Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ...

ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಹಿರೇಬೆಣಕಲ್‌ನ ಶಿಲಾಯುಗದ ಸ್ಮಾರಕಗಳೂ ಮೆರೆಯಲಿ

ಯುನೆಸ್ಕೋ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರಿಸಲೂ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ6 Nov 2026 12:20 PM IST
share
ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಹಿರೇಬೆಣಕಲ್‌ನ ಶಿಲಾಯುಗದ ಸ್ಮಾರಕಗಳೂ ಮೆರೆಯಲಿ

ಕೊಪ್ಪಳ: ಜನವರಿ 26ರಂದು ಗಣರಾಜ್ಯೋತ್ಸವದ ಅಂಗವಾಗಿ ಹೊಸದಿಲ್ಲಿಯಲ್ಲಿ ನಡೆಯುವ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ನಲ್ಲಿರುವ ಶಿಲಾಯುಗದ ಮೋರೆರ ಗೋರಿಗಳನ್ನು ಶಿಫಾರಸು ಮಾಡಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಗಂಗಾವತಿ ನಗರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಹಿರೇಬೆಣಕಲ್ ಗ್ರಾಮದ ಸಮೀಪದ ಕಡಿದಾದ ಗುಡ್ಡದಲ್ಲಿರುವ ಈ ಗೋರಿಗಳು ಪ್ರಾಚೀನ ಮಾನವನ ಬದುಕು, ಸಂಸ್ಕೃತಿ ಮತ್ತು ಅಂತ್ಯಕ್ರಿಯೆಯ ಪದ್ಧತಿಗೆ ಸಾಕ್ಷಿಯಾಗಿವೆ. ದೇಶದಲ್ಲಿ ಅಪರೂಪವಾಗಿ ಕಾಣಸಿಗುವ ಇಂತಹ ಬೃಹತ್ ಶಿಲಾಸ್ಮಾರಕಗಳ ಸಮೂಹಗಳಲ್ಲಿ ಹಿರೇಬೆಣಕಲ್ ಕೂಡ ಪ್ರಮುಖ ಸ್ಥಾನ ಪಡೆದಿದೆ.

ಕ್ರಿ.ಪೂ. 2000ರಿಂದ 3000ರ ಅವಧಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗುವ ಈ ಸ್ಮಾರಕಗಳು ಸುಮಾರು 3ರಿಂದ 5 ಸಾವಿರ ವರ್ಷಗಳಷ್ಟು ಹಳೆಯವು. ಮೇಘಾಲಯ ಹೊರತುಪಡಿಸಿದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಮೋರೆರ ಗೋರಿಗಳು ಕಂಡುಬರುವ ಪ್ರಮುಖ ಸ್ಥಳ ಹಿರೇಬೆಣಕಲ್ ಎಂದು ಗುರುತಿಸಲಾಗಿದೆ. ಈ ಪ್ರದೇಶವನ್ನು ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಈ ಐತಿಹಾಸಿಕ ಸ್ಮಾರಕಗಳಿಗೆ ಅವಕಾಶ ಕಲ್ಪಿಸಬೇಕು ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.

ಇಲ್ಲಿ ಕೇವಲ ಶಿಲಾಸ್ಮಾರಕಗಳಷ್ಟೇ ಅಲ್ಲದೆ, ಸಮೀಪದ ಗುಹೆಗಳಲ್ಲಿ ಪ್ರಾಚೀನ ಮಾನವರು ಬಿಡಿಸಿರುವ 40ಕ್ಕೂ ಹೆಚ್ಚು ಚಿತ್ರಗಳಿವೆ. ಮಹಿಳೆಯೊಬ್ಬರ ಪ್ರಸವದ ದೃಶ್ಯವನ್ನು ಹೋಲುವ ಚಿತ್ರವೂ ಇವುಗಳಲ್ಲಿ ಸೇರಿದೆ. ಅಂದಿನ ಜನರ ಜೀವನಶೈಲಿ ಮತ್ತು ಸಾಂಸ್ಕೃತಿಕ ಆಚರಣೆಗಳ ಕುರಿತು ಈ ಚಿತ್ರಗಳು ಮಹತ್ವದ ಸುಳಿವು ನೀಡುತ್ತವೆ.

