇದೇ ವಾರ್ಡ್ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವೂ ದೀರ್ಘಕಾಲದಿಂದ ಸ್ಥಗಿತಗೊಂಡಿದ್ದು, ದುರಸ್ತಿಯಾಗಿಲ್ಲ. ಈ ಸಮಸ್ಯೆಗಳ ಕುರಿತು ವಾರ್ಡ್ ನಿವಾಸಿಗಳು ಶಾಸಕ ಯಶವಂತರಾಯ ಗೌಡ ಪಾಟೀಲ ಅವರ ಗಮನಕ್ಕೂ ತಂದಿದ್ದಾರೆ.

ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಆಡಳಿತದ ಕಾರ್ಯಚಟುವಟಿಕೆಗಳ ಮೇಲ್ವಿಚಾರಣೆಗಾಗಿ ನೂಡಲ್ ಅಧಿಕಾರಿಗಳನ್ನು ನೇಮಿಸಿದ್ದರೂ, ಅವರು ಪಂಚಾಯಿತಿಗೆ ಎಷ್ಟು ಬಾರಿ ಭೇಟಿ ನೀಡುತ್ತಾರೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಯಾವ ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಾರ್ವಜನಿಕರಿಗೆ ತಿಳಿಯುತ್ತಿಲ್ಲ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

share
ಜಯಭೀಮ ಸೋ ಸಿಂಗೆ
ಜಯಭೀಮ ಸೋ ಸಿಂಗೆ
Next Story
X