Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಪಣತೊಡೋಣ

ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಪಣತೊಡೋಣ

ಪ್ರೊ. ಸಿ.ಎಸ್. ಆನಂದಪ್ರೊ. ಸಿ.ಎಸ್. ಆನಂದ14 Nov 2026 2:45 PM IST
share
ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಪಣತೊಡೋಣ

ನವೆಂಬರ್ 14 ಮಕ್ಕಳಿಗೆಂದೇ ಮೀಸಲಾದ ದಿನ. ಸದಾ ಚೆಂಡಿನಂತೆ ಪುಟಿಯುವ ಮಕ್ಕಳು ದೇಶದ ಭವಿಷ್ಯವನ್ನು ಪ್ರತಿನಿಧಿಸುವ ಅತ್ಯಮೂಲ್ಯವಾದ ಅಪೂರ್ವ ಸಂಪತ್ತು. ಎಲ್ಲರೂ ಹೇಳುವಂತೆ ಮಕ್ಕಳ ಮನಸ್ಸು ಹೂವಿನಂತೆ ಮಧುರ ಮತ್ತು ನಿಷ್ಕಲ್ಮಶವಾದದ್ದು. ಇದಕ್ಕೆ ಒಂದಿಷ್ಟೂ ಮುಕ್ಕಾಗದಂತೆ ಕಾಪಾಡಬೇಕಾದ ಜರೂರತ್ತಿದೆ. ಜಾಗತೀಕರಣ, ಖಾಸಗೀಕರಣ ಮತ್ತು ನಗರೀಕರಣದ ಈ ದಿನಮಾನದಲ್ಲಿ ಎಲ್ಲೆಡೆ ಮಕ್ಕಳ ಸ್ನೇಹಿ ವಾತಾವರಣ ರೂಪಗೊಳ್ಳಲು ಈ ಸಡಗರ, ಸಂಭ್ರಮದ ದಿನಾಚರಣೆ ಬುನಾದಿಯಾಗಬೇಕು.

ಇಂದು ಮಕ್ಕಳೆಲ್ಲರಿಂದ ಚಾಚಾ ನೆಹರೂ ಎಂದೇ ಕರೆಸಿಕೊಳ್ಳುತ್ತಿದ್ದ ದೇಶದ ಮೊದಲ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರೂ ಅವರ ಜನ್ಮ ದಿನ. ಭವ್ಯ ಭಾರತ ದೇಶ ಕಂಡ ಅಪರೂಪದ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಅವರು ಮಕ್ಕಳ ಸಮೂಹಕ್ಕೆ ಪ್ರೀತಿಯ ಚಾಚಾ ಆಗಿದ್ದರು. ಬಹು ಭಾಷಾ ಪಂಡಿತ, ಮಹಾಮೇಧಾವಿ ಮತ್ತು ಪ್ರಖರವಾದ ವ್ಯಕ್ತಿತ್ವವುಳ್ಳ ಜವಾಹರಲಾಲ್ ನೆಹರೂ ಅವರು ಕಾಶ್ಮೀರಿ ಪಂಡಿತ ಕುಟುಂಬದ ಪ್ರಸಿದ್ಧ ವಕೀಲ ಮೋತಿಲಾಲ್ ನೆಹರೂ ಮತ್ತು ಸ್ವರೂಪರಾಣಿ ದಂಪತಿಯ ಮಗನಾಗಿ 14-11-1889ರಂದು ಅಲಹಾಬಾದನಲ್ಲಿ ಜನಿಸಿದರು. ದೇಶದ ಪ್ರಗತಿಗೆ ನಿರಂತರ ಶ್ರಮಿಸಿ ರಾಷ್ಟ್ರದ ಸರ್ವಾಂಗೀಣ ಬೆಳವಣಿಗೆಗೆ ಹೊಸ ಬುನಾದಿ ಹಾಕಿದ ಮಹಾ ನಾಯಕನನ್ನು ನಾವು ಅತ್ಯಂತ ಹೆಮ್ಮೆಯಿಂದ ನೆನೆಯಬೇಕು. ದೇಶದ ಮೊದಲ ಪ್ರಧಾನ ಮಂತ್ರಿಯಾಗಿ ನೆಹರೂ ಅವರು ಜಾರಿಗೆ ತಂದ ಹೊಸ ಯೋಜನೆಗಳ ಪಟ್ಟಿ ದೊಡ್ಡದಿದೆ. ಅವರು ದೇಶದ ಅಭಿವೃದ್ಧಿಗೆ ಸಲ್ಲಿಸಿದ ಸೇವೆ ಅಪಾರವಾದದ್ದು. ಅಂತಹ ಬಹುಮುಖಿ ಮತ್ತು ಬಹುಮುಖ್ಯ ವ್ಯಕ್ತಿತ್ವವುಳ್ಳ ಜನನಾಯಕನ ಹುಟ್ಟು ಹಬ್ಬದ ದಿನವನ್ನು ದೇಶದ ತುಂಬಾ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.

