Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಮ್ಮಿಗನೂರಲ್ಲಿ ಬಿಡಾಡಿ ದನಗಳ ಹಾವಳಿ:...

ಎಮ್ಮಿಗನೂರಲ್ಲಿ ಬಿಡಾಡಿ ದನಗಳ ಹಾವಳಿ: ಅಂಗಡಿ-ಮುಂಗಟ್ಟುಗಳಿಗೆ ಲಗ್ಗೆ, ಸವಾರರು ಹೈರಾಣ

ರಸ್ತೆಗಳಲ್ಲೇ ಠಿಕಾಣಿ; ಅಪಘಾತದ ಭೀತಿಯಲ್ಲಿ ಪಾದಚಾರಿಗಳು, ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಜಿಲಾನಸಾಬ್ ಬಡಿಗೇರ್ಜಿಲಾನಸಾಬ್ ಬಡಿಗೇರ್4 Nov 2026 2:33 PM IST
share
ಎಮ್ಮಿಗನೂರಲ್ಲಿ ಬಿಡಾಡಿ ದನಗಳ ಹಾವಳಿ: ಅಂಗಡಿ-ಮುಂಗಟ್ಟುಗಳಿಗೆ ಲಗ್ಗೆ, ಸವಾರರು ಹೈರಾಣ

ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಬಿಡಾಡಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮದ ಪ್ರಮುಖ ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಗುಂಪು ಗುಂಪಾಗಿ ಸಂಚರಿಸುವ ದನಗಳು ರಸ್ತೆಯಲ್ಲೇ ಠಿಕಾಣಿ ಹೂಡುತ್ತಿವೆ. ಅಲ್ಲದೆ, ಅಂಗಡಿ-ಮುಂಗಟ್ಟುಗಳಿಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಚೆಲ್ಲಾಪಿಲ್ಲಿ ಮಾಡುತ್ತಿವೆ. ಇದರಿಂದ ವಾಹನ ಸವಾರರು, ಪಾದಚಾರಿಗಳು ಹಾಗೂ ವ್ಯಾಪಾರಿಗಳು ಬೇಸತ್ತು ಹೋಗಿದ್ದಾರೆ.

ಬಿಡಾಡಿ ದನಗಳ ಹಾವಳಿ ನಿಯಂತ್ರಿಸುವಂತೆ ಸಾರ್ವಜನಿಕರು ಹಲವು ಬಾರಿ ಗ್ರಾಮ ಪಂಚಾಯಿತಿ ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ. ದನಗಳ ನಿಯಂತ್ರಣಕ್ಕೆ ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಮಧ್ಯದಲ್ಲೇ ದನಗಳು ಗುಂಪು ಗುಂಪಾಗಿ ಮಲಗುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಕೆಲವೊಮ್ಮೆ ವಾಹನ ಸವಾರರ ಮೇಲೆ ದಾಳಿ ನಡೆಸುವ ಘಟನೆಗಳೂ ನಡೆದಿವೆ. ದನಗಳು ಏಕಾಏಕಿ ರಸ್ತೆಗೆ ನುಗ್ಗುವುದರಿಂದ ಬೈಕ್ ಸವಾರರು ದಿಕ್ಕು ಬದಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆ ದನಗಳು ಮನಬಂದಂತೆ ಸಂಚರಿಸುವುದರಿಂದ ಅಪಘಾತದ ಆತಂಕ ಮತ್ತಷ್ಟು ಹೆಚ್ಚಿದೆ.

ಗ್ರಾಮದ ಮಸೀದಿ ವೃತ್ತ, ಕುರುಗೋಡು-ಕಂಪ್ಲಿ ರಸ್ತೆ, ಸೂಗೂರು ಕ್ರಾಸ್, ಎಚ್. ವೀರಾಪುರ ರಸ್ತೆ, ರಾಜ್ಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಈ ರಸ್ತೆಗಳಲ್ಲೇ ಹಿಂಡು ಹಿಂಡಾಗಿ ದನಗಳು ಬೀಡುಬಿಡುತ್ತಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ.

ಸವಾರರಿಗೆ ಅಪಘಾತದ ಭೀತಿ: ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳ ಸುರಕ್ಷತೆ ಬಗ್ಗೆಯೂ ಪಾಲಕರಲ್ಲಿ ಆತಂಕ ಮೂಡಿದೆ. ವಾಹನಗಳು ಸಂಚರಿಸುವಾಗ ದನಗಳು ಏಕಾಏಕಿ ಅಡ್ಡಬರುವುದರಿಂದ ಸವಾರರು ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆಯಿದೆ. ಇದರಿಂದ ಹಲವು ಅಪಘಾತಗಳು ಸಂಭವಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಹಣ್ಣು, ಹೂವು ಹಾಗೂ ತರಕಾರಿ ಮಾರಾಟ ಮಾಡುವ ವ್ಯಾಪಾರಿಗಳಿಗೂ ಬಿಡಾಡಿ ದನಗಳ ಹಾವಳಿ ದೊಡ್ಡ ತಲೆನೋವಾಗಿದೆ. ಅಂಗಡಿಗಳಿಗೆ ಏಕಾಏಕಿ ನುಗ್ಗುವ ದನಗಳು ಹಣ್ಣು, ತರಕಾರಿಗಳನ್ನು ತಿಂದು ಚೆಲ್ಲಾಪಿಲ್ಲಿ ಮಾಡುತ್ತಿದ್ದು, ವ್ಯಾಪಾರಿಗಳಿಗೆ ನಷ್ಟ ಉಂಟಾಗುತ್ತಿದೆ.

