Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಡಗು ಆಗದಿರಲಿ ಮತ್ತೊಂದು ವಯನಾಡು

ಕೊಡಗು ಆಗದಿರಲಿ ಮತ್ತೊಂದು ವಯನಾಡು

ಮರುಕಳಿಸದಿರಲಿ 2018; ಎಚ್ಚೆತ್ತುಕೊಳ್ಳಬೇಕಿದೆ ಜಿಲ್ಲಾಡಳಿತ

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ2 Aug 2024 11:53 AM IST
share
ಕೊಡಗು ಆಗದಿರಲಿ ಮತ್ತೊಂದು ವಯನಾಡು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಮಳೆಯ ಕೊರತೆ ಇತ್ತು. ಆದರೆ, ಪ್ರಸಕ್ತ ವರ್ಷ ಜೂನ್ ತಿಂಗಳಿನಿಂದಲೇ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ,ಕಾವೇರಿ ನದಿ ಪ್ರವಾಹ, ಮನೆ ಕುಸಿತ,ರಸ್ತೆ ಸಂಪರ್ಕ ಕಡಿತ ಉಂಟಾಗಿ ಕೋಟ್ಯಂತರ ರೂ. ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಜುಲೈನಲ್ಲೂ ಮಳೆಯ ಆರ್ಭಟ ಜಿಲ್ಲೆಯಲ್ಲಿ ಮುಂದುವರಿದೆ. ಈ ನಡುವೆ ಕೊಡಗು ಜಿಲ್ಲೆಯ ನೆರೆಯ ರಾಜ್ಯ ಕೇರಳದ ವಯನಾಡು ಜಿಲ್ಲೆಯ ವೈತಿರಿ ತಾಲೂಕಿನ ಮುಂಡಕ್ಕೈ, ಮೆಪ್ಪಾಡಿಯಲ್ಲಿ ಸಂಭವಿಸಿದ ಜಲಸ್ಫೋಟ ಮತ್ತು ಭೂಕುಸಿತದಿಂದ ಇದೀಗ ಜಿಲ್ಲೆಯ ಜನತೆ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.

ಮುಂಡಕ್ಕೈನಲ್ಲಿ ನೂರಾರು ಮಂದಿ ಮೃತಪಟ್ಟಿದ್ದರೆ, ನೂರಾರು ಮಂದಿ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಾತ್ರಿ ಮಲಗಿ ಬೆಳಗಾಗುವಷ್ಟರಲ್ಲಿ ಇಡೀ ಊರಿಗೆ ಊರೇ, ಕಾಣೆಯಾಗಿದೆ.

ವಯನಾಡಿನ ದುರಂತ ಕೊಡಗಿನಲ್ಲಿ 2018ರಲ್ಲಿ ಸಂಭವಿಸಿದ ಭೂಕುಸಿತವನ್ನು ಮತ್ತೆ ಮತ್ತೆ ನೆನಪಿಸುತ್ತಿದೆ. ಕೊಡಗಿನಂತೆ ವಯನಾಡ್ ಜಿಲ್ಲೆ ಕೂಡ ಪ್ರವಾಸಿಗರ ಸ್ವರ್ಗ. ವಯನಾಡಿನ ಪ್ರಕೃತಿಯ ಸೊಬಗಿಗೆ ಮನಸೋತು ಸಾವಿರಾರು ಪ್ರವಾಸಿಗರು ದಿನನಿತ್ಯ ವಯನಾಡಿನ ಪ್ರಕೃತಿಯನ್ನು ಆನಂದಿಸಲು ಬರುತ್ತಾರೆ. ಆದರೆ, ಪ್ರವಾಸೋದ್ಯಮದ ಅಭಿವೃದ್ಧಿಯ ನೆಪದಲ್ಲಿ ಬೆಡ್ಡಗುಡ್ಡಗಳನ್ನು ಕೊರೆದು, ರೆಸಾರ್ಟ್, ಹೋಮ್ ಸ್ಟೇ ಮಾಡಿರುವ ಹಲವು ನಿದರ್ಶನಗಳು ವಯನಾಡಿನಲ್ಲಿ ಇವೆ.

