Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೆಕೆಆರ್‌ಡಿಬಿಗೆ ನೂತನ ಅಧ್ಯಕ್ಷ :...

ಕೆಕೆಆರ್‌ಡಿಬಿಗೆ ನೂತನ ಅಧ್ಯಕ್ಷ : ನೆರವೇರುವುದೇ ರಾಯಚೂರು ಜಿಲ್ಲೆಯ ನಿರೀಕ್ಷೆ?

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ29 Nov 2026 7:31 AM IST
share
ಕೆಕೆಆರ್‌ಡಿಬಿಗೆ ನೂತನ ಅಧ್ಯಕ್ಷ : ನೆರವೇರುವುದೇ ರಾಯಚೂರು ಜಿಲ್ಲೆಯ ನಿರೀಕ್ಷೆ?

ರಾಯಚೂರು : ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಸ್ಥಾನ ಅಲಂಕರಿಸಿ ಶನಿವಾರ ಅಧಿಕಾರ ಸ್ವೀಕರಿಸಿದ್ದು ಜೆಲ್ಲೆಯ ಅಭಿವೃದ್ಧಿಗೆ ಆಶಾಭಾವನೆ ಮೂಡಿಸಿದೆ.

ರಾಯಚೂರು ಹಳೆಯ ಜಿಲ್ಲೆಯಾಗಿದ್ದರೂ ಅಭಿವೃದ್ಧಿಯಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಮಂಡಳಿಯಿದ್ದರೂ ಅಧ್ಯಕ್ಷ ಸ್ಥಾನ ಬಹುಪಾಲು ಕಲಬುರಗಿಗೆ ಮಾತ್ರ ಮೀಸಲಿಟ್ಟಂತಿತ್ತು, ಒಮ್ಮೆ ಮಾತ್ರ ರಾಯಚೂರಿನ ಎನ್ ಎಸ್ ಭೋಸರಾಜು ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿದ್ದಾಗ (ಹೆಚ್‌ಕೆಆರ್‌ಡಿಬಿ) ಅಧ್ಯಕ್ಷರಾಗಿದ್ದರು. ತದ ನಂತರ ಬಂದ ಅಧ್ಯಕ್ಷರಾರೂ ರಾಯಚೂರು ಮೂಲದವರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ರಾಯಚೂರಿಗೆ ಸಿಗಬೇಕೆಂಬ ಕೂಗೂ ಜಿಲ್ಲೆಯಲ್ಲಿ ಎದ್ದಿತ್ತು.

ಮಂಡಳಿಯ ಅನುದಾನ ಸರಿಯಾಗಿ ಸದ್ಬಳಕೆಯಾಗಲಿದೆಯಾ:

ಪ್ರಾದೇಶಿಕ ಅಸಮಾತೋಲನ ನಿವಾರಣೆಗೆ 22 ವರ್ಷಗಳ ಹಿಂದೆ ರಚಿಸಿದ ಪ್ರೋ. ಡಿ.ಎಂ.ನಂಜುಂಡಪ್ಪನವರ ವರದಿಯು ಸರಕಾರಕ್ಕೆ ಸಲ್ಲಿಸಿದ್ದು ರಾಯಚೂರು ಸೇರಿ ಕಲ್ಯಾಣ ಕರ್ನಾಟಕದ ಅನೇಕ ತಾಲೂಕುಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಮಂಡಳಿ ರಚನೆಯೂ ಮಾಡಿ ವಾರ್ಷಿಕ 5ಸಾವಿರ ಕೋಟಿ ರೂ. ಅನುದಾನವೂ ನೀಡಲಾಗುತ್ತಿದೆ. ಶೇ 90 ರಷ್ಟು ಅನುದಾನ ಖರ್ಚು ಮಾಡಲಾಗಿದೆ. ಆದರೆ ಇದುವರೆಗೆ ಆಡಳಿತ ಮಾಡಿದ ಯಾವ ಸರಕಾರಗಳು ಬದ್ಧತೆ ಪ್ರದರ್ಶಿಸಿಲ್ಲ ಎಂಬ ಆರೋಪಕ್ಕೆ ಗುರಿಯಾಗಿದೆ.