ಮಾಲೀಕರಿಗೆ ಎಚ್ಚರಿಕೆ ನೀಡಲು ಆಗ್ರಹ: ಕೆಲವರು ತಮ್ಮ ದನಕರುಗಳನ್ನು ಸಾಕಲು ಸೂಕ್ತ ವ್ಯವಸ್ಥೆ ಮಾಡದೆ ರಸ್ತೆಗಳಲ್ಲೇ ಬಿಡುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಮಹಿಳೆಯರು, ವೃದ್ಧರು ರಸ್ತೆಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಹತ್ತಾರು ದನಗಳು ಒಂದೆಡೆ ಸೇರಿ ಕಾದಾಡುವಾಗ ಸಾರ್ವಜನಿಕರಿಗೆ ಗಾಯಗಳಾಗಿರುವ ಘಟನೆಗಳೂ ನಡೆದಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಬಸ್ ನಿಲ್ದಾಣದ ಪ್ರಮುಖ ಬೀದಿಯಲ್ಲೂ ಬಿಡಾಡಿ ದನಗಳು ಬೀಡುಬಿಟ್ಟಿವೆ. ದನಗಳ ಮಾಲೀಕರಿಗೆ ಗ್ರಾಮ ಪಂಚಾಯಿತಿ ಆಡಳಿತ ಖಡಕ್ ಎಚ್ಚರಿಕೆ ನೀಡಬೇಕು. ದನಗಳನ್ನು ರಸ್ತೆಗೆ ಬಿಡದಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆಹಾರಕ್ಕೂ ಪರದಾಟ: ಆಹಾರ ಅರಸಿ ಬಿಡಾಡಿ ದನಗಳು ಬೆಳಗ್ಗೆ ವಿವಿಧ ಬಡಾವಣೆಗಳಲ್ಲಿ ಸಂಚರಿಸುತ್ತವೆ. ರಾತ್ರಿ ವೇಳೆ ಮನೆಗಳ ಬಳಿ ತೆರಳಿ ಉಳಿದ ಅನ್ನ, ರೊಟ್ಟಿ ಸೇರಿದಂತೆ ಆಹಾರ ಪದಾರ್ಥಗಳನ್ನು ತಿನ್ನುತ್ತವೆ. ಕೆಲವರು ಅವುಗಳಿಗೆ ಹಣ್ಣು ಹಾಗೂ ಆಹಾರ ನೀಡುತ್ತಾರೆ. ಬಳಿಕ ರಸ್ತೆ ಬದಿಯ ಹಣ್ಣು, ತರಕಾರಿ ಮತ್ತು ಹೂವಿನ ಅಂಗಡಿಗಳಿಗೆ ನುಗ್ಗುತ್ತವೆ. ಕಸದ ತೊಟ್ಟಿಗಳಲ್ಲಿ ಬಿಸಾಡಿದ ಆಹಾರ ಪದಾರ್ಥಗಳನ್ನು ತಿನ್ನುವ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಇದರಿಂದ ದನಗಳ ಆರೋಗ್ಯದ ಮೇಲೂ ಪರಿಣಾಮ ಬೀರುವ ಆತಂಕವಿದೆ.

ಗ್ರಾಮದಲ್ಲಿ ಮೈಕ್ ಮೂಲಕ ದನಗಳ ಮಾಲೀಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ದನಗಳನ್ನು ರಸ್ತೆಗೆ ಬಿಡದಂತೆ ಕ್ರಮ ವಹಿಸಲು ಒಂದು ವಾರ ಕಾಲಾವಕಾಶ ನೀಡಲಾಗಿದೆ. ಸೂಚನೆ ಪಾಲಿಸದಿದ್ದರೆ ದನಗಳನ್ನು ಗೋಶಾಲೆಗೆ ಕಳುಹಿಸುವುದರ ಜೊತೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

<ಹಾಲರವಿ ಶೇಷಗಿರಿ,ಪಿಡಿಒ,

ಎಮ್ಮಿಗನೂರು ಗ್ರಾಮ ಪಂಚಾಯತ್

ಬಿಡಾಡಿ ದನಗಳಿಂದ ಗ್ರಾಮಸ್ಥರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಗ್ರಾಮ ಪಂಚಾಯಿತಿಯವರು ದನಗಳನ್ನು ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಸಾರ್ವಜನಿಕರು ಇನ್ನಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ.

<ಎಳ್ಳರ್ತಿ ರಾಘವೇಂದ್ರ ರೆಡ್ಡಿ, ಎಮ್ಮಿಗನೂರು

ಈ ರಸ್ತೆಯಲ್ಲಿ ವಾಹನ ಚಲಾಯಿಸುವುದೇ ಕಷ್ಟವಾಗಿದೆ. ವಾಹನಗಳು ಬರುತ್ತಿದ್ದಂತೆ ದನಗಳು ರಸ್ತೆಗೆ ಅಡ್ಡಲಾಗಿ ನುಗ್ಗುತ್ತವೆ. ಬೈಕ್ ಸವಾರರಿಗೆ ದನಗಳು ಗುದ್ದಿದ ಘಟನೆಗಳೂ ನಡೆದಿವೆ. ಪದೇಪದೇ ಅಪಘಾತಗಳು ಸಂಭವಿಸುತ್ತಿರುವುದರಿಂದ ಗ್ರಾಮ ಪಂಚಾಯಿತಿಯವರು ಕೂಡಲೇ ಕ್ರಮ ಕೈಗೊಳ್ಳಬೇಕು.

<ಜಡೇಶ, ವಾಹನ ಸವಾರ, ಎಮ್ಮಿಗನೂರು

Tags

EmmiganuruAnimals‌ stray cattle
share
ಜಿಲಾನಸಾಬ್ ಬಡಿಗೇರ್
ಜಿಲಾನಸಾಬ್ ಬಡಿಗೇರ್
Next Story
X