Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಂದಿನಿಂದ ವಿಧಾನ ಮಂಡಲ ಅಧಿವೇಶನ

ಇಂದಿನಿಂದ ವಿಧಾನ ಮಂಡಲ ಅಧಿವೇಶನ

ಪ್ರಕಾಶ್ ಸಿ. ರಾಮಜೋಗಿಹಳ್ಳಿಪ್ರಕಾಶ್ ಸಿ. ರಾಮಜೋಗಿಹಳ್ಳಿ8 Dec 2025 7:20 AM IST
share
ಇಂದಿನಿಂದ ವಿಧಾನ ಮಂಡಲ ಅಧಿವೇಶನ
‘ಚಳಿಗಾಲ’ದಲ್ಲೂ ಕಾವೇರಿಸುವ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಬೆಂಗಳೂರು, ಡಿ.7: ರಾಜ್ಯದ ಗಡಿ ಜಿಲ್ಲೆ, ಕುಂದಾನಗರಿ ಬೆಳಗಾವಿಯಲ್ಲಿ ಇದೇ ತಿಂಗಳ 8ರಿಂದ 19ರ ವರೆಗೆ 10 ದಿನಗಳ ಕಾಲ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ ಚಳಿಯಲ್ಲೂ ಕಾವೇರಿಸುವ ವಾಗ್ಯುದ್ಧಕ್ಕೆ ವೇದಿಕೆ ಸಜ್ಜುಗೊಂಡಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ‘ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ’ಯ ಚರ್ಚೆ ಒಂದು ಹಂತಕ್ಕೆ ಶಮನಗೊಂಡಿದ್ದರೂ, ಒಳಬೇಗುದಿ ಇನ್ನೂ ನಿಂತಿಲ್ಲ. ಈ ಮಧ್ಯೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಲ್ಲಿಯೂ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಹೀಗಾಗಿಯೇ ‘ಆಡಳಿತ ಪಕ್ಷದಲ್ಲೊಂದು ವಿಪಕ್ಷ, ವಿಪಕ್ಷದಲ್ಲೊಂದು ಪ್ರತಿಪಕ್ಷ ಎಂಬಂತಹ ಸ್ಥಿತಿ ರಾಜ್ಯದಲ್ಲಿದ್ದು, ಚಳಿಗಾಲದ ಅಧಿವೇಶನ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಆಡಳಿತ ಪಕ್ಷದ ಸದಸ್ಯರು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸು ಹಾಗೂ ಅಭಿವೃದ್ಧಿ ಯೋಜನೆಗಳ ಜಾರಿಯ ಹುಮ್ಮಸ್ಸಿನಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಸಜ್ಜಾಗಿದ್ದಾರೆ.

ಈ ನಡುವೆ ಪ್ರತಿಪಕ್ಷ ಬಿಜೆಪಿ-ಜೆಡಿಎಸ್, ‘ನೆರೆ, ಬೆಳೆಹಾನಿ, ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿನ ಸರಕಾರದ ವಿಳಂಬ ನೀತಿ, ರಸ್ತೆ ಗುಂಡಿ ಸಮಸ್ಯೆ, ಹದಗೆಟ್ಟ ಕಾನೂನು ಸುವ್ಯವಸ್ಥೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳ ನಿರ್ಲಕ್ಷ್ಯ ಖಂಡಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಅಡಕತ್ತರಿಯಲ್ಲಿ ಸಿಲುಕಿಸಲು ಸನ್ನದ್ಧವಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಡಿ. 8ರ ಬೆಳಗ್ಗೆ 11ಗಂಟೆಯ ಸುಮಾರಿಗೆ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ವಿಧಾನಸಭೆ ಸಚಿವಾಲಯ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯ ಕೆಂಪುಕೋಟೆಯ ಬಳಿ ಕಾರಿನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧಕ್ಕೆ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಅಧಿವೇಶನದ ಹಿನ್ನೆಲೆಯಲ್ಲಿ ಸುಮಾರು ಆರು ಮಂದಿ ಐಪಿಎಸ್ ಅಧಿಕಾರಿಗಳು ಸೇರಿದಂತೆ ಆರೇಳು ಸಾವಿರಕ್ಕೂ ಅಧಿಕ ಮಂದಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಳ್ಳಲಿದ್ದು, ಎಲ್ಲರಿಗೂ ಊಟ, ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಅಧಿವೇಶನ ಸಂದರ್ಭದಲ್ಲೇ ಸುವರ್ಣ ವಿಧಾನಸೌಧದ ಆವರಣದ ಸಮೀಪದಲ್ಲೇ ರೈತರು ಸೇರಿದಂತೆ ವಿವಿಧ ಜನವರ್ಗಗಳ ಸಾಲು-ಸಾಲು ಪ್ರತಿಭಟನೆಗಳು ನಡೆಯುತ್ತವೆ. ಹೀಗಾಗಿ ಪ್ರತಿದಿನ 50ಸಾವಿರ ಮಂದಿ ಸೇರುವ ಸಾಧ್ಯತೆ ಇದೆ. ಆ ಹಿನ್ನೆಲೆಯಲ್ಲಿ ಯಾವುದೇ ಅವಘಡ ಉಂಟಾಗದಂತೆ ಪೊಲೀಸ್ ನಿಗಾ ವಹಿಸಿದ್ದು, ಸುವರ್ಣ ವಿಧಾನಸೌಧದ ಸುತ್ತಮುತ್ತ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವಾಸ್ತವ್ಯಕ್ಕೆ ಬೆಳಗಾವಿಯಲ್ಲಿ ಈಗಾಗಲೇ ಮೂರು ಸಾವಿರಕ್ಕೂ ಅಧಿಕ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಈ ಮಧ್ಯೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಡೆಸಲು ಯೋಜಿಸಿದ್ದ ‘ಮಹಾಮೇಳಾವ್’ ಸಮಾವೇಶಕ್ಕೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.

