Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಸದ ತೊಟ್ಟಿಯಾದ ಜೀವಸೆಲೆ: ದುಬಲಗುಂಡಿ...

ಕಸದ ತೊಟ್ಟಿಯಾದ ಜೀವಸೆಲೆ: ದುಬಲಗುಂಡಿ ಹಳ್ಳ ಕಲುಷಿತ

ಸೈಯದ್ ಮೋಸಿನ್ ಅಲಿಸೈಯದ್ ಮೋಸಿನ್ ಅಲಿ5 July 2026 7:20 PM IST
share
ಕಸದ ತೊಟ್ಟಿಯಾದ ಜೀವಸೆಲೆ: ದುಬಲಗುಂಡಿ ಹಳ್ಳ ಕಲುಷಿತ
ಗ್ರಾಪಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಹುಮನಾಬಾದ್: ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಕೆಲ ವರ್ಷಗಳ ಹಿಂದೆ ಜನರಿಗೆ ಆಸರೆಯಾಗಿದ್ದ ಹಳ್ಳ ಇದೀಗ ಸಂಪೂರ್ಣ ಕಲುಷಿತಗೊಂಡು ಬಳಕೆಗೆ ಅಸಾಧ್ಯವಾಗಿದೆಯೆಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮೊದಲೆಲ್ಲ ಸದಾ ಶುದ್ಧ ನೀರಿನಿಂದ ತುಂಬಿರುತ್ತಿದ್ದ ಈ ಹಳ್ಳದಲ್ಲಿ ಗ್ರಾಮಸ್ಥರು ಸ್ನಾನ, ಬಟ್ಟೆ ಒಗೆಯುವಂತಹ ದೈನಂದಿನ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಗ್ರಾಮದ ತ್ಯಾಜ್ಯ, ಪ್ಲಾಸ್ಟಿಕ್ ಹಾಗೂ ಕೊಳಚೆ ನೀರನ್ನು ಹಳ್ಳದ ಪಕ್ಕದಲ್ಲೇ ಬಿಸಾಡುತ್ತಿರುವುದರಿಂದ ನೀರು ಸಂಪೂರ್ಣ ಮಲಿನಗೊಂಡಿದೆ. ಇದರಿಂದ ಜಲಚರ ಪ್ರಾಣಿಗಳು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ಗ್ರಾಮದ ವಿವಿಧ ವಾರ್ಡ್ಗಳಿಂದ ಪ್ರತಿದಿನ ಸಂಗ್ರಹವಾಗುವ ಕಸವನ್ನು ನೇರವಾಗಿ ಹಳ್ಳಕ್ಕೆ ಎಸೆಯಲಾಗುತ್ತಿದ್ದು, ಜೊತೆಗೆ ಚರಂಡಿ ನೀರೂ ಇದೇ ಹಳ್ಳವನ್ನು ಸೇರುತ್ತಿದೆ. ಹಳ್ಳದ ಪರಿಸ್ಥಿತಿ ಹದಗೆಟ್ಟಿದ್ದು, ರೋಗರುಜಿನಗಳ ತಾಣವಾಗುವ ಭೀತಿ ಎದುರಾಗಿದೆ. ಹಳ್ಳದ ಸುತ್ತಮುತ್ತ ಸತ್ತ ಪ್ರಾಣಿಗಳನ್ನು ಕೂಡ ಬಿಸಾಡುತ್ತಿರುವುದರಿಂದ ದುರ್ವಾಸನೆ ವ್ಯಾಪಿಸಿದೆ.

