Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಂಗಳೂರು ಜೈಲಿಗಿಲ್ಲ ಖಾಯಂ ವೈದ್ಯರ ಸೇವೆ

ಮಂಗಳೂರು ಜೈಲಿಗಿಲ್ಲ ಖಾಯಂ ವೈದ್ಯರ ಸೇವೆ

ಸತ್ಯಾ ಕೆ.ಸತ್ಯಾ ಕೆ.17 May 2026 9:20 AM IST
share
ಮಂಗಳೂರು ಜೈಲಿಗಿಲ್ಲ ಖಾಯಂ ವೈದ್ಯರ ಸೇವೆ
ಕೈದಿಗಳ ತುರ್ತು ಚಿಕಿತ್ಸೆಗೆ ತೊಂದರೆ

ಮಂಗಳೂರು : ರಾಜ್ಯದ ಅತೀ ಸೂಕ್ಷ್ಮ ಬಂಧೀಖಾನೆಯಾಗಿರುವ ಮಂಗಳೂರು ಕಾರಾಗೃಹದಲ್ಲಿ ಆಗಾಗ್ಗೆ ಹೊಡೆದಾಟ, ಹಲ್ಲೆ ಪ್ರಕರಣಗಳು ನಡೆಯುತ್ತಿರುತ್ತವೆ. ಹಾಗಿದ್ದರೂ ಜೈಲಿಗೆ ಖಾಯಂ ವೈದ್ಯರಾಗಲಿ, ಫಾರ್ಮಾಸಿಸ್ಟ್ ಗಳಾಗಲಿ, ದಾದಿಯರಾಗಲಿ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಇಲ್ಲವಾಗಿದೆ. ಇದು ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ತೀರಾ ಪೇಚಾಟಕ್ಕೆ ಕಾರಣವಾಗುತ್ತಿದೆ.

ಮೇ 16ರ ಮಾಹಿತಿಯ ಪ್ರಕಾರ ದ.ಕ. ಜಿಲ್ಲಾ ಕಾರಾಗೃಹದಲ್ಲಿ ಶಿಕ್ಷೆಗೊಳಗಾದವರು, ವಿಚಾರ ಣಾಧೀನ 349 ಕೈದಿಗಳಿದ್ದಾರೆ. ಇವರಲ್ಲಿ ನಿರಂತರ ಅಪರಾಧ ಕೃತ್ಯದಲ್ಲಿ ತೊಡಗಿದವರು, ದರೋಡೆ, ಕೊಲೆ, ಹಲ್ಲೆ ಯತ್ನ, ಕಳವು, ಮಾದಕವಸ್ತು ಸೇವನೆ, ಮಾದಕ ಸಾಗಾಟ, ಲೈಂಗಿಕ ದೌರ್ಜನ್ಯ, ದನ ಸಾಗಾಟ ಸೇರಿದಂತೆ ನಾನಾ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿದ್ದಾರೆ. ಕೈದಿಗಳಲ್ಲೂ ಶೇ.20ಕ್ಕೂ ಅಧಿಕ ಮಂದಿ ನಾನಾ ಆರೋಗ್ಯ ಸಮಸ್ಯೆಯಿಂದ ಬಳಲು ತ್ತಿದ್ದು, ಬಹುತೇಕ ಮಂದಿಗೆ ನಿತ್ಯ ವೈದ್ಯಕೀಯ ತಪಾಸಣೆ ಅಗತ್ಯವಿದೆ. ಅಂತಹ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ವೈದ್ಯಾಧಿಕಾರಿ ಮೂಲಕ ವೆನ್ಲಾಕ್ ಆಸ್ಪತ್ರೆಯಿಂದ ವೈದ್ಯರನ್ನು ಒದಗಿಸಲಾಗುತ್ತಿದೆ. ರೊಟೇಶನ್ ಮೇರೆೆಗೆ ಲಭ್ಯ ಇರುವ ವೈದ್ಯರನ್ನು ಜೈಲಿಗೆ ಕೈದಿಗಳ ತಪಾಸಣೆ ಅಥವಾ ಚಿಕಿತ್ಸೆಗೆ ಕಳುಹಿಸಲಾಗುತ್ತದೆ. ಆದರೆ, ಇವತ್ತು ಚಿಕಿತ್ಸೆ ನೀಡಿದ ವೈದ್ಯರು ಮುಂದಿನ ಸಲ ಆಗಮಿಸದಿರುವ ಕಾರಣ ಕೈದಿಯ ಚಿಕಿತ್ಸಾ ಇತಿಹಾಸದ ಬಗ್ಗೆ ನಿಖರ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ಕೊಡಿಸುವುದು ಕಷ್ಟವಾಗುತ್ತದೆ ಎನ್ನುತ್ತಾರೆ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ.