ಕೊಡಗಿನಲ್ಲೂ ಪರಿಸರ ವಿರೋಧಿ ಚಟುವಟಿಕೆ: ಪ್ರವಾಸೋದ್ಯಮ ಅಭಿವೃದ್ಧಿಯ ನೆಪದಲ್ಲಿ ಅವೈಜ್ಞಾನಿಕ ಕೆಲಸದ ಮೂಲಕ ಬೆಟ್ಟಗುಡ್ಡಗಳ ಮೇಲೆ ರೆಸಾರ್ಟ್, ಹೋಮ್ ಸ್ಟೇ ನಿರ್ಮಿಸಿ ಪ್ರಕೃತಿಯ ಮೇಲೆ ಮಾನವನ ದೌರ್ಜನ್ಯ ಮುಂದುವರಿದಿದೆ. ಕೊಡಗು ಜಿಲ್ಲೆಯಲ್ಲಿ 2018ರಿಂದ 2020ರವರೆಗೆ ಆಶ್ಲೇಷ ಮಳೆಯಿಂದಲೇ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ, ಕಾವೇರಿ ನದಿ ಪ್ರವಾಹ, ಬೆಟ್ಟ ಕುಸಿತ ಸಂಭವಿಸಿತ್ತು. ಆದರೆ, ಪ್ರಸಕ್ತ ವರ್ಷ ಪುಷ್ಯ ಮಳೆಯ ಆರ್ಭಟ ಮುಂದುವರಿದಿದ್ದು, ಕಾವೇರಿ ನದಿ ದಡದ ನಿವಾಸಿಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಆಶ್ಲೇಷ ಮಳೆಯ ಆರಂಭಕ್ಕೂ ಮುನ್ನ ಪಕ್ಕದ ವಯನಾಡಿನಲ್ಲಿ ಸಂಭವಿಸಿದ ದುರಂತ ಮತ್ತೆ 2018ರ ದುರ್ಘಟನೆಯನ್ನು ಜಿಲ್ಲೆಯ ಜನತೆಯನ್ನು ನೆನಪಿಸುತ್ತಿದೆ.

2018 ಆಗಸ್ಟ್ 15ರ ಮಧ್ಯರಾತ್ರಿ ಸುರಿದ ಆಶ್ಲೇಷ ಮಳೆಯಿಂದ ಕೊಡಗಿನ ಮಡಿಕೇರಿ ಹಾಗೂ ಸೋಮವಾರಪೇಟೆ ಭಾಗದಲ್ಲಿ ಭೂ ಕುಸಿತಗೊಂಡು ಇಡೀ ಗ್ರಾಮವೇ ಮಾಯವಾಗಿತ್ತು. ಮನೆಗಳು, ತೋಟಗಳು ಮಣ್ಣು ಪಾಲಾಗಿತ್ತು. ರಾತ್ರಿ ಮಲಗಿ, ಬೆಳಗ್ಗೆ ಏಳುವಷ್ಟರಲ್ಲಿ ಮಳೆಯಿಂದಾಗಿ ಇಡೀ ಚಿತ್ರಣವೇ ಬದಲಾಗಿತ್ತು.

2018ರಲ್ಲಿ ಆಶ್ಲೇಷ ಮಳೆಯ ರೌದ್ರನರ್ತನದಿಂದ ಕುಶಾಲನಗರ, ಮಡಿಕೇರಿ ಹಾಗೂ ಸೋಮವಾರಪೇಟೆ ಭಾಗದಲ್ಲಿ ಸಾವಿರಾರು ನಿರಾಶ್ರಿತರು ಸಂತ್ರಸ್ತರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಸಾವಿರಾರು ಕುಟುಂಬಗಳು ಮಳೆಯಿಂದಾಗಿ ಬೀದಿಪಾಲಾಗಿತ್ತು. ಭೂಕುಸಿತದಿಂದಾಗಿ 19ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಜೋಡುಪಾಲದಲ್ಲಿ ಭೂಕುಸಿತದಿಂದಾಗಿ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದ ಯುವತಿಯ ಮೃತದೇಹವೂ ನಾಪತ್ತೆಯಾಗಿತ್ತು.

