Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಎಸ್‌ಡಿಡಿಒ ಪಟ್ಟಿಯಲ್ಲಿ ಹೆಸರು:...

ಎಎಸ್‌ಡಿಡಿಒ ಪಟ್ಟಿಯಲ್ಲಿ ಹೆಸರು: ಮತದಾರರಿಗೇ ಮಾಹಿತಿ ಇಲ್ಲ!

ಮತಕಾವಲು ಸಮಿತಿ ಸಮೀಕ್ಷೆಯಲ್ಲಿ ಪ್ರಕರಣಗಳು ಪತ್ತೆ

ಮನೋಜ್ ಆಜಾದ್ಮನೋಜ್ ಆಜಾದ್21 Sept 2026 8:00 AM IST
share
ಎಎಸ್‌ಡಿಡಿಒ ಪಟ್ಟಿಯಲ್ಲಿ ಹೆಸರು: ಮತದಾರರಿಗೇ ಮಾಹಿತಿ ಇಲ್ಲ!

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‌ಐಆರ್)ಪ್ರಕ್ರಿಯೆಯಲ್ಲಿ ಮತಪಟ್ಟಿಯಿಂದ ತಮ್ಮ ಹೆಸರು ಕೈಬಿಟ್ಟಿರುವುದೇ ಗೊತ್ತಿಲ್ಲದ ಹಲವು ಮತದಾರರ ಪ್ರಕರಣಗಳು ರಾಜ್ಯದ ವಿವಿಧ ಭಾಗಗಳಲ್ಲಿ ಬೆಳಕಿಗೆ ಬರುತ್ತಿವೆ. ನಾಗರಿಕ ಮತಕಾವಲು ಸಮಿತಿ ರಾಜ್ಯಾದ್ಯಂತ ನಡೆಸುತ್ತಿರುವ ಬೂತ್ ಮಟ್ಟದ ಸಮೀಕ್ಷೆಯ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಕೊಪ್ಪಳ ಜಿಲ್ಲೆಯ

ಕುಷ್ಟಗಿ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಇಂತಹ ಪ್ರಕರಣಗಳು ಪತ್ತೆಯಾಗಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ-96ರಲ್ಲಿ ನೇತ್ರಾ ಎಂಬ ಮತದಾರರ ಹೆಸರನ್ನು ಎಎಸ್‌ಡಿಡಿಒ ಪಟ್ಟಿಯಲ್ಲಿ ‘ಶಾಶ್ವತ ಸ್ಥಳಾಂತರ’ ಎಂದು ನಮೂದಿಸಿ ಸ್ಥಳೀಯ ನಿವಾಸಿಯನ್ನೇ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಆದರೆ ತಮ್ಮ ಹೆಸರು ಪಟ್ಟಿಯಿಂದ ತೆಗೆದುಹಾಕಲ್ಪಟ್ಟಿರುವುದೇ ನೇತ್ರಾ ಅವರಿಗೆ ತಿಳಿದಿಲ್ಲ. ನಾಗರಿಕ ಮತಕಾವಲು ಸಮಿತಿ ತಂಡ ಕ್ಷೇತ್ರ ಸಮೀಕ್ಷೆ ನಡೆಸುವ ವೇಳೆ ಈ ವಿಷಯ ಬೆಳಕಿಗೆ ಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಸಂಯೋಜಕ ಶಮೀರ್ ತಿಳಿಸಿದ್ದಾರೆ.

ಕ್ಷೇತ್ರ ಸಮೀಕ್ಷೆಯಲ್ಲಿ ಭಾಗವಹಿಸಿದ ಕಾರ್ಯಕರ್ತರ ಪ್ರಕಾರ, ಇದೇ ರೀತಿಯ ಪ್ರಕರಣಗಳು ಕುಷ್ಟಗಿ ತಾಲೂಕು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಕಂಡುಬಂದಿವೆ. ಹಲವು ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಇಲ್ಲವೇ ಎಂಬುದನ್ನು ನಿಯಮಿತವಾಗಿ ಪರಿಶೀಲಿಸುವುದಿಲ್ಲ. ಚುನಾವಣಾ ಆಯೋಗವು ಡಿಲೀಟ್ ಆಗಿರುವ ಮತದಾರರಿಗೆ ಯಾವುದೇ ನೋಟಿಸ್ ಸಹ ನೀಡುವುದಿಲ್ಲ. ಇವರಿಗೆ ತಮ್ಮ ಹೆಸರು ಕೈಬಿಟ್ಟಿರುವುದು ಮುಂದಿನ ಚುನಾವಣೆ ಸಮೀಪಿಸುವವರೆಗೂ ಗೊತ್ತಾಗುವುದೇ ಇಲ್ಲ.