ಹಿಂದೆ ವೈದ್ಯರು, ಫಾರ್ಮಾಸಿಸ್ಟ್, ನರ್ಸ್ ಗಳನ್ನು ನೇಮಕ ಮಾಡಲಾಗುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ಈ ಜವಾಬ್ದಾರಿಯನ್ನು ವಹಿಸಲಾಗಿದ್ದು, ವೆನ್ಲಾಕ್‌ನಿಂದ ದಿನಕ್ಕೊಬ್ಬ ವೈದ್ಯರನ್ನು ಜೈಲಿನಲ್ಲಿ ಆರೋಪಿಗಳ ತಪಾಸಣೆಗೆ ಕಳುಹಿಸಿಕೊಡಲಾಗುತ್ತಿದೆ. ಫಾರ್ಮಾ ಸಿಸ್ಟ್ ಗಳೂ ಲಭ್ಯವಿಲ್ಲದ ಕಾರಣ ತುರ್ತು ಸಂದರ್ಭ ದಲ್ಲಿ ಕೈದಿಗಳಿಗೆ ಅಗತ್ಯ ಔಷಧಿಗಳನ್ನು ಒದಗಿಸಲು ಅಧಿಕಾರಿ, ಸಿಬ್ಬಂದಿ ಪೇಚಾಡುವ ಪರಿಸ್ಥಿತಿ ಇದೆ. ಹಾಗಾಗಿ ಜೈಲಿಗೆ ಖಾಯಂ ವೈದ್ಯರು, ಫಾರ್ಮಾಸಿಸ್ಟ್ ಹಾಗೂ ಆಂಬುಲೆನ್ಸ್ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗೆ ಜೈಲು ಅಧೀಕ್ಷಕರು ಮನವಿ ಸಲ್ಲಿಸಿದ್ದಾರೆ.

ಕಾರಾಗೃಹದಲ್ಲಿ ಮುಂಜೂರಾದ ಹುದ್ದೆಗಳಲ್ಲಿ ಶೇ.80ರಷ್ಟು ಅಧಿಕಾರಿ ಸಿಬ್ಬಂದಿ ಇದ್ದಾರೆ. ಜೈಲಿನ ಸಾಮರ್ಥ್ಯಕ್ಕಿಂತ ಸುಮಾರು ದುಪ್ಪಟ್ಟು ಕೈದಿಗಳು ಇರುವ ಕಾರಣ ಇವರ ನಿರ್ವಹಣೆಗೆ ಸಮಸ್ಯೆ ಎದುರಿಸುವಂತಾಗಿದೆ. ಒತ್ತಡವನ್ನು ತಗ್ಗಿಸುವ ದೃಷ್ಟಿಯಿಂದ ಕಳೆದ 10 ತಿಂಗಳ ಅವಧಿಯಲ್ಲಿ ಸುಮಾರು 100ರಷ್ಟು ಕೈದಿಗಳನ್ನು ಮಡಿಕೇರಿ, ಬೆಳಗಾವಿ, ಹಾಸನ ಸೇರಿದಂತೆ ವಿವಿಧ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ.