2019ರ ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ದಕ್ಷಿಣ ಕೊಡಗಿನಲ್ಲಿ ಕಾವೇರಿ ನದಿ ಪ್ರವಾಹದಿಂದ ಸಾವಿರಾರು ಮನೆಗಳು ಮುಳುಗಿ ನೆಲಸಮಗೊಂಡಿತ್ತು. ಸಾವಿರಾರು ಕುಟುಂಬಗಳು ತಿಂಗಳುಗಟ್ಟಲೆ ಕಾಳಜಿ ಕೇಂದ್ರದಲ್ಲಿ ದಿನದೂಡಿದ್ದರು.ಕಾವೇರಿ ನದಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಇಂದಿಗೂ ಸೂರು ಸಿಕ್ಕಿಲ್ಲ.

ವಿರಾಜಪೇಟೆ ತಾಲೂಕಿನ ತೋರ ಗ್ರಾಮದಲ್ಲಿ 10 ಹತ್ತು ಜನ ಮೃತಪಟ್ಟಿದ್ದರು. ತಾಯಿ, ಮಗಳು ಕೂಡ ಭೂಕುಸಿತಕ್ಕೆ ಸಿಲುಕಿ ಪ್ರಾಣ ಬಿಟ್ಟಿದ್ದರು. ಮಡಿಕೇರಿ ತಾಲೂಕಿನ ಕೋರಂಗಾಲದಲ್ಲಿ ಐವರು ಸೇರಿ 15ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

2019ರಲ್ಲಿ ಆಶ್ಲೇಷ ಮಳೆಯಿಂದಾಗಿ ನೆಲ್ಲಿಹುದಿಕೇರಿ, ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗಳು ಹಾಗೂ ಕೊಂಡಂಗೇರಿ ಗ್ರಾಮದಲ್ಲಿ ಸಾವಿರಾರು ಮನೆಗಳು ಕಾವೇರಿ ನದಿಪ್ರವಾಹಕ್ಕೆ ಸಿಲುಕಿ ನೆಲಸಮಗೊಂಡಿತ್ತು. 2020ರ ಆಗಸ್ಟ್‌ನಲ್ಲಿಯೂ ಆಶ್ಲೇಷ ಮಳೆಯ ಆರ್ಭಟ ಮುಂದುವರಿದಿತ್ತು.ತಲಕಾವೇರಿಯಲ್ಲಿ ಗಜಗಿರಿ ಬೆಟ್ಟ ಕುಸಿದು ತಲಕಾವೇರಿ ಕ್ಷೇತ್ರದ ಅರ್ಚಕ ಕುಟುಂಬ ಸೇರಿ ಐವರು ಮೃತಪಟ್ಟಿದ್ದರು.

ವಯನಾಡಿನ ಮುಂಡಕ್ಕೈ, ಮೆಪ್ಪಾಡಿಯಲ್ಲಿ ಸಂಭವಿಸಿದ ದುರಂತ ಕೊಡಗು ಜಿಲ್ಲೆಗೆ ಎಚ್ಚರಿಕೆಯ ಗಂಟೆಯಾಗಿದೆ. ಭೂಕುಸಿತ, ಪ್ರವಾಹ ಸಂಭವಿಸುವ ಸ್ಥಳಗಳಿಂದ ಜನರನ್ನು ಸ್ಥಳಾಂತರಿಲು ಸರಕಾರ, ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ.

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X