ನಾಗರಿಕ ಮತಕಾವಲು ಸಮಿತಿಯ ಪ್ರಕಾರ, ಇದು ಕೇವಲ ಕೆಲವು ಪ್ರತ್ಯೇಕ ಪ್ರಕರಣಗಳ ಪ್ರಶ್ನೆಯಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಹಿನ್ನೆಲೆಯಲ್ಲಿ

ಎಎಸ್‌ಡಿಡಿಒ ಸೇರಿದಂತೆ ವಿವಿಧ ವರ್ಗಗಳ ಪಟ್ಟಿಗಳು ವೆಬ್‌ಸೈಟ್‌ನಲ್ಲಿ ಪ್ರಕಟವಾಗುತ್ತಿವೆ. ಆದರೆ ಆ ಪಟ್ಟಿಗಳಲ್ಲಿ ತಮ್ಮ ಹೆಸರು ಇರುವುದನ್ನು ಅನಕ್ಷರಸ್ಥರು, ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು, ಹಿರಿಯ ನಾಗರಿಕರಿಗೆ ಪರಿಶೀಲಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಎಎಸ್‌ಡಿಡಿಒ ಪಟ್ಟಿ ಅಂದರೆ ಏನು ಎನ್ನುವುದೇ ಹಲವರಿಗೆ ಮಾಹಿತಿ ಇಲ್ಲ ಎಂದು ತಿಳಿಸಿದೆ.

ನನ್ನ ಹೆಸರು ಪಟ್ಟಿಯಲ್ಲಿ ಇಲ್ಲ ಎನ್ನುವುದು ಮತ್ತು ಎಎಸ್‌ಡಿಡಿಒ ಪಟ್ಟಿಯಲ್ಲಿ ನಿರ್ದಿಷ್ಟ ವರ್ಗಕ್ಕೆ ಸೇರಿದೆ ಎನ್ನುವುದು ಇದುವರೆಗೂ ಮಾಹಿತಿಯೇ ಇಲ್ಲ. ಆಯೋಗದವರು ಯಾರನ್ನು ಕೇಳಿ ನನ್ನ ಮತ ಡಿಲೀಟ್ ಮಾಡಿದ್ದೀರಿ? ನಾನು ಗಣತಿ ನಮೂನೆಯನ್ನು ತುಂಬಿ ಬಿಎಲ್‌ಒಗೂ ನೀಡಿದ್ದೇನೆ. ಆದರೆ ನನ್ನನ್ನು ಶಾಶ್ವತ ಸ್ಥಳಾಂತರ ಎಂದು ಗುರುತಿಸಿ ನನ್ನ ಮತ ಹೇಗೆ ಡಿಲೀಟ್ ಮಾಡುತ್ತೀರಿ? ನಾನು ಇಲ್ಲಿನ ಸ್ಥಳೀಯ ನಿವಾಸಿ. ನೀವು ಡಿಲೀಟ್ ಮಾಡಿರುವುದು ಮೂರನೇ ವ್ಯಕ್ತಿಗಳಿಂದ ಸಮೀಕ್ಷೆಯ ವೇಳೆಯಲ್ಲಿ ಗೊತ್ತಾಗಿದೆ.

-ನೇತ್ರಾ, ಸಂತ್ರಸ್ತೆ ಗೌರಿಬಿದನೂರು.

Tags

ASDDOVoters
share
ಮನೋಜ್ ಆಜಾದ್
ಮನೋಜ್ ಆಜಾದ್
Next Story
X