ಸರಕಾರ 2018ರಲ್ಲಿ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದಿಂದ ಪಡೆಯಲಾದ ವರದಿಯಂತೆ 80 ಅಭಿವೃದ್ದಿ ಹೊಂದಿದ ತಾಲೂಕುಗಳು, 43 ಹಿಂದುಳಿದ ತಾಲೂಕುಗಳು, 24 ಅತೀ ಹಿಂದುಳಿದ ತಾಲ್ಲುಕುಗಳು ಹಾಗೂ 29 ಅತ್ಯಂತ ಹಿಂದುಳಿದ ತಾಲೂಕುಗಳು ಇವೆ. ಸರಕಾರದಿಂದ ಪ್ರಾದೇಶಿಕ ತಾರತಮ್ಯ ಮಾಡಿದ್ದರಿಂದ ಈ ಭಾಗ ಅಭಿವೃದ್ಧಿ ಅಗಿಲ್ಲ. ದಕ್ಷಿಣ ಕರ್ನಾಟಕದ ತಲಾ ಆದಾಯಕ್ಕೂ ಕಲ್ಯಾಣ ಕರ್ನಾಟಕದ ತಲಾ ಆದಾಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಆದರೆ ವಾಸ್ತವಾಂಶ ಹೀಗಿರುವಾಗ ಕೆಕೆಆರ್‌ಡಿಬಿ ವಿಶೇಷ ಅನುದಾನವನ್ನಾದರು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿ ಮಾಡಲು ಅವಕಾಶವಿದ್ದರೂ ರಸ್ತೆ ದುರಸ್ತಿಗೆ, ಶಾಲೆಗಳ ಅಭಿವೃದ್ಧಿ, ಅಕ್ಷರ ಆವಿಷ್ಕಾರ, ಅತಿಥಿ ಶಿಕ್ಷಕರಿಗೆ ವೇತನ ಸೇರಿ ಈ ಭಾಗದ ಅಭಿವೃದ್ಧಿಗೆ ಹೊರತಾದ ವಿಷಯಗಳಿಗೆ ಖರ್ಚು ಮಾಡಿದೆ ಎಂಬ ಅಸಮಾಧಾನ ಈ ಭಾಗದ ಹೋರಾಟಗಾರರಲ್ಲಿದೆ.

ಕಲ್ಯಾಣ ಕರ್ನಾಟಕ ಹೊರತುಪಡಿಸಿ ರಾಜ್ಯದ ಅನ್ಯ ಭಾಗದಲ್ಲಿ ಕೆಕೆಆರ್‌ಡಿಬಿ ಇಲ್ಲ. ಆದರೂ ರಸ್ತೆ, ಶಾಲೆಯ ಅಭಿವೃದ್ಧಿ, ಅತಿಥಿ ಶಿಕ್ಷಕರಿಗೆ ಸರಕಾರವೇ ಅನುದಾನ ನೀಡುತ್ತೆ. ಆದರೆ ಈ ಭಾಗದಲ್ಲಿ ಹೈಸ್ಕೂಲು ಮಕ್ಕಳಿಗೆ ಉಚಿತ ಸೈಕಲ್ ನೀಡಲು ಕೂಡಾ ಕೆಕೆಆರ್‌ಡಿಬಿ ಅನುದಾನ ಖರ್ಚು ಮಾಡಿದೆ. ನೂತನ ಅಧ್ಯಕ್ಷರಾಗಿರುವ ಬಸನಗೌಡ ದದ್ದಲ್ ಅವರು ಇದನ್ನು ನಿವಾರಿಸಿ ಅನುದಾನ ಸರಿಯಾಗಿ ಖರ್ಚು ಮಾಡಲು ಆಸಕ್ತಿ ತೋರಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಪಕ್ಷ ಮತ್ತು ಸರಕಾರ ತಮ್ಮ ಮೇಲೆ ವಿಶ್ವಾಸ ಇಟ್ಟು ಕೆಕೆಆರ್‌ಡಿಬಿ ಅಧ್ಯಕ್ಷ ಹುದ್ದೆ ನೀಡಿದ್ದು, ಈ ಭಾಗದ ಎಲ್ಲಾ ಸಚಿವರು, ಶಾಸಕರು, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವೆ. ಮಂಡಳಿಗೆ ರಾಜ್ಯ ಸರಕಾರ ಪ್ರತಿ ವರ್ಷ 5,000 ಕೋಟಿ ರೂ. ಅನುದಾನ ನೀಡುತ್ತಿದೆ. ಸಂವಿಧಾನಕ್ಕೆ ವಿಶೇಷ ತಿದ್ದುಪಡಿ ತಂದು ರಚನೆಯಾದ ಮಂಡಳಿಗೆ ರಾಜ್ಯ ಸರಕಾರದ ಮಾದರಿಯಲ್ಲಿಯೇ ಕೇಂದ್ರ ಸರಕಾರವೂ 5,000 ಕೋಟಿ ರೂ. ಸಮನಾಂತರ ಅನುದಾನ ನೀಡಬೇಕು. ಈ ಬಗ್ಗೆ ರಾಜ್ಯ ಸರಕಾರದಿಂದ ಮನವಿ ಮಾಡಿಸಲಾಗುವುದು.

-ಬಸನಗೌಡ ದದ್ದಲ್, ಕೆಕೆಆರ್‌ಡಿಬಿ ನೂತನ ಅಧ್ಯಕ್ಷ

Tags

KKRDBRaichur
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X