ಇಂದಿನ ಮಕ್ಕಳು ಭಾವಿ ಭವಿಷ್ಯದ ನಾಗರಿಕರು. ಹೀಗೆಂದು ನಾವು ಬಹುಕಾಲದಿಂದ ಹೇಳುತ್ತಲೇ ಬಂದಿದ್ದೇವೆ. ಈಗಲೂ ನಾವು ಇದೇ ಮಾತು ಹೇಳುತ್ತಲೇ ಇದ್ದೇವೆ. ಹೀಗೆ ಹೇಳುತ್ತ ಮುದ್ದು ಮಕ್ಕಳ ಕಣ್ಣುಗಳಲ್ಲಿ ದೇಶದ ಕನಸು ಕಾಣುವವರು ನಾವುಗಳು. ಆದರೆ, ಇಂದು ಮಕ್ಕಳ ಕುರಿತು ಕನಿಕರವಾಗಲಿ, ಅನುಕಂಪವಾಗಲಿ ತೋರಿಸುವುದಕ್ಕೂ ಅವರು ಬದುಕುವ ವಾಸ್ತವ ಸ್ಥಿತಿಗೆ ಯಾವುದೇ ರೀತಿಯ ಸಾಮ್ಯತೆ ಇಲ್ಲದಂತಾಗಿದೆ. ನಿಜವಾಗಿಯೂ ಇವತ್ತಿನ ಬಾಲ ಕಾರ್ಮಿಕ ಮಕ್ಕಳ ಸ್ಥಿತಿ ನೋಡಿದಾಗ ದೇಶದ ಬಹುಪಾಲು ಮಕ್ಕಳ ಬದುಕು ಎತ್ತಕಡೆಗೆ ಸಾಗುತ್ತಿದೆ ಎಂಬುದು ತಿಳಿಯುತ್ತದೆ. ನಮ್ಮ ನಡುವೆ ಇರುವ ಅನೇಕ ಮಕ್ಕಳು ಅನಕ್ಷರತೆಯ ಅಂಧಕಾರದಲ್ಲಿ ಬಳಲುವುದರ ಜೊತೆಗೆ ಅನಾಥರಾಗಿ ಯಾವುದೇ ಆಸರೆ ಇಲ್ಲದೆ ಅಲೆಯುತ್ತಿದ್ದಾರೆ. ಇಂದು ಜಗತ್ತಿನಲ್ಲಿ ಬಹುಪಾಲು ಮಕ್ಕಳು ಬಾಲ ಕಾರ್ಮಿಕರಾಗಿದ್ದಾರೆ. ಇನ್ನು ನಮ್ಮ ದೇಶದಲ್ಲಿ ಬಾಲ ಕಾರ್ಮಿಕ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಎಳೆಯ ವಯಸ್ಸಿನಲ್ಲಿ ಆಡುತ್ತ, ಹಾಡುತ್ತ ನಲಿದಾಡಬೇಕಾದ ಮಕ್ಕಳು ದುಡಿಮೆಯಲ್ಲಿ ಸಿಲುಕಿ ಕಮರಿ ಹೋಗುತ್ತಿರುವುದು ತುಂಬಾ ನೋವಿನ ಸಂಗತಿ.

