Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೃಷ್ಣೆಯ ನೀರು ತಿರುವಿಗೆ ಮಹಾರಾಷ್ಟ್ರ...

ಕೃಷ್ಣೆಯ ನೀರು ತಿರುವಿಗೆ ಮಹಾರಾಷ್ಟ್ರ ಸಿದ್ಧತೆ: ಉತ್ತರ ಕರ್ನಾಟಕದಲ್ಲಿ ಆತಂಕ

40 ಟಿಎಂಸಿ ಅಡಿ ನೀರನ್ನು ಉಜನಿ ಜಲಾಶಯಕ್ಕೆ ಹರಿಸುವ ಯೋಜನೆ; ಕರ್ನಾಟಕದ ಹಿತಾಸಕ್ತಿ ರಕ್ಷಣೆಗೆ ಹೋರಾಟದ ಸಿದ್ಧತೆ

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್4 Nov 2026 2:58 PM IST
share
ಕೃಷ್ಣೆಯ ನೀರು ತಿರುವಿಗೆ ಮಹಾರಾಷ್ಟ್ರ ಸಿದ್ಧತೆ: ಉತ್ತರ ಕರ್ನಾಟಕದಲ್ಲಿ ಆತಂಕ

ವಿಜಯಪುರ : ಕೃಷ್ಣಾ ನದಿ ನೀರಿನ ವಿಷಯವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಜಲ ವಿವಾದಕ್ಕೆ ದಶಕಗಳ ಇತಿಹಾಸವಿದೆ. ಆದರೆ, ಪದೇ ಪದೇ ನ್ಯಾಯಾಧೀಕರಣದ ತೀರ್ಪನ್ನೇ ಸಂಪೂರ್ಣವಾಗಿ ಮರೆಮಾಚಿ ಮಹಾರಾಷ್ಟ್ರ ಸರಕಾರ ಕೃಷ್ಣೆಯ ನೀರನ್ನು ಕಬಳಿಸಲು ಹೊರಟಿರುವುದು ಕನ್ನಡಿಗರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ನ್ಯಾಯಾಧೀಕರಣದ ಸ್ಪಷ್ಟ ಆದೇಶವನ್ನು ಉಲ್ಲಂಘಿಸಿ, ಕೃಷ್ಣೆಯ ಪ್ರವಾಹದ ನೀರನ್ನು ಉಜನಿ ಜಲಾಶಯಕ್ಕೆ ವರ್ಗಾಯಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲು ಮಹಾ ಸರಕಾರ ಮುಂದಾಗಿರುವುದು ಉತ್ತರ ಕರ್ನಾಟಕದ ಪಾಲಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ.

ಮಹಾರಾಷ್ಟ್ರ ಸರಕಾರವು ಸುಮಾರು19 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೃಷ್ಣಾ ನದಿಯ 40 ಟಿಎಂಸಿ ಅಡಿ ಪ್ರವಾಹದ ನೀರನ್ನು ಭೀಮಾ ನದಿಗೆ (ಉಜಣಿ ಜಲಾಶಯ) ತಿರುಗಿಸುವ ಬೃಹತ್ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದೆ. ಅಷ್ಟೇ ಅಲ್ಲದೆ, ಈ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಜುಲೈ 2026 ರಲ್ಲಿ ಮಹಾರಾಷ್ಟ್ರ ಸರಕಾರ 24 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂಬ ಮಾಹಿತಿ ಕೃಷ್ಣೆಯ ಕಣಿವೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಾಧ್ಯಮ ಸಂವಾದವೊಂದರಲ್ಲಿ ಈ ಯೋಜನೆಯ ಕುರಿತು ಉಲ್ಲೇಖಿಸಿದ್ದು, ಯೋಜನೆ ಜಾರಿಗೆ ‘ಮಹಾ ಸರಕಾರ’ ಹತ್ತಾರು ಹೆಜ್ಜೆಗಳನ್ನು ಮುನ್ನಿಟ್ಟಿರುವುದನ್ನು ಸ್ಪಷ್ಟಪಡಿಸಿದೆ.

ಮಹಾರಾಷ್ಟ್ರದ ಈ ನೀರು ತಿರುವು ಯೋಜನೆಯಿಂದಾಗಿ ಕರ್ನಾಟಕದ ಆಲಮಟ್ಟಿ ಜಲಾಶಯ ಮತ್ತು ಹಿಪ್ಪರಗಿ ಬ್ಯಾರೇಜ್ ಗೆ ಹರಿದುಬರುವ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಲಿದೆ. ಇದರಿಂದಾಗಿ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳ ಲಕ್ಷಾಂತರ ಎಕರೆ ಕೃಷಿ ಭೂಮಿಗೆ ನೀರಾವರಿ ಹಾಗೂ ಕೋಟ್ಯಂತರ ಜನರಿಗೆ ಕುಡಿಯುವ ನೀರಿನ ಅಭಾವ ತಲೆದೋರಲಿದೆ. ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ತೀರ್ಪಿನ ಪ್ರಕಾರ, 2050ರ ಮೇ 31ರವರೆಗೆ ಯಾವುದೇ ರಾಜ್ಯವೂ ತನ್ನ ಮಿತಿಗಿಂತ ಹೆಚ್ಚಿನ ನೀರನ್ನು ಬೇರೆಡೆಗೆ ತಿರುಗಿಸುವಂತಿಲ್ಲ. ಹಿಂದೆ ಕೃಷ್ಣಾ ಮೇಲ್ದಂಡೆಯಿಂದ ಭೀಮಾ ಉಪಜಲಾನಯನ ಪ್ರದೇಶಕ್ಕೆ ನೀರು ವರ್ಗಾಯಿಸುವ ಮಹಾರಾಷ್ಟ್ರದ ಪ್ರಸ್ತಾವನೆಯನ್ನು ನ್ಯಾಯಮಂಡಳಿಯು ತಿರಸ್ಕರಿಸಿತ್ತು. ಹೀಗಿದ್ದರೂ ಮಹಾರಾಷ್ಟ್ರ ಸರಕಾರ ಏಕಪಕ್ಷೀಯವಾಗಿ ಈ ಯೋಜನೆ ಕೈಗೆತ್ತಿಕೊಳ್ಳುತ್ತಿರುವುದು ಸಂಪೂರ್ಣ ಕಾನೂನುಬಾಹಿರ ಎಂದು ಕರ್ನಾಟಕ ಪ್ರತಿಪಾದಿಸಿದೆ.

ಇನ್ನೊಂದೆಡೆ, ಕೇಂದ್ರ ಸರಕಾರದ ತಾರತಮ್ಯದ ಧೋರಣೆಯೂ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಗೆಜೆಟ್‌ನಲ್ಲಿ ಪ್ರಕಟವಾಗದ ಕಾರಣ ಕರ್ನಾಟಕಕ್ಕೆ ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗೆಜೆಟ್ ಪ್ರಕಟಣೆಯ ನೆಪ ಒಡ್ಡಿ ಕೇಂದ್ರ ಸರಕಾರ ಕರ್ನಾಟಕದ ಯೋಜನೆಗಳ ಡಿಪಿಆರ್‌ಗಳನ್ನು ತಿರಸ್ಕರಿಸುತ್ತಿದೆ. ಆದರೆ, ಇದೇ ಗೆಜೆಟ್ ಪ್ರಕಟಣೆಯಿಲ್ಲದೆ ಮಹಾರಾಷ್ಟ್ರದ ಕಾನೂನುಬಾಹಿರ ಯೋಜನೆಗೆ ವಿಶ್ವಬ್ಯಾಂಕ್ ನೆರವು ಮತ್ತು ಕೇಂದ್ರದ ಅನುಮತಿ ಹೇಗೆ ಸಿಗುತ್ತಿದೆ ಎಂದು ಕರ್ನಾಟಕ ಸರಕಾರ ಬಲವಾಗಿ ಪ್ರಶ್ನಿಸಿದೆ.

ಈ ವಿಷಯವನ್ನು ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಗಮನಕ್ಕೆ ತರುತ್ತಿದ್ದಂತೆಯೇ, ಜಲಸಂಪನ್ಮೂಲ ಸಚಿವ ಡಾ. ಎಂ.ಬಿ. ಪಾಟೀಲರು ಈ ವಿಷಯದ ವಿರುದ್ಧ ಪ್ರಬಲ ಧ್ವನಿ ಎತ್ತಿದ್ದಾರೆ. ಮಹಾರಾಷ್ಟ್ರದ ಕುತಂತ್ರವನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಮತ್ತೊಂದು ಭಗೀರಥ ಯತ್ನಕ್ಕೆ ಸಚಿವ ಎಂ.ಬಿ. ಪಾಟೀಲ್ ಸಜ್ಜಾಗಿದ್ದಾರೆ.

ಸಚಿವ ಲಕ್ಷ್ಮಣ ಸವದಿ ಹಾಗೂ ಹೆಚ್.ಕೆ. ಪಾಟೀಲ ಸೇರಿದಂತೆ ರಾಜ್ಯದ ಅನೇಕ ಹಿರಿಯ ನಾಯಕರನ್ನು ಪಕ್ಷಾತೀತವಾಗಿ ಸಂಘಟಿಸಿ, ಕರ್ನಾಟಕದ ನೀರಿನ ಹಕ್ಕನ್ನು ರಕ್ಷಿಸಲು ಹಾಗೂ ಸರಕಾರದ ಮಟ್ಟದಲ್ಲಿ ಗಟ್ಟಿ ಧ್ವನಿ ಮೊಳಗಿಸಲು ಬೃಹತ್ ಹೋರಾಟಕ್ಕೆ ರೂಪುರೇಷೆ ಸಿದ್ಧಗೊಳಿಸಲಾಗುತ್ತಿದೆ.

share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X