Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಐಟಿ ಉದ್ಯೋಗ ತೊರೆದು ಕೃಷಿಯಲ್ಲಿ ಯಶಸ್ಸು...

ಐಟಿ ಉದ್ಯೋಗ ತೊರೆದು ಕೃಷಿಯಲ್ಲಿ ಯಶಸ್ಸು ಕಂಡ ನವೀನ್ ಕುಮಾರ್

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್27 April 2026 11:59 AM IST
share
ಐಟಿ ಉದ್ಯೋಗ ತೊರೆದು ಕೃಷಿಯಲ್ಲಿ ಯಶಸ್ಸು ಕಂಡ ನವೀನ್ ಕುಮಾರ್

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಅಡಗನಹಳ್ಳಿ ಗ್ರಾಮದಲ್ಲಿ ಐಟಿ ಉದ್ಯೋಗ ತೊರೆದು ಕೃಷಿಯತ್ತ ಮುಖ ಮಾಡಿದ ನವೀನ್ ಕುಮಾರ್ ಅವರು ನೈಸರ್ಗಿಕ ಕೃಷಿಯಲ್ಲಿ ಯಶಸ್ಸು ಸಾಧಿಸಿ ಇತರರಿಗೆ ಮಾದರಿಯಾಗಿದ್ದಾರೆ.

ಡಿಪ್ಲೊಮಾ, ಬಿ.ಇ ಹಾಗೂ ಎಂಬಿಎ ಪದವಿ ಪಡೆದ ಅವರು ಬೆಂಗಳೂರಿನ ‘‘ಸೆಂಟಂ ಇಲೆಕ್ಟ್ರಾನಿಕ್ಸ್ ಲಿಮಿಟೆಡ್’’ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. 2017ರಲ್ಲಿ ಉದ್ಯೋಗ ತೊರೆದು ಗ್ರಾಮಕ್ಕೆ ಮರಳಿ ಜಮೀನು ಖರೀದಿ ಮಾಡಿ ಕೃಷಿ ಆರಂಭಿಸಿದರು.

ಸುಮಾರು 2 ಎಕರೆ 4 ಗುಂಟೆ ಜಾಗದಲ್ಲಿ 15 ರಿಂದ 20ಕ್ಕೂ ಹೆಚ್ಚು ಹಣ್ಣಿನ ಗಿಡಗಳನ್ನು ಬೆಳೆಸಿ ಸಮಗ್ರ ತೋಟವನ್ನು ನಿರ್ಮಿಸಿದ್ದಾರೆ. ಮಾವು, ಸೀಬೆ, ಸಪೋಟಾ, ದಾಳಿಂಬೆ, ನೆಲ್ಲಿಕಾಯಿ, ನೇರಳೆ, ಕಿತ್ತಳೆ, ಮೋಸಂಬಿ, ಪಪ್ಪಾಯಿ, ಬಾಳೆ, ಸೀತಾಫಲ, ಹಲಸು, ಅನಾನಸ್, ಡ್ರಾಗನ್ ಹಣ್ಣು, ರಂಬೂಟಾನ್, ಬಾದಾಮಿ, ಅಡಿಕೆ ಸೇರಿದಂತೆ ಹಲವು ಬೆಳೆಗಳನ್ನು ಸಂಪೂರ್ಣ ನೈಸರ್ಗಿಕ ವಿಧಾನದಲ್ಲಿ ಬೆಳೆಸುತ್ತಿದ್ದಾರೆ. ಯಾವುದೇ ರಾಸಾಯನಿಕ ಗೊಬ್ಬರ ಬಳಸದೇ ಸ್ವತಃ ತಯಾರಿಸಿದ ಸಾವಯವ ಗೊಬ್ಬರದಿಂದ ಬೆಳೆಗಳಿಗೆ ಪೋಷಣೆ ನೀಡಲಾಗುತ್ತಿದೆ.

ಪ್ರಾರಂಭದಲ್ಲಿ ಬಾಳೆ ಬೆಳೆದು ಸುಮಾರು 2 ಲಕ್ಷ ರೂ. ಆದಾಯ ಗಳಿಸಿದ ಅವರು, ಆ ಯಶಸ್ಸಿನಿಂದ ಪ್ರೇರಿತರಾಗಿ ವಿಭಿನ್ನ ಹಣ್ಣುಗಳ ತೋಟ ವನ್ನು ಅಭಿವೃದ್ಧಿಪಡಿಸಿದರು. ಇಂದಿಗೆ ತೋಟದಿಂದ ನಿರಂತರ ಆದಾಯ ಬರುತ್ತಿದ್ದು, ಸ್ಥಳೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೂ ಇದೆ. ನೈಸರ್ಗಿಕ ಕೃಷಿಯಿಂದ ಮಣ್ಣಿನ ಫಲವತ್ತತೆ ಹೆಚ್ಚುವುದರ ಜೊತೆಗೆ ನೀರಿನ ಬಳಕೆ ಕಡಿಮೆಯಾಗುತ್ತಿದೆ. ಪರಿಸರ ಸಂರಕ್ಷಣೆಯಲ್ಲಿಯೂ ಈ ವಿಧಾನ ಮಹತ್ವದ ಪಾತ್ರವಹಿಸುತ್ತಿದೆ. ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ.

ಯುವಕರಿಗೆ ಪ್ರೇರಣೆ

ನವೀನ್ ಕುಮಾರ್ ಅವರ ತಂದೆಯೂ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ಆರಂಭಿಕ ಹಂತದಲ್ಲಿ ಹಣದ ಕೊರತೆ ಎದುರಾಗಲಿಲ್ಲ. ಸ್ನೇಹಿತರೊಂದಿಗೆ ಸೇರಿ ಎಣ್ಣೆ ಗಾಣ ಆರಂಭಿಸುವ ಪ್ರಯತ್ನಕ್ಕೂ ಕೈಜೋಡಿಸಿದ್ದಾರೆ. ಐಟಿ ಕ್ಷೇತ್ರವನ್ನು ತೊರೆದು ಕೃಷಿಯಲ್ಲಿ ಸಾಧನೆ ಮಾಡಿದ ನವೀನ್ ಕುಮಾರ್ ಅವರ ಪ್ರಯತ್ನ ಇದೀಗ ಅಡಗನಹಳ್ಳಿ ಗ್ರಾಮದಲ್ಲಿ ಮಾದರಿಯಾಗಿ ಹೊರಹೊಮ್ಮಿದ್ದು, ಇತರ ಯುವಕರಿಗೂ ಪ್ರೇರಣೆಯಾಗಿದೆ.

Tags

Naveen KumarIT jobagriculture
share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X