ಈ ಮಾರ್ಗದಲ್ಲೇ ರೈತರು ತಮ್ಮ ಹೊಲಗಳಿಗೆ ತೆರಳುತ್ತಿದ್ದು, ದಲಿತರ ಸ್ಮಶಾನ ಭೂಮಿಗೂ ಇದೇ ದಾರಿ ಸಂಪರ್ಕ ಹೊಂದಿದೆ. ಹಳ್ಳದ ಸಮೀಪದಲ್ಲೇ ದಲಿತರ ಓಣಿ ಇರುವುದರಿಂದ ಮಳೆಗಾಲದ ಸಂದರ್ಭದಲ್ಲಿ ರೋಗಗಳು ಹರಡುವ ಆತಂಕ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪರಿಸರ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ರೂಪಿಸುವುದು ಗ್ರಾಮ ಪಂಚಾಯತಿಯ ಕರ್ತವ್ಯವಾಗಿದ್ದರೂ, ಆಡಳಿತ ನಿರ್ಲಕ್ಷ್ಯ ತೋರಿಸುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಕಸದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಸ್ಥಳವನ್ನು ಗುರುತಿಸದಿರುವುದು ಸಾರ್ವಜನಿಕರಲ್ಲಿ ಪ್ರಶ್ನೆ ಹುಟ್ಟಿಸಿದೆ.

ಕೆಲ ವರ್ಷಗಳ ಹಿಂದಷ್ಟೇ ಶುದ್ಧವಾಗಿದ್ದ ಹಳ್ಳ ಇಂದು ಕಸದ ತೊಟ್ಟಿಯಾಗಿ ಮಾರ್ಪಟ್ಟಿರುವುದು ಗ್ರಾಮ ಪಂಚಾಯತಿಯ ಇಚ್ಛಾಶಕ್ತಿಯ ಕೊರತೆಯನ್ನೇ ತೋರಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಹಳ್ಳದ ಸ್ವಚ್ಛತೆಗೆ ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸರಕಾರದಿಂದ ಕಸ ವಿಲೇವಾರಿ ಘಟಕಕ್ಕೆ ಅನುದಾನ ಬಂದಿದ್ದು, ಸ್ಥಳದ ಕೊರತೆಯಿಂದ ಕಾಮಗಾರಿ ಪ್ರಾರಂಭವಾಗಿಲ್ಲ. ತಹಶೀಲ್ದಾರ್ ಕಚೇರಿಯಿಂದ ಶೀಘ್ರದಲ್ಲೇ ಸ್ಥಳ ನೀಡಲಾಗುತ್ತದೆ. ಸ್ಥಳ ನಿಗದಿಯಾದ ಬಳಿಕ ಘಟಕ ನಿರ್ಮಾಣ ಮಾಡಲಾಗುವುದು. ಸೋಮವಾರ ಸಭೆ ಕರೆದು ಹಳ್ಳ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಗುವುದು.

-ವೀರಶೆಟ್ಟಿ ಬಿರಾದಾರ್, ಪಿಡಿಓ, ದುಬಲಗುಂಡಿ

ದಲಿತ ಸಮುದಾಯದ ಸ್ಮಶಾನಕ್ಕೆ ಇದೇ ದಾರಿ ಇದ್ದು, ರೈತರ ಹೊಲಗಳಿಗೂ ಇದೇ ಮಾರ್ಗ ಬಳಸಲಾಗುತ್ತದೆ. ಹಳ್ಳದ ಬಳಿಯೇ ಜನ ವಾಸವಿರುವುದರಿಂದ ರೋಗಗಳ ಭೀತಿ ಹೆಚ್ಚಾಗಿದೆ. ಪಂಚಾಯತಿ ಹಾಗೂ ಮೇಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಜಲ ಮತ್ತು ವಾಯು ಮಾಲಿನ್ಯ ತಡೆಯಬೇಕು.

-ವಿಜಯಕುಮಾರ್ ನಾತೆ, ಮಾಜಿ ಗ್ರಾಪಂ ಸದಸ್ಯ ಹಾಗೂ ವಕೀಲ

share
ಸೈಯದ್ ಮೋಸಿನ್ ಅಲಿ
ಸೈಯದ್ ಮೋಸಿನ್ ಅಲಿ
Next Story
X