1950 ಸೆಪ್ಟಂಬರ್ 30ರಂದು ವಿಶ್ವಸಂಸ್ಥೆಯಲ್ಲಿ ಪ್ರಪಂಚದ ಎಲ್ಲ ರಾಷ್ಟ್ರ ಗಳ ನಾಯಕರು ಹಾಗೂ ಉನ್ನತ ಅಧಿಕಾರಿಗಳು ಒಂದೆಡೆ ಸೇರಿಕೊಂಡು ಮಕ್ಕಳ ವಿಚಾರದಲ್ಲಿ ವಿಶೇಷ ಚರ್ಚೆ, ಚಿಂತನೆಗೈದು ಅವರ ಏಳ್ಗೆಗೆ ಹಲವಾರು ಹಕ್ಕುಗಳು ಮತ್ತು ಯೋಜನೆಗಳನ್ನು ಜಾರಿಗೆ ತರಲು ಶ್ರಮಿಸಿದರು. ಮಕ್ಕಳ ಹಿತ ಕಾಪಾಡುವ ಸಲುವಾಗಿ ಅವರ ಆರೋಗ್ಯ, ರಕ್ಷಣೆ, ಆಹಾರ ಮತ್ತು ಶಿಕ್ಷಣ ಮೊದಲಾದ ವಿಷಯಗಳ ಕುರಿತು ಕೆಲವು ನಿಯಮಗಳನ್ನು ತಕ್ಷಣವೇ ಜಾರಿಗೆ ತರಬೇಕೆಂದು ಒತ್ತಾಯಿಸಲಾಯಿತು. ಈ ಹಿನ್ನೆಲೆಯಲ್ಲಿ ಯುನಿಸೆಫ್ ಪ್ರಮುಖ ಪಾತ್ರವಹಿಸಿತು. ಆದರೆ, ಇವತ್ತಿಗೂ ನಮ್ಮಲ್ಲಿ ಬಾಲ ಕಾರ್ಮಿಕ ಪದ್ಧತಿಯಂತಹ ಅನಿಷ್ಟ ವ್ಯವಸ್ಥೆ ಹೆಮ್ಮರವಾಗಿ ಬೆಳೆಯುತ್ತಿರುವುದು ಮಕ್ಕಳ ಮುಂದಿನ ಭವಿಷ್ಯಕ್ಕೆ ಕಂಟಕವಾಗುತ್ತದೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ತೆರೆದ ಕಣ್ಣುಗಳಿಂದ ನೋಡಿ ಸೂಕ್ತವಾದ ಕ್ರಮ ಕೈಗೊಳ್ಳಬೇಕು. ಮಕ್ಕಳ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸದೆ ಅವರಿಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ ಆ ಮಕ್ಕಳಿಗೆ ಹೊಸ ಬದುಕು ಕೊಡುವ ಕೆಲಸ ಆಗಬೇಕು.

ಇದು ಕೇವಲ ಸರಕಾರದ ಜವಾಬ್ದಾರಿ ಎಂದು ಕೈ ಕಟ್ಟಿಕೊಂಡು ಕೂಡದೆ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೆಂದು ಅರಿತು ಮಕ್ಕಳ ಉಜ್ವಲ ಭವಿಷ್ಯಕ್ಕೆ ಶ್ರಮಿಸಬೇಕು. ಆಗ ಮಾತ್ರ ನಾವೆಲ್ಲರೂ ಶಾಲಾ-ಕಾಲೇಜುಗಳಲ್ಲಿ, ಸರಕಾರಿ ಇಲಾಖೆಗಳಲ್ಲಿ ಮತ್ತು ಅನೇಕ ಸಂಘ-ಸಂಸ್ಥೆಗಳಲ್ಲಿ ಮಕ್ಕಳೊಂದಿಗೆ ಆಚರಿಸುವ ಈ ಮಕ್ಕಳ ದಿನಾಚರಣೆಗೆ ಹೊಸ ಮೆರಗು, ಹೊಸ ಅರ್ಥ ಕಲ್ಪಿಸಿದಂತಾಗುತ್ತದೆ.

Tags

children
share
ಪ್ರೊ. ಸಿ.ಎಸ್. ಆನಂದ
ಪ್ರೊ. ಸಿ.ಎಸ್. ಆನಂದ

ಇಂಗ್ಲಿಷ್ ಪ್ರಾಧ್ಯಾಪಕರು, ಕಲಬುರಗಿ

Next Story
X