ಈ ಪ್ರದೇಶದಲ್ಲಿ ಸುಮಾರು 200ಕ್ಕೂ ಹೆಚ್ಚು ಶಿಲಾಸ್ಮಾರಕಗಳಿದ್ದು, ಯಾವುದೇ ಗಾರೆಯ ಬಳಕೆಯಿಲ್ಲದೆ ಬೃಹತ್ ಕಲ್ಲುಗಳನ್ನು ಜೋಡಿಸಿ ನಿರ್ಮಿಸಲಾಗಿದೆ. ಹೈದರಾಬಾದ್ನ ನಿಜಾಮರ ಆಡಳಿತಾವಧಿಯಲ್ಲಿ ಫಿಲಿಪ್ ಮೆಡೋಸ್ ಟೇಲರ್ ಎಂಬ ಅಧಿಕಾರಿ ಈ ಸ್ಮಾರಕಗಳನ್ನು ಮೊದಲ ಬಾರಿಗೆ ಗುರುತಿಸಿದ್ದರು. 1835ರಲ್ಲಿ ‘ಜರ್ನಲ್ ಆಫ್ ದಿ ರಾಯಲ್ ಏಷಿಯಾಟಿಕ್ ಸೊಸೈಟಿ’ಯಲ್ಲಿ ಈ ಕುರಿತು ವರದಿಯನ್ನೂ ಪ್ರಕಟಿಸಿದ್ದರು.

ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಈ ಶಿಲಾಸ್ಮಾರಕಗಳನ್ನು ಪ್ರದರ್ಶಿಸಿದರೆ ದೇಶದ ವಿವಿಧ ಭಾಗಗಳ ಜನರಿಗೆ ಹಿರೇಬೆಣಕಲ್‌ನ ಐತಿಹಾಸಿಕ ಮಹತ್ವ ಪರಿಚಯವಾಗಲಿದೆ. ಈ ಹಿಂದೆ 2013ರಲ್ಲಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಕಿನ್ನಾಳ ಕಲೆಯನ್ನು ಪ್ರದರ್ಶಿಸಲಾಗಿತ್ತು. ಆಗ ಜಿಲ್ಲೆಯ ಜನರು ಹೆಮ್ಮೆಪಟ್ಟಿದ್ದರು. ಇದೀಗ ಮತ್ತೊಮ್ಮೆ ಜಿಲ್ಲೆಯ ಐತಿಹಾಸಿಕ ಪರಂಪರೆಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ದೊರೆಯಬೇಕು ಎಂಬುದು ಜನರ ಆಶಯವಾಗಿದೆ.

ಇತ್ತೀಚೆಗೆ ಯುನೆಸ್ಕೋ ತಜ್ಞರ ತಂಡ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವಿವಿಧ ಐತಿಹಾಸಿಕ ಸ್ಮಾರಕಗಳು ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯ ಗೈಡ್ ಒಬ್ಬರು ಹಿರೇಬೆಣಕಲ್‌ನ ಮೋರೆರ ಗೋರಿಗಳನ್ನು ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವಂತೆ ಮನವಿ ಸಲ್ಲಿಸಿದ್ದು, ತಜ್ಞರ ತಂಡ ಅದನ್ನು ಸ್ವೀಕರಿಸಿದೆ ಎಂದು ಪುರಾತತ್ವ ಇಲಾಖೆಯ ಅಧಿಕಾರಿಯೊಬ್ಬರು ’ವಾರ್ತಾಭಾರತಿ’ಗೆ ತಿಳಿಸಿದ್ದಾರೆ.

ತಂಡವು ಆನೆಗೊಂದಿಯ ಗಗನ್ ಮಹಲ್ ಮತ್ತು ಅಂಜನಾದ್ರಿಗೂ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಪ್ರದೇಶಗಳಲ್ಲಿ ಅನಿಯಂತ್ರಿತ ನಗರೀಕರಣಕ್ಕೆ ಅವಕಾಶ ನೀಡದೆ, ಐತಿಹಾಸಿಕ ಸ್ವರೂಪ ಮತ್ತು ನೈಸರ್ಗಿಕ ಸೌಂದರ್ಯವನ್ನು ಸಂರಕ್ಷಿಸಬೇಕು ಎಂಬ ಸಲಹೆಯನ್ನೂ ನೀಡಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ, ಹಿರೇಬೆಣಕಲ್‌ನ ಮೋರೆರ ಗೋರಿಗಳು ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಸ್ಥಾನ ಪಡೆದರೆ, ಜಿಲ್ಲೆಯ ಪ್ರಾಚೀನ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆ ರಾಷ್ಟ್ರಮಟ್ಟದಲ್ಲಿ ಪರಿಚಯವಾಗಲಿದೆ. ಜತೆಗೆ ಪ್ರವಾಸಿಗರ ಸಂಖ್ಯೆಯೂ ಹೆಚ್ಚಬಹುದು ಎಂಬ ನಿರೀಕ್ಷೆ ಜಿಲ್ಲೆಯ ಜನರಲ್ಲಿದೆ.

ಹೋಂಸ್ಟೇ, ರೆಸಾರ್ಟ್‌ಗಳ ಅನಿಯಂತ್ರಿತ ನಿರ್ಮಾಣಕ್ಕೆ ಕಡಿವಾಣ ಹಾಕಲು ಯುನೆಸ್ಕೋ ತಜ್ಞರ ಸೂಚನೆ

ಆನೆಗೊಂದಿ ಮತ್ತು ಸಣಾಪುರ ಭಾಗಗಳಲ್ಲಿ ವ್ಯಾಪಕವಾಗಿ ತಲೆ ಎತ್ತಿರುವ ಹೋಂಸ್ಟೇ ಹಾಗೂ ರೆಸಾರ್ಟ್‌ಗಳ ನಿರ್ಮಾಣದ ಬಗ್ಗೆಯೂ ಯುನೆಸ್ಕೋ ತಜ್ಞರ ತಂಡ ಕಳವಳ ವ್ಯಕ್ತಪಡಿಸಿದೆ. ಇವುಗಳ ನಿರ್ಮಾಣವನ್ನು ನಿಯಂತ್ರಿಸಬೇಕು ಅಥವಾ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆ.

ಈ ಭಾಗದಲ್ಲಿ ಅನಧಿಕೃತ ಹೋಂಸ್ಟೇ ಮತ್ತು ರೆಸಾರ್ಟ್ ಗಳ ನಿರ್ಮಾಣ ಹೆಚ್ಚಾಗುತ್ತಿದ್ದರೂ, ಅವುಗಳನ್ನು ನಿಯಂತ್ರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುನೆಸ್ಕೋ ತಜ್ಞರ ತಂಡ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಸ್ಥಳೀಯ ಆಡಳಿತ ಎಷ್ಟರಮಟ್ಟಿಗೆ ಅನುಷ್ಠಾನಗೊಳಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಶಿಲಾಯುಗದ ಇತಿಹಾಸ ಮತ್ತು ನಮ್ಮ ಪೂರ್ವಜರ ಜೀವನ ಪದ್ಧತಿಗೆ ಸಾಕ್ಷಿಯಾಗಿರುವ ಮೋರೆರ ಗೋರಿಗಳು ನಾಡಿನ ಅಮೂಲ್ಯ ಪುರಾತನ ಸ್ಮಾರಕಗಳಾಗಿವೆ. ಇವುಗಳ ಐತಿಹಾಸಿಕ ಮಹತ್ವವನ್ನು ದೇಶಕ್ಕೆ ಪರಿಚಯಿಸಲು ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಿ, ಸರಕಾರಕ್ಕೆ ಶಿಫಾರಸು ಮಾಡಬೇಕು.

-ಆರ್.ಪಿ. ರಾಜೂರ,

ಸಾಹಿತಿ, ಕುಕನೂರ.

ಕರ್ನಾಟಕದ ಏಳು ಅದ್ಭುತಗಳಲ್ಲಿ ಮೊದಲನೆಯ ಸ್ಥಾನ ಪಡೆದ ಹಿರೇಬೆಣಕ್ಕಲ್ಲಿನ ಬೃಹತ್ ಶಿಲಾಯುಗದ ಸಮಾಧಿ ನೆಲೆ ದಕ್ಷಿಣ ಭಾರತದಲ್ಲಿಯೇ ಅತ್ಯಂತ ಮಹತ್ವ ಮಹತ್ವದ ಪ್ರಾಗೈತಿಹಾಸಿಕ ಸ್ಥಳವಾಗಿದೆ. ಆದಿಮಾನವನಿಗೆ ಸತ್ತವರನ್ನು ವ್ಯವಸ್ಥಿತವಾಗಿ ಸಂಸ್ಕಾರ ಮಾಡಬೇಕೆನ್ನುವ ಪರಿಕಲ್ಪನೆ ಮೂಡಿದ್ದಕ್ಕೆ ಮತ್ತು ಮೊಟ್ಟ ಮೊದಲ ಬಾರಿಗೆ ಸ್ಮಶಾನಗಳ ಪರಿಕಲ್ಪನೆ ಮೂಡಿದ್ದಕ್ಕೆ ಈ ನೆಲೆ ಸಾಕ್ಷಿಯಾಗಿದೆ. ಹಾಗಾಗಿ ಆದಿಮಾನವನಿಗೆ ಕಾಡಿದ ಸಾವು, ಸಾವಿನ ನಂತರದ ಜೀವನ, ಆತ್ಮಗಳ ಅಸ್ತಿತ್ವ ಮತ್ತು ಅಂತ್ಯ ಸಂಸ್ಕಾರದ ಸುತ್ತ ಬೆಳೆದು ಬಂದಿರುವ ಧಾರ್ಮಿಕ ಹಾಗೂ ಸಾಮಾಜಿಕ ಆಚರಣೆಗಳ ಬಗ್ಗೆ ಅಧ್ಯಯನ ಮಾಡಲು ಹಿರೇಬೆಣಕಲ್ ಅತ್ಯಂತ ಪ್ರಶಸ್ತವಾದ ನೆಲೆಯಾಗಿದೆ. ಇಂಥ ವಿಶಿಷ್ಟ ಪ್ರಾಗೈತಿಹಾಸಿಕ ನೆಲೆಯ ಸಂರಕ್ಷಣೆ ಪ್ರಚಾರ ಮತ್ತು ವಿಶ್ವ ಪರಂಪರೆ ತಾಣವಾಗಿ ಘೋಷಿಸಲು ಅದನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಟ್ಯಾಬ್ಲಾಯ್ಡ್ ರೂಪದಲ್ಲಿ ಪ್ರದರ್ಶಿಸಬೇಕಾದ ಅಗತ್ಯವಿದೆ. ಅದನ್ನು ರಾಜ್ಯ ಸರಕಾರ ಪ್ರಸ್ತುತ ಪಡಿಸಲು ಪ್ರಯತ್ನ್ನಿಸಲಿ.

-ಡಾ. ಶರಣಬಸಪ್ಪ ಕೋಲ್ಕಾರ,

ಇತಿಹಾಸ ಸಂಶೋಧಕರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X