ಉತ್ತರ ಸಿಗದ ಚರ್ಚೆ :

ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಘೋಷಣೆ ಮಾಡಬೇಕು. ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸುವರ್ಣವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು. ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕೆಂಬುದು ಸೇರಿದಂತೆ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ನಿವಾರಣೆ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.

ಅಧಿವೇಶನ ಸಂದರ್ಭದಲ್ಲೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿದ್ದು, ಕಲಾಪದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಿ ಅವುಗಳ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಬೇಕು ಎಂಬುದು ಬೇಡಿಕೆ ಇನ್ನೂ ಬೇಡಿಕೆಯಾಗಿಯೇ ಉಳಿದಿದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ. ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳ ಮೇಲೆ ಉಭಯ ಸದನಗಳ ಅಧಿವೇಶನ ಕಲಾಪದಲ್ಲಿ ಯಾವ ರೀತಿಯಲ್ಲಿ ಚರ್ಚೆ ನಡೆಯಲಿದೆ ಹಾಗೂ ಯಾವ ರೀತಿಯ ಪರಿಹಾರ ಕಲ್ಪಿಸುವ ಸಾಧ್ಯತೆಗಳಿವೆ ಎಂಬ ನಿರೀಕ್ಷೆ ರಾಜ್ಯದ ಜನರಲ್ಲಿದೆ. ಹೀಗಾಗಿ ಅಧಿವೇಶನದತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ.

ಅನುಮತಿ ಇದ್ದರಷ್ಟೇ ಪ್ರತಿಭಟನೆ :

ಅಧಿವೇಶನ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದವರಿಗೆ ಮಾತ್ರ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಡಿ.21ರ ಮಧ್ಯರಾತ್ರಿ 12 ಗಂಟೆಯವರೆಗೆ ಸುವರ್ಣ ವಿಧಾನಸೌಧದ ಮೂರು ಕಿ.ಮಿ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 5 ಜನಕ್ಕಿಂತ ಹೆಚ್ಚು ಜನರ ಗುಂಪು ಸೇರಲು ಅವಕಾಶವಿಲ್ಲ. ಯಾವುದೇ ಆಯುಧ, ಮಾರಕಾಸ್ತ್ರ, ಬಡಿಗೆ ಒಯ್ಯಲು ಅವಕಾಶವಿಲ್ಲ. ಪೊಲೀಸ್ ಅನುಮತಿ ಇಲ್ಲದೆ ಖಾಸಗಿ ವ್ಯಕ್ತಿಗಳು ಡ್ರೋನ್ ಹಾರಿಸಲು ಅನುಮತಿ ಇಲ್ಲ. ಸುವರ್ಣ ವಿಧಾನಸೌಧದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ಆದೇಶ ಮಾಡಿದ್ದಾರೆ.

ಕಬ್ಬು ಬೆಳೆಗಾರರ ಸಮಸ್ಯೆ, ಉತ್ತರ ಕರ್ನಾಟಕದ ಸಮಸ್ಯೆಗಳು, ನಾಯಕತ್ವ ಬದಲಾವಣೆ ಗೊಂದಲ, ಸರಕಾರದಲ್ಲಿ ಶೇ.63ರಷ್ಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ಸೇರಿದಂತೆ ಇನ್ನಿತರ ವಿಷಯಗಳನ್ನು ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು.

-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

share
ಪ್ರಕಾಶ್ ಸಿ. ರಾಮಜೋಗಿಹಳ್ಳಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ
Next Story
X