210 ಸಾಮರ್ಥ್ಯ ಬಲ ಹೊಂದಿರುವ ಮಂಗಳೂರು ಕಾರಾಗೃಹದಲ್ಲಿ ಆರು ಶಿಕ್ಷಾ ಕೈದಿಗಳು, 337 ಮಂದಿ ವಿಚಾರಣಾಧೀನ ಕೈದಿಗಳು, ಓರ್ವ ಗೂಂಡಾ ಕಾಯ್ದೆ ಕೈದಿ, ಐವರು ವಿದೇಶಿ ಕೈದಿಗಳು ಸೇರಿದಂತೆ ಒಟ್ಟು 349 ಕೈದಿಗಳಿದ್ದಾರೆ.

ಅಧಿಕಾರಿ, ಸಿಬ್ಬಂದಿಯನ್ನು ಕಾಡುತ್ತಿದೆ ಭಾಷಾ ಸಮಸ್ಯೆ! :

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿರುವ ಅಧಿಕಾರಿ, ಸಿಬ್ಬಂದಿಯಲ್ಲಿ ಯಾರೂ ಸ್ಥಳೀಯರಲ್ಲ. ಸುಮಾರು 99 ಮಂದಿ ಅಧಿಕಾರಿ, ಸಿಬ್ಬಂದಿಯಲ್ಲಿ ಯಾರಿಗೂ ತುಳು ಭಾಷೆ ಬರುವುದಿಲ್ಲ. ಹಾಗಾಗಿ ಬಹುತೇಕ ಸ್ಥಳೀಯರೇ ಆಗಿರುವ ಕೈದಿಗಳ ಜೊತೆ ಸಂವಹನಕ್ಕೆ ತೊಂದರೆಯಾಗುತ್ತಿದೆ. ಕೆಲವೊಂದು ಸಂದರ್ಭಗಳಲ್ಲಿ ವಿಚಾರಣಾಧೀನ ಕೈದಿಗಳು ಅಧಿಕಾರಿ, ಸಿಬ್ಬಂದಿಯನ್ನು ತುಳುವಿನಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದರೂ ಅರ್ಥವಾಗದ ಪರಿಸ್ಥಿತಿ ಇದೆ ಎನ್ನುತ್ತಾರೆ ಜೈಲಿನ ಅಧಿಕಾರಿಗಳು.

ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಲ್ಲಿ ಕೆಲವರು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಈ ಸಂದರ್ಭ ಆರೋಗ್ಯಾಧಿಕಾರಿಗಳ ಮೂಲಕ ವೆನ್ಲಾಕ್ ಆಸ್ಪತ್ರೆಯಿಂದ ವೈದ್ಯರನ್ನು ಕರೆಸಲಾಗುತ್ತದೆ. ಆದರೆ ತುರ್ತು ಸಂದರ್ಭದಲ್ಲಿ ಕೈದಿಗಳ ಚಿಕಿತ್ಸೆಗೆ ಖಾಯಂ ವೈದ್ಯರು, ಫಾರ್ಮಾಸಿಸ್ಟ್ ಹಾಗೂ ಆಂಬುಲೆನ್ಸ್‌ನ ಅಗತ್ಯವಿದೆ. ಜಿಲ್ಲಾ ಆರೋಗ್ಯಾಧಿಕಾರಿಗೆ ಈ ಬಗ್ಗೆ ಮನವಿ ನೀಡಲಾಗಿದೆ. ತಾತ್ಕಾಲಿಕ ನೆಲೆಯಲ್ಲಿ ನೇಮಕ ಮಾಡಿಕೊಂಡು ವೈದ್ಯರನ್ನು ಒದಗಿಸಲು ಪ್ರಯತ್ನಿಸುವುದಾಗಿ ಆರೋಗ್ಯಾಧಿಕಾರಿ ಭರವಸೆ ನೀಡಿದ್ದಾರೆ.

-ಶರಣಬಸಪ್ಪ, ಅಧೀಕ್ಷರು, ಮಂಗಳೂರು ಕಾರಾಗೃಹ

Tags

Mangalore Jail
share
ಸತ್ಯಾ ಕೆ.
ಸತ್ಯಾ ಕೆ